Breaking News :

ಆನೆ ತುಳಿತಕ್ಕೆ  ಬಲಿಯಾದ ರೈತನ ಅಂತಿಮ ದರ್ಶನ ಪಡೆದ ಶಾಸಕ ಪೊನ್ನಣ್ಣ

ಆನೆ ತುಳಿತಕ್ಕೆ  ಬಲಿಯಾದ ರೈತನ ಅಂತಿಮ ದರ್ಶನ ಪಡೆದ ಶಾಸಕ ಪೊನ್ನಣ್ಣ  ಮಡಿಕೇರಿ : ಚೆಂಬು ಗ್ರಾಮದ ದಬ್ಬಕ್ಕ ಭಾಗದಲ್ಲಿ ನೆನ್ನೆ ರಾತ್ರಿ ಆನೆ ದಾಳಿಯಿಂದ ಮೃತಪಟ್ಟ ಕೊಪ್ಪದ ಶಿವಪ್ಪ (72) ಎಂಬ ರೈತನ ಪಾರ್ಥಿವ ಶರೀರವನ್ನು ಇಂದು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅಂತಿಮ ದರ್ಶನ ಪಡೆದರು. ನೆನ್ನೆ ಘಟನೆ ನಡೆದ ಕೂಡಲೇ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರಾದ ಶ್ರೀ ಸಂಕೇತ್ […]

ಕೊಡವ ಸಂಸ್ಕೃತಿ, ಕಲೆಗಳ ಶ್ರೀಮಂತಿಕೆಗೆ ಎಲ್ಲೆಡೆ ಗೌರವ : ಎ.ಎಸ್.ಪೊನ್ನಣ್ಣ

ಕೊಡವ ಸಂಸ್ಕೃತಿ, ಕಲೆಗಳ ಶ್ರೀಮಂತಿಕೆಗೆ ಎಲ್ಲೆಡೆ ಗೌರವ : ಎ.ಎಸ್.ಪೊನ್ನಣ್ಣ ಮಡಿಕೇರಿ : ಕೊಡಗಿನ ಪೂರ್ವಜರು ಉಳಿಸಿ ಬೆಳೆಸಿಕೊಂಡು ಬಂದಿರುವ ಕೃಷಿ ಪದ್ಧತಿ, ಸಂಸ್ಕೃತಿ, ಕಲೆ, ಪರಂಪರೆಗಳನ್ನು ಇಂದಿನ ಯುವಜನರು ಮರೆಯದೆ ಮುಂದುವರಿಸಿಕೊಂಡು ಹೋಗುವಂತಾಗಬೇಕು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಕರೆ ನೀಡಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಬಿದ್ದಾಟಂಡ ಕುಟುಂಬ, ನಾಲ್ಕುನಾಡು ಪ್ಲಾಂಟರ್ಸ್ ಕ್ಲಬ್ ಅಸೋಸಿಯೇಷನ್ ಮತ್ತು ಕೊಡವ ಸಮಾಜ ಸಂಸ್ಕøತಿ ಮತ್ತು […]

ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಖಂಡಿಸಿ ಮಡಿಕೇರಿಯಲ್ಲಿ ನಾಳೆ ಭಕ್ತರಿಂದ ಬೃಹತ್ ಜಾಥಾ

ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಖಂಡಿಸಿ ಮಡಿಕೇರಿಯಲ್ಲಿ ನಾಳೆ ಭಕ್ತರಿಂದ ಬೃಹತ್ ಜಾಥಾ ಮಡಿಕೇರಿ : ಧರ್ಮಸ್ಥಳ ಕ್ಷೇತ್ರಕ್ಕೆ ಹಾಗೂ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ ವಿರೇಂದ್ರ ಹೆಗ್ಗಡೆಯವರಿಗೆ ನಿರಂತರವಾಗಿ ಕಳಂಕ ತರುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡುತ್ತಿರುವ ಬೆಳವಣಿಗೆಯಿಂದಾಗಿ ಕ್ಷೇತ್ರದ ಭಕ್ತರಿಗೆ ನೋವುಂಟಾಗಿದೆ. ಭಕ್ತರ ಮನಸಿನಲ್ಲಿ ಆಕ್ರೋಶ , ಯುವ ಜನಾಂಗದಲ್ಲಿ ಕೋಮು ಭಾವನೆ ವ್ಯಕ್ತವಾಗುತ್ತಿದ್ದು ಸಮಾಜದಲ್ಲಿ ಅಶಾಂತಿಯ ವಾತವರಣ ನಿರ್ಮಾಣವಾಗುತ್ತಿದೆ. ಈ ರೀತಿಯ ಅಪಪ್ರಚಾರ ಮಾಡುತ್ತಿರುವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲು ಸರಕಾರಕ್ಕೆ […]

ಆ.8ರಿಂದ ಕೊಡಗಿನ ವಿವಿಧೆಡೆ ಮದ್ಯ ಮಾರಾಟ ನಿಷೇಧ : ಎಲ್ಲೆಲ್ಲಿ ನಿಷೇಧ ಹೇರಲಾಗಿದೆ ಇಲ್ಲಿದೆ ನೋಡಿ ಸಪೂರ್ಣ ಮಾಹಿತಿ

ಪಂಜಿನ ಮೆರವಣಿಗೆ : ಆ.8 ರಿಂದ ಜಿಲ್ಲೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಹಲವೆಡೆ ನಡೆಯಲಿರುವ ಪಂಜಿನ ಮೆರವಣಿಗೆ ಪ್ರಯುಕ್ತ ವಿವಿಧೆಡೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶ ಹೊರಡಿಸಿದ್ದಾರೆ. ಆಗಸ್ಟ್ 8ರಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12ಗಂಟೆಯವರೆಗೆ ಮಡಿಕೇರಿ ನಗರ ಹಾಗೂ ಸುತ್ತಮುತ್ತಲಿನ 10 ಕಿ.ಮೀ ಪ್ರದೇಶದಲ್ಲಿ, ಆ.9ರಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಮಾದಾಪುರ ಹಾಗೂ […]

ಕಾಡಾನೆ ದಾಳಿಗೆ ವ್ಯಕ್ತಿ  ಬಲಿ: ತಡರಾತ್ರಿ ಚೆಂಬುವಿನಲ್ಲಿ ನಡೆದ ಘಟನೆ : ರಾತ್ರಿಯೇ ಸ್ಥಳಕ್ಕೆ ಸಂಕೇತ್ ಪೂವಯ್ಯ ಭೇಟಿ ಪರಿಶೀಲನೆ

ಕಾಡಾನೆ ದಾಳಿಗೆ ವ್ಯಕ್ತಿ  ಬಲಿ: ತಡರಾತ್ರಿ ಚೆಂಬುವಿನಲ್ಲಿ ನಡೆದ ಘಟನೆ : ರಾತ್ರಿಯೇ ಸ್ಥಳಕ್ಕೆ ಸಂಕೇತ್ ಪೂವಯ್ಯ ಭೇಟಿ ಪರಿಶೀಲನೆ ಮಡಿಕೇರಿ : ಚೆಂಬು ಗ್ರಾಮದ ದಬ್ಬಕ್ಕ ಭಾಗದಲ್ಲಿ ಇಂದು ರಾತ್ರಿ ಹೊತ್ತಲ್ಲಿ ಆನೆ ದಾಳಿಯಿಂದ ಕೊಪ್ಪದ ಶಿವಪ್ಪ (72) ಎಂಬ ರೈತ ಮೃತಪಟ್ಟಿರುತ್ತಾರೆ. ಸುದ್ದಿ ತಿಳಿದೊಡನೆ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯರಾದ ಶ್ರೀ ಸಂಕೇತ್ ಪೂವಯ್ಯ ಅವರು ಸಂಪಾಜೆ ಆಸ್ಪತ್ರೆಗೆ ಭೇಟಿ ನೀಡಿ ಘಟನೆಯ ಬಗ್ಗೆ ವಿವರ ಪಡೆದುಕೊಂಡರು. ಸ್ಥಳೀಯರೊಂದಿಗೆ ಮಾತನಾಡಿದ ಬಳಿಕ, ವಿಷಯವನ್ನು ಶಾಸಕರಿಗೆ […]

ಎದೆ ಹಾಲಿನ ಮಹತ್ವ ಮತ್ತು ಯೋಜನೆಗಳ ಬಗ್ಗೆ ಅರಿವು ಕಾರ್ಯಕ್ರಮ

ಎದೆ ಹಾಲಿನ ಮಹತ್ವ ಮತ್ತು ಯೋಜನೆಗಳ ಬಗ್ಗೆ ಅರಿವು ಕಾರ್ಯಕ್ರಮ ಮಡಿಕೇರಿ : ಮಕ್ಕಂದೂರು ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಎದೆ ಹಾಲಿನ ಮಹತ್ವ ಕುರಿತು ಅರಿವು ಕಾರ್ಯಕ್ರಮವು ಇಂದು ನಡೆಯಿತು. ಮೇಲ್ವಿಚಾರಕರು ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮೇಪಾಡಂಡ ಸವಿತಾ ಕೀರ್ತನ್ ಅವರು ಎದೆ ಹಾಲಿನ ಮಹತ್ವದ ಬಗ್ಗೆ ವಿವರವಾಗಿ ಮಾಹಿತಿ ನೀಡಿ ಪೌಷ್ಟಿಕ ಆಹಾರ ಸೇವನೆ, ವಾಯು ವಿಹಾರ, ಹೆಚ್ಚು ನೀರು ಸೇವನೆ, ಸ್ಥಳೀಯವಾಗಿ ಸಿಗುವ […]

ವಿಶ್ವ ಸ್ತನ್ಯಪಾನ ಸಪ್ತಾಹ ಮಕ್ಕಳಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ಎದೆಹಾಲು ಸಹಕಾರಿ: ಡಾ.ಮಧುಸೂದನ

ವಿಶ್ವ ಸ್ತನ್ಯಪಾನ ಸಪ್ತಾಹ ಮಕ್ಕಳಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ಎದೆಹಾಲು ಸಹಕಾರಿ: ಡಾ.ಮಧುಸೂದನ ಮಡಿಕೇರಿ : ಮಕ್ಕಳಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ಆರು ತಿಂಗಳ ವರೆಗೆ ಕಡ್ಡಾಯವಾಗಿ ಎದೆಹಾಲು ಕುಡಿಸಬೇಕು. ಜೊತೆಗೆ 2 ವರ್ಷದವರೆಗೆ ಪೂರಕ ಆಹಾರದ ಜೊತೆಗೆ ಎದೆಹಾಲು ಕುಡಿಸುವಂತಾಗಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರ್‍ಸಿಎಚ್ ಅಧಿಕಾರಿ ಡಾ.ಮಧುಸೂದನ್ ಅವರು ತಿಳಿಸಿದ್ದಾರೆ. ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಮಕ್ಕಳ ವಿಭಾಗದಿಂದ ನಗರದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯ ಮಕ್ಕಳ ಹೊರ ರೋಗಿ […]

ಜನ ಸುರಕ್ಷಾ ಅಭಿಯಾನಕ್ಕೆ ಚಾಲನೆ 

ಜನ ಸುರಕ್ಷಾ ಅಭಿಯಾನಕ್ಕೆ ಚಾಲನೆ ಮಡಿಕೇರಿ : ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ, ಬ್ಯಾಂಕ್ ಆಫ್ ಬರೋಡ ಮರಗೋಡು ಶಾಖೆ ಇವರ ಸಹಯೋಗದೊಂದಿಗೆ ತಾಲ್ಲೂಕಿನ ಹೊಸ್ಕೇರಿ ಗ್ರಾಮದಲ್ಲಿ, ಹೊಸ್ಕೇರಿ ಗ್ರಾಮ ಪಂಚಾಯತಿಯ ಸಹಕಾರದೊಂದಿಗೆ, ಕೇಂದ್ರ ಸರಕಾರದ ಆದೇಶದಂತೆ ಆಯಾಯ ಗ್ರಾಮದ ಬ್ಯಾಂಕ್ ಶಾಖೆ ಮುಖಾಂತರ ಪ್ರತೀ ವರ್ಷವೂ ನಡೆಸುವ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು. ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಗಂಗಾಧರ್ ನಾಯಕ್ ಅವರು ಮಾತನಾಡಿ ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ […]

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ ಕುಶಾಲನಗರ : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿಗಳು, ಇಂದಿನ ನೀರಿನ ಮಟ್ಟ 2856.25 ಅಡಿಗಳು. ಕಳೆದ ವರ್ಷ ಇದೇ ದಿನ 2855.79 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 1.20 ಮಿ.ಮೀ., ಕಳೆದ ವರ್ಷ ಇದೇ ದಿನ 1.20 ಮಿ.ಮೀ., ಇಂದಿನ ನೀರಿನ ಒಳಹರಿವು 3796 ಕ್ಯುಸೆಕ್, ಕಳೆದ ವರ್ಷ ಇದೇ ದಿನ 6889 ಕ್ಯುಸೆಕ್., ಇಂದಿನ ನೀರಿನ ಹೊರ ಹರಿವು ನದಿಗೆ 2958 ಕ್ಯುಸೆಕ್. ನಾಲೆಗೆ 500 […]

ಪೆರಂಬಾಡಿ : ಮಹಿಳಾ ಕಾಲೇಜಿನ ನೂತನ ಗ್ರಂಥಾಲಯ ಲೋಕಾರ್ಪಣೆ

ಪೆರಂಬಾಡಿ : ಮಹಿಳಾ ಕಾಲೇಜಿನ ನೂತನ ಗ್ರಂಥಾಲಯ ಲೋಕಾರ್ಪಣೆ ವಿರಾಜಪೇಟೆ :  ಪೆರಂಬಾಡಿಯಲ್ಲಿರುವ ಎಸ್.ಇ.ಎ ಮಹಿಳಾ ಕಾಲೇಜಿನ ನೂತನ ಗ್ರಂಥಾಲಯವನ್ನು ಇಂದು ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ.ಪೊನ್ನಣ್ಣ  ರವರು ಲೋಕಾರ್ಪಣೆ ಮಾಡಿದರು. ಬಳಿಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಮಾನ್ಯ ಶಾಸಕರು, ಮನುಷ್ಯನ ಜೀವನದಲ್ಲಿ ವಿದ್ಯಾಭ್ಯಾಸ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಶಾಲಾ ಕಾಲೇಜುಗಳಲ್ಲಿ ಸಿಗುವ ಜ್ಞಾನದೊಂದಿಗೆ ಇಂತಹ ಗ್ರಂಥಾಲಯಗಳಲ್ಲಿ ಲಭ್ಯವಿರುವ ಪ್ರಪಂಚದ ಎಲ್ಲಾ ಇತಿಹಾಸ ಹಾಗೂ ಪ್ರಸಕ್ತ ವಿದ್ಯಮಾನಗಳ ಪುಸ್ತಕಗಳನ್ನು ಓದುವ ಅಭಿರುಚಿಯನ್ನು ವಿದ್ಯಾರ್ಥಿಗಳು […]