Breaking News :

ವಿದ್ಯಾರ್ಥಿಗಳಲ್ಲಿ ಶಿಸ್ತೂ ಸಂಸ್ಕಾರವನ್ನು ಬೆಳೆಸುವಲ್ಲಿ ಸ್ಕೌಟ್-ಗೈಡ್ಸ್ ನ ಪಾತ್ರ ಮಹತ್ತರವಾದದ್ದು : ರೆ.ಫಾ.ಅವಿನಾಶ್

  ಜನವಾಹಿನಿ NEWS ಸೋಮವಾರಪೇಟೆ : ವಿದ್ಯಾರ್ಥಿಗಳಲ್ಲಿ ಶಿಸ್ತೂ ಸಂಸ್ಕಾರವನ್ನು ಬೆಳೆಸುವಲ್ಲಿ ಸ್ಕೌಟ್-ಗೈಡ್ಸ್ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಸಂತ ಜೋಸೆಫರ ವಿದ್ಯಾ ಸಂಸ್ಥೆಯ ವ್ಯವಸ್ಥಾಪಕ ರೆ.ಫಾ.ಅವಿನಾಶ್ ಅಭಿಪ್ರಾಯಪಟ್ಟಿದ್ದಾರೆ ಪಟ್ಟಣದ ಚನ್ನಬಸಪ್ಪ ಸಭಾಂಗಣದಲ್ಲಿ ನಡೆದ ಸ್ಕೌಟ್ ಮತ್ತು ಗೈಡ್ಸ್ ವಾರ್ಷಿಕ ಮಹಾಸಭೆ ಹಾಗೂ ದೇಶಭಕ್ತಿ ಗೀತಾ ಗಾಯನ ಸ್ಪರ್ಧೆಯ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಅಧ್ಯಕ್ಷ ಎಸ್.ಡಿ. ವಿಜೇತ್ ವಹಿಸಿದ್ದರು, ಜಿಲ್ಲಾ ಗೈಡ್ ಆಯುಕ್ತರಾದ ಪದ್ಮಶ್ರೀ ಪ್ರಶಸ್ತಿ ವಿಜೇತೆ ರಾಣಿ ಮಾಚಯ್ಯ, ಜಿಲ್ಲಾ […]

ಪತ್ನಿ ಜತೆ ಅಕ್ರಮ ಸಂಬಂಧ ಶಂಕೆ : ಕುಶಾಲನಗರದಲ್ಲಿ ಶುಂಠಿ ಕಾವಲುಗಾರನ ಹತ್ಯೆ 

  ಜನವಾಹಿನಿ NEWS ಕುಶಾಲನಗರ : ಪತ್ನಿ ಜತೆ ಅಕ್ರಮ ಸಂಬಂಧ ಹೊಂದಿರುವ ಅನುಮಾನದಲ್ಲಿ ಹೊಲದಲ್ಲಿ ಕಾವಲಿಗಿದ್ದ ಕೇರಳ ಮೂಲದ ವ್ಯಕ್ತಿಯನ್ನು ಹತ್ಯೆಮಾಡಿರುವ ಘಟನೆ ಕುಶಾಲನಗರದ ಗುಡ್ಡೆಹೊಸೂರು ಬಳಿಯ ಬಸವನಹಳ್ಳಿಯಲ್ಲಿ ನಡೆದಿದೆ. ಶುಂಠಿ ಹೊಲದಲ್ಲಿ ಕಾವಲುಗಾರ ಕೆಲಸ ಮಾಡುತ್ತಿದ್ದ ಕೇರಳ ಮೂಲದ ಮುರಳಿ (45) ಎಂಬಾತನೇ ಕೊಲೆಯಾದ ವ್ಯಕ್ತಿ. ಬಸವನಹಳ್ಳಿ ಗ್ರಾಮದ ತೀರ್ಥ ಎಂಬಾತನಿಂದ ಕೃತ್ಯ ನಡೆದಿದೆ. ತೀರ್ಥನ ಮನೆಯ ಹಿಂದೆ ಕಳೆದ ಒಂದು ವರ್ಷದ ಹಿಂದೆ ಮಣಿಕಂಠ ಎಂಬುವರು ಬೆಳೆದಿದ್ದ ಶುಂಠಿ ಬೆಳೆ ನೋಡಿಕೊಳ್ಳಲು ಕೇರಳ ಮೂಲದ […]

ಧರ್ಮಸ್ಥಳ ವಿರುದ್ಧ  ನಡೆಯುತ್ತಿರೋ ಷಡ್ಯಂತ್ರ ಖಂಡಿಸಿ ಬೃಹತ್ ವಾಹನ ಜಾಥಾ : ಸೋಮವಾರಪೇಟೆಯಿಂದ ನೂರಾರು ವಾಹನಗಳಲ್ಲಿ ಧರ್ಮಸ್ಥಳಕ್ಕೆ ತೆರಳಿದ ಭಕ್ತರು

ಜನವಾಹಿನಿ NEWS ಸೋಮವಾರಪೇಟೆ : ತಾಲೂಕಿನ ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ವತಿಯಿಂದ ಶುಕ್ರವಾರ ಸೋಮವಾರಪೇಟೆ ಯಿಂದ ಶ್ರೀಕ್ಷೇತ್ರ ಧರ್ಮಸ್ಥಳದವರೆಗೆ ಬೃಹತ್ ವಾಹನ ಜಾಥಾ ನಡೆಸಲಾಯಿತು. ಪಟ್ಟಣದ ಶ್ರೀ ಮುತ್ತಪ್ಪಸ್ವಾಮಿ ದೇವಾಲಯದಲ್ಲಿ ಜಾಥಗೆ ಚಾಲನೆ ದೊರೆತು, ಶನಿವಾರಸಂತೆ, ಕೊಡ್ಲಿಪೇಟೆ, ಶುಕ್ರವಾರಸಂತೆ, ದೋಣಿಗಲ್ಲು, ಗುಂಡ್ಯ ರಾಷ್ಟ್ರಿಯ ಹೆದ್ದಾರಿ ಮಾರ್ಗವಾಗಿ ಧರ್ಮಸ್ಥಳ ತಲುಪಿತು. ಸುಮಾರು150 ವಾಹನಗಳಲ್ಲಿ 500ಕ್ಕೂ ಹೆಚ್ಚು ಭಕ್ತರು ವಾಹನ ಜಾಥದಲ್ಲಿ ಪಾಲ್ಗೊಂಡು, ಬಳಿಕ ಧರ್ಮಸ್ಥಳದ ದೇವಾಲಯ ಆವರಣಕ್ಕೆ ಮೆರವಣಿಗೆ ಮೂಲಕ ಪ್ರವೇಶಿಸಿ ದೇವರ ದರ್ಶನ ಪಡೆದರು.ನಂತರ ಧರ್ಮಸ್ಥಳದ ಧರ್ಮಾಧಿಕಾರಿ […]

ಪ್ರತಿಯೊಬ್ಬ ಅರ್ಹ ವ್ಯಕ್ತಿಗೂ ಸರ್ಕಾರದ 5 ಗ್ಯಾರಂಟಿಗಳನ್ನು ತಲುಪಿಸಿ : ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ ಸೂಚನೆ 

  ಜನವಾಹಿನಿ NEWS ಮಡಿಕೇರಿ : ಸಮಾಜದ ಪ್ರತಿಯೊಬ್ಬ ಅರ್ಹ ವ್ಯಕ್ತಿಗೂ ಸರ್ಕಾರದ 5 ಗ್ಯಾರಂಟಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸುವಂತೆ ಜಿಲ್ಲಾ ಮಟ್ಟದ ಗ್ಯಾರಂಟಿ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿ.ಪಂ.ಕಚೇರಿಯಲ್ಲಿ ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ಯಾರೆಂಟಿ ಯೋಜನೆಗಳು ಜನರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಹೆಚ್ಚಿನ ಶಕ್ತಿ ತುಂಬಿದೆ ಎಂದರು. ಗ್ಯಾರೆಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಧಿಕಾರಿಗಳೂ […]

ಮಡಿಕೇರಿಯಲ್ಲಿ ಹುಡುಗಿಯರ ಡೇಟಿಂಗ್ ಮಾಡಲು ಕಾಲ್ ಮಾಡಿ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಆರೋಪಿ ಅರೆಸ್ಟ್

  ಜನವಾಹಿನಿ NEWS ಮಡಿಕೇರಿ : ಕೊಡಗು ಜಿಲ್ಲೆಯ ಮಡಿಕೇರಿ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ವಿಡಿಯೋ ಬಳಸಿಕೊಂಡು ಡೇಟಿಂಗ್ ಮಾಡಲು ಯುವತಿಯರು ಹಾಗೂ ಆಂಟಿಯರು ಸಿಗುತ್ತಾರೆ, ಸರ್ವಿಸ್ ಬೇಕಾದರೆ ಕರೆ ಮಾಡಿ ಎಂದು ಮೊಬೈಲ್ ಸಂಖ್ಯೆಯೊಂದನ್ನು ನೀಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ರಚಾರ ಮಾಡಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಬೆಳಗಲಿ ಗ್ರಾಮದ ನಿವಾಸಿ ನಾಗಪ್ಪ ಹನುಮಂತ ಲಮಾಣಿ (26) ಬಂಧಿತ ಆರೋಪಿಯಾಗಿದ್ದಾನೆ. ಸಮಾಜಿಕ ಜಾಲತಾಣದಲ್ಲಿ ಕೊಡಗು ಜಿಲ್ಲೆಯ ಗೌರವಕ್ಕೆ […]

ಸೆ.04 ರಂದು ನೇರ ಸಂದರ್ಶನ 

  ಜನವಾಹಿನಿ NEWS ಮಡಿಕೇರಿ : ಕೊಡಗು ಜಿಲ್ಲಾ ಆಯುಷ್ ಇಲಾಖೆಯ ಅಧೀನದಲ್ಲಿರುವ ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಖಾಲಿ ಇರುವ ಸ್ತ್ರೀರೋಗ ಅಟೆಂಡರ್-01 ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸೆಪ್ಟೆಂಬರ್, 04 ರಂದು ಬೆಳಗ್ಗೆ 11.30 ಗಂಟೆಗೆ ನೇರ ಸಂದರ್ಶನವು ಜಿಲ್ಲಾ ಆಯುಷ್ ಸಮಿತಿಯ ಅಧ್ಯಕ್ಷರಾದ ಜಿಲ್ಲಾಧಿಕಾರಿಗಳು ಹಾಗೂ ಸಮಿತಿ ಸದಸ್ಯರ ಸಮ್ಮುಖದಲ್ಲಿ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ಮೂಲ ದಾಖಲಾತಿಗಳೊಂದಿಗೆ ನಿಗದಿತ ಸಮಯಕ್ಕೆ ಜಿಲ್ಲಾಧಿಕಾರಿಗಳ ಸಭಾಂಗಣ, ಜಿಲ್ಲಾಧಿಕಾರಿಗಳ ಕಚೇರಿ, ಮಡಿಕೇರಿ ಇಲ್ಲಿ ಹಾಜರಾಗುವಂತೆ ಸದಸ್ಯ ಕಾರ್ಯದರ್ಶಿ […]

ಕೂಡುಗದ್ದೆಯಲ್ಲಿ ಗಣಪನಿಗೆ ಅದ್ಧೂರಿ ಬೀಳ್ಕೊಡುಗೆ 

  ಜನವಾಹಿನಿ NEWS ಸಿದ್ದಾಪುರ : ಗುಹ್ಯ ಗ್ರಾಮದ ಕೂಡುಗದ್ದೆ ಕಾರ್ಗಿಲ್ ಬಾಯ್ಸ್ ವತಿಯಿಂದ 2ನೇ ವರ್ಷದ ಗೌರಿ ಗಣೇಶೋತ್ಸವ ಅಂಗವಾಗಿ ಇಲ್ಲಿನ ಹೊಳೆಕೆರೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ನೆಲ್ಯಹುದಿಕೇರಿ ಸತ್ಯನಾರಾಯಣ ದೇವಾಲಯದ ಅರ್ಚಕರಾದ ರಾಘವೇಂದ್ರ ರವರ ನೇತೃತ್ವದಲ್ಲಿ ಬೆಳಗ್ಗೆಯಿಂದ ಗಣಪನಿಗೆ ಹೋಮ, ಮಂಗಳಾರತಿ, ವಿಶೇಷ ಪೂಜಾ ಕೈಂಕರ್ಯ ನಡೆಯಿತು. ಗುಹ್ಯ ಸಿದ್ದಾಪುರ ನೆಲ್ಯಹುದಿಕೇರಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳ ಜನ ಭಾಗಿಯಾಗಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಮಧ್ಯಾಹ್ನ ನೆರೆದಿದ್ದ ಭಕ್ತರಿಗೆ […]

ಗಾಂಜಾ ಮಾರಾಟ : ಮಾಲು ಸಮೇತ ಆರೋಪಿ ಬಂಧನ

  ಜನವಾಹಿನಿ NEWS  ಸೋಮವಾರಪೇಟೆ : ಗೂಡ್ಸ್ ವಾಹನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಾಲು ಸಮೇತ ಸೋಮವಾರ ಪೇಟೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಅಲೆಕಟ್ಟೆ ಚೌಡ್ಲು ಗ್ರಾಮದ ನಿವಾಸಿ ರಮೀಜ್ ಬಂಧಿತ ಆರೋಪಿ. ಹಾನಗಲ್ಲು ರಸ್ತೆಯಲ್ಲಿ ಟಾಟಾ ಏಸ್ ವಾಹನದಲ್ಲಿ ಗಾಂಜಾ ಇಟ್ಟುಕೊಂಡು ಮಾರಟಕ್ಕೆ ತಯಾರಿ ನಡೆಸಿದ್ದ ಸಂದರ್ಭ ಇನ್ಸಪೆಕ್ಟರ್ ಮುದ್ದು ಮಹಾದೇವ ನೇತೃತ್ವ ದಲ್ಲಿ ಸಿಬ್ಬಂದಿಗಳು ದಾಳಿ ನಡೆಸಿ 600 ಗ್ರಾಂ ಗಾಂಜಾ ಹಾಗೂ ವಾಹನವನ್ನು ವಶಪಡಿಸಿಕೊಂಡಿದ್ದು , ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. […]

ಮಡಿಕೇರಿ ದಸರಾ ಸಮಿತಿ ನಿಯೋಗ ಸೆಪ್ಟೆಂಬರ್ ಮೊದಲ ವಾರದಲ್ಲಿ ಮುಖ್ಯಮಂತ್ರಿ ಭೇಟಿ : ಡಾ.ಮಂತರ್ ಗೌಡ

  ಜನವಾಹಿನಿ NEWS ಮಡಿಕೇರಿ : ಮಡಿಕೇರಿ ಜನೋತ್ಸವ ದಸರಾವನ್ನು ಸಂಭ್ರಮ, ಸಡಗರ, ಸುರಕ್ಷತೆ ಹಾಗೂ ಸ್ವಚ್ಛತೆಯಿಂದ ಆಚರಿಸಲು ಶುಕ್ರವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶಾಸಕರಾದ ಡಾ.ಮಂತರ್ ಗೌಡ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಉಪ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್, ದಸರಾ ಸಮಿತಿ ಕಾರ್ಯಾಧ್ಯಕ್ಷರಾದ ಅರುಣ್ ಕುಮಾರ್ ಇತರರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು. ಸಭೆಯಲ್ಲಿ ಮಾತನಾಡಿದ ಶಾಸಕರಾದ ಡಾ.ಮಂತರ್ […]

ರೈತರ ಸರ್ವತೋಮುಖ ಅಭಿವೃದ್ಧಿಗೆ ಜಿಲ್ಲಾ ಸಹಕಾರ ಯುನಿಯನ್ ಪ್ರಾಧಾನ್ಯತೆ ನೀಡಿದೆ : ಮನು ಮುತ್ತಪ್ಪ

ಜನವಾಹಿನಿ NEWS ಮಡಿಕೇರಿ : ರೈತರ ಸರ್ವತೋಮುಖ ಅಭಿವೃದ್ಧಿಗಾಗಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಒತ್ತು ನೀಡಿದೆ ಎಂದು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎ.ಕೆ.ಮನು ಮುತ್ತಪ್ಪ ತಿಳಿಸಿದರು. ನಗರದ ಯೂನಿಯನ್ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಕೊಡಗು ಜಿಲ್ಲಾ ಸಹಕಾರ ಯೂನಿಯನ್‌ನ ೨೦೨೪-೨೫ನೇ ಸಾಲಿನ ಹಾಗೂ ೫೮ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯೂನಿಯನ್‌ನ ಮುಖ್ಯ ಉದ್ದೇಶ, ಸಹಕಾರ ಶಿಕ್ಷಣ, ತರಬೇತಿ, ಪ್ರಚಾರವಾಗಿದೆ. ಈ ಕಾರ್ಯಕ್ರಮಗಳನ್ನು ಮಹಾಮಂಡಳದ ಮಾರ್ಗದರ್ಶನದ ಮೂಲಕ ಜಿಲ್ಲೆಯ ವಿವಿಧ ವಲಯಗಳಿಗೆ […]