ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ ಮಡಿಕೇರಿ : ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ನಾವೀನ್ಯತೆ ಕ್ಷೇತ್ರ-2, ತಾರ್ಕಿಕ ಸಾಧನೆಗಳು-2, ಕ್ರೀಡೆ-2 ಮತ್ತು ಕಲೆ, ಸಾಂಸ್ಕøತಿಕ ಮತ್ತು ಸಂಗೀತ-2 ಈ 4 ವಿಭಾಗದಲ್ಲಿ ತಲಾ 2 ರಂತೆ ಒಟ್ಟು 8 ಪ್ರಶಸ್ತಿಗಳನ್ನು ನೀಡಲಾಗುವುದು. ಅಸಾಧಾರಣ ಸಾಧನೆ ಮಾಡಿ ಪ್ರತಿಭೆ ತೋರಿರುವ 5 ರಿಂದ 18 ವರ್ಷದೊಳಗಿನ (ಜುಲೈ 31 ಕ್ಕೆ) ಮಕ್ಕಳನ್ನು 2025-26ನೇ ಸಾಲಿಗೆ ಜಿಲ್ಲಾ ಮಟ್ಟದ ಪ್ರತಿಭಾಪುರಸ್ಕಾರ ಪ್ರಶಸ್ತಿಗೆ […]
ಆ.22 ರಂದು ಕಿರು ಆಹಾರ ಸಂಸ್ಕರಣಾ ಉದ್ದಿಮೆ ಬಗ್ಗೆ ತರಬೇತಿ ಕಾರ್ಯಗಾರ

ಆ.22 ರಂದು ಕಿರು ಆಹಾರ ಸಂಸ್ಕರಣಾ ಉದ್ದಿಮೆ ಬಗ್ಗೆ ತರಬೇತಿ ಕಾರ್ಯಗಾರ ಮಡಿಕೇರಿ : ಪ್ರಧಾನಮಂತ್ರಿಯವರ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ (ಪಿಎಂಎಫ್‍ಎಂಇ) ಯೋಜನೆಯು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಒಂದು ಮಹತ್ವಾಕಾಂಕ್ಷೆ ಯೋಜನೆಯಾಗಿದ್ದು, ರಾಜ್ಯದಲ್ಲಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಯ ಅಭಿವೃದ್ಧಿಗೆ ಸುವರ್ಣಾವಕಾಶ ಕಲ್ಪಿಸುತ್ತದೆ. ಈವರೆಗೂ ಜಿಲ್ಲೆಯಲ್ಲಿ ಈ ಯೋಜನೆಯಡಿ 89 ಉದ್ದಿಮೆದಾರರಿಗೆ ಸಾಲ ಮಂಜೂರಾತಿ ದೊರೆತಿದೆ. ಮುಖ್ಯಮಂತ್ರಿಯವರು ತಮ್ಮ 2025-26 ನೇ ಸಾಲಿನ ಆಯವ್ಯಯ ಭಾಷಣದಲ್ಲಿ 5 ಸಾವಿರ ಕಿರು ಆಹಾರ […]
ಕೃಷಿ ಬಳಕೆ ಯೂರಿಯಾ ಅಕ್ರಮ ದಾಸ್ತಾನು ಇದ್ದಲ್ಲಿ ಮಾಹಿತಿ ನೀಡಲು ಮನವಿ

ಕೃಷಿ ಬಳಕೆ ಯೂರಿಯಾ ಅಕ್ರಮ ದಾಸ್ತಾನು ಇದ್ದಲ್ಲಿ ಮಾಹಿತಿ ನೀಡಲು ಮನವಿ ಮಡಿಕೇರಿ : ರಿಯಾಯಿತಿ ದರದ ಬೇವು ಲೇಪಿತ ಯೂರಿಯಾ ರಸಗೊಬ್ಬರವನ್ನು ಕೃಷಿಯೇತರ ಚಟುವಟಿಕೆಗಳಿಗೆ ಬಳಕೆ ಮಾಡದಂತೆ ತಡೆಯಲು ಕೊಡಗು ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ ಮತ್ತು ವೀರಾಜಪೇಟೆ ತಾಲ್ಲೂಕುಗಳ ಕೈಗಾರಿಕ ಪ್ರದೇಶಗಳಲ್ಲಿ ರಿಯಾಯಿತಿ ದರದ ಬೇವು ಲೇಪಿತ ಯೂರಿಯಾ ರಸಗೊಬ್ಬರ ಬಳಸುತ್ತಿರುವ ಕಾರ್ಖಾನೆ/ ಕೈಗಾರಿಕೆಗಳನ್ನು ಪತ್ತೆ ಹಚ್ಚಿ, ಬಳಸುತ್ತಿರುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955ರ ಅಡಿಯಲ್ಲಿ ಹಾಗೂ ರಸಗೊಬ್ಬರ (ನಿಯಂತ್ರಣ) ಆದೇಶ 1985ರ ಅನ್ವಯ […]
ವಿಶ್ವ ಆನೆ ದಿನ ಪ್ರಯುಕ್ತ ವಿಶೇಷ ಅಂಚೆ ಲಕೋಟೆ ಬಿಡುಗಡೆ

ವಿಶ್ವ ಆನೆ ದಿನ ಪ್ರಯುಕ್ತ ವಿಶೇಷ ಅಂಚೆ ಲಕೋಟೆ ಬಿಡುಗಡೆ ಮಡಿಕೇರಿ : ಭಾರತೀಯ ಅಂಚೆ ಇಲಾಖೆ ವತಿಯಿಂದ ವಿಶ್ವ ಆನೆ ದಿನ-2025 ಪ್ರಯುಕ್ತ ವಿಶೇಷ ಅಂಚೆ ಲಕೋಟೆಯನ್ನು ಕೊಡಗು ವಿಭಾಗದ ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ದುಬಾರೆ ಸಾಕಾನೆ ಶಿಬಿರದಲ್ಲಿ ಮಂಗಳವಾರ ಬಿಡುಗಡೆಗೊಳಿಸಲಾಯಿತು. ಈ ವಿಶೇಷ ಅಂಚೆ ಲಕೋಟೆಯನ್ನು ಹರ್ಷ ಎಂಬ ಆನೆ ಹೊತ್ತಿದ್ದು ವಿಶೇಷವಾಗಿತ್ತು. ಈ ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ಅಧಿಕಾರಿ ಸಿಸಿಎಫ್ ಕೊಡಗು ವೃತ್ತ, ಡಿಸಿಎಫ್ ಮಡಿಕೇರಿ ವಿಭಾಗ, ಎಸಿಎಫ್ ಮಡಿಕೇರಿ, ಆರ್‍ಎಫ್‍ಒ ಕುಶಾಲನಗರ […]
ಸ್ನೇಹಿತರ ಒಕ್ಕೂಟದಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಟೈ, ಬೆಲ್ಟ್ ಕೊಡುಗೆ

ಸ್ನೇಹಿತರ ಒಕ್ಕೂಟದಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಟೈ, ಬೆಲ್ಟ್ ಕೊಡುಗೆ ಮಡಿಕೇರಿ : ವಿರಾಜಪೇಟೆ ಸ್ನೇಹಿತರ ಒಕ್ಕೂಟದ ಸದಸ್ಯರು ವಿರಾಜಪೇಟೆಯ ಹೆಗ್ಗಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಅಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸರಿಸುಮಾರು 25 ಮಕ್ಕಳಿಗೆ ಟೈ ಬೆಲ್ಟ್ ಹಾಗೂ ಶಿಕ್ಷಕರಿಗೆ ಟೇಬಲ್ ಅನ್ನು ಕೊಡುಗೆಯಾಗಿ ನೀಡಿದ್ದಾರೆ. ಈ ಸಂದರ್ಭ ಸ್ನೇಹಿತರ ಒಕ್ಕೂಟ ಪ್ರಮುಖರಾದ ಮಹಮ್ಮದ್ ನಯಾಜ್, ಹಬೀಬುಲ್ಲಾ ಶರೀಫ್, ಝೀಯಾವುಲ್ಲ, ಝಬಿವುಲ್ಲಾ, ಜಿಶಾನ್ ಉಪಸ್ಥಿತರಿದ್ದರು.
ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಹಂಸು ಕೊಡಿ ಆಯ್ಕೆ

ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಹಂಸು ಕೊಡಿ ಆಯ್ಕೆ ಮಡಿಕೇರಿ : ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಹಂಸು ಕೊಡಿ ರವರು ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ನವರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದರು . ಈ ಸಂದರ್ಭ ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ವಿರಾಜಪೇಟೆ ವಿಧಾನಸಭಾ ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಕ್ಷಿತ್ಚೆಂ ಗಪ್ಪ, ಮುತ್ತಣ್ಣ ಕೋಣಿಯಂಡ ಮತ್ತು ರಶೀದ್ಚೆ ಟ್ಟಿಮಾನಿ ಉಪಸ್ಥಿತರಿದ್ದರು.
ತಾಲ್ಲೂಕು ಮಟ್ಟದ ಹಾಕಿ ಪಂದ್ಯಾವಳಿ : ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ತಂಡಕ್ಕೆ ಜಯ

ತಾಲ್ಲೂಕು ಮಟ್ಟದ ಹಾಕಿ ಪಂದ್ಯಾವಳಿ : ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ತಂಡಕ್ಕೆ ಜಯ ಮಡಿಕೇರಿ : ಪ್ರಸಕ್ತ ಸಾಲಿನ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಹಾಕಿ ಪಂದ್ಯಾವಳಿಯು ಮಂಗಳವಾರ ನಗರದ ಭಾರತೀಯ ಕ್ರೀಡಾ ಪ್ರಾಧಿಕಾರದ ಸಾಯಿ ಹಾಕಿ ಮೈದಾನದಲ್ಲಿ ನಡೆಯಿತು. ಭಾರತೀಯ ಕ್ರೀಡಾ ಪ್ರಾಧಿಕಾರದ(ಸಾಯಿ) ಸಹಾಯಕ ನಿರ್ದೇಶಕರಾದ ಮಿನಿ ಉಣ್ಣಿರಾಜ್ ಅವರು ಪಂದ್ಯಾವಳಿಯನ್ನು ಉದ್ಘಾಟಿಸಿದರು. ಪಂದ್ಯಾವಳಿಯ ಮುಖ್ಯ ಅತಿಥಿಗಳಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್.ವಿಜಯ, ದೈಹಿಕ ಶಿಕ್ಷಕರಾದ ರಾಕಿ […]
ಜಿಲ್ಲಾಡಳಿತದಿಂದ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ

ಜಿಲ್ಲಾಡಳಿತದಿಂದ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ಮಡಿಕೇರಿ : ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಜಿಲ್ಲಾಡಳಿತದಿಂದ ವಿವಿಧ ಕಾರ್ಯಕ್ರಮಗಳ ಅಯೋಜನೆ ಮೂಲಕ ಮೂರು ದಿನಗಳ ಕಾಲ ಏರ್ಪಡಿಸಿರುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ಮಂಗಳವಾರ ಚಾಲನೆ ದೊರೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದರು. ಕಂದಾಯ, ಪಂಚಾಯತ್ ರಾಜ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ, ಹಿಂದುಳಿದ […]
ವೃಂದ ನೇಮಕಾತಿ ಜಾರಿಗೆ ಒತ್ತಾಯಿಸಿ ಮಡಿಕೇರಿಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಪ್ರತಿಭಟನೆ

ವೃಂದ ನೇಮಕಾತಿ ಜಾರಿಗೆ ಒತ್ತಾಯಿಸಿ ಮಡಿಕೇರಿಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಪ್ರತಿಭಟನೆ ಮಡಿಕೇರಿ: ಪ್ರಾಥಮಿಕ ಶಾಲಾ ಸೇವಾನಿರತ ಪದವೀಧರ ಶಿಕ್ಷಕರಿಗೆ ಸಂಬಂಧಿಸಿದ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಕಡತಕ್ಕೆ ತಕ್ಷಣ ಅನುಮೋದನೆ ನೀಡುವಂತೆ ಆಗ್ರಹಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕೊಡಗು ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಚೇತನ್ ಮಾತನಾಡಿ, ೨೦೧೭ರಲ್ಲಿ ವೃಂದ ಮತ್ತು ನೇಮಕಾತಿ […]
ಮಡಿಕೇರಿ : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಮಡಿಕೇರಿ : ಮಾಸಿಕ ಕನಿಷ್ಠ ರೂ.೧೦ ಸಾವಿರ ಗೌರವಧನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ರಾಜ್ಯದಾದ್ಯಂತ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಇದರ ಭಾಗವಾಗಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಗಾಂಧಿಮೈದಾನದಲ್ಲಿ ಜಮಾಯಿಸಿದ ಪತ್ರಿಭಟನಾ ನಿರತರು ಮಂಗೇರಿರ ಮುತ್ತಣ್ಣ ವೃತ್ತ, ನಗರ ಪೊಲೀಸ್ ಠಾಣೆ, ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತವಾಗಿ ನಗರದ ಬಾಲಭವನ ತಲುಪಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ ಕರ್ನಾಟಕ ಸಂಯುಕ್ತ ಆಶಾ […]