ಮೂರ್ನಾಡುವಿನಲ್ಲಿ ಗಮನ ಸೆಳೆದ ಗೌರಿ ಗಣೇಶ ಮೂರ್ತಿಗಳ ಶೋಭಾಯಾತ್ರೆ

ಜನವಾಹಿನಿ NEWS ಮೂರ್ನಾಡು : ಗೌರಿ ಗಣೇಶ ಹಬ್ಬದ ಅಂಗವಾಗಿ ಮೂರ್ನಾಡು ಪಟ್ಟಣದಲ್ಲಿ ವಿವಿಧ ಸಂಘ ಸಂಸ್ಥೆಗಳಿಂದ ಪ್ರತಿಷ್ಠಾಪಿಸಲಾಗಿದ್ದ ಗೌರಿ-ಗಣೇಶ ಉತ್ಸವ ಮೂರ್ತಿಗಳಿಗೆ ಶ್ರದ್ಧಾಭಕ್ತಿಯಿಂದ ೭ ದಿನಗಳವರೆಗೆ ಪೂಜಾ ಕಾರ್ಯಗಳನ್ನು ನಡೆಸಿ ಬಲಮುರಿ ಕಾವೇರಿ ನದಿಯಲ್ಲಿ ವಿಸರ್ಜಿಸಲಾಯಿತು. ಮೂರ್ನಾಡಿನ ವೆಂಕಟೇಶ್ವರ ಕಾಲೋನಿಯ ವಿನಾಯಕ ಯುವಕ ಮಂಡಳಿಯ ವತಿಯಿಂದ ೩೪ನೇ ವರ್ಷದ ಗೌರಿ-ಗಣೇಶೋತ್ಸವದ ಗಣೇಶ ಉತ್ಸವ ಮೂರ್ತಿ, ಮೂರ್ನಾಡು ಗಾಂಧಿನಗರದ ಶ್ರೀರಾಮ ಮಂದಿರ ಸೇವಾ ಸಮಿತಿಯ ವತಿಯಿಂದ ೩೩ನೇ ವರ್ಷದ ಗೌರಿ-ಗಣೇಶೋತ್ಸವದ ಉತ್ಸವ ಗಣೇಶ ಮೂರ್ತಿ, […]
ರಣ ಭೀಕರ ಮಳೆಗೆ ಉತ್ತರ ಭಾರತ ತತ್ತರ : 30ಕ್ಕೂ ಅಧಿಕ ಮಂದಿ ಸಾವು

ಜನವಾಹಿನಿ NEWS ನವದೆಹಲಿ : ದೆಹಲಿಯಲ್ಲಿ ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ರಾಜಧಾನಿಯ ತಗ್ಗು ಪ್ರದೇಶಗಳಿಗೆ ಪ್ರವಾಹದ ನೀರು ನುಗ್ಗಿದೆ. ಯಮುನಾ ನದಿ ನೀರಿನ ಮಟ್ಟವು 206.83 ಮೀಟರ್ ದಾಖಲಾಗಿದೆ. ನಿವಾಸಿಗಳ ಪರದಾಟ ಬುಧವಾರವೂ ಮುಂದುವರಿದಿದೆ. ಬೀದಿಗಳು ಹೊಳೆಯಂತಾಗಿದ್ದು, ಮಾರುಕಟ್ಟೆ ಪ್ರದೇಶಗಳು ಜಲಾವೃತಗೊಂಡಿವೆ. ತಗ್ಗು ಪ್ರದೇಶದ ನಿವಾಸಿಗಳನ್ನು ರಕ್ಷಿಸಲಾಗಿದ್ದರೂ ಕೆಲವು ಕಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ವಜೀರಾಬಾದ್ ಮತ್ತು ಹತ್ನಿಕುಂಡ್ ಬ್ಯಾರೇಜ್‌ಗಳಿಂದ ಹೆಚ್ಚಿನ ಪ್ರಮಾಣದ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಹೀಗಾಗಿ ನದಿ ನೀರಿನ ಮಟ್ಟ […]
ತೋಟಂ ಕೊಚ್ಚಿ ಕಾಲೋನಿಯಲ್ಲಿ ಮನೆಗೋಡೆ ಕುಸಿದು ಹಾನಿ

ಜನವಾಹಿನಿ NEWS ಮಡಿಕೇರಿ : ಕಳೆದೆರಡು ದಿನಗಳಿಂದ ಸುರಿದ ಗಾಳಿ ಮಳೆಗೆ ಗಡಿ ಗ್ರಾಮ ಕರಿಕೆಯ ತೋಟಂ ಕೊಚ್ಚಿ ಕಾಲೋನಿ ನಿವಾಸಿ ಬೆಳ್ಳಚ್ಚಿ ಎಂಬುವವರ ಮನೆ ಮೇಲ್ಚಾವಣಿ ಬಿದ್ದು ಅಡಿಗೆ ಕೋಣೆ ಸಂಪೂರ್ಣ ಹಾನಿಯಾಗಿದೆ. ಮಕ್ಕಳು ಸೇರಿದಂತೆ ಏಳು ಮಂದಿ ವಾಸವಿದ್ದು , ಎಲ್ಲರೂ ಕೂಲಿ ಕಾರ್ಮಿಕರಾಗಿದ್ದಾರೆ. ಬಡತನದಲ್ಲಿರುವ ತಮ್ಮ ಮನೆ ದುರಸ್ತಿ ಪಡಿಸುವಂತೆ ಒತ್ತಾಯಿಸಿ ಪಂಚಾಯಿತಿಗೆ ಹಲವು ಬಾರಿ ಮನವಿ ಸಲ್ಲಿಸಿದರು ಮನೆ ಮಂಜೂರು ಮಾಡಲಿಲ್ಲ ಎಂದು ಕುಟುಂಬಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ. ಕರಿಕೆ ಹೆಲ್ಪ್ […]
ಕೂತಿ ಗ್ರಾಮದಲ್ಲಿ ಗೌರಿ–ಗಣೇಶ ಮೂರ್ತಿ ವಿಸರ್ಜನೆ

ಜನವಾಹಿನಿ NEWS ಸೋಮವಾರಪೇಟೆ : ಸಮೀಪದ ಕೂತಿ ಗ್ರಾಮದಲ್ಲಿ ಗ್ರಾಮ ಸಮಿತಿಯಿಂದ ಪ್ರತಿಷ್ಠಾಪಿಸಿದ್ದ ಗೌರಿ–ಗಣೇಶ ಮೂರ್ತಿಗಳನ್ನು ಇಂದು ಗ್ರಾಮದಲ್ಲಿ ಮೆರವಣಿಗೆ ನಡೆಸಿ ಗ್ರಾಮದ ದೇವರ ಕೆರೆಯಲ್ಲಿ ವಿಸರ್ಜನೆ ಮಾಡಲಾಯಿತು. ಈ ಸಂದರ್ಭ ಗ್ರಾಮಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಹೆಚ್.ಎಂ. ಜಯರಾಮ್, ಉಪಾಧ್ಯಕ್ಷ ಕೆ.ಡಿ. ಗಿರೀಶ್, ಕಾರ್ಯದರ್ಶಿ ಯಾದವ್ ಕುಮಾರ್,ಖಜಾಂಚಿ ಲಕ್ಷ್ಮಯ್ಯ, ಅರ್ಚಕ ಅನಂತ್ ರಾಮ್, ಕೆ.ಎಂ. ಅಶ್ವತ್, ಸಿ.ಯು. ಭರತ್, ರಾಜೇಶ್, ಬಾನುಪ್ರಸಾದ್ ಹಾಗೂ ಗ್ರಾಮಸ್ಥರು ಇದ್ದರು.
ಸಂಪಾಜೆಯಲ್ಲಿ ಭೀಕರ ರಸ್ತೆ ಅಪಘಾತ : ನೆಲ್ಯಹುದಿಕೇರಿ ಗ್ರಾಮದ ಯುವತಿ ( ಶೋಭಾ) ಸಾವು

ಜನವಾಹಿನಿ NEWS ಮಡಿಕೇರಿ : ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲುಗುಂಡಿ ಸಮೀಪ ಕಡೆಪಾಲ ಎಂಬಲ್ಲಿ ಕಾರು ಮತ್ತು ಟ್ಯಾಂಕರ್ ಮಧ್ಯೆ ಉಂಟಾದ ಭೀಕರ ಅಪಘಾತದಲ್ಲಿ ಮಹಿಳೆಯೋರ್ವರು ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಟ್ಯಾಂಕರ್ ಮತ್ತು ಸುಳ್ಯ ಭಾಗದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಮಧ್ಯೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ನೆಲ್ಯಹುದಿಕೇರಿ ಗ್ರಾಮದ ಶೋಭಾ ಮಹಿಳೆ ಸಾವನ್ನಪ್ಪಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತಕ್ಕೆ ತುತ್ತಾದ ಕಾರು ಗಾಯಾಳುಗಳಿಗೆ […]
ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ : ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಓದಿನ ಕಡೆಗೆ ಗಮನ ಹರಿಸಿ ಠಾಣಾಧಿಕಾರಿ ಮಂಜುನಾಥ್ ಕಿವಿ ಮಾತು

ಜನವಾಹಿನಿ NEWS ಸಿದ್ದಾಪುರ : ಜೀವನದಲ್ಲಿ ಸಾಧನೆ ಮಾಡಲು ಹೊರಟಿರುವ ನೀವು ದುಶ್ಚಟಕ್ಕೆ ಬಲಿಯಾಗದೆ ಓದಿನ ಕಡೆಗೆ ಗಮನ ಹರಿಸಿ ಎಂದು ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಜೀವಿನಿ ಒಕ್ಕೂಟದ ಆಶ್ರಯದಲ್ಲಿ ದೀನ್ ದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ & ಜೀವನೋಪಾಯ ಇಲಾಖೆ ಕೊಡಗು ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯತಿ ವಿರಾಜಪೇಟೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಸಿದ್ದಾಪುರ ಪಟ್ಟಣದಲ್ಲಿ […]
ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹ ಅಂಗವಾಗಿ ಗರ್ಭಿಣಿಯರಿಗೆ ಸೀಮಂತ : ಅರೋಗ್ಯವಂತ ಮಗು ದೇಶದ ಸಂಪತ್ತು – ತನ್ಮಯಿ ಪ್ರವೀಣ್

ಜನವಾಹಿನಿ NEWS ಸೋಮವಾರಪೇಟೆ : ಇನ್ನರ್‌ವೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ವತಿಯಿಂದ ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹದ ಅಂಗವಾಗಿ ಹಾನಗಲ್ಲು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಯರಿಗೆ ಸೀಮಂತ ಹಾಗು ಬಾಣಂತಿಯರಿಗೆ ಪೌಷ್ಠಿಕ ಆಹಾರದ ಮಹತ್ವದ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು. ಇನ್ನರ್‌ವೀಲ್ ಅಧ್ಯಕ್ಷೆ ತನ್ಮಯಿ ಪ್ರವೀಣ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಅರೋಗ್ಯವಂತ ಮಗು ದೇಶದ ಸಂಪತ್ತು. ಗರ್ಭಿಣಿಯರು ಪೌಷ್ಠಿಕಾಂಶಯುಕ್ತ ಆಹಾರ ಸೇವಿಸಬೇಕು. ಒತ್ತಡ ಮುಕ್ತವಾಗಿ ಜೀವನ ಶೈಲಿ ಬೆಳೆಸಿಕೊಳ್ಳುವ ಮೂಲಕ ಅರೋಗ್ಯವಂತ ಮಗು ಜನನಕ್ಕೆ ತಮ್ಮ […]
ಶನಿವಾರಸಂತೆ : ಮಾಧ್ಯಮ ಸಂವಾದದಲ್ಲಿ ಅನಾವರಣಗೊಂಡ ಸಮಸ್ಯೆಗಳ ಸರಮಾಲೆ

ಜನವಾಹಿನಿ NEWS ಶನಿವಾರಸಂತೆ : ಶನಿವಾರಸಂತೆ ಪ್ರೆಸ್ ಕ್ಲಬ್ ಭಾಗಿತ್ವದಲ್ಲಿ ಶನಿವಾರಸಂತೆ ಮತ್ತು ಕೊಡ್ಲಿಪೇಟೆ ಹೋಬಳಿಗೆ ಸೇರಿದ ವಿವಿಧ ಗ್ರಾ.ಪಂ.ಗಳಿಗೆ ಸಂಬಂದಿಸಿದ ಕುಂದು ಕೊರತೆ, ಜಟಿಲವಾದ ಸಮಸ್ಯೆಗಳ ಕುರಿತು ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರೊಂದಿಗೆ ಮಾಧ್ಯಮ ಸಂವಾದ ಕಾರ್ಯಕ್ರಮವನ್ನು ಸೋಮವಾರ ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಶನಿವಾರಸಂತೆ, ದುಂಡಳ್ಳಿ, ಹಂಡ್ಲಿ, ಕೊಡ್ಲಿಪೇಟೆ ಬೆಸೂರು ಮತ್ತು ಆಲೂರುಸಿದ್ದಾಪುರ ಗ್ರಾ.ಪಂ.ಗಳ ಅಧ್ಯಕ್ಷರು, ಉಪಾಧ್ಯಕ್ಷರು ಪಾಲ್ಗೊಂಡಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಗ್ರಾ.ಪಂ.ಅಧ್ಯಕ್ಷರು ತಮ್ಮ ಗ್ರಾ.ಪಂ.ಯ ಅಭಿವೃದ್ದಿಯ ಬಗ್ಗೆ ಮತ್ತು ಸಮಸ್ಯೆಗಳ ಬಗ್ಗೆಯೂ ಹೇಳಿಕೊಂಡರೆ ಪತ್ರಕರ್ತರು […]
ದೂರು ನೀಡಲು ಬಂದಿದ್ದ ಮಹಿಳೆಗೆ ಕಿರುಕುಳ ನೀಡುತ್ತಿದ್ದ ಪೊಲೀಸ್ ಸಿಬ್ಬಂದಿ ಅಮಾನತು

ಜನವಾಹಿನಿ NEWS ಮೂಡುಬಿದಿರೆ : ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಗೆ ಪೊಲೀಸ್ ಸಿಬ್ಬಂದಿಯೊಬ್ಬ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿ ಕಿರುಕುಳ ನೀಡಿರುವ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ತೋಡಾರು ಬಳಿಯ ವಿವಾಹಿತ ಮಹಿಳೆಯೊಬ್ಬರು ಕುಟುಂಬ ಸಮಸ್ಯೆಯ ಕುರಿತು ಆ.23ರಂದುಮೂಡುಬಿದಿರೆ ಪೊಲೀಸ್ ಠಾಣೆಗೆ ತೆರಳಿ ಲಿಖಿತ ದೂರು ನೀಡಿದ್ದರು. ಈ ಬಗ್ಗೆ ಪೊಲೀಸ್ ನಿರೀಕ್ಷಕ ಸಂದೇಶ್ ಅವರು ಪತಿ ಮತ್ತು ಪತ್ನಿಯನ್ನು […]
ಬೇಟೋಳಿ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವ – ಶೋಭಾಯಾತ್ರೆಗೆ ಮೆರುಗು ನೀಡಿದ ಗೊಂಬೆ ಕುಣಿತ ಭಜನೆ

ಜನವಾಹಿನಿ NEWS ವಿರಾಜಪೇಟೆ : ಸಮೀಪದ ಬೇಟೋಳಿ ಗ್ರಾಮದ ರಾಮನಗರದಲ್ಲಿರುವ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಒಳ ಆವರಣದಲ್ಲಿರುವ ಶ್ರೀ ಗಣಪತಿ ಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಶ್ರೀ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವ ಶ್ರದ್ದಾ ಭಕ್ತಿಯಿಂದ ನೆರವೇರಿತು. ದೇವಸ್ಥಾನವು 43 ನೇ ವರ್ಷದ ಗಣೇಶೋತ್ಸವವನ್ನು ಆಚರಿಸುತ್ತಿದ್ದು ಧಾರ್ಮಿಕ ಕಾರ್ಯಕ್ರಮಗಳು ಶಾಸ್ತ್ರೋಕ್ತವಾಗಿ ನಡೆಯಿತು. ಶ್ರೀ ಗಣೇಶ ಚತುರ್ಥಿ ಯಂದು ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯನ್ನು ಒಟ್ಟು ಏಳು ದಿವಸಗಳ ಕಾಲ ದೇವಸ್ಥಾನದಲ್ಲಿ ವಿಶೇಷ ಪೂಜೆಗಳೊಂದಿಗೆ ಆರಾಧಿಸಲಾಯಿತು. ವಿಸರ್ಜನೋತ್ಸವದಂದು ಮದ್ಯಾಹ್ನ […]