Breaking News :

ಖ್ಯಾತ ಗಾಯಕಿ ಎಸ್. ಜಾನಕಿ ನಿಧನಕ್ಕೆ ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ಸಂತಾಪ

  ಜನವಾಹಿನಿ NEWS ಬೆಂಗಳೂರು : ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹೆಮ್ಮೆಯ ಗಾಯಕಿ, ಗಾನ ಕೋಗಿಲೆ ಎಂದೇ ಪ್ರಸಿದ್ಧರಾಗಿದ್ದ ಶ್ರೀಮತಿ ಎಸ್. ಜಾನಕಿ ಅವರ ನಿಧನಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಎಂ.ಎನ್. ಅನುಚೇತ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. “ಎಸ್. ಜಾನಕಿ ಅವರು ಭಾರತೀಯ ಚಿತ್ರರಂಗದ ಅಪರೂಪದ ಗಾನ ಕೋಗಿಲೆ. ದಶಕಗಳ ಕಾಲ ತಮ್ಮ ಸುಮಧುರ ಧ್ವನಿಯ ಮೂಲಕ ಕೋಟ್ಯಂತರ ಸಂಗೀತ ಪ್ರೇಮಿಗಳ ಹೃದಯ ಗೆದ್ದಿದ್ದಾರೆ. ಕೇವಲ ಹಾಡುಗಾರಿಕೆಯಷ್ಟೇ ಅಲ್ಲದೆ, ಪ್ರಾಣಿ-ಪಕ್ಷಿಗಳ ಧ್ವನಿ, […]

ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ 

  ಜನವಾಹಿನಿ NEWS ನಾಪೋಕ್ಲು : ಕೊಡಗು ಜಿಲ್ಲೆಯ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಕುಂಬಳದಾಳು ಸಮೀಪ 24 ವರ್ಷದ ಯುವಕನೊಬ್ಬ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ. ಕುಂಬಳದಾಳು ಗ್ರಾಮದ ನಿವಾಸಿ ಕವನ್ (೨೪) ಮೃತ ಯುವಕ ಎಂದು ಗುರುತಿಸಲಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ನಾಪೋಕ್ಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಮೃತ ಯುವಕ […]

ಖ್ಯಾತ ಬಹುಭಾಷಾ ಗಾಯಕಿ ಎಸ್ ಜಾನಕಿ ನಿಧನಕ್ಕೆ ಸಿಎಂ ಡಿಕೆ ಶಿವಕುಮಾರ್ ಸಂತಾಪ

  ಜನವಾಹಿನಿ NEWS ಬೆಂಗಳೂರು : ಖ್ಯಾತ ಬಹುಭಾಷಾ ಗಾಯಕಿ ಎಸ್ ಜಾನಕಿ ಅಮ್ಮನವರ ನಿಧನಕ್ಕೆ ಸಿಎಂ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಭಾರತೀಯ ಚಿತ್ರರಂಗದ ಅಪ್ರತಿಮ ಹಿನ್ನೆಲೆ ಗಾಯಕಿ, ಕನ್ನಡ ಚಿತ್ರರಂಗದ ಮೇರುಗಾಯಕಿ, ಗಾನಕೋಗಿಲೆ ಶ್ರೀಮತಿ ಎಸ್. ಜಾನಕಿ ಅವರ ನಿಧನದ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ ಎಂದಿರುವ ಡಿ.ಕೆ ಶಿವಕುಮಾರ್ ತಮ್ಮ ಕಂಠಸಿರಿಯ ಮೂಲಕ ಕೋಟ್ಯಂತರ ಜನರ ಮನೆಮನಗಳಲ್ಲಿ ನೆಲೆಸಿದ್ದ ಬಹುಭಾಷಾ ಗಾಯಕಿ ಜಾನಕಮ್ಮನವರ ನಿಧನದಿಂದ ಸಂಗೀತ ಕ್ಷೇತ್ರದ ಮಹಾನ್ ಸ್ವರಮಾಧುರ್ಯ ಮೌನವಾದಂತಾಗಿದೆ ಎಂದು […]

ಖ್ಯಾತ ಗಾಯಕಿ, ಗಾನಕೋಗಿಲೆ ಎಸ್‌.ಜಾನಕಿ ಇನ್ನಿಲ್ಲ

  ಜನವಾಹಿನಿ NEWS ಮೈಸೂರು : ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಭಾರತದಸುದ್ದಿ ಅನಾರೋಗ್ಯದಿಂದ ಹಿನ್ನೆಲೆಯಲ್ಲಿ ಮೈಸೂರಿನ ಅಪೊಲೋ ಆಸ್ಪತ್ರೆಯಲ್ಲಿ ದಾಖಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಅವರು ಮೃತಪಟ್ಟಿರುವುದಾಗಿ ಮೂಲಗಳಿಂದ ತಿಳಿದುಂದಿದೆ. ಎಸ್ ಜಾನಕಿ ಅವರು ಮೈಸೂರಿನಲ್ಲಿ ವಾಸವಿದ್ದರು, ಅವರ ಆರೋಗ್ಯವನ್ನು ನವೀನ್ ಎಂಬ ಕೇರ್ ಟೇಕರ್ ನೋಡಿಕೊಳ್ಳುತ್ತಿದ್ದರು. ಇಂದು ಸಂಜೆ ಅವರಿಗೆ ಇದ್ದಕ್ಕಿದ್ದಂತೆ ಹೃದಯಾಘಾತ ಆಗಿದ್ದು, ತಕ್ಷಣವೇ ಅವರನ್ನು […]

ಕೊಡ್ಲಿಪೇಟೆ : ಮೀನು ಹಿಡಿಯಲು ತೆರಳಿದ್ದ ಇಬ್ಬರು ನಾಪತ್ತೆ…!

  ಜನವಾಹಿನಿ NEWS ಶನಿವಾರಸಂತೆ : ಮೀನು ಹಿಡಿಯಲು ತೆರಳಿದ್ದ ಇಬ್ಬರು ನಾಪತ್ತೆಯಾಗಿರುವ ಘಟನೆ ಕೊಡ್ಲಿಪೇಟೆ ಹೋಬಳಿಯ ನೀರುಗುಂದ ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿಗಳಾದ ನಾಗರಾಜ್ ಮತ್ತು ಶಿವರಾಜ್ ತಡರಾತ್ರಿ ಮೀನು ಹಿಡಿಯಲು ಸಮೀಪದ ಹೊಳೆಗೆ ತೆರಳಿದ ಬಳಿಕ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಶನಿವಾರಸಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಸ್ಥಳೀಯರ ಸಹಕಾರದೊಂದಿಗೆ ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಕಟ್ಟಡದಿಂದ ಬಿದ್ದು ಪೈಂಟರ್ ಸಾವು

  ಜನವಾಹಿನಿ NEWS ಕುಶಾಲನಗರ : ಕೆಲವು ದಿನಗಳ ಹಿಂದೆ ಪೇಂಟಿಂಗ್ ಕೆಲಸದ ನಿಮಿತ್ತ ಶ್ರೀರಂಗಪಟ್ಟಣಕ್ಕೆ ತೆರಳಿದ್ದ ಕುಶಾಲನಗರದ ಪೈಂಟರ್ ಒಬ್ಬರು ಶ್ರೀರಂಗಪಟ್ಟಣದಲ್ಲಿ ಕೆಲಸ ಮಾಡುತ್ತಿದ್ದ ಕಟ್ಟಡವೊಂದರ ಮಹಡಿಯಿಂದ ಆಯತಪ್ಪಿ ಬಿದ್ದು ಸಾವನ್ನಪ್ಪಿದ ದುರ್ಘಟನೆ ಗುರುವಾರ ನಡೆದಿದೆ. ಕುಶಾಲನಗರ ಸಮೀಪದ ಚಿಕ್ಕತ್ತೂರು ಗ್ರಾಮದ ಅರುಣ (45) ಮೃತ ದುರ್ದೈವಿಯಾಗಿದ್ದು ಮೃತ ಶರೀರವನ್ನು ಇಂದು ಕುಶಾಲನಗರಕ್ಕೆ ತರಲಾಗುವುದೆಂದು ಮೂಲಗಳಿಂದ ತಿಳಿದು ಬಂದಿದೆ. ಪೈಂಟರ್ ಅರುಣ ಪತ್ನಿ, ಪುತ್ರಿ, ಓರ್ವ ಪುತ್ರನನ್ನು ಅಗಲಿದ್ದಾರೆ. ಶ್ರೀರಂಗಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷರ ನೇಮಕ : ಕುಮಾರಸ್ವಾಮಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ತಾಲ್ಲೂಕು ಅಧ್ಯಕ್ಷರ ನಿಯೋಗ

  ಜನವಾಹಿನಿ NEWS ಮಡಿಕೇರಿ : ಕಳೆದ ಸುಮಾರು ನಾಲ್ಕು ವರ್ಷಗಳಿಂದ ಕೊಡಗು ಜಿಲ್ಲಾ ಜೆಡಿಎಸ್ ಅಧ್ಯಕ್ಷರ ನೇಮಕವಾಗದ ಹಿನ್ನೆಲೆಯಲ್ಲಿ, ಜಿಲ್ಲೆಯಲ್ಲಿ ಪಕ್ಷ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೊಡಗಿನ ವಿವಿಧ ತಾಲ್ಲೂಕುಗಳ ಜೆಡಿಎಸ್ ಅಧ್ಯಕ್ಷರ ನಿಯೋಗವು ಇಂದು ಬೆಂಗಳೂರಿನ ಜೆಪಿ ಭವನದಲ್ಲಿರುವ ಪಕ್ಷದ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ,ಜೆಡಿಎಸ್ ರಾಜ್ಯಾ ಧ್ಯಕ್ಷ,ಕೇಂದ್ರ ಸಚಿವ ಎಚ್. ಡಿ. ಕುಮಾರ ಸ್ವಾಮಿ ಅವರನ್ನು ಭೇಟಿ ಮಾಡಿ, ಜಿಲ್ಲೆಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡುವಂತೆ ಮನವಿ ಸಲ್ಲಿಸಿತು. ನಿಯೋಗದ ಮನವಿಗೆ ಸ್ಪಂದಿಸಿದ […]

ಅಪಘಾತದಲ್ಲಿ ಗಾಯಗೊಂಡ ಜಿಂಕೆಯ ರಕ್ಷಣೆ 

  ಜನವಾಹಿನಿ NEWS ಕುಶಾಲನಗರ : ಅಪರಿಚಿತ ವಾಹನದಿಂದಾಗಿ ಅಪಘಾತಕ್ಕೀಡಾದ ಜಿಂಕೆಗೆ ಸ್ಥಳದಲ್ಲಿದ್ದವರು ಆರೈಕೆ ಮಾಡಿ ಅರಣ್ಯ ಇಲಾಖೆಗೆ ಒಪ್ಪಿಸಿರುವ ಘಟನೆ ಇಂದು ಬೆಳಿಗ್ಗೆ ಕುಶಾಲನಗರ ಕಾವೇರಿ ನಿಸರ್ಗಧಾಮ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಕಾಡಿನಿಂದ ತಪ್ಪಿಸಿಕೊಂಡು ಬಂದಿದ್ದ ಜಿಂಕೆಯು ಕಾವೇರಿ ನಿಸರ್ಗಧಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಧಾವಿಸಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪಲಾಯನ ಮಾಡಿದೆ. ಇದರಿಂದ ಗಾಯಗೊಂಡ ಜಿಂಕೆಗೆ ಸ್ಥಳದಲ್ಲಿದ್ದವರು ಆರೈಕೆ ಮಾಡಿ ಅದರ ಜೀವ ಉಳಿಸುವ ಮೂಲಕ ಮಾನವೀಯತೆ […]

ಆಸ್ತಿ – ಸರಕಾರಿ ನೌಕರಿ ಮೇಲಿನ ಮೋಹಕ್ಕೆ ಸುಪಾರಿ ಕೊಟ್ಟು ಹೆತ್ತ ತಾಯಿಯನ್ನೇ ಕೊಂದ ಮಗಳು

  ಜನವಾಹಿನಿ NEWS ಜೈಪುರ : ಸರ್ಕಾರಿ ಕೆಲಸ ಮತ್ತು ಆಸ್ತಿ ತನ್ನದಾಗಿಸಿಕೊಳ್ಳಲು ಕರುಳು ಹಂಚಿಕೊಂಡು ಹುಟ್ಟಿದ ಮಗಳೇ ತಾಯಿಯನ್ನು ಹತ್ಯೆ ಮಾಡಿಸಿದ ಆಘಾತಕಾರಿ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಘಟನೆಯಲ್ಲಿ ಕುಟುಂಬದ ಸಂಬಂಧಿಗಳೂ ಭಾಗಿಯಾಗಿರುವುದು ಸಂಚಲನ ಸೃಷ್ಟಿಸಿದೆ. ನೀರಜ್ ಶರ್ಮಾ ಮೃತ ಮಹಿಳೆ. ಈಕೆಯ ಮಗಳು ಆಯುಷಿ ಸೇರಿ ಏಳು ಆರೋಪಿಗಳನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ತಾಯಿಯನ್ನು ಕೊಲೆ ಮಾಡುವ ಮೊದಲು ಆಕೆಯ ಮೇಲೆ ಮಾಟಮಂತ್ರ ಕೂಡ ಮಾಡಿಸಿದ್ದೂ ಗೊತ್ತಾಗಿದೆ. ಅದಕ್ಕೆ ಸಂಬಂಧಿಸಿದ ವಸ್ತುಗಳು ಮನೆಯಲ್ಲಿ ಪತ್ತೆಯಾಗಿವೆ […]

ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್; ಹಾಲಿನ ಟ್ಯಾಂಕರ್‌ಗೂ ವ್ಯಾಪಿಸಿದ ಬೆಂಕಿ

  ಜನವಾಹಿನಿ NEWS : ಅತಿ ವೇಗದಲ್ಲಿ ಸಂಚರಿಸುತ್ತಿದ್ದ ಪೆಟ್ರೋಲ್ ಟ್ಯಾಂಕರ್ ಲಾರಿಯೊಂದು ಮರಕ್ಕೆ ಡಿಕ್ಕಿ ಹೊಡೆದು ಬೆಂಕಿಗಾಹುತಿಯಾದ ಘಟನೆ ದೊಡ್ಡಬಳ್ಳಾಪುರ ತಾಲೂಕಿನ 11ನೇ ಮೈಲಿ ಸಮೀಪ ನಡೆದಿದೆ. ಪೆಟ್ರೋಲ್ ಟ್ಯಾಂಕರ್ ಲಾರಿ ಧಗಧಗನೆ ಹೊತ್ತಿ ಉರಿಯುತ್ತಿದ್ದ ವೇಳೆ, ಅದರ ಜ್ವಾಲೆಗಳು ಪಕ್ಕದಲ್ಲೇ ರಿವರ್ಸ್ ತೆಗೆದುಕೊಳ್ಳುತ್ತಿದ್ದ ಹಾಲಿನ ಟ್ಯಾಂಕರ್‌ಗೂ ವ್ಯಾಪಿಸಿ ಎರಡೂ ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಡಿಕ್ಕಿಯ ನಂತರ ಕೆಲವೇ ಕ್ಷಣಗಳಲ್ಲಿ ಟ್ಯಾಂಕರ್‌ಗೆ ಬೆಂಕಿ […]