Breaking News :

ಗಡಿಗ್ರಾಮ ಕರಿಕೆಯಲ್ಲಿ ಅದ್ದೂರಿ ಗೌರಿ ಗಣೇಶೋತ್ಸವ ಆಚರಣೆ

ಜನವಾಹಿನಿ NEWS ಮಡಿಕೇರಿ ಗಡಿ ಗ್ರಾಮ ಕರಿಕೆಯ ಎಳ್ಳುಕೊಚ್ಚಿ ಹಾಗೂ ಚೆತ್ತುಕಾಯದಲ್ಲಿ ಗೌರಿ ಗಣೇಶೋತ್ಸವ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ  ವಿಸರ್ಜನೆ ಕಾರ್ಯ ವಿಜೃಂಭಣೆಯಿಂದ ನಡೆಯಿತು. ಎಳ್ಳುಕೊಚ್ಚಿ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣ ಹಾಗೂ ಚೆತ್ತುಕಾಯದ ನ್ಯೂಪ್ರೆಂಡ್ಸ್ ಕ್ಲಬ್ ವತಿಯಿಂದ ಇಲ್ಲಿನ ಶಾಲಾ ಮೈದಾನದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೂಡ ಆಯೋಜನೆ ಮಾಡಲಾಗಿತು. ಗಣೇಶೋತ್ಸವ ಸಂಭ್ರಮದಲ್ಲಿ ಸ್ಥಳೀಯರು ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಘ್ನ ನಿವಾರಕನಿಗೆ ವಿಶೇಷ ಪೂಜೆ ಸಲ್ಲಿಸಿದರು. ಬೆಳಗ್ಗೆ ಗಣಪತಿ, ಮಂಗಳಾರತಿ, […]

ರಾಯಲ್ ಯುವಕ ಸಂಘದಿಂದ 17ನೇ ವರ್ಷದ ಗೌರಿ ಗಣೇಶೋತ್ಸವ ಮೂರ್ತಿಗಳ ಪ್ರತಿಷ್ಠಾಪನೆ

  ಜನವಾಹಿನಿ NEWS ಸಿದ್ದಾಪುರ : ರಾಯಲ್ ಯುವಕ ಸಂಘದ ವತಿಯಿಂದ 17ನೇ ವರ್ಷದ ಗೌರಿ ಗಣೇಶೋತ್ಸವ ಮೂರ್ತಿಗಳನ್ನು ಇಲ್ಲಿನ ಪಾಲಿಬೆಟ್ಟ ರಸ್ತೆಯಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಬೆಳಗ್ಗೆ ಮಹಾಗಣಪತಿ ಹೋಮ, ಮಂಗಳಾರತಿ, ನೈವೇದ್ಯ ನೆರವೇರಿಸಿದ ಬಳಿಕ ಆಗಮಿಸಿದ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ಮಹಿಳೆಯರು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭ ಸಮಿತಿ ಪದಾಧಿಕಾರಿಗಳು ಸುತ್ತಮುತ್ತಲ ಪ್ರದೇಶಗಳ ಜನ ಭಾಗಿಯಾಗಿದ್ದೆ      

ಭಗವತಿ ಯುವಕ ಸಂಘದಿಂದ 10ನೇ ವರ್ಷದ ಗೌರಿ ಗಣೇಶೋತ್ಸವ ಮೂರ್ತಿಗಳ ಪ್ರತಿಷ್ಠಾಪನೆ 

  ಜನವಾಹಿನಿ NEWS ಸಿದ್ದಾಪುರ : ಗೌರಿ ಗಣೇಶ ಹಬ್ಬದ ಅಂಗವಾಗಿ ಇಲ್ಲಿಗೆ ಸಮೀಪದ ಇಂಜಿಲಗೆರೆಯಲ್ಲಿ ಭಗವತಿ ಯುವಕ ಸಂಘದ ವತಿಯಿಂದ 10ನೇ ವರ್ಷದ ಗೌರಿ ಗಣೇಶೋತ್ಸವ ಮೂರ್ತಿಗಳ ಪ್ರತಿಷ್ಠಾಪನೆ ಮಾಡಲಾಯಿತು. ಇಂಜಿಲಗೆರೆ ಪೂಮಾಡಪುರ ಮುತ್ತಪ್ಪ ದೇವಾಲಯ ಆವರಣದಲ್ಲಿ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗಿದ್ದು, ರಾಮ ಮಂದಿರದ ರವಿ ಭಟ್ಟರ ನೇತೃತ್ವದಲ್ಲಿ ವಿಶೇಷ ಪೂಜೆ ಕೈಂಕರ್ಯ ಜರುಗಿತು. ದೇವರಿಗೆ ಹೋಮ ವಿಶೇಷ ಪೂಜೆ, ಮಂಗಳಾರತಿ, ನೈವೇದ್ಯ ನೆರವೇರಿಸಿದ ಬಳಿಕ ಆಗಮಿಸಿದ ಭಕ್ತರಿಗೆ ಅನ್ನಸಂತರ್ಪಣೆ ಮಾಡಲಾಯಿತು. ಸುತ್ತಮುತ್ತಲ ಪ್ರದೇಶದ […]

ಪುಲಿಯೇರಿ ಇಂಜಿಲಗೆರೆ ವಿನಾಯಕ ಮಿತ್ರ ಮಂಡಳಿಯಿಂದ ಗೌರಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ

  ಸಿದ್ದಾಪುರ : ಗೌರಿ ಗಣೇಶ ಹಬ್ಬದ ಅಂಗವಾಗಿ ಸಿದ್ದಾಪುರ ಸಮೀಪದ ಪುಲಿಯೇರಿ ಇಂಜಲಗೆರೆ ಶ್ರೀ ವಿನಾಯಕ ಮಿತ್ರ ಮಂಡಳಿ ವತಿಯಿಂದ 3ನೇ ವರ್ಷದ ಗೌರಿ ಗಣೇಶ ಉತ್ಸವ ಮೂರ್ತಿಗಳ ಪ್ರತಿಷ್ಠಾಪನೆ ಬುಧವಾರ ನಡೆಯಿತು. ಬೆಳಗ್ಗೆಯಿಂದಲೇ ದೇವರಿಗೆ ವಿಶೇಷ ಪೂಜೆ, ಮಹಾಗಣಪತಿ ಹೋಮ, ಮಂಗಳಾರತಿ, ನೆರವೇರಿಸಿ ಪ್ರತಿಷ್ಠಾಪನೆ ಮಾಡಲಾಯಿತು. ಪೂಜಾ ಕೈಂಕರ್ಯಗಳನ್ನು ಹೊಳೆನರಸಿಪುರದ ಸಂಜಯ್ ಭಟ್ಟರು ನೆರವೇರಿಸಿದರು. ಗಣಪನಿಗೆ ಹಣ್ಣುಹಂಪಲು ಲಾಡು ಇನ್ನಿತರ ಸಿಹಿ ತಿನಿಸುಗಳನ್ನು ಅರ್ಪಣೆ ಮಾಡಲಾಯಿತು. ಬಳಿಕ ನೆರೆದಿದ್ದ ಭಕ್ತರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ […]

ಎ.ಕೆ.ಸುಬ್ಬಯ್ಯನವರ ಪುಣ್ಯಸ್ಮರಣೆ : ಶಾಸಕ ಪೊನ್ನಣ್ಣರವರಿಂದ ತಂದೆಗೆ ಗೌರವ ನಮನ

    ಜನವಾಹಿನಿ NEWS ಪೊನ್ನಂಪೇಟೆ : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು, ತಮ್ಮ ತಂದೆಯವರಾದ ದಿವಂಗತ ಎ.ಕೆ ಸುಬ್ಬಯ್ಯರವರ 6ನೇ ಪುಣ್ಯ ಸ್ಮರಣೆ ದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಪೊನ್ನಂಪೇಟೆ ತಾಲೂಕು ಹುದಿಕೇರಿಯ ಬೆಳ್ಳೂರಿನಲ್ಲಿರುವ ತಮ್ಮ ತಂದೆಯವರ ಸಮಾಧಿ ಬಳಿಗೆ ತೆರಳಿದ ಮಾನ್ಯ ಶಾಸಕರು, ಪುಷ್ಪ ನಮನ ಸಲ್ಲಿಸಿ ಪ್ರಾರ್ಥಿಸುವ ಮೂಲಕ ಪುಣ್ಯ ಸ್ಮರಣೆ ದಿನದಂದು ಗೌರವಾರ್ಪಣೆ ಸಲ್ಲಿಸಿದರು. ಈ […]

ಜಾಗೃತಿ ಟ್ರಸ್ಟ್ ಹಾಗೂ ಸಿಸ್ಕೋ ಸಂಸ್ಥೆಯಿಂದ ಸರ್ಕಾರಿ ಶಾಲೆಗಳ ಮಕ್ಕಳಿಗೆ ಕಲಿಕೋಪಕರಣ, ಕ್ರೀಡಾ ಸಾಮಗ್ರಿ ವಿತರಣೆ

  ಜನವಾಹಿನಿ NEWS ಸಿದ್ದಾಪುರ: ಕೊಡಗು ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳ ಮನಸ್ಸಿನಲ್ಲಿ ನಗುವು ಮತ್ತು ಕಲಿಕೆಯ ಬೆಳಕು ತುಂಬುವ ಕಾರ್ಯವನ್ನು ಜಾಗೃತಿ ಟ್ರಸ್ಟ್ ಹಾಗೂ ಸಿಸ್ಕೋ ಸ್ವಯಂಸೇವಕರು ಯಶಸ್ವಿಯಾಗಿ ನೆರವೇರಿಸಿದರು. ಆಗಸ್ಟ್ ತಿಂಗಳಲ್ಲಿ ನಡೆದ ಅಭಿಯಾನದಲ್ಲಿ 85 ಸಿಸ್ಕೋ ಸ್ವಯಂಸೇವಕರು ಪಾಲ್ಗೊಂಡು, ಐದು ಸರ್ಕಾರಿ ಶಾಲೆಗಳ 600ಕ್ಕೂ ಹೆಚ್ಚು ಮಕ್ಕಳಿಗೆ ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಕ್ರೀಡಾ ಚಟುವಟಿಕೆಗಳನ್ನು ನಡೆಸಿದರು. ಆಗಸ್ಟ್ 14ರಂದು ಅಮ್ಮತ್ತಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿದ್ಯಾರ್ಥಿಗಳಿಗೆ […]

ಗೌರಿ ಗಣೇಶ ಹಬ್ಬಕ್ಕೆ ಕಂಗೊಳಿಸುತ್ತಿರುವ ಪಶ್ಚಿಮಘಟ್ಟದ ಗೌರಿ ಹೂ

  ✒️ ಲಕ್ಷ್ಮೀಕಾಂತ್ ಕೊಮಾರಪ್ಪ ಜನವಾಹಿನಿ NEWS ಸೋಮವಾರಪೇಟೆ : ತಾಲೂಕಿನೆಲ್ಲೆಡೆ ಗೌರಿ ಗಣೇಶ್ ಹಬ್ಬವು ಸಂಪ್ರದಾಯಿಕವಾಗಿ ಆಚರಿಸಲ್ಪಡುತ್ತಿದೆ. ಗೌರಿ ಹಬ್ಬದಂದು ಗೌರಿ ಹೂ ವೆಂದೆ ಕರೆಯಲ್ಪಡುವ ಗ್ಲೋರಿಯೊಸಾ ಸುಪರ್ಬಾ(ಅಗ್ನಿಶಿಖೆ) ಎಂಬ ಜಾತಿಯ ಹೂವನ್ನು ಪೂಜೆಯಲ್ಲಿ ಇಟ್ಟು ಪ್ರಾರ್ಥಿಸುವುದು ಗ್ರಾಮೀಣ ಭಾಗದ ವಿಶೇಷ.ಗೌರಿ ಗಣೇಶ ಹಬ್ಬ ಸಮೀಪಿಸುತ್ತಿದ್ದಂತೆ ಮಲೆನಾಡ ಭಾಗದಲ್ಲಿ ಅರಳಿನಿಂತ ಗೌರಿ ಹೂವು ಹಬ್ಬದ ಸಂಭ್ರಮ ಹೆಚ್ಚಿಸುತ್ತಿವೆ. ಗೌರಿ ಹೂವು ಎಂದು ಕರೆಯಲ್ಪಡುವ ಕೆಂಪು ಅರಿಶಿಣ ಬಣ್ಣದ ಹೂವು ಪಶ್ಚಿಮಘಟ್ಟದ ಸಹಜ ಕಾಡಿನಲ್ಲಿ ತನ್ನಿಷ್ಟಕ್ಕೆ ಅರಳುವ ಒಂದು […]

ಗ್ಯಾರಂಟಿ ಯೋಜನೆ ; ಮಡಿಕೇರಿ ತಾಲ್ಲೂಕು ಅನುಷ್ಠಾನ ಸಮಿತಿ ಸಭೆ 

  ಮಡಿಕೇರಿ : ಮಡಿಕೇರಿ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಂ.ಜಿ.ಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ಸದಸ್ಯರ ಸಭೆ ನಡೆಯಿತು. ಈ ಸಭೆಗೆ ಅನುಷ್ಠಾನ ಇಲಾಖೆಗಳಾದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಅಧಿಕಾರಿ, ಶಿಶು ಅಭಿವೃದ್ದಿ ಇಲಾಖಾ ಅಧಿಕಾರಿ, ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಮತ್ತು ವ್ಯವಸ್ಥಾಪಕರು ಕೆ.ಎಸ್.ಆರ್.ಟಿ.ಸಿ ರವರು ಮತ್ತು ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಸಮಿತಿ ಸದಸ್ಯರು ಹಾಜರಿದ್ದರು. ಗೃಹಲಕ್ಷ್ಮಿ ಯೋಜನೆ: ಶಿಶು ಅಭಿವೃದ್ದಿ ಅಧಿಕಾರಿಯವರು ಮಾತನಾಡಿ ಮಡಿಕೇರಿ ತಾಲ್ಲೂಕಿನಲ್ಲಿ […]

ಜಿಲ್ಲೆಯ ವಿವಿಧ ಕಡೆ ಮದ್ಯ ಮಾರಾಟ ನಿಷೇಧ

  ಜನವಾಹಿನಿ NEWS ಮಡಿಕೇರಿ : ಆಗಸ್ಟ್, 27 ರಿಂದ ಜಿಲ್ಲೆಯ ವಿವಿಧ ಕಡೆಗಳಲ್ಲಿ ಗೌರಿ-ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965 ರ ಕಲಂ 21 ರಲ್ಲಿ ದತ್ತವಾದ ಅಧಿಕಾರದಂತೆ ಆಗಸ್ಟ್, 27 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಹಾಕತ್ತೂರು ವ್ಯಾಪ್ತಿಯ 5 ಕಿ.ಮೀ. ವ್ಯಾಪ್ತಿಯಲ್ಲಿ ಮತ್ತು ಬೆಟ್ಟಗೇರಿ ಗ್ರಾಮ ಪಂಚಾಯಿತಿ ಸುತ್ತಮುತ್ತಲಿನ 2 ಕಿ.ಮೀ. ವ್ಯಾಪ್ತಿಯಲ್ಲಿ, ಆಗಸ್ಟ್, […]

ಪವಿತ್ರ ಪುಣ್ಯಕ್ಷೇತ್ರ ಹೊನ್ನಮ್ಮನ ಕೆರೆಗೆ ಶಾಸಕರಿಂದ ಬಾಗಿನ ಅರ್ಪಣೆ

  ಜನವಾಹಿನಿ NEWS ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ದೊಡ್ಡಮಳ್ತೆ ಗ್ರಾಮದ ಪುಣ್ಯಕ್ಷೇತ್ರ ಹೊನ್ನಮ್ಮನ ಕೆರೆಗೆ ಶಾಸಕರಾದ ಡಾ.ಮಂತರ್ ಗೌಡ ಅವರು ಗೌರಿ ಹಬ್ಬ ದಿನವಾದ ಮಂಗಳವಾರ ಬಾಗಿನ ಅರ್ಪಿಸಿದರು. ಶ್ರೀ ಸಿದ್ದೇಶ್ವರ, ಬಸವೇಶ್ವರ ಹಾಗೂ ತಾಯಿ ಹೊನ್ನಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಶಾಸಕರಾದ ಡಾ.ಮಂತರ್ ಗೌಡ ಅವರು ಬಾಗಿನ ಅರ್ಪಿಸಿದರು. ಬಳಿಕ ಮಾತನಾಡಿದ ಶಾಸಕರು ಶ್ರೀ ಸಿದ್ದೇಶ್ವರ ಮತ್ತು ಶ್ರೀ ಬಸವೇಶ್ವರ ದೇವಾಲಯಕ್ಕೆ ಪೂಜೆ ಸಲ್ಲಿಸಲು ಹಾಗೂ ತಾಯಿ ಹೊನ್ನಮ್ಮ ಕೆರೆಗೆ […]