Breaking News :

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ ಕೋರಿದ ಸಿಎಂ

  ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ ಕೋರಿದ ಸಿಎಂ ಬೆಂಗಳೂರು : ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಮತ್ತು ವಂದೇ ಭಾರತ್ ಉದ್ಘಾಟನೆಗೆ ಬೆಂಗಳೂರಿಗೆ  ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೆಚ್‌ಕ್ಯೂಟಿಸಿ ಹೆಲಿಪ್ಯಾಡ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೂಗುಚ್ಚ ನೀಡಿ, ಗಂಧದ ಹಾರ ಹಾಕಿ ಆತ್ಮೀಯವಾಗಿ ಬರಮಾಡಿಕೊಂಡರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.    

ಚೆಂಬೆಬೆಳ್ಳೂರಿನಲ್ಲಿ  ಜನ ಸುರಕ್ಷಾ ಅಭಿಯಾನ

ಚೆಂಬೆಬೆಳ್ಳೂರಿನಲ್ಲಿ  ಜನ ಸುರಕ್ಷಾ ಅಭಿಯಾನ ವಿರಾಜಪೇಟೆ : ಸಮೀಪದ‌ ಚೆಂಬೆಬೆಳ್ಳೂರು ಗ್ರಾಮದಲ್ಲಿ ಇತ್ತೀಚಿಗೆ ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಹಾಗೂ ಯೂನಿಯನ್ ಬ್ಯಾಂಕ್ ನ ವಿರಾಜಪೇಟೆ ಶಾಖೆ ಹಾಗೂ ಕರ್ನಾಟಕ ಗ್ರಾಮೀಣ ಬ್ಯಾಂಕ್ ನ ಸಂಯುಕ್ತ ಆಶ್ರಯದಲ್ಲಿ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕೇಂದ್ರ ಸರ್ಕಾರದ ಆದೇಶದಂತೆ ಚೆಂಬೆಬೆಳ್ಳೂರು ಗ್ರಾಮ ಪಂಚಾಯತಿಯ ಸಹಕಾರದೊಂದಿಗೆ ಈ ಕಾರ್ಯಕ್ರಮ‌ ನಡೆಯಿತು. ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ವಿರಾಜಪೇಟೆ ಶಾಖೆಯ ವ್ಯಾವಸ್ಥಾಪಕ ಗುರುರಾಜ್ ಅವರು ಕಾರ್ಯಕ್ರಮಕ್ಕೆ ಚಾಲನೆ‌ ನೀಡಿ ಮಾತನಾಡಿ, ಜನಸಾಮಾನ್ಯರು […]

ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಮಾಳೇಟಿರ ತೃಪ್ತಿ ಬೋಪಣ್ಣ ನೇಮಕ

ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಮಾಳೇಟಿರ ತೃಪ್ತಿ ಬೋಪಣ್ಣ ನೇಮಕ ವಿರಾಜಪೇಟೆ: ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ಮಾಳೇಟಿರ ತೃಪ್ತಿ ಬೋಪಣ್ಣ ರವರು ನೇಮಕಗೊಂಡಿರುತ್ತಾರೆ. ಇವರನ್ನು ಈ ತಕ್ಷಣದಿಂದ ಜಾರಿಗೆ ಬರುವಂತೆ ಒಂದು ವರ್ಷದ ಅವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಲಾಗಿದೆ ಎಂದು ವಿಶ್ವವಿದ್ಯಾಲಯವು ಆದೇಶಿಸಿರುತ್ತದೆ. ತೃಪ್ತಿ ಬೋಪಣ್ಣ ರವರು 22 ವರ್ಷಗಳ ಬೋಧನಾ ಅನುಭವವನ್ನು ಹೊಂದಿದ್ದು , ಕಳೆದ […]

ಆದಿವಾಸಿ ಬುಡಕಟ್ಟು ಜನಾಂಗದ ಅಭಿವೃದ್ಧಿಗೆ ಕಾಂಗ್ರೆಸ್ ಸರಕಾರದ ಕೊಡುಗೆ ಅಪಾರ : ಶಾಸಕ ಪೊನ್ನಣ್ಣ

ಆದಿವಾಸಿ ಬುಡಕಟ್ಟು ಜನಾಂಗದ ಅಭಿವೃದ್ಧಿಗೆ ಕಾಂಗ್ರೆಸ್ ಸರಕಾರದ ಕೊಡುಗೆ ಅಪಾರ : ಶಾಸಕ ಪೊನ್ನಣ್ಣ ಮಡಿಕೇರಿ : ಅಂತರರಾಷ್ಟ್ರೀಯ ಆದಿವಾಸಿ ಬುಡಕಟ್ಟು ದಿನಾಚರಣೆಯ ಪ್ರಯುಕ್ತ, ಪೊನ್ನಂಪೇಟೆ ತಾಲೂಕಿನ ನಾಣಚಿ ಭಾಗಕ್ಕೆ ಭೇಟಿ ನೀಡಿದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಆದಿವಾಸಿ ಬುಡಕಟ್ಟು ಸಮುದಾಯದ ಅಭಿವೃದ್ಧಿಗೆ ಕಾಂಗ್ರೆಸ್ ಸರಕಾರ ನೀಡಿರುವ ಕೊಡುಗೆಗಳನ್ನು ನೆನಪಿಸಿದರು. ಇದೇ ಸಂದರ್ಭ ಹಾಡಿಯ ನಿವಾಸಿಗಳು ನೀಡಿದ ಹಲವು ಬೇಡಿಕೆಗಳಿದ್ದ ಮನವಿಯನ್ನು ಸ್ವೀಕರಿಸಿ, ಎಲ್ಲಾ ಆದಿವಾಸಿ ಬುಡಕಟ್ಟು ಜನಾಂಗದ ಬಾಂಧವರಿಗೆ […]

ಸಂಸ್ಕೃತಿ, ಆಚಾರ-ವಿಚಾರ ಹಾಗೂ ಆಚರಣೆಗಳ ಉಳಿವಿಗೆ ಸಂಸ್ಕೃತಿಯನ್ನು ಬಿಂಬಿಸುವ ಕಾರ್ಯಕ್ರಮಗಳು ಸಹಕಾರಿ : ಶಾಸಕ ಪೊನ್ನಣ್ಣ 

ಸಂಸ್ಕೃತಿ, ಆಚಾರ-ವಿಚಾರ ಹಾಗೂ ಆಚರಣೆಗಳ ಉಳಿವಿಗೆ ಸಂಸ್ಕೃತಿಯನ್ನು ಬಿಂಬಿಸುವ ಕಾರ್ಯಕ್ರಮಗಳು ಸಹಕಾರಿ : ಶಾಸಕ ಪೊನ್ನಣ್ಣ ಮಡಿಕೇರಿ : ಸಂಸ್ಕೃತಿಯನ್ನು ಬಿಂಬಿಸುವ ಕಾರ್ಯಕ್ರಮಗಳು ನಮ್ಮ ಸಂಸ್ಕೃತಿ, ಆಚಾರ-ವಿಚಾರ ಹಾಗೂ ಆಚರಣೆಗಳನ್ನು ಮುಂದಿನ ಪೀಳಿಗೆ ಮುಂದುವರೆಸಲು ಅನುಕೂಲ ಎಂದು ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅಭಿಪ್ರಾಯಪಟ್ಟಿದ್ದಾರೆ. ಪೊನ್ನಂಪೇಟೆ ತಾಲೂಕು ಗೋಣಿಕೊಪ್ಪಲುವಿನ ಪಾಮ್ ವ್ಯಾಲಿ ರೆಸಾರ್ಟ್ ನಲ್ಲಿ, ಕಾವೇರಿ ಪೊಮ್ಮಕ್ಕಡ ಕೂಟ ಆಯೋಜಿಸಿದ ಕಕ್ಕಡ ನಮ್ಮೆ ಕಾರ್ಯಕ್ರಮದಲ್ಲಿ, ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಕಾವೇರಿ […]

ಬೇಡಿಕೆ ಈಡೇರಿಕೆಗಾಗಿ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದ ಆಶ್ರಮ ಶಾಲೆ ಶಿಕ್ಷಕರುಗಳ ನಿಯೋಗ

ಬೇಡಿಕೆ ಈಡೇರಿಕೆಗಾಗಿ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದ ಆಶ್ರಮ ಶಾಲೆ ಶಿಕ್ಷಕರುಗಳ ನಿಯೋಗ ಬೆಂಗಳೂರು : ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಶ್ರಮ ಶಾಲೆಯ ಶಿಕ್ಷಕರುಗಳ ನಿಯೋಗವು ಮಾನ್ಯ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರ ನೇತೃತ್ವದಲ್ಲಿ ಮುಖ್ಯಮಂತ್ರಿ  ಸಿದ್ದರಾಮಯ್ಯ ರವರನ್ನು  ಅವರ ನಿವಾಸ ಕೃಷ್ಣ ದಲ್ಲಿ ಭೇಟಿಯಾದರು. ಮಾನ್ಯ ಮುಖ್ಯಮಂತ್ರಿಗಳಲ್ಲಿ ಅವರುಗಳ ಸಮಸ್ಯೆಗಳನ್ನು ಹಾಗೂ ಬೇಡಿಕೆಗಳನ್ನು ಹೇಳಿಕೊಂಡ ನಿಯೋಗದವರು, ಅವರ ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿ ಮಾಡಿದರು. ಅವರ ಸಮಸ್ಯೆಗಳನ್ನು […]

ಹೃದಯಾಘಾತದಿಂದ ಮಡಿಕೇರಿ ಉದ್ಯಮಿ ಅಂಬಿಕಾ ಗಣೇಶ್ ಸಾವು

ಹೃದಯಾಘಾತದಿಂದ ಮಡಿಕೇರಿ ಉದ್ಯಮಿ ಅಂಬಿಕಾ ಗಣೇಶ್ ಸಾವು ಮಡಿಕೇರಿ : ಉದ್ಯಮಿ ಅಜ್ಜಿನಂಡ ಗಣೇಶ್ ಅಯ್ಯಣ್ಣ (68) ಹೃದಯಾಘಾತ ದಿಂದ ನಿಧನರಾಗಿದ್ದಾರೆ. ಶ್ರೀ ದಂಡಿನ ಮಾರಿಯಮ್ಮ ದೇವಲಾಯದ ಟ್ರಸ್ಟಿ, ಹಾಗೂ ಹಲವು ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ಗಣೇಶ್, ಮಡಿಕೇರಿಯ ಕಾಲೇಜ್ ರಸ್ತೆಯಲ್ಲಿ ಅಂಬಿಕಾ ವಿಡಿಯೋ, ಅಂಗಡಿಯನ್ನು ತೆರದು ಕೊಡಗು ಸೇರಿದಂತೆ ಇತರ ಜಿಲ್ಲೆಗಳ ಪ್ರತಿಭೆಗಳ ಧ್ವನಿಮುದ್ರಿತ ಹಾಡುಗಳ ಕ್ಯಾಸೆಟ್ಗಳನ್ನು ಅತಿ ಹೆಚ್ಚು ಮಾರಾಟ ಮಾಡುತ್ತಾ ಪ್ರೋತ್ಸಾಹಿಸುತ್ತಿದ್ದರು. ಜಿಲ್ಲಾ ಚೇಂಬರ ಕಾಮರ್ಸ್ ನ ಪ್ರಧಾನ ಕಾರ್ಯದರ್ಶಿಗಲಾದ ಪತ್ನಿ ಮೊಂತಿ ಗಣೇಶ್ […]

ಸಿದ್ದಾಪುರ : ಆಟೋ ಮೇಲೆ ಕಾಡಾನೆ ದಾಳಿ : ಪ್ರಯಾಣಿಕನಿಗೆ ಗಾಯ : ತಪ್ಪಿದ ಭಾರಿ ಅನಾಹುತ

*ಜನವಾಹಿನಿ ಬ್ರೇಕಿಂಗ್*  ಕೊಡಗಿನಲ್ಲಿ ಮುಂದುವರೆದ ಕಾಡಾನೆ ದಾಳಿ ಪ್ರಕರಣ *ನೆನ್ನೆಯಷ್ಟೇ ಬೈಕ್ ಸವಾರನ ಮೇಲೆ ದಾಳಿ ಮಾಡಿದ ಪ್ರಕರಣ ವರದಿಯಾಗಿತು.* *ಅದರ ಬೆನ್ನಲ್ಲೇ ಇಂದು ಬೆಳಗ್ಗೆ ಆಟೋ ಮೇಲೆ ದಾಳಿ ಮಾಡಿರುವ ಘಟನೆ ನಡೆದಿದೆ* *ಇಂಜಲಗೆರೆ ಮುತ್ತಪ್ಪ ದೇವಾಲಯದ ಸಮೀಪ ನಡೆದ ಘಟನೆ.* *ಆಟೋದಲ್ಲಿದ್ದ ಪ್ರಯಾಣಿಕ ಪುಲಿಯೇರಿ ಗ್ರಾಮದ ಪ್ರದೀಪ್ ಎಂಬುವವರ ತೊಡೆಯ ಭಾಗಕ್ಕೆ ಗಾಯ* *ಇಂಜಲಗೆರೆ ಫಿರೋಜ್ ಎಂಬುವವರಿಗೆ ಸೇರಿದ ಆಟೋದ ಮೇಲೆ ಎರಗಿದ ಕಾಡಾನೆ* *ಆಟೋದ ಮೇಲೆ ದಂತದಿಂದ ತಿವಿದ ಪರಿಣಾಮ ಆಟೋ ಎಡಭಾಗ […]

ತಂಬಾಕು ಮುಕ್ತ-ಗ್ರಾಮ ಪಂಚಾಯತಿ ಸಭೆ

ತಂಬಾಕು ಮುಕ್ತ-ಗ್ರಾಮ ಪಂಚಾಯತಿ ಸಭೆ ಮಡಿಕೇರಿ : ಗಾಳಿಬೀಡು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತಿ ಅದ್ಯಕ್ಷರಾದ ಪುಪ್ಷವತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಪಂಚಾಯತಿ ವ್ಯಾಪ್ತಿಗೆ ಬರುವ ಕಂದಾಯ ಗ್ರಾಮಗಳಾದ ಕಾಲೂರು ಹಾಗೂ ಹಮಿಯಾಲ ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮಗಳಾಗಿ ಘೋಷಿಸುವ ಕುರಿತು ಪೂರ್ವ ಭಾವಿ ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ವಿ.ಶ್ರೀನಾಥ್ ರವರು ತಂಬಾಕು ಮುಕ್ತ ಗ್ರಾಮ ಘೋಷಣೆ, ಗೃಹ ಆರೋಗ್ಯ ಯೋಜನೆ, ಕುಷ್ಠರೋಗ […]

ಅಖಂಡ ಭಾರತ ಸಂಕಲ್ಪ  : ಮಡಿಕೇರಿಯಲ್ಲಿ ಬೃಹತ್ ಪಂಜಿನ ಮೆರವಣಿಗೆ

ಅಖಂಡ ಭಾರತ ಸಂಕಲ್ಪ  : ಮಡಿಕೇರಿಯಲ್ಲಿ ಬೃಹತ್ ಪಂಜಿನ ಮೆರವಣಿಗೆ ಮಡಿಕೇರಿ : ಕೊಡಗು ಜಿಲ್ಲಾ ಹಿಂದು ಜಾಗರಣ ವೇದಿಕೆಯ ಆಶ್ರಯದಲ್ಲಿ ಸ್ವಾತಂತ್ರೋತ್ಸವದ ಪ್ರಯುಕ್ತ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮ ಮಡಿಕೇರಿಯಲ್ಲಿ ನಡೆಯಿತು. ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮದ ಅಂಗವಾಗಿ ನಗರದಲ್ಲಿ ಬೃಹತ್ ಪಂಜಿನ ಮೆರವಣಿಗೆ ನಡೆಸಿದ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಅಖಂಡ ಭಾರತದ ಸಂಕಲ್ಪ ತೊಟ್ಟರು. ನಗರದ ಮಹದೇವಪೇಟೆಯ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಆರಂಭಗೊಂಡ ಪಂಜಿನ ಮೆರವಣಿಗೆ […]