Breaking News :

ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡೀಪಾರು ನೋಟೀಸ್..!

  ಜನವಾಹಿನಿ News ಬೆಳ್ತಂಗಡಿ : ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಮೂರನೇ ಬಾರಿಗೆ ಹೊರ ಜಿಲ್ಲೆ ಗೆ ಗಡಿಪಾರು ಮಾಡಲಾಗಿದೆ. ಅವರನ್ನು ಮಾ.16 ರಿಂದ ಸೆ.19ರ ತನಕ 6 ತಿಂಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿಗೆ ಗಡಿಪಾರು ಮಾಡಿ ನೋಟೀಸ್ ಜಾರಿಗೊಳಿಸಲಾಗಿದೆ. ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಗಡೀಪಾರು ಆದೇಶ ಜಾರಿಗೊಳಿಸಿದ್ದಾರೆ. ಕೆಲ ಸಮಯದ ಹಿಂದೆ ಎರಡನೇ ಬಾರಿ ದ.ಕ ಜಿಲ್ಲೆಯಿಂದ ತಿಮರೋಡಿ ಅವರನ್ಮು ಎಸಿ ಅವರು ಗಡೀಪಾರು ಮಾಡಿದ್ದರು. […]

ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

  ಜನವಾಹಿನಿ News ಮಡಿಕೇರಿ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರಿಗೆ 12 ದಿನಗಳ ಅವಧಿಯ ಉಚಿತ ಫಾಸ್ಟ್ ಫುಡ್ (ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿ ಶಿಬಿರವನ್ನು ಏಪ್ರಿಲ್ 4 ರಿಂದ ಪ್ರಾರಂಭಿಸಲಾಗುತ್ತಿದೆ. ಈ ಶಿಬಿರದಲ್ಲಿ ಪಾನಿ ಪೂರಿ, ಬೇಲ್ ಪೂರಿ, ದಹಿ ಪೂರಿ, ಸೇವ್ ಪೂರಿ, ಚಾಟ್ ಮಸಾಲ, ಕಚೋರಿ, ಗೋಬಿ ಮಂಚೂರಿ, ಪ್ರೈಡ್ ರೈಸ್, ಸಮೋಸ ಇನ್ನಿತರೆ […]

ಮಾ.23 ರಂದು ದೇವರ ದಾಸಿಮಯ್ಯ ಜಯಂತಿ

  ಜನವಾಹಿನಿ News ಮಡಿಕೇರಿ : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಮಾ.23 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ […]

SSLC ಪರೀಕ್ಷೆಗೆ ಜಿಲ್ಲಾಡಳಿತ ಹಾಗೂ ಶಾಲಾ ಶಿಕ್ಷಣ ಇಲಾಖೆಯಿಂದ ಅಗತ್ಯ ಸಿದ್ಧತೆ

      ಜನವಾಹಿನಿ News ಮಡಿಕೇರಿ :  ನಾಳೆಯಿಂದ ಏಪ್ರಿಲ್, 02 ರವರೆಗೆ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಜಿಲ್ಲಾಡಳಿತ ಹಾಗೂ ಶಾಲಾ ಶಿಕ್ಷಣ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1 ಸಂಬಂಧ ಕಳೆದ ಬಾರಿಯಂತೆ ಈ ಬಾರಿಯೂ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಅಚ್ಚುಕಟ್ಟಾಗಿ ನಡೆಸಲು ಅಗತ್ಯ ತಯಾರಿ ಮಾಡಿಕೊಳ್ಳಲಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಜಿಲ್ಲೆಯಲ್ಲಿ 6,183 ವಿದ್ಯಾರ್ಥಿಗಳು ನೋಂದಣಿ ಮಾಡಿದ್ದಾರೆ. ಇವರಲ್ಲಿ ಬಾಲಕರು 3,049, ಹಾಗೆಯೇ ಬಾಲಕಿಯರು 3,134 ಮಂದಿ ಪರೀಕ್ಷೆ ಬರೆಯಲಿದ್ದಾರೆ. ಹಾಗೆಯೇ 399 […]

ಸಿಡಿಲು ಬಡಿದು ವಿದ್ಯುತ್ ಟ್ರಾನ್ಸ್ಫರ್ ಬೆಂಕಿಗೆ ಆಹುತಿ

  ಜನವಾಹಿನಿ News ಗೋಣಿಕೊಪ್ಪ : ಪೊನ್ನಂಪೇಟೆ ತಾಲೂಕು ಮೂಗಟಿಗೇರಿ ಗ್ರಾಮದಲ್ಲಿರುವ ಅಂಬಲ ಬಳಿ ನಿನ್ನೆ ರಾತ್ರಿ ಈ ಭಾಗದಲ್ಲಿ ಹೆಚ್ಚಿನ ಮಳೆಯ ಆದ ಸಂದರ್ಭ ಬಾರಿ ಗುಡುಗು ಸಿಡಿಲು ಕಾಣಿಸಿಕೊಂಡು ಇಲ್ಲಿನ ವಿದ್ಯುತ್ ಟ್ರಾನ್ಸ್ಫಾರ್ಮರ್ ಗೆ ಸಿಡಿಲು ಅಪ್ಪಳಿಸಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣವಾಗಿ ಟ್ರಾನ್ಸ್ಫಾರ್ಮರ್ ಹೊತ್ತಿ ಉರಿದ ಘಟನೆ ನಡೆದಿದೆ. ಟ್ರಾನ್ಸ್ಫಾರ್ಮರ್ ಸಮೀಪ ಯಾವುದೇ ಮನೆಗಳು ಇಲ್ಲದ್ದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಸ್ಥಳಕ್ಕೆ ಚೆಸ್ಕಾಂ ಸಿಬ್ಬಂದಿಗಳು ತೆರಳಿ ಆಗಬಹುದಾಗಿದ್ದ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.

ಉಚಿತ ಸ್ವ-ಉದ್ಯೋಗ ತರಬೇತಿಗೆ ಮಹಿಳೆಯರಿಂದ ಅರ್ಜಿ ಆಹ್ವಾನ 

  ಜನವಾಹಿನಿ News ಮಡಿಕೇರಿ : ಕೊಡಗು ಜಿಲ್ಲೆಯ ಕೂಡಿಗೆಯಲ್ಲಿರುವ ಯೂನಿಯನ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಜಿಲ್ಲೆಯಲ್ಲಿರುವ ನಿರುದ್ಯೋಗಿ ಯುವತಿಯರಿಗೆ ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿ ನೀಡಲಾಗುವ ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 50 ವರ್ಷ ವಯೋಮಿತಿಯೊಳಗಿನ ಯುವತಿಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಆಸಕ್ತಿ ಉಳ್ಳವರು ಸಂಸ್ಥೆಯನ್ನು ನೇರವಾಗಿ ಅಥವಾ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಸಂಸ್ಥೆಯ ನಿರ್ದೇಶಕರಾದ ಪ್ರಕಾಶ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತರಬೇತಿ ವಿವರ […]

ಸಿದ್ದಾಪುರ ವ್ಯಾಪ್ತಿಯಲ್ಲಿ ಹಲವರನ್ನು ಬಲಿ ಪಡೆದು ಆತಂಕಕ್ಕೆ ಕಾರಣವಾಗಿದ್ದ ಕಾಡಾನೆ ಸೆರೆ : ಅರಣ್ಯ ಇಲಾಖೆಯಿಂದ ಯಶಸ್ವಿ ಕಾರ್ಯಾಚರಣೆ

  ಜನವಾಹಿನಿ News ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಸಿದ್ದಾಪುರ ವ್ಯಾಪ್ತಿಯಲ್ಲಿ ಕಾಫಿ ಬೆಳೆಗಾರ ಗಣಪತಿ ಎಂಬುವವರನ್ನು ಬಲಿಪಡೆದಿದ್ದ ಸುಮಾರು 35 ವರ್ಷದ ಕಾಡಾನೆಯನ್ನು ಅರಣ್ಯ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ ಚೆನ್ನೈಯನಕೋಟೆ ಬಾಡಗ ಬಾಣಂಗಾಲ ಸಮೀಪದ ಕಾಫಿ ತೋಟದಲ್ಲಿ ಯಶಸ್ವಿಯಾಗಿ ಸೆರೆ ಹಿಡಿಯಲಾಗಿದ್ದು, ಜಿಲ್ಲೆಯ ದುಬಾರೆ ಆನೆ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ. ಇತ್ತೀಚೆಗೆ ಸಿದ್ದಾಪುರ ಸಮೀಪದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿ ಬಲಿ ಪಡೆದ ನಂತರ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ […]

ಕಾಡಾನೆ ದಾಳಿಗೆ ಬೆಳೆಗಾರ ಬಲಿ : ಕೊಡಗಿನಲ್ಲಿ ಒಂದೇ ವಾರದಲ್ಲಿ ನಡೆದ ಎರಡನೇ ಘಟನೆ 

      ಜನವಾಹಿನಿ News ಸಿದ್ದಾಪುರ: ಕಾಡಾನೆ ದಾಳಿಗೆ ಬೆಳೆಗಾರ ಬಲಿಯಾಗಿರುವ ಘಟನೆ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಹೈ ಸ್ಕೂಲ್ ಪೈಸಾರಿ ವ್ಯಾಪ್ತಿಯಲ್ಲಿ ನಡೆದಿದೆ. ಚೌರಿರ ಕುಟುಂಬಕ್ಕೆ ಸೇರಿದ ಡಿ ಗಣಪತಿ (ಗಪ್ಪು)49, ಎಂಬುವವರೇ ಆನೆ ದಾಳಿಗೆ ಬಲಿಯಾದ ಬೆಳೆಗಾರ. ಕಾಫಿ ತೋಟ ನೋಡಲು ತೆರಳಿದ ಸಂದರ್ಭ ಕಾಡಾನೆ ದಾಳಿ ಮಾಡಿದ್ದು ಘಟನೆಯಲ್ಲಿ ಗಣಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಾಡಗಲೇ ಕಾಫಿ ತೋಟದಲ್ಲಿ ಕಾಡಾನೆಗಳು ಕಾಣಿಸಿಕೊಳ್ಳುತ್ತಿದ್ದರು, ಆನೆಗಳನ್ನು ನಿಯಂತ್ರಣಕ್ಕೆ ತರಲು ಅರಣ್ಯ ಇಲಾಖೆ ವಿಫಲಗೊಂಡಿದೆ ಎಂದು […]

ರೆಡ್‍ಕ್ರಾಸ್ ಸಂಸ್ಥೆಯಿಂದ ಕ್ಯಾನ್ಸರ್ ತಪಾಸಣಾ ಶಿಬಿರ ಹಾಗೂ ಅರಿವು ಕಾರ್ಯಕ್ರಮ ; ಮಹಿಳೆಯರು ಆರೋಗ್ಯ ಕಡೆ ಗಮನಹರಿಸಿ: ಆರ್.ಐಶ್ವರ್ಯ 

  ಜನವಾಹಿನಿ News ಮಡಿಕೇರಿ : ಸಮಾಜ ಸ್ವಸ್ಥವಾಗಿಡಲು ಮಹಿಳೆಯರ ಪಾತ್ರ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಮಹಿಳೆಯರು ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಸಲಹೆ ಮಾಡಿದ್ದಾರೆ. ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಕೊಡಗು ಘಟಕ ವತಿಯಿಂದ ನಗರದ ರೆಡ್‍ಬ್ರಿಕ್ಸ್ ಇನ್ ಸತ್ಕಾರ ಸಭಾಂಗಣದಲ್ಲಿ ಸೋಮವಾರ ನಡೆದ ಕ್ಯಾನ್ಸರ್ ತಪಾಸಣಾ ಶಿಬಿರ ಮತ್ತು ಅರಿವು ಕಾರ್ಯಕ್ರಮ ಮತ್ತು ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಹಿಳೆಯರು ಕುಟುಂಬ ನಿರ್ವಹಣೆಯಲ್ಲಿ ಹೆಚ್ಚಿನ ಪಾತ್ರ […]

ಸಾಧಿಸಲು ಹಳ್ಳಿ, ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯ : ಪೂಜಾ ಸಜೇಶ್

  ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು : ಗಣ್ಯರ ಅಭಿಮತ ಜನವಾಹಿನಿ News ವಿರಾಜಪೇಟೆ : ವಿದ್ಯಾರ್ಥಿ ಜೀವನವು ಹಲವು ಒತ್ತಡಗಳಿಂದ ನಿರ್ಮಾಣವಾಗುತ್ತಿದೆ ಎನ್ನುವುದು ಸುಳ್ಳು.ಕಲಿಕೆ ಮತ್ತು ಸಾಮಾಜಿಕ ಚಿಂತನೆಯನ್ನು ಸಮಾನವಾಗಿ ಕಾಣುವಂತಾಗಬೇಕು ಎಂದು ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥರಾದ ಪೂಜಾ ಸಜೇಶ್ ಅಭಿಮತ ವ್ಯಕ್ತಪಡಿಸಿದರು. ಕೊಡಗು ವಿಶ್ವವಿದ್ಯಾನಿಲಯ, ರಾಷ್ಟ್ರೀಯ ಸೇವಾ ಯೋಜನೆ ಘಟಕ ಸೈಂಟ್ ಆ್ಯನ್ಸ್ ಪದವಿ ಕಾಲೇಜು ವಿರಾಜಪೇಟೆ ಸಂಯುಕ್ತ ಆಶ್ರಯದಲ್ಲಿ ಕಲ್ತೋಡು […]