ಗೋಶಾಲೆಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ : ಪರಿಶೀಲನೆ

ಜನವಾಹಿನಿ News ಮಡಿಕೇರಿ : ಜಿಲ್ಲಾಧಿಕಾರಿಗಳು ಹಾಗೂ ಪ್ರಾಣಿದಯಾ ಸಂಘದ ಅಧ್ಯಕ್ಷರಾದ ಎಸ್.ಜೆ.ಸೋಮಶೇಖರ್ ಅವರು ಮಡಿಕೇರಿ ಕೆ.ನಿಡುಗಣೆ ಜಿಲ್ಲಾ ಸರ್ಕಾರಿ ಗೋಶಾಲೆಗೆ ಅನಿರೀಕ್ಷಿತ ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಗೋಶಾಲೆಯಲ್ಲಿ 37 ಜಾನುವಾರುಗಳನ್ನು ಸಾಕುತ್ತಿದ್ದು, ಜಾನುವಾರುಗಳ ನಿರ್ವಹಣೆಗೆ ಬೇಕಾಗುವ ಒಣ ಮೇವು ದಾಸ್ತಾನು, ಪಶು ಆಹಾರ ದಾಸ್ತಾನು ಕೊಠಡಿ ಹಾಗೂ ಚಿಕಿತ್ಸೆಗೆ ಬೇಕಾಗುವ ಔಷಧ ದಾಸ್ತಾನನ್ನು ಜಿಲ್ಲಾಧಿಕಾರಿ ಅವರು ವೀಕ್ಷಿಸಿದರು. ಗೋಶಾಲೆಯಲ್ಲಿನ ಜಾನುವಾರುಗಳ ನಿರ್ವಹಣೆಗೆ 3 ಜನ ಹೊರಗುತ್ತಿಗೆ ‘ಡಿ’ ದರ್ಜೆ ನೌಕರರು 3 ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು […]
ಹೊದ್ದೂರು ಬಳಿಯ ಕಬಡಗೇರಿ ಕುಟುಂಬಗಳಿಗೆ ಶಾಸಕರಾದ ಡಾ.ಮಂತರ್ ಗೌಡರಿಂದ ನಿವೇಶನ ಹಕ್ಕುಪತ್ರ ವಿತರಣೆ

ಜನವಾಹಿನಿ News ಮಡಿಕೇರಿ : ಹೊದ್ದೂರು ಗ್ರಾಮದ ಕಬಡಗೇರಿಯ ನಿವೇಶನ ರಹಿತ 47 ಕುಟುಂಬಗಳಿಗೆ ಶಾಸಕರಾದ ಡಾ.ಮಂತರ್ ಗೌಡ ಅವರು ಹಕ್ಕುಪತ್ರ ವಿತರಿಸಿದರು. ಹಾಗೆಯೇ ಹೊದ್ದೂರು ಗ್ರಾಮದ ಪಾಲೆಮಾಡಿನ 14 ಕುಟುಂಬಗಳಿಗೆ 94ಸಿ ರಡಿ ಹಕ್ಕುಪತ್ರವನ್ನು ಶಾಸಕರು ವಿತರಿಸಿದರು. ಹೊದ್ದೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ನಿವೇಶನ ಹಕ್ಕುಪತ್ರವನ್ನು ವಿತರಿಸಿದರು. ಹೊದವಾಡ ಗ್ರಾಮದ ಅಂಬಲ ಅಂಗನವಾಡಿ ಕೇಂದ್ರವನ್ನು ಇದೇ ಸಂದರ್ಭದಲ್ಲಿ ಶಾಸಕರು ಉದ್ಘಾಟಿಸಿದರು. ಹಾಗೆಯೇ ಹೊದ್ದೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ವಿವಿಧ ಸಂಪರ್ಕ ರಸ್ತೆಗೆ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ […]
ಫೆ.22ರಂದು ಮೂರ್ನಾಡುವಿನ ಪಾಂಡಾಣೆ ನಾಡ್‌ಮಂದ್ ಮತ್ತು ಶಾಲಾ ಮೈದಾನದಲ್ಲಿ ವಿರಾಟ್ ಹಿಂದೂ ಸಂಗಮ ಕಾರ್ಯಕ್ರಮ

ಜನವಾಹಿನಿ News ಮಡಿಕೇರಿ : ಹಿಂದೂ ಸಂಗಮ ಆಯೋಜನಾ ಸಮಿತಿಯ ಮೂರ್ನಾಡು ಮಂಡಲ ವತಿಯಿಂದ ಫೆ.೨೨ ರಂದು ಮೂರ್ನಾಡುವಿನ ಪಾಂಡಾಣೆ ನಾಡ್‌ಮಂದ್ ಮತ್ತು ಶಾಲಾ ಮೈದಾನದಲ್ಲಿ ವಿರಾಟ್ ಹಿಂದೂ ಸಂಗಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಂಡಲ ಅಧ್ಯಕ್ಷ ಚೆಟ್ಟಿಮಾಡ ಜಯಂತ್ ಕುಮಾರ್ ತಿಳಿಸಿದರು. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾತೃಭೂಮಿ, ಹಿಂದೂಧರ್ಮ ಮತ್ತು ಸಂಸ್ಕೃತಿ ರಕ್ಷಣೆ ಹಾಗೂ ಸಂವರ್ಧನೆ ಪ್ರತಿಯೊಬ್ಬ ಹಿಂದೂವಿನ ಕರ್ತವ್ಯವಾಗಿದೆ. ಹಿಂದೂ ಸಂಘಟಿತನಾದಾಗ ಮಾತ್ರ ಧರ್ಮ ಬಲಿಷ್ಠವಾಗುತ್ತದೆ. ಮಾತೃಭೂಮಿ ರಕ್ಷಣೆಯಾಗುತ್ತದೆ. ಈ ಮಹತ್ವದ ಉದ್ದೇಶದಿಂದ […]
ರದ್ದುಗೊಳಿಸಿದ ಬಿ.ಪಿ.ಎಲ್ ಕಾರ್ಡ್‌ಗಳನ್ನು ಮರಳಿ ನೀಡಲು SDPI ಆಗ್ರಹ

ಜನವಾಹಿನಿ News ಮಡಿಕೇರಿ : ಜಿಲ್ಲೆಯಲ್ಲಿ ೪,೫೦೦ ಬಿ.ಪಿ.ಎಲ್ ಕಾರ್ಡ್‌ಗಳನ್ನು ರದ್ದುಗೊಳಿಸಿದ್ದು, ಈ ಪ್ರಕ್ರಿಯೆ ಮುಂದುವರಿಸುತ್ತಿರುವುದು ಸರಿಯಲ್ಲ ಎಂದಿರುವ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಮಿನ್ ಮೊಹಿಸಿನ್, ಕೂಡಲೇ ರದ್ದುಗೊಳಿಸಿದ ಎಲ್ಲಾ ಬಿ.ಪಿ.ಎಲ್ ಕಾರ್ಡ್‌ಗಳನ್ನು ಮರಳಿ ನೀಡಬೇಕೆಂದು ಒತ್ತಾಯಿಸಿದರು. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಗರಿಕ ಸೇವೆ, ಬಡತನ ನಿರ್ಮೂಲನೆ, ಆಹಾರ, ಆರೋಗ್ಯ ಭದ್ರತೆ, ಶಿಕ್ಷಣ, ಉದ್ಯೋಗಕ್ಕೆ ಉತ್ತೇಜನೆ ಪ್ರತಿ ಸರ್ಕಾರದ ಜವಾಬ್ದಾರಿಯಾಗಿದೆ. ವಿಶೇಷ ಆರ್ಥಿಕ ದುರ್ಬಲ ವರ್ಗದ ಆರ್ಥಿಕ ಮಿತಿ ೮ ಲಕ್ಷಕ್ಕೆ ಸರ್ಕಾರ ನಿಗದಿಪಡಿಸಿದೆ. ಆದರೆ, ಬಿ.ಪಿ.ಎಲ್ […]
ಫೆ.22 ರಂದು ಚೆಟ್ಟಳ್ಳಿಯಲ್ಲಿ ಬೃಹತ್ ವಿರಾಟ್ ಹಿಂದೂ ಸಂಗಮ ಕಾರ್ಯಕ್ರಮ

ಜನವಾಹಿನಿ News ಮಡಿಕೇರಿ : ಚೆಟ್ಟಳ್ಳಿಯ ವಿರಾಟ್ ಹಿಂದೂ ಸಂಗಮ ಆಯೋಜನಾ ಸಮಿತಿ ವತಿಯಿಂದ ಫೆ.೨೨ ರಂದು ಚೆಟ್ಟಳ್ಳಿಯಲ್ಲಿ ಬೃಹತ್ ವಿರಾಟ್ ಹಿಂದೂ ಸಂಗಮವನ್ನು ಆಯೋಜಿಸಲಾಗಿದೆ ಎಂದು ಸಮಿತಿಯ ಸಂಯೋಜಕ ಪೇರಿಯನ ಉದಯ ಕುಮಾರ್ ತಿಳಿಸಿದರು. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾನುವಾರ ಮಧ್ಯಾಹ್ನ ೨ ಗಂಟೆಗೆ ವ್ಯಾಲಿ ಪ್ಲೇ ಶಾಲೆ ಮುಂಭಾಗದಿಂದ ಚೆಟ್ಟಳ್ಳಿ ಪ್ರೌಢಶಾಲಾ ಆಟದ ಮೈದಾನದವರೆಗೆ ಬೃಹತ್ ಶೋಭಾಯಾತ್ರೆ ಸಾಗಲಿದೆ. ಶೋಭಾಯಾತ್ರೆಯಲ್ಲಿ ಶ್ರೀ ಮೂಕಾಂಬಿಕ ಭಜನೆ ಕುಣಿತ ತಂಡ ನೆಲ್ಯಹುದಿಕೇರಿ, ಪೂರ್ಣ ಕುಂಭ ಸ್ವಾಗತ, […]
ಪೊಲೀಸ್ ಕ್ಷೇಮಾಭಿವೃದ್ಧಿ ಸಂಘದ ಮರಣ ನಿಧಿಯ ಮೊತ್ತ 10 ಸಾವಿರಕ್ಕೆ ಏರಿಕೆ

ಜನವಾಹಿನಿ News ಮಡಿಕೇರಿ : ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಕ್ಷೇಮಾಭಿವೃದ್ಧಿ ಸಂಘದಿಂದ ನೀಡಲಾಗುತ್ತಿದ್ದ ಮರಣ ನಿಧಿಯ ಮೊತ್ತ ರೂ.೫ ಸಾವಿರವನ್ನು ರೂ.೧೦ ಸಾವಿರಕ್ಕೆ ಏರಿಕೆ ಮಾಡಲಾಗಿದ್ದು, ಸದಸ್ಯರು ಇದರ ಲಾಭ ಪಡೆದುಕೊಳ್ಳುವಂತೆ ಸಂಘದ ಉಪಾಧ್ಯಕ್ಷ ಚೊಕ್ಕಾಡಿ ಎನ್.ಅಪ್ಪಯ್ಯ ಮನವಿ ಮಾಡಿದರು. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ೨೦ ವರ್ಷಗಳಿಂದ ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಕ್ಷೇಮಾಭಿವೃದ್ಧಿ ಸಂಘವು ನಿವೃತ್ತ ಪೊಲೀಸರ ಯೋಗಕ್ಷೇಮಕ್ಕೆ ಬದ್ಧವಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿದೆ. ಸದಸ್ಯರು ಮರಣ ಹೊಂದಿದಾಗ ಮೃತರ […]
ಸಿದ್ದಾಪುರ : ಟ್ರಾಕ್ಟರ್ ಮಗುಚಿಬಿದ್ದು ಕಾರ್ಮಿಕ ದುರ್ಮರಣ

ಜನವಾಹಿನಿ News ಸಿದ್ದಾಪುರ:- ವಾಹನ ಚಲಾಯಿಸುವ ಆಸೆಯಿಂದ ಕಾರ್ಮಿಕನೋರ್ವ ಟ್ರಾಕ್ಟರ್ ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿದ ಟ್ರಾಕ್ಟರ್ ಹಳ್ಳಕ್ಕೆ ಮಗುಚಿ ಬಿದ್ದಿದ್ದು, ಕಾರ್ಮಿಕ ಸ್ಥಳದಲ್ಲೆ ಮೃತಪಟ್ಟ ಘಟನೆ ಸಿದ್ದಾಪುರ ಸಮೀಪದ ಹಿಲ್ ಕಿಲ್ ಎಸ್ವೇಟ್ನಲ್ಲಿ ಸಂಭವಿಸಿದೆ. ಬಾಗಲಕೋಟೆಯ ನಿವಾಸಿ ಪ್ರವೀಣ್ (35) ಎಂಬಾತನೇ ಮೃತ ದುರ್ದೈವಿ. ಎಸ್ಟೇಟ್ ನಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಮುಂಜಾನೆ ಸಾಮಗ್ರಿಗಳನ್ನು ಒದಗಿಸಲು ಚಾಲಕನು ಇಲ್ಲದ ಸಂದರ್ಭ ವಾಹನ ಚಲಾಯಿಸುವ ಆಸೆಯಿಂದ ಟ್ರಾಕ್ಟರ್ ಚಲಾಯಿಸಿದ್ದು, ಈ ದುರ್ಘಟನೆಗೆ ಕಾರಣವಾಗಿದೆ. ಘಟನಾ ಸ್ಥಳಕ್ಕೆ ಪೋಲೀಸ್ ಠಾಣಾಧಿಕಾರಿ […]
ಅರಣ್ಯ ಇಲಾಖೆಯಿಂದ ಜನ ಜಾಗೃತಿ ಬೀದಿ ನಾಟಕ ಪ್ರದರ್ಶನ ; ಪ್ರತಿಯೊಬ್ಬರು ಎಚ್ಚರಿಕೆಯಿಂದ ಇದ್ದರೆ ಮಾತ್ರ ಕಾಡು ಪ್ರಾಣಿಗಳಿಂದ ನಮ್ಮನ್ನು ರಕ್ಷಣೆ ಮಾಡಿಕೊಳ್ಳಲು ಸಾಧ್ಯ : ಜಗನ್ನಾಥ್

ಜನವಾಹಿನಿ News ಸಿದ್ದಾಪುರ : ಕಾಡ್ಗಿಚ್ಚು, ಅರಣ್ಯ ನಾಶ, ವಿವಿಧ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕಾಗಿ ವನ್ಯ ಮೃಗಗಳ ಆವಾಸ ಸ್ಥಾನ ನಾಶ, ಆಹಾರ ಕೊರತೆ ಮುಂತಾದ ಕಾರಣಗಳಿಂದ ಆಹಾರ ಅರಸಿ ಪ್ರಾಣಿಗಳು ಕಾಡಿನಿಂದ ನಾಡಿಗೆ ಬರುವಂತಾಗಿದೆ. ಹೀಗಾಗಿ ಪ್ರತಿಯೊಬ್ಬರು ಎಚ್ಚರಿಕೆಯಿಂದ ಇದ್ದರೆ ಮಾತ್ರ ನಮ್ಮನು ನಾವು ರಕ್ಷಣೆ ಮಾಡಿಕೊಳ್ಳಲು ಸಾಧ್ಯವೆಂದು ವಿರಾಜಪೇಟೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೋನಾಲಿ ವೃಷಿನಿ ರವರ ನಿರ್ದೇಶನದಲ್ಲಿ ವಿರಾಜಪೇಟೆ ವಿಭಾಗದ ತಿತಿಮತಿ […]
ಕಾಡಾನೆ ದಾಳಿಗೆ ಸಿಲುಕಿ ಕಾರು ಜಖಂ : ಪ್ರಾಣಾಪಾಯದಿಂದ ಪಾರಾದ ಚಾಲಕ

ಜನವಾಹಿನಿ News ಸಿದ್ದಾಪುರ : ಕಾಡಾನೆ ದಾಳಿಗೆ ಒಳಗಾಗಿ ಕಾರೊಂದು ಜಖಂ ಗೊಂಡಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ವಿರಾಜಪೇಟೆ ತಾಲೂಕಿನ ಸಿದ್ದಾಪುರ ವ್ಯಾಪ್ತಿಯಲ್ಲಿ ನಡೆದಿದೆ. ಸಿದ್ದಾಪುರದ ವ್ಯಾಪ್ತಿಯ ಕೆಸನಳ್ಳ ಬಳಿ ಘಟನೆ ನಡೆದಿದ್ದು, ಪುಲಿಯೇರಿ ಗ್ರಾಮದ ನಿವಾಸಿ ಪ್ರಜಿತ್ ಎಂಬುವವರಿಗೆ ಸೇರಿದ ಕಾರು ಜಖಂಗೊಂಡಿದೆ. ಕಾರಿನ ಮೇಲೆ ಏಕಾಏಕಿ ದಾಳಿ ನಡೆಸಿದ ಕಾಡಾನೆ ಹಿಂಡು ಕಾರನ್ನು ಜಖಂಗೊಳಿಸಿವೆ. ಸಿದ್ದಾಪುರ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಭಯಭೀತರಾಗಿರುವ ಗ್ರಾಮಸ್ಥರು ಕಾಡಾನೆ ಹಾವಳಿ ತಡೆಯಲು […]
ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ತರಬೇತಿ ಕಾರ್ಯಾಗಾರ – ನೊಂದವರಿಗೆ ಕಾನೂನಿನ ಮಾಹಿತಿ ನೀಡಿ: ಹೊಸಮನಿ ಪುಂಡಲಿಕ

ಜನವಾಹಿನಿ News ಮಡಿಕೇರಿ : ಆಸಹಾಯಕರು ಹಾಗೂ ಮುಖ್ಯವಾಹಿನಿಯಿಂದ ದೂರವಿರುವ ನಾಗರಿಕರಿಗೆ ಕಾನೂನಿನ ಮಾಹಿತಿ ನೀಡುವುದು ಅರೆಕಾಲಿಕ ಕಾನೂನು ಸ್ವಯಂಸೇವಕರ ಕರ್ತವ್ಯವಾಗಿದೆ ಎಂದು ಪ್ರಧಾನ ಮತ್ತು ಜಿಲ್ಲಾ ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಹೊಸಮನಿ ಪುಂಡಲಿಕ ಅವರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಔಟಲಾ ಇಂಡಿಯಾ ಸಂಸ್ಥೆ ಹಾಗೂ ಮಡಿಕೇರಿ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ […]