ತಮಿಳುನಾಡು ವಿಧಾನ ಸಭಾ ಚುನಾವಣೆ : ತೆನ್ನಿರ ಮೈನಾ ರವರಿಗೆ ಪ್ರಚಾರದ ಹೊಣೆಗಾರಿಕೆ

ಜನವಾಹಿನಿ News ಮಡಿಕೇರಿ : ಇದೇ ಏಪ್ರಿಲ್ 23 ರಂದು ನಡೆಯಲಿರುವ ತಮಿಳುನಾಡು ವಿಧಾನ ಸಭಾ ಚುನಾವಣೆಯಲ್ಲಿ ಶಿವಗಂಗಾ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕಾರೈಕುಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದ ಜವಾಬ್ದಾರಿಯನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ಹಾಗೂ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ ರವರಿಗೆ ಎ.ಐ.ಸಿ.ಸಿ ನೀಡಿ ಆದೇಶ ಹೊರಡಿಸಲಾಗಿದೆ. ಎ.ಐ.ಸಿ.ಸಿ ಯ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷರಾದ ಡಾ ಸುನೀಲ್ […]
ಶಿಕ್ಷಣ ಪಡೆದು ಮುಖ್ಯವಾಹಿನಿಗೆ ಬರಲು ಶ್ರಮಿಸಬೇಕು : ಡಾ. ಮಂತರ್ ಗೌಡ

ಜನವಾಹಿನಿ News ಮಡಿಕೇರಿ : ಸಮಾಜದಲ್ಲಿ ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ ಎಂಬುದನ್ನು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಾರಿದ್ದಾರೆ. ಆದ್ದರಿಂದ ಶಿಕ್ಷಣ ಪಡೆದು ಮುಖ್ಯವಾಹಿನಿಗೆ ಬರಲು ಶ್ರಮಿಸಬೇಕು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ. ನಗರದ ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ನಡೆದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. […]
ಏ.16 ರಿಂದ ನಿವೇಶನಕ್ಕೆ ಒತ್ತಾಯಿಸಿ ಸಿಐಟಿಯುನಿಂದ ಮಾಲ್ದಾರೆಯಲ್ಲಿ ಧರಣಿ ಸತ್ಯಾಗ್ರಹ

ಜನವಾಹಿನಿ News ಸಿದ್ದಾಪುರ : ನಿವೇಶನ ರಹಿತರಿಗೆ ಸೂರು ಕಲ್ಪಿಸಿಕೊಡುವಂತೆ ಒತ್ತಾಯಿಸಿ ಏ 16ರಂದು ಮಾಲ್ದಾರೆ ಗ್ರಾಮ ಪಂಚಾಯತ್ ಕಛೇರಿಯ ಮುಂಭಾಗದಲ್ಲಿ ಒಂದುದಿನದ ಪ್ರತಿಭಟನೆ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿರುವುದಾಗಿ ಕೊಡಗು ಜಿಲ್ಲಾ ಜನರಲ್ ವರ್ಕರ್ಸ್ ಯುನಿಯನ್(ಸಿಐಟಿಯು) ನ ಜಿಲ್ಲಾಕಾರ್ಯದರ್ಶಿ ಮಹೇದೇವ್ ತಿಳಿಸಿದ್ದಾರೆ. ನಗರದ ಕಛೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತಲೆ ತಲೆಮಾರುಗಳಿಂದ ತೋಟದ ಲೈನ್ ಮನೆಗಳಲ್ಲಿ, ಬಾಡಿಗೆ ಮನೆಗಳಲ್ಲಿ ವಾಸಿಸುವ ಬಡಕೂಲಿ ಕಾರ್ಮಿಕರಿಗೆ ಸ್ವಂತ ಸೂರು ಕಲ್ಪಸಿಕೊಡುವಲ್ಲಿ ಸರಕಾರ ವಿಫಲವಾಗಿದೆ ಎಂದು ಆರೋಪಿಸಿದ ಅವರು ಜನ ಪ್ರತಿನಿಧಿಗಳು […]
ಪ್ರೆಸ್‌ಕ್ಲಬ್ ನಾಮನಿರ್ದೇಶಕರಾಗಿ ಎಚ್.ಆರ್.ಸಿಂಗಿಸತೀಶ್ ಆಯ್ಕೆ

ಜನವಾಹಿನಿ News ಮಡಿಕೇರಿ: ಕೊಡಗು ಪ್ರೆಸ್ ಕ್ಲಬ್‌ನ ನಾಮನಿರ್ದೇಶಕರಾಗಿ ಎಚ್.ಆರ್.ಸಿಂಗಿಸತೀಶ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕೊಡಗು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಎಂ.ಕೆ.ಆದರ್ಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಗರದ ಪತ್ರಿಕಾಭವನದಲ್ಲಿ ಮಂಗಳವಾರ ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ತೆರವಾಗಿದ್ದ ನಾಮನಿರ್ದೇಶಕ ಸ್ಥಾನಕ್ಕೆ ಆಯ್ಕೆ ಮಾಡಲಾಯಿತು.
ಕೊಡಗಿನ ಕಾಫಿ ತೋಟವೊಂದರಲ್ಲಿ ಪತ್ತೆಯಾದ ನವಜಾತ ಶಿಶು : ಹೆಣ್ಣು ಶಿಶುವನ್ನು ತೋಟಕ್ಕೆ ಬಿಸಾಡಿರೋ ದುಷ್ಕರ್ಮಿಗಳು

ಜನವಾಹಿನಿ News ಮಡಿಕೇರಿ : ಜನಿಸಿದ ಕೆಲವೇ ಗಂಟೆಗಳಲ್ಲಿ ಹೆಣ್ಣು ಶಿಶುವನ್ನು ಕಾಫಿ ತೋಟಕ್ಕೆ ಬಿಸಾಡಿರೋ ಅಮಾನವೀಯ ಕೃತ್ಯ ಕೊಡಗಿನ ಮೂರ್ನಾಡು ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಸ್ಥಳೀಯರೊಬ್ಬರಿಂದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮಡಿಕೇರಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದು, ಬಟ್ಟೆಯಿಲ್ಲದೆ, ಶೀತದಿಂದ ನಡುಗುತ್ತಿರುವ ಸ್ಥಿತಿಯಲ್ಲಿ ಶಿಶು ಪತ್ತೆಯಾಗಿದೆ. ಮೂರ್ನಾಡು ಸಮೀಪದ ಬೇತ್ರಿ ವ್ಯಾಪ್ತಿಯ ಹೆಮ್ಮಾಡು ಗ್ರಾಮದ ತೋಟವೊಂದರಲ್ಲಿ ಈ ಅಮಾನವೀಯ ದೃಶ್ಯ ಕಂಡುಬಂದಿದೆ. ಮಕ್ಕಳ ವಿಶೇಷ ಪೊಲೀಸ್ ಘಟಕ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ […]
ಜಿಲ್ಲೆಯಲ್ಲಿ ಮುಂದುವರೆದ ಆನೆ ಮಾನವ ಸಂಘರ್ಷ ; ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿ : ಪೊನ್ನಂಪೇಟೆಯಲ್ಲಿ ಘಟನೆ

ಜನವಾಹಿನಿ News ಮಡಿಕೇರಿ : ಕಾಡಾನೆ ದಾಳಿಗೆ ಕಾಫಿ ಬೆಳೆಗಾರರೊಬ್ಬರು ಬಲಿಯಾದ ಘಟನೆ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ನಡೆದಿದೆ. ಆನೆ ದಾಳಿಯಲ್ಲಿ ಸಾವನ್ನಪ್ಪಿದವರನ್ನು ಕಾಯಿಮಾನಿ ನಿವಾಸಿ ರತ್ತು ಎಂದು ಗುರುತಿಸಲಾಗಿದೆ. ಇಂದು (ಏ.8) ಬೆಳ್ಳಂಬೆಳಗ್ಗೆ ರತ್ತು ಅವರು ಕುರ್ಚಿ-ಕಾಯಿಮಾನಿ ನಡುವೆ ಇರುವ ತಮ್ಮ ಕಾಫಿ ತೋಟಕ್ಕೆ ಎಂದಿನಂತೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಏಕಾಏಕಿ ಎದುರಾದ ಕಾಡಾನೆ ಅವರ ಮೇಲೆ ದಾಳಿ ನಡೆಸಿ, ತುಳಿದು ಸಾಯಿಸಿದೆ ಎನ್ನಲಾಗಿದೆ. ರತ್ತು ರವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕುಟ್ಟ ಸರ್ಕಾರಿ ಆಸ್ಪತ್ರೆಗೆ […]
ಮಡಿಕೇರಿಯಲ್ಲಿ ಇಂದು ಮಿನಿ ಉದ್ಯೋಗ ಮೇಳ

ಜನವಾಹಿನಿ News ಮಡಿಕೇರಿ : ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆ ವತಿಯಿಂದ (ಏ.8 ರಂದು) ಇಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ “ಉದ್ಯೋಗಮೇಳ” ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಜಾಯ್ ಆಲುಕಾಸ್ ಜ್ಯುವೆಲ್ಲರಿ, ಮೈಸೂರು, ಕಲ್ಯಾಣಿ ಮೋಟಾರ್ಸ್ ಕಾರ್ ಶೋ ರೂಂ, ಮಡಿಕೇರಿ, ಕೂರ್ಗ್ ಕ್ಲಿಪ್ಟ್ಸ್ ರೆಸಾರ್ಟ್, ಮಡಿಕೇರಿ, ಹ್ಯೂಂಡಾಯಿ ಕಾರ್ ಶೋ ರೂಮ್, ಮಡಿಕೇರಿ, ಇವೊಲೋಬ್ಯಾಕ್ ರೆಸಾರ್ಟ್, ಮಡಿಕೇರಿ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ […]
ಗಾಂಧಿ ಭವನದಲ್ಲಿ ಡಾ. ಬಾಬು ಜಗಜೀವನ್‍ರಾಂ ಜಯಂತಿ : ಮಡಿಕೇರಿಯಲ್ಲಿ ಬಾಬೂಜಿ ಹೆಸರಿನಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಕ್ರಮವಹಿಸಿ: ಡಾ.ಮಂತರ್ ಗೌಡ

ಜನವಾಹಿನಿ News ಮಡಿಕೇರಿ : ರಾಷ್ಟ್ರದ ಅಪರೂಪದ ರಾಜಕೀಯ ಮುತ್ಸದ್ಧಿ, ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಮ್ ಅವರ ಹೆಸರಿನಲ್ಲಿ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಸಮಾಜ ಕಲ್ಯಾಣ ಅಧಿಕಾರಿಗೆ ಶಾಸಕರಾದ ಡಾ.ಮಂತರ್ ಗೌಡ ಅವರು ಸಲಹೆ ಮಾಡಿದ್ದಾರೆ. ಈಗಾಗಲೇ ಕುಶಾಲನಗರದಲ್ಲಿ ಬಾಬೂಜಿ ಹೆಸರಿನಲ್ಲಿ ವೃತ್ತ ನಿರ್ಮಾಣಕ್ಕೆ ಮುಂದಾಗಲಾಗಿದೆ. ಹಾಗೆಯೇ ಬಾಬು ಜಗಜೀವನ್ ರಾಮ್ ಹೆಸರಿನಲ್ಲಿ ಹಲವು ಸ್ಮರಣೀಯ ಕಾರ್ಯಗಳು ಆಗಬೇಕು ಎಂದು ಶಾಸಕರು ತಿಳಿಸಿದರು. ಆಹಾರ […]
ಕೊಡಗು ಪತ್ರಿಕಾಭವನ ಟ್ರಸ್ಟ್ ನ ಆಹ್ವಾನಿತ ಟ್ರಸ್ಟಿಯಾಗಿ ಮುರಳೀಧರ್ ಆಯ್ಕೆ

ಜನವಾಹಿನಿ News ಮಡಿಕೇರಿ : ಕೊಡಗು ಪತ್ರಕತ೯ರ ಸಂಘದ ಸ್ಥಾಪಕಾಧ್ಯಕ್ಷರಾದ ಮುರಳೀಧರ್ ಅವರನ್ನು ಕೊಡಗು ಪತ್ರಿಕಾಭವನ ಟ್ರಸ್ಟ್ ನ ಆಹ್ವಾನಿತ ಟ್ರಸ್ಟಿಯನ್ನಾಗಿ ಆಯ್ಕೆ ಮಾಡಲಾಗಿದೆ. ಟ್ರಸ್ಟ್ ಗೆ ಕೊಡಗು ಪತ್ರಕತ೯ರ ಸಂಘದಿಂದ ಟ್ರಸ್ಟಿಯನ್ನಾಗಿ ನೇಮಕ ಮಾಡಬೇಕೆಂಬ ಸಂಘದ ಬೇಡಿಕೆಗೆ ಸ್ಪಂದಿಸಿದ ಟ್ರಸ್ಟ್ ಅಂತೆಯೇ ಮುರಳೀಧರ್ ಅವರನ್ನು ಆಹ್ವಾನಿತ ಟ್ರಸ್ಟಿಯನ್ನಾಗಿ ನೇಮಕ ಮಾಡಿದೆ.
ರಸ್ತೆ ಕಾಮಗಾರಿಗಳಿಗೆ ಶಾಸಕರಿಂದ ಚಾಲನೆ

ಜನವಾಹಿನಿ News ಸಿದ್ದಾಪುರ : ಸಿದ್ದಾಪುರ ವ್ಯಾಪ್ತಿಯ ಗುಹ್ಯ,ಕೂಡುಗದ್ದೆ, ಅವರೆಗುಂದ ,ಮಾಲ್ದಾರೆ ಸೇರಿದಂತೆ ವಿವಿಧ ಕಡೆಗಳಲ್ಲಿ ಒಟ್ಟು 1 ಕೋಟಿ ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎಎಸ್ ಪೊನ್ನಣ್ಣ ಚಾಲನೆ ನೀಡಿದರು. ಈ ಸಂಧರ್ಭದಲ್ಲಿ ಮಾತನಾಡಿದ ಅವರು ಕ್ಷೇತ್ರ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಸರಕಾರವು ವಿಶೇಷ ಅನುದಾನವನ್ನು ನೀಡುತ್ತಿರುವುದರಿಂದ ವಿರಾಜಪೇಟೆ ಕ್ಷೇತ್ರದ ಬಹುತೇಕ ಗ್ರಾಮೀಣ ರಸ್ತೆಗ ಳಕಾಮಗಾರಿಗಳು ಪೂರ್ಣಗೊಂಡಿದೆ. ರಾಜ್ಯ ಹೆದ್ದಾರಿಗಳ ಕಾಮಗಾರಿಯು ಡಾಂಬರುಗಳ ಕೊರತೆಯಿಂದ ವಿಳಂಬವಾಗಿದ್ದು ಆದಷ್ಟು ಬೇಗ ಕಾಮಗಾರಿಗಳು […]