Breaking News :

ಮಲ್ಲಳ್ಳಿ ಜಲಪಾತದಲ್ಲಿ ಸಿಲುಕಿದ್ದ ಇಬ್ಬರು ವಿದ್ಯಾರ್ಥಿಗಳ ರಕ್ಷಣೆ

  ಜನವಾಹಿನಿ NEWS ಮಡಿಕೇರಿ :  ಫೋಟೋ ಕ್ಲಿಕ್ಕಿಸಲು ಹೋಗಿ ನೀರಿನ ಭಾರಿ ಹರಿವಿನ ಮಧ್ಯೆ ಸಿಲುಕಿದ್ದ ಬೆಂಗಳೂರಿನ ಆಂಧ್ರ ಮೂಲದ ವಿದ್ಯಾರ್ಥಿಗಳಾದ ಸಂತೋಷ್ ಕುಮಾರ್ ಮತ್ತು ಗಣೇಶ್ ನಾಯಕ್ ಅವರನ್ನು ಸ್ಥಳೀಯರು ಹಾಗೂ ಅಗ್ನಿಶಾಮಕ ದಳದವರು ಹಗ್ಗದ ಮುಖಾಂತರ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಸದ್ಯ ಇಬ್ಬರೂ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.  

ಡಾ.ಬಾಬು ಜಗಜೀವನ್ ರಾಂ ಅವರ 40ನೇ ಪುಣ್ಯಸ್ಮರಣೆ 

  ಜನವಾಹಿನಿ NEWS ಮಡಿಕೇರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಸಿರು ಕ್ರಾಂತೀಯ ಹರಿಕಾರ ಡಾ.ಬಾಬು ಜಗಜೀವನ್‍ರಾಂ ಅವರ 40 ನೇ ಪುಣ್ಯಸ್ಮರಣಾ ಕಾರ್ಯಕ್ರಮವು ಸೋಮವಾರ ಸರಳವಾಗಿ ಆಚರಿಸಲಾಯಿತು. ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಡಾ.ಬಾಬು ಜಗಜೀವನ್ ರಾಂ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜ ದೊಡ್ಡಮನಿ, ನಗರಸಭೆ ಸದಸ್ಯರಾದ ಸತೀಶ್, […]

ಸ್ಕೂಟಿ ಮೇಲೆ ಮರ ಬಿದ್ದು ಮಹಿಳೆಗೆ ಗಾಯ

  ಜನವಾಹಿನಿ NEWS ವಿರಾಜಪೇಟೆ : ಚಲಿಸುತ್ತಿದ್ದ ಸ್ಕೂಟಿ ಮೇಲೆ ಗಾಳಿ ಮಳೆಯಿಂದಾಗಿ ಮರ ಬಿದ್ದ ಪರಿಣಾಮ ಸ್ಕೂಟಿಯಲ್ಲಿದ್ದ ಮಹಿಳೆ ಗಾಯಗೊಂಡಿರುವ ಘಟನೆ ವಿರಾಜಪೇಟೆ ತಾಲೂಕು ವ್ಯಾಪ್ತಿಯ ಬೇಟೋಳಿ ಗ್ರಾಮದಲ್ಲಿ ನಡೆದಿದೆ. ಅಲ್ಲಿನ ನಿವಾಸಿ ಸಿಂಧು ಎಂಬುವವರು ಸ್ಕೂಟಿಯಲ್ಲಿ ತೆರಳುತ್ತಿದ್ದ ಸಂದರ್ಭ ಸ್ಕೂಟಿ ಮೇಲೆ ಮರ ಬಿದ್ದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಇವರಿಗೆ ವಿರಾಜಪೇಟೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ.

ಜೆಡಿಎಸ್‌ ಅಲ್ಪಸಂಖ್ಯಾತ ಘಟಕ ನಾಯಕರ ಸಭೆ

  ಜನವಾಹಿನಿ NEWS ಸಿದ್ದಾಪುರ : ಜೆಡಿಎಸ್‌ ಅಲ್ಪಸಂಖ್ಯಾತರ ಘಟಕದ ರಾಜ್ಯದ ಪ್ರಮುಖ ನಾಯಕರ ಸಭೆ ಜೆಡಿಎಸ್‌ ರಾಜ್ಯಾಧ್ಯಕ್ಷಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಬೆಂಗಳೂರು ಜೆಪಿ ಭವನದಲ್ಲಿರುವ ಜೆಡಿಎಸ್ ರಾಜ್ಯ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಪಕ್ಷದ ಸಂಘಟನೆ ಬಲಪಡಿಸುವುದು, ಸಮುದಾಯದಲ್ಲಿ ಸಂಘಟನೆಯನ್ನು ಅಲ್ಪಸಂಖ್ಯಾತ ಪಕ್ಷದ ಇನ್ನಷ್ಟು ವಿಸ್ತರಿಸುವುದು ಹಾಗೂ ಮುಂಬರುವ ರಾಜಕೀಯ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಕೊಡಗು ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಜಾಸಿರ್‌ಮೂರ್ನಾಡ್, ರಾಜ್ಯಕಾರ್ಯಾಧ್ಯಕ್ಷ ಶರೀಫ್ ಸುಂಟಿಕೊಪ್ಪ, ವಿರಾಜಪೇಟೆ ತಾಲೂಕು ಯುವ ಘಟಕದ […]

ಎಸ್ಐಆರ್ ಅರ್ಜಿ ಭರ್ತಿ ಮಾಡಿದ ಶಾಸಕ ಪೊನ್ನಣ್ಣ  : ಸಾರ್ವಜನಿಕರಿಗೆ ಜಾಗೃತಿ ಸಂದೇಶ 

  ಜನವಾಹಿನಿ NEWS ಮಡಿಕೇರಿ : ರಾಜ್ಯಾದ್ಯಂತ ನಡೆಯುತ್ತಿರುವ ಎಸ್ಐಆರ್ ಕಾರ್ಯಕ್ರಮದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಇಂದು ಭಾಗವಹಿಸಿದರು. ಪೊನ್ನಂಪೇಟೆ ತಾಲೂಕು ಹುದಿಕೇರಿಯ ಬೆಳ್ಳೂರಿನಲ್ಲಿರುವ ಶಾಸಕರ ನಿವಾಸದಲ್ಲಿ ಎಸ್ಐಆರ್ (SIR) ಅರ್ಜಿ ಭರ್ತಿ ಮಾಡುವ ಮೂಲಕ, ಮಾನ್ಯ ಶಾಸಕರು ಈ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು. ಬಳಿಕ ಸಾರ್ವಜನಿಕರಿಗೆ ಕರೆ ನೀಡಿದ ಮಾನ್ಯ ಶಾಸಕರು, ಉತ್ತಮ ಸಮಾಜ ನಿರ್ಮಾಣಕ್ಕೆ ಉತ್ತಮ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕು. ಉತ್ತಮ ವ್ಯಕ್ತಿಯನ್ನು ಆಯ್ಕೆ ಮಾಡಲು ಪ್ರತಿಯೊಬ್ಬರಿಗೂ […]

ಹಚ್ಚಿನಾಡು ವ್ಯಾಪ್ತಿಯಲ್ಲಿ (ಎಸ್ಐಆರ್) ಮತದಾರರ ಪರಿಷ್ಕರಣಾ ಅರ್ಜಿ ವಿತರಣೆ 

  ಜನವಾಹಿನಿ NEWS ಮಡಿಕೇರಿ : ವಿರಾಜಪೇಟೆ ವಿಧಾನಸಭಾ ಕ್ಷೇತ್ರ (209) ಕ್ಕೆ ಒಳಪಡುವ ಕಣ್ಣಂಗಾಲ ಗ್ರಾಮ ಪಂಚಾಯಿತಿಯ ವಾರ್ಡ್ ಸಂಖ್ಯೆ 128 ಹಚ್ಚಿನಾಡು ವ್ಯಾಪ್ತಿಯ ಪಳ್ಳಕೆರೆ ಟಾಟಾ ಕಾಫಿ ಸೇರಿದಂತೆ ಸುತ್ತಮುತ್ತಲ ತೋಟದಲ್ಲಿ ನೆಲೆಸಿರುವ ಕಾರ್ಮಿಕರ ಮನೆ ಮನೆಗೆ ತೆರಳಿ ಚುನಾವಣಾ ಆಯೋಗದ ‘ವಿಶೇಷ ತೀವ್ರ ಪರಿಷ್ಕರಣೆ’ ಎಸ್ಐಆರ್ (SIR) ಅಡಿಯಲ್ಲಿ ಮತದಾರರ ಪಟ್ಟಿ ಪರಿಶೀಲನೆಗಾಗಿ ಅರ್ಜಿಗಳನ್ನು ವಿತರಿಸಲಾಯಿತು. ಈ ಸಂದರ್ಭ ಬಿಎಲ್‍ಒ ಲೀಲಾವತಿ ಅರ್ಜಿಯನ್ನು ಭರ್ತಿ ಮಾಡುವ ಕುರಿತು ಕಾರ್ಮಿಕರಿಗೆ ಮಾಹಿತಿ ನೀಡಿದರು. BLO ಲೀಲಾವತಿ […]

ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ :  ಯು.ಟಿ. ಖಾದರ್ ; ಪ್ರಾಕೃತಿಕ ವಿಕೋಪ ನಿರ್ವಹಣೆ ಕುರಿತು ಮಾಹಿತಿ ಪಡೆದ ಸಚಿವರು 

  ಜನವಾಹಿನಿ NEWS ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಅತಿವೃಷ್ಠಿ ಹಾಗೂ ಅನಾವೃಷ್ಠಿಯನ್ನು ಎದುರಿಸಲು ಸಜ್ಜಾಗುವಂತೆ ಪ್ರಾಕೃತಿಕ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಯು.ಟಿ. ಖಾದರ್ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಭಾನುವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದರು. ಕೊಡಗು ಜಿಲ್ಲೆಯಲ್ಲಿ ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಸದ್ಯ ಜುಲೈ ಮತ್ತು […]

ರೋಟರಿ ಮಿಸ್ಟಿ ಹಿಲ್ಸ್ ನ ನೂತನ ಅಧ್ಯಕ್ಷರಾಗಿ ಪಿ.ಆರ್.ರಾಜೇಶ್ , ಕಾಯ೯ದಶಿ೯ಯಾಗಿ ಡಾ.ಚೇತನ್ ಪದಗ್ರಹಣ : ಸಮಾಜಮುಖಿ ಸದಸ್ಯರು ಸಾಮಾಜಿಕ ಸೇವಾ ಸಂಸ್ಥೆಗಳ ಭದ್ರಬುನಾದಿ – ಪ್ರಕಾಶ್ ಬೆಳವಾಡಿ.

    ಜನವಾಹಿನಿ NEWS ಮಡಿಕೇರಿ : ರೋಟರಿ ಸೇರಿದಂತೆ ಯಾವುದೇ ಸಾಮಾಜಿಕ ಸೇವಾ ಸಂಸ್ಥೆಗಳ ಭದ್ರ ಬುನಾದಿಯೇ ಆ ಸಂಸ್ಥೆಯ ಉತ್ಸಾಹಿ ಸದಸ್ಯರಾಗಿದ್ದು, ಈ ನಿಟ್ಟಿನಲ್ಲಿ ಸಮಾನಮನಸ್ಕ, ಸಮಾಜಮುಖಿ ಸದಸ್ಯರ ಸೇಪ೯ಡೆ ಅತ್ಯಗತ್ಯ ಎಂದು ಬೆಂಗಳೂರಿನ ರೋಟರಿ ಜಿಲ್ಲೆ 3191 ರ ಮಾಜಿ ಸಹಾಯಕ ಗವನ೯ರ್ ಪ್ರಕಾಶ್ ಬೆಳವಾಡಿ ಅಭಿಪ್ರಾಯಪಟ್ಟಿದ್ದಾರೆ. ನಗರದ ಗೌಡ ಸಮಾಜದ ಸಭಾಂಗಣದಲ್ಲಿ ಆಯೋಜಿತ ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ನ ನೂತನ ಅಧ್ಯಕ್ಷ ಪೂಳಕಂಡ ರಾಜೇಶ್ ಮತ್ತು ಕಾಯ೯ದಶಿ೯ ಡಾ. ಜಿ.ಡಿ. […]

ಪಾಲಿಬೆಟ್ಟ ಲಯನ್ಸ್ ಕ್ಲಬ್ಬಿನ ಪದಾಧಿಕಾರಿಗಳ ಪದಗ್ರಹಣ : ನೂತನ ಅಧ್ಯಕ್ಷರಾಗಿ ಸದಾ ಕುಶಾಲಪ್ಪ ಅಧಿಕಾರ ಸ್ವೀಕಾರ 

  ಜನವಾಹಿನಿ NEWS ಸಿದ್ದಾಪುರ : ಪಾಲಿಬೆಟ್ಟ ಲಯನ್ಸ್ ಕ್ಲಬ್ ನ 2006- 27 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಲಯನ್ಸ್ ಸೇವಾ ಭವನ ಅನುಗೃಹದಲ್ಲಿ ನಡೆಯಿತು. ಲಯನ್ಸ್ ಜಿಲ್ಲಾ ಚೀಫ್ ಕೋರ್ಡಿನೇಟರ್ ಗೀತಾ ಆರ್ ರಾವ್ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಬಳಿಕ ಮಾತನಾಡಿದ ಅವರು, ಕಾಲಕ್ಕೆ ತಕ್ಕಂತೆ ಸ್ಥಳೀಯ ಸಾರ್ವಜನಿಕರ ಅವಶ್ಯಕತೆಗಳನ್ನು ಆಧರಿಸಿ ಸೇವಾ ಚಟುವಟಿಕೆಗಳನ್ನು ಕೈಗೊಳ್ಳುವಂತೆ ನೂತನ ಆಡಳಿತ ಮಂಡಳಿಗೆ ಸೂಚಿಸಿದರು. 2025-26ನೇ ಸಾಲಿನಲ್ಲಿ ಪಾಲಿಬೆಟ್ಟ ಲಯನ್ಸ್ ಕ್ಲಬ್ಬಿನವರು ಅನುಷ್ಠಾನಗೊಳಿಸಿದ […]

‘ಡ್ರಗ್ಸ್ ಬೇಡ, ಕನಸುಗಳನ್ನು ಬೆನ್ನಟ್ಟಿ’: ಬೆಂಗಳೂರಿನಲ್ಲಿ ಕೊಡಗು ಬ್ಯಾಡ್ಮಿಂಟನ್ ಟೂರ್ನಿ ಯಶಸ್ವಿ

  ಜನವಾಹಿನಿ NEWS ಮಡಿಕೇರಿ : ಯುವಜನತೆಯಲ್ಲಿ ಮಾದಕ ವ್ಯಸನದ ವಿರುದ್ಧ ಜಾಗೃತಿ ಮೂಡಿಸುವ ಹಾಗೂ ಕ್ರೀಡೆಯ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ಉತ್ತೇಜಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ‘ಕೊಡಗು ಬ್ಯಾಡ್ಮಿಂಟನ್ ಟೂರ್ನಮೆಂಟ್’ ಬೆಂಗಳೂರಿನಲ್ಲಿ ಯಶಸ್ವಿಯಾಗಿ ಜರುಗಿತು. ‘ಡ್ರಗ್ಸ್ ಬೇಡ, ಕನಸುಗಳನ್ನು ಬೆನ್ನಟ್ಟಿ’ ಎಂಬ ಅರ್ಥಪೂರ್ಣ ಧ್ಯೇಯದೊಂದಿಗೆ ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನ ಗೇಮ್ ಥಿಯರಿ ಕ್ರೀಡಾಂಗಣದಲ್ಲಿ ಈ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗಿತ್ತು. ಕೊಡಗು ಮೂಲದ ಹಲವಾರು ಉತ್ಸಾಹಿ ತಂಡಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿ, ತೀವ್ರ ಪೈಪೋಟಿಯೊಂದಿಗೆ ಪ್ರೇಕ್ಷಕರಿಗೆ ರೋಚಕ ಪಂದ್ಯಗಳ ರಸದೌತಣ […]