Breaking News :

ಅರಣ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಜಿಲ್ಲೆಯಲ್ಲಿ ಮತ್ತೊಂದು ಜೀವ ಬಲಿ : ಕಾಡಾನೆ ದಾಳಿಗೆ ಸಿಲುಕಿ ಕಾರ್ಮಿಕ ಸ್ಥಳದಲ್ಲೇ ಸಾವು 

  ಜನವಾಹಿನಿ News ಸಿದ್ದಾಪುರ : ಕಾಡಾನೆ ತುಳಿತಕ್ಕೆ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಂದು ಮಧ್ಯಾಹ್ನ ಸಿದ್ದಾಪುರ ಸಮೀಪದ ಗೌರಿಬೆಟ್ಟ ವ್ಯಾಪ್ತಿಯಲ್ಲಿ ನಡೆದಿದೆ. ಬಜೆಗೊಳ್ಳಿ ಬಳಿಯ ಗೌರಿಬೆಟ್ಟ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆ ದಾಳಿ ಮಾಡಿದ್ದು, ಹುಂಡಿ ನಿವಾಸಿ ಲತೀಫ್ (65) ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಘಟನೆಯ ಸುದ್ದಿ ಹರಡುತ್ತಿದ್ದಂತೆ ಸ್ಥಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಸೇರಿದ್ದು, ನಿರಂತರ ಆನೆ ದಾಳಿಯಿಂದ ಜೀವ ಭಯದಲ್ಲಿ ಬದುಕುತ್ತಿರುವುದಾಗಿ ಆಕ್ರೋಶ ವ್ಯಕ್ತಪಡಿಸಿದರು. ಅರಣ್ಯ ಇಲಾಖೆಯ […]

ಶಾಲಾ ವಾಹನವನ್ನು ಅಟ್ಟಿಸಿ ಬಂದ ಒಂಟಿ ಸಲಗ: ಗಾಬರಿಗೊಂಡ ವಿದ್ಯಾರ್ಥಿಗಳು : ಅರಣ್ಯ ಇಲಾಖೆ ವಿರುದ್ಧ ಪೋಷಕರ ಆಕ್ರೋಶ

  ಜನವಾಹಿನಿ News ಮಡಿಕೇರಿ : ಸ್ಕೂಲ್ ಬಸ್ ಅನ್ನು ಒಂಟಿ ಸಲಗವೊಂದು ಅಟ್ಟಾಡಿಸಿಕೊಂಡು ಬಂದ ಘಟನೆ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ನಡೆದಿದ್ದು , ಬಸ್ಸಿನಲ್ಲಿದ್ದ ವಿದ್ಯಾರ್ಥಿಗಳು ಚಿರಾಡಿ ಭಯಭೀತರಾಗಿದ್ದಾರೆ. ಮಾಲ್ದಾರೆ ಗ್ರಾಮ ಪಂಚಾಯಿತಿಗೆ ಒಳಪಡುವ ಬಾಡಗ ಬಾಣಂಗಾಲ ಹಾಗೂ ಮಠ ಭಾಗದಲ್ಲಿನ ಬಿಜಿಎಸ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳನ್ನು ಶಾಲಾ ಬಸ್ಸಿನಲ್ಲಿ ಕರೆದುಕೊಂಡು ಬರುತ್ತಿದ್ದ ಸಂದರ್ಭ ಈ ಘಟನೆ ನಡೆದಿದ್ದು, ಒಂಟಿ ಸಲಗ ಶಾಲಾ ವಾಹನವನ್ನು ಹಿಂಬಾಲಿಸಿ ಅಟ್ಟಿಸಿಕೊಂಡು ಬಂದ ದೃಶ್ಯವನ್ನು ಶಾಲಾ […]

ಮರೂರು ತಿತಿಮತಿ ಆಶ್ರಮ ಶಾಲೆಯಲ್ಲಿ ಮಕ್ಕಳಿಗೆ ಆರೋಗ್ಯ ತಪಾಸಣೆ

  ಜನವಾಹಿನಿ News ಪೊನ್ನಪೇಟೆ : ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಮರೂರು ತಿತಿಮತಿ ಆಶ್ರಮ ಶಾಲೆಯಲ್ಲಿ 170 ವಿದ್ಯಾರ್ಥಿಗಳಿಗೆ ಕಣ್ಣಿನಪೊರೆ ಹಾಗೂ ಆರೋಗ್ಯ ತಪಾಸಣೆ ನಡೆಸಲಾಯಿತು. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಬೆಂಗಳೂರು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಮೈಸೂರು ಹಾಗೂ ಫಾರೂಕ್ ಅಕಾಡೆಮಿ ಆಫ್ ಮೆಡಿಕಲ್ ಎಜುಕೇಷನ್ ಆಸ್ಪತ್ರೆ ವತಿಯಿಂದ ಮಂಗಳವಾರ ನಡೆದ ಆರೋಗ್ಯ ತಪಾಸಣಾ ಶಿಬಿರವನ್ನು ಕೊಡಗು ಜಿಲ್ಲೆಯ ಪರಿಶಿಷ್ಟ ಪಂಗಡಗಳ ಜಿಲ್ಲಾ ಅಧಿಕಾರಿ ಎಸ್. ಹೊನ್ನೇಗೌಡ ಉದ್ಘಾಟಿಸಿ ಮಾತನಾಡಿದ ಅವರು […]

ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ ಕುರಿತು ಮಾಹಿತಿ ಕಾರ್ಯಗಾರ : ಅಂಕಿ ಅಂಶ ಸಹಿತ ನಿಖರ ಮಾಹಿತಿ ಒದಗಿಸಿ: ಆನಂದ್ ಪ್ರಕಾಶ್ ಮೀನಾ 

  ಜನವಾಹಿನಿ News ಮಡಿಕೇರಿ : ಜಿಲ್ಲಾ ಮಾನವ ಅಭಿವೃದ್ಧಿ ವರದಿ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ದೂರದೃಷ್ಟಿ ಯೋಜನೆ ತರಬೇತಿ ಕಾರ್ಯಾಗಾರವು ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು. ಕಾರ್ಯಾಗಾರವನ್ನು ಜಿಲ್ಲಾ ಪಂಚಾಯಿತಿ ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಉದ್ಘಾಟಿಸಿ ಮಾತನಾಡಿ ಜಿಲ್ಲಾ ಮಟ್ಟದ ಅಧಿಕಾರಿಗಳು ನೀಡುವ ಅಂಕಿ ಅಂಶ ವಿವರವನ್ನು ಮುಂದಿನ ಯೋಜನೆಗಳಿಗೆ, ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಲಿದ್ದು, ವರದಿಗೆ ಸಂಬಂಧಿಸಿದ ನಿಖರವಾದ ಮಾಹಿತಿಯನ್ನು ಫೆಬ್ರವರಿ-2026 ರೊಳಗೆ ಸಂಬಂಧಿಸಿದ ಇಲಾಖೆ ಮಾಹಿತಿ ನೀಡಬೇಕು […]

ನಾಳೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನಾಚರಣೆ

ಜನವಾಹಿನಿ News ಮಡಿಕೇರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನಾಚರಣೆ ಪ್ರಯುಕ್ತ ಜನವರಿ, 28 ರಂದು ಬೆಳಗ್ಗೆ 11 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಪ್ರತಿಮೆ ಬಳಿ ಗೌರವ ಸಮರ್ಪಣಾ ಕಾರ್ಯಕ್ರಮ ನಡೆಯಲಿದೆ. ಜನವರಿ 28 ರಂದು ಬೆಳಗ್ಗೆ 9.30 ಗಂಟೆಗೆ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಿಂದ ಶಾಲಾ-ಕಾಲೇಜು, ಸೈನಿಕ ಶಾಲೆ, ಎನ್‍ಸಿಸಿ ಹಾಗೂ ಸ್ಕೌಟ್ಸ್ […]

ಸಮಾಜದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ಪೊಲೀಸರಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಸರ್ಕಾರ ಬದ್ಧ : ಸಚಿವ ಭೋಸರಾಜು

  ಜನವಾಹಿನಿ News ಮಡಿಕೇರಿ : ಸಮಾಜದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಶ್ರಮಿಸುವ ಪೊಲೀಸರಿಗೆ ವಸತಿ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ತಿಳಿಸಿದ್ದಾರೆ. ನಗರದ ಪೊಲೀಸ್ ಮೈತ್ರಿ ಭವನದ ಬಳಿ ಸುಮಾರು 5.30 ಕೋಟಿ ರೂ ವೆಚ್ಚದಲ್ಲಿ ಪೊಲೀಸ್ ವಸತಿ ಗೃಹ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಸಚಿವರು ಮಾತನಾಡಿದರು. ಸಮಾಜದಲ್ಲಿ ಪ್ರತಿಯೊಬ್ಬರೂ ನೆಮ್ಮದಿಯಾಗಿ ಬದುಕುವಲ್ಲಿ ಪೊಲೀಸರ ಶ್ರಮ ಹೆಚ್ಚಿನದ್ದಾಗಿದೆ. ಆ ದಿಸೆಯಲ್ಲಿ ಪೊಲೀಸ್ […]

ಜಿಲ್ಲಾಡಳಿತದಿಂದ ಅರ್ಥಪೂರ್ಣವಾಗಿ  ಗಣರಾಜ್ಯೋತ್ಸವ  ಆಚರಣೆ 

  ಜನವಾಹಿನಿ News ಮಡಿಕೇರಿ : ಜಿಲ್ಲಾಡಳಿತ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 77 ನೇ ಗಣರಾಜ್ಯೋತ್ಸವ ದಿನಾಚರಣೆಯು ಅರ್ಥಪೂರ್ಣವಾಗಿ ಸೋಮವಾರ ಆಚರಿಸಲಾಯಿತು. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ […]

ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಶಾಸಕ ಡಾ.ಮಂತರ್ ಗೌಡರಿಂದ ಚಾಲನೆ

  ಜನವಾಹಿನಿ News ಮಡಿಕೇರಿ : ತೋಟಗಾರಿಕೆ ಇಲಾಖೆಯು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಇತರೆ ಅಭಿವೃದ್ದಿ ಇಲಾಖೆಗಳ ಸಹಯೋಗದೊಂದಿಗೆ ಭಾರತ ದೇಶದ ಗಣರಾಜ್ಯೋತ್ಸವದ ಪ್ರಯುಕ್ತ ನಗರದ ರಾಜಸೀಟು ಉದ್ಯಾನವನದಲ್ಲಿ ಮೂರು ದಿನಗಳ ಕಾಲ ಆಯೋಜಿಸಿರುವ ಫಲಪುಷ್ಪ ಪ್ರದರ್ಶನಕ್ಕೆ ಶಾಸಕರಾದ ಡಾ.ಮಂತರ್ ಗೌಡ ಅವರು ಶನಿವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಶಾಸಕರು ರಾಜಸೀಟು ಉದ್ಯಾನವನದ ಒಳಭಾಗದಲ್ಲಿ ಹೈಟೆಕ್ ಮಾದರಿಯ ಕ್ಯಾಂಟೀನ್ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು. ರಾಜಸೀಟು ಉದ್ಯಾನವನಲ್ಲಿ ಈ ಬಾರಿ ಪ್ರಸಿದ್ಧ ಶ್ರೀ ಭಗಂಡೇಶ್ವರ […]

18 ವರ್ಷ ಪೂರ್ಣಗೊಂಡ ಪ್ರತಿಯೊಬ್ಬರು ಗುರುತಿನ ಚೀಟಿ ಪಡೆದುಕೊಂಡು ಮತ ಚಲಹಿಸುವಂತಾಗಬೇಕು : ಜಿಲ್ಲಾಧಿಕಾರಿ ಎಸ್ ಜೆ ಸೋಮಶೇಖರ್

  ಜನವಾಹಿನಿ News ಮಡಿಕೇರಿ  :  18 ವರ್ಷ ಪೂರ್ಣಗೊಂಡ ಪ್ರತಿಯೊಬ್ಬ ಯುವ ಮತದಾರರು ಚುನಾವಣಾ ಗುರುತಿನ‌ ಚೀಟಿ ಪಡೆಯುವ ಮೂಲಕ‌ ಚುನಾವಣೆ ಸಂದರ್ಭದಲ್ಲಿ ತಪ್ಪದೆ ಮತ ಹಕ್ಕು ಚಲಾಯಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಕರೆ ನೀಡಿದ್ದಾರೆ‌. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ ವತಿಯಿಂದ ಭಾನುವಾರ ನಡೆದ ರಾಷ್ಟ್ರೀಯ ಮತದಾರರ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಜಾಪ್ರಭುತ್ವದಲ್ಲಿ ಚುನಾವಣೆಯನ್ನು ಹಬ್ಬ ಎಂದು ಕರೆಯುತ್ತೇವೆ. […]

ಸರ್ಕಾರದ ಸೌಲಭ್ಯ ಬಳಸಿಕೊಂಡು ಶೈಕ್ಷಣಿಕವಾಗಿ, ರಾಜಕೀಯವಾಗಿ ಮುಂದೆ ಬನ್ನಿ : ಸವಿತಾ ಸಮಾಜ ಬಾಂಧವರಿಗೆ ಟಿ.ಪಿ.ರಮೇಶ್ ಸಲಹೆ

  ಜನವಾಹಿನಿ News ಮಡಿಕೇರಿ :  ಸವಿತಾ ಸಮಾಜವು ಹಿಂದುಳಿದ ವರ್ಗಕ್ಕೆ ಸೇರಿದ್ದು, ಆರ್ಥಿಕ ಹಾಗೂ ಸಾಮಾಜಿಕವಾಗಿ ತುಂಬಾ ಹಿಂದೆ ಇದ್ದಾರೆ. ಆದ್ದರಿಂದ ಸರ್ಕಾರದ ಸೌಲಭ್ಯ ಬಳಸಿಕೊಂಡು ಶೈಕ್ಷಣಿಕ ಹಾಗೂ ರಾಜಕೀಯವಾಗಿ ಮುಂದೆ ಬರಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಸಲಹೆ . ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ಭಾನುವಾರ ನಡೆದ ಸವಿತ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. […]