Breaking News :

ರಾಷ್ಟ್ರ ಪ್ರಶಸ್ತಿ ವಿಜೇತ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರನ್ನು ಸನ್ಮಾನಿಸಿದ ಯದುವೀರ್ ಒಡೆಯರ್

ರಾಷ್ಟ್ರ ಪ್ರಶಸ್ತಿ ವಿಜೇತ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರನ್ನು ಸನ್ಮಾನಿಸಿದ ಯದುವೀರ್ ಒಡೆಯರ್ ಮಡಿಕೇರಿ : ಕಂದೀಲು ಚಿತ್ರಕ್ಕಾಗಿ ರಾಷ್ಟ್ರಪ್ರಶಸ್ತಿ ಪಡೆದ ಮಡಿಕೇರಿಯ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರನ್ನು ಕೊಡಗು ಪತ್ರಕತ೯ರ ಸಂಘದ ವತಿಯಿಂದ ಆಯೋಜಿತ ಕಾಯ೯ಕ್ರಮದಲ್ಲಿ ಸಂಸದ ಯದುವೀರ್ ಒಡೆಯರ್ ಸನ್ಮಾನಿಸಿ ಗೌರವಿಸಿದರು. ಮಡಿಕೇರಿಯ ರೆಡ್ ಬ್ರಿಕ್ಸ್ ಇನ್ ನ ಸತ್ಕಾರ್ ಸಭಾಂಗಣದಲ್ಲಿ ಆಯೋಜಿತ ಕೊಡಗು ಪತ್ರಕತ೯ರ ಸಂಘದ ವಿಷನ್ ಕೊಡಗು ಕಾಯ೯ಕ್ರಮದಲ್ಲಿ, ಕಂದೀಲು ಕನ್ನಡ ಚಿತ್ರಕ್ಕಾಗಿ ಅತ್ಯುತ್ತಮ ಪ್ರಾದೇಶಿಕ ಕನ್ನಡ ಚಿತ್ರ ಎಂಬ ರಾಷ್ಟ್ರಪ್ರಶಸ್ತಿ […]

ಛತ್ತೀಸ್‌ಗಢ ರಾಜ್ಯದಲ್ಲಿ ಕ್ರೈಸ್ತ ಕನ್ಯಾಸ್ತ್ರೀಯರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ಮಡಿಕೇರಿಯಲ್ಲಿ ಪ್ರತಿಭಟನೆ

ಮಡಿಕೇರಿ : ಸುಳ್ಳು ಮೊಕದ್ದಮೆ ಹೂಡಿ ಛತ್ತೀಸ್‌ಗಢ ರಾಜ್ಯದಲ್ಲಿ ಕ್ರೈಸ್ತ ಕನ್ಯಾಸ್ತ್ರೀಯರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ನೇತೃತ್ವದಲ್ಲಿ ಶನಿವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಜಾನ್ಸನ್ ಪಿಂಟೋ, ಬಿಜೆಪಿ ಸರ್ಕಾರ ಮತ್ತು ಕೋಮುವಾದಿ ಸಂಘಟನೆ ಸೇರಿ ಕ್ರೈಸ್ತ ಕನ್ಯಾಸ್ತ್ರೀಯರನ್ನು ಬಂಧಿಸಿ ೯ ದಿನಗಳ ಕಾಲ ಜೈಲಿನಲ್ಲಿಟ್ಟಿದ್ದರು. ಇಂತಹ ಘಟನೆಗಳು ಮರುಕಳಿಸಬಾರದು ಎಂದ ಅವರು, ಕನ್ಯಾಸ್ತ್ರೀಯರನ್ನು ತಕ್ಷಣ […]

ಹುಲಿ ಹೆಜ್ಜೆ ಗುರುತು ಪತ್ತೆ : ಸಾರ್ವಜನಿಕರು ಎಚ್ಚರವಹಿಸಲು ಅರಣ್ಯ ಇಲಾಖೆ ಸೂಚನೆ

ಸಿದ್ದಾಪುರ : ಸಮೀಪದ ಗುಹ್ಯ ವ್ಯಾಪ್ತಿಗೆ ಸೇರಿದ ಸುತ್ತ ಮುತ್ತಲಿನಲ್ಲಿ ಇದೀಗ ಹುಲಿಯ ಹೆಜ್ಜೆ ಗುರುತು ಪತ್ತೆಯಾಗಿದ್ದು,  ಸ್ಥಳೀಯರು, ವಾಹನ ಸವಾರರು, ಗ್ರಾಮಸ್ಥರು ಎಚ್ಚರಿಕೆಯಿಂದ ಇರಲು ಅರಣ್ಯ ಸೂಚನೆ ನೀಡಿದೆ.

ಕಟ್ಟೆಮಾಡು ಗ್ರಾಮದಲ್ಲಿ ಕಾಫಿ, ಕರಿಮೆಣಸು ಕಳವು : ಇಬ್ಬರ ಬಂಧನ

ಕಟ್ಟೆಮಾಡು ಗ್ರಾಮದಲ್ಲಿ ಕಾಫಿ, ಕರಿಮೆಣಸು ಕಳವು : ಇಬ್ಬರ ಬಂಧನ ಮಡಿಕೇರಿ : ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟೆಮಾಡು ಗ್ರಾಮದ ನಿವಾಸಿಯಾದ ಬೊಟ್ಟೋಳಂಡ ಉತ್ತಮ್ ಮುತ್ತಪ್ಪ ರವರ ದಾಸ್ತಾನು ಕೊಠಡಿಯಲ್ಲಿ ಇಟ್ಟಿದ್ದ ಅಂದಾಜು 10 ಚೀಲ ಒಣಗಿದ ಕರಿಮೆಣಸು ಅಂದಾಜು 01 ಚೀಲ ಕಾಫಿಯನ್ನು 09-06-2025 ರಂದು ಕಳ್ಳತನವಾಗಿರುವ ಕುರಿತು ದೂರು ಸ್ವೀಕರಿಸಿದ್ದು, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ: 306 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು   ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ಅಧಿಕಾರಿ […]

ವಿಶ್ವ ಟೆಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ ಪಾಲ್ಗೊಳ್ಳಲಿರುವ ಹೊನಲಿ ಕಿಶೋರ್ ಗೆ ಅಭಿನಂದಿಸಿದ ಮಂತರ್

ವಿಶ್ವ ಟೆಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ ಪಾಲ್ಗೊಳ್ಳಲಿರುವ ಹೊನಲಿ ಕಿಶೋರ್ ಗೆ ಅಭಿನಂದಿಸಿದ ಮಂತರ್ ಮಡಿಕೇರಿ : ಮಲೇಶಿಯಾದ ಕೌಲಾಲಂಪುರದಲ್ಲಿ ಆಗಸ್ಟ್ 7ರಂದು ನಡೆಯಲಿರುವ ಇಂಟರ್ನ್ಯಾಷನಲ್ ಟೆಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ ಭಾರತದ ಪ್ರತಿನಿಧಿಯಾಗಿ ಸ್ಪರ್ಧಿಸುತ್ತಿರುವ ಸೋಮವಾರಪೇಟೆ ಮೂಲದ ವಿದ್ಯಾರ್ಥಿನಿ ” ಹೊನಲಿ ಕಿಶೋರ್” ರವರನ್ನು ಶಾಸಕ ಮಂತರ್ ಗೌಡ ಬೆಂಗಳೂರಿನಲ್ಲಿ ಭೇಟಿ ಮಾಡಿ ಅಭಿನಂದಿಸಿ, ಶುಭಹಾರೈಸಿದರು.

ರಾಷ್ಟ್ರೀಯ ಹಾಕಿ : ಕರ್ನಾಟಕ ತಂಡದ ಗೋಲ್ ಕಿಪರ್ ಆಗಿ ಕೊಡಗಿನ ಶ್ರಾವ್ಯ ದೇವಯ್ಯ ಆಯ್ಕೆ

ರಾಷ್ಟ್ರೀಯ ಹಾಕಿ : ಕರ್ನಾಟಕ ತಂಡದ ಗೋಲ್ ಕಿಪರ್ ಆಗಿ ಕೊಡಗಿನ ಶ್ರಾವ್ಯ ದೇವಯ್ಯ ಆಯ್ಕೆ ಮಡಿಕೇರಿ : ರಾಷ್ಟ್ರೀಯ ಮಹಿಳಾ ಜೂನಿಯರ್ ಹಾಕಿ ಕರ್ನಾಟಕ ತಂಡದ ಗೋಲ್ ಕೀಪರ್ ಆಗಿ ಕೊಡಗಿನ ನಾಪೋಕ್ಲು ಬಳಿಯ ಕಕ್ಕಬ್ಬೆ ಕುಂಜಿಲ ಗ್ರಾಮದ ಶ್ರಾವ್ಯ ದೇವಯ್ಯ ಆಯ್ಕೆಯಾಗಿದ್ದಾರೆ. ಆಗಸ್ಟ್. 1ರಿಂದ 12ರವರೆಗೆ ಆಂಧ್ರಪ್ರದೇಶದ ಕಾಕಿನಾಡದಲ್ಲಿ ನಡೆಯುವ ರಾಷ್ಟ್ರೀಯ ಮಹಿಳಾ ಜೂನಿಯರ್ ಕರ್ನಾಟಕ ಹಾಕಿ ತಂಡದ ಗೋಲ್ ಕೀಪರ್ ಆಗಿ ಶ್ರಾವ್ಯ ದೇವಯ್ಯ ಆಯ್ಕೆಯಾಗಿದ್ದಾರೆ. ತಮಿಳುನಾಡಿನ ತಿರುಪುರ್ ಜಿವಿಜಿ ಕಾಲೇಜಿನಲ್ಲಿ ವ್ಯಾಸಂಗ […]

ಡಾ.ಮಹಾಂತ ಶಿವಯೋಗಿ ಅವರ ಜನ್ಮ ದಿನದ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆ : ಒಳ್ಳೆಯ ಜೀವನ ರೂಪಿಸಿಕೊಳ್ಳುವತ್ತ ಗಮನಹರಿಸಿ: ಪಿ.ಎ.ಸೂರಜ್

ಡಾ.ಮಹಾಂತ ಶಿವಯೋಗಿ ಅವರ ಜನ್ಮ ದಿನದ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆ : ಒಳ್ಳೆಯ ಜೀವನ ರೂಪಿಸಿಕೊಳ್ಳುವತ್ತ ಗಮನಹರಿಸಿ: ಪಿ.ಎ.ಸೂರಜ್ ಮಡಿಕೇರಿ : ಯುವ ಜನರು ದುಶ್ಚಟಗಳಿಗೆ ತುತ್ತಾಗದೆ, ಉತ್ತಮ ಭವಿಷ್ಯ ರೂಪಿಸಿಕೊಳ್ಳುವತ್ತ ಗಮನಹರಿಸಬೇಕು ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಪಿ.ಎ.ಸೂರಜ್ ಅವರು ಕರೆ ನೀಡಿದ್ದಾರೆ. ರಾಜ್ಯ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ, ಶಾಲಾ ಶಿಕ್ಷಣ, ಪದವಿ ಪೂರ್ವ […]

ಸುಗಮ ಸಂಗೀತ ಕಲಾತರಬೇತಿ ಶಿಬಿರಕ್ಕೆ ಚಾಲನೆ

ಸುಗಮ ಸಂಗೀತ ಕಲಾತರಬೇತಿ ಶಿಬಿರಕ್ಕೆ ಚಾಲನೆ ಮಡಿಕೇರಿ : ವಿದ್ಯಾರ್ಥಿ ಜೀವನದಲ್ಲಿಯೇ ಕಲಾ ಸಂಸ್ಕøತಿಯನ್ನು ಮೈಗೂಡಿಸಿಕೊಂಡಲ್ಲಿ ಆತ್ಮವಿಶ್ವಾಸ ಹೆಚ್ಚಾಗುವುದರ ಜೊತೆಗೆ, ಮನಸ್ಸಿನಲ್ಲಿನ ಋಣಾತ್ಮಕ ಅಂಶಗಳೂ ಮರೆಯಾಗಲು ಸಹಕಾರಿಯಾಗುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ಹೇಳಿದ್ದಾರೆ. ನಗರದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ಸಭಾಂಗಣದಲ್ಲಿ ಆಯೋಜಿತ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವಿಶೇಷ ಘಟಕ ಯೋಜನೆಯಡಿಯಲ್ಲಿನ ಸುಗಮ ಸಂಗೀತ ಕಲಾ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಮಾಜ […]

ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಆಡಿಟೋರಿಯಂ ಪುನಶ್ಚೇತನಕ್ಕೆ ಡಾ ಮಂತರ್ ಗೌಡ ಸೂಚನೆ

ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಆಡಿಟೋರಿಯಂ ಪುನಶ್ಚೇತನಕ್ಕೆ ಡಾ ಮಂತರ್ ಗೌಡ ಸೂಚನೆ ಮಡಿಕೇರಿ : ಸ್ವಾತಂತ್ರ್ಯ ಪೂರ್ವದಲ್ಲಿ ಕೊಡಗಿನ ಶಿಕ್ಷಣ ಕಾಶಿಯೆಂದೇ ಪ್ರಖ್ಯಾತ ಗಳಿಸಿದ್ದ ಮೆರ್ಕಾರ ಸೆಂಟ್ರಲ್ ಹೈ ಸ್ಕೂಲ್ ( ಸರ್ಕಾರಿ ಪದವಿಪೂರ್ವ ಕಾಲೇಜು) ನಲ್ಲಿ ಹಳೆಯ ವಿಧ್ಯಾರ್ಥಿಗಳ ಪರಿಶ್ರಮದ ಫಲವಾಗಿ ಭವ್ಯವಾಗಿ ಇಪ್ಪತೈದು ವರ್ಪಗಳ ಹಿಂದೆ ನಿರ್ಮಾಣವಾಗಿ ಈಗ ದುಸ್ಥಿತಿಯಲ್ಲಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವಿವಿಧೋದ್ದೇಶ ಸಭಾಂಗಣಕ್ಕೆ ಹೊಸ ಕಾಯಕಲ್ಪ ನೀಡಲು ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡ ಮುಂದಾಗಿದ್ದಾರೆ. […]

ಬಿರುಕು ಬಿಟ್ಟಿರುವ ತಡೆಗೋಡೆನ್ನು ಶಾಸಕ ಮಂತರ್ ಗೌಡ ವೀಕ್ಷಿಸಿದರು

ಬಿರುಕು ಬಿಟ್ಟಿರುವ ತಡೆಗೋಡೆನ್ನು ಶಾಸಕ ಮಂತರ್ ಗೌಡ ವೀಕ್ಷಿಸಿದರು  ಮಡಿಕೇರಿ : ನಗರ ಸಮೀಪದ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಬಿರುಕು ಬಿಟ್ಟಿರುವ ತಡೆಗೋಡೆಯನ್ನು ಶಾಸಕರಾದ ಡಾ.ಮಂತರ್ ಗೌಡ ಭೇಟಿ ನೀಡಿ ವೀಕ್ಷಿಸಿದರು. ಬಿರುಕು ಬಿಟ್ಟಿರುವ ತಡೆಗೋಡೆ ಕುಸಿದು ಬಿದ್ದರೆ ಇಡೀ ಹೆದ್ದಾರಿಯೇ ಬಂದ್ ಆಗಲಿದೆ. ಆದ್ದರಿಂದ ತಜ್ಞ ಎಂಜಿನಿಯರ್‍ಗಳನ್ನು ಆಹ್ವಾನಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಹೆದ್ದಾರಿ ವಿಭಾಗದ ಎಂಜಿನಿಯರ್‍ಗೆ ಶಾಸಕರು ಸೂಚಿಸಿದರು. ಹೆದ್ದಾರಿ ಸುರಕ್ಷತೆ ಸಂಬಂಧಿಸಿದಂತೆ ಟಾರ್ಪಲ್ ಹೊದಿಸುವುದು ಸೇರಿದಂತೆ ಅಗತ್ಯ ಮುಂಜಾಗ್ರತ ಕ್ರಮ […]