Breaking News :

ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರಿಂದ ಜಿಲ್ಲಾಸ್ಪತ್ರೆ, ಉದ್ಯಾನವನ, ಆರ್‍ಟಿಒ ಕಚೇರಿ, ವೈದ್ಯಕೀಯ ಕಾಲೇಜು ವಿದ್ಯಾರ್ಥಿ ನಿಲಯಕ್ಕೆ ಭೇಟಿ ; ಪರಿಶೀಲನೆ  

    ಜನವಾಹಿನಿ NEWS ಮಡಿಕೇರಿ : ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಶನಿವಾರ ನಗರದ ಮತ್ತು ನಗರದ ಹೊರವಲಯದ ಸರ್ಕಾರಿ ಕಚೇರಿಗಳು ಮತ್ತು ಸಂಸ್ಥೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ನಗರದ ಪ್ರಸಿದ್ಧ ಓಂಕಾರೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಆಂಜನೇಯ ಸ್ವಾಮಿ ದೇವಾಲಯಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಉಪ ಲೋಕಾಯುಕ್ತರ […]

ಪಾಲಿಬೆಟ್ಟ ಮೊಯ್ಯದ್ದೀನ್ ಸುನ್ನಿ ಜುಮಾ ಮಸೀದಿ ವಾರ್ಷಿಕ ಮಹಾಸಭೆ :ನೂತನ ಪದಾಧಿಕಾರಿಗಳ ಆಯ್ಕೆ

  ಜನವಾಹಿನಿ NEWS ಸಿದ್ದಾಪುರ : ಪಾಲಿಬೆಟ್ಟ ಮೊಯ್ಯದ್ದೀನ್ ಸುನ್ನಿ ಜುಮಾ ಮಸೀದಿ ವಾರ್ಷಿಕ ಮಹಾ ಸಭೆ ಇತ್ತೀಚೆಗೆ ಪಾಲಿಬೆಟ್ಟ ಮದರಸ ಸಭಾಂಗಣದಲ್ಲಿ ನಡೆಯಿತು. ಜಮಾಅತ್ ಅಧ್ಯಕ್ಷ ಇಸ್ಮಾಯಿಲ್ ಹಾಜಿ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾ ಸಭೆಯನ್ನು ಮಹಲ್ ಖತೀಬ್ ಮಹಮ್ಮದ್ ರಾಫಿ ಹಿಮಮಿ ಕಾಮಿಲ್ ಸಖಾಫಿ ಉದ್ಘಾಟಿಸಿ ಮಾತನಾಡಿದರು. ವಾರ್ಷಿಕ ವರದಿ ಹಾಗೂ ಲೆಕ್ಕಪತ್ರವನ್ನು ಪ್ರಧಾನ ಕಾರ್ಯದರ್ಶಿ ಮುನ್ನ ಸಭೆಯಲ್ಲಿ ಮಂಡಿಸಿದರು. ನಂತರ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಇಸ್ಮಾಯಿಲ್ ಹಾಜಿ, ಉಪಾಧ್ಯಕ್ಷರಾಗಿ ಝೖನುದ್ದೀನ್, […]

ಕೊಡಗು ಜಿಲ್ಲೆಗೆ ಜುಲೈ 9 ವರೆಗೆ ಆರೆಂಜ್ ಅಲರ್ಟ್ 

    ಜನವಾಹಿನಿ NEWS ಮಡಿಕೇರಿ : ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಸೇರಿದಂತೆ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ರೆಡ್ ಅಲರ್ಟ್ ಘೋಷಿಸಿದ್ದು, ಬೆಳಗಾವಿ ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಕೊಡಗು ಸೇರಿ 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ಗದಗ ಹಾಗೂ ಹಾವೇರಿ ಜಿಲ್ಲೆಗೆ ಯಲ್ಲೋ ಅಲರ್ಟ್ ಘೋಷಣೆಯಾಗಿದೆ. ಕೊಡಗಿನಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಸರಾಸರಿ 47.38 ಮಿ.ಮಿ ಮಳೆಯಾಗಿದೆ. ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರ […]

ಜು.6 ರಂದು ಚೇಲಾವರದಲ್ಲಿ ಸಾರ್ವಜನಿಕ ಸಭೆ

    ಜನವಾಹಿನಿ NEWS ಚೆಯ್ಯಂಡಾಣೆ : ಸ್ಥಳೀಯ ನರಿಯಂದಡ ಗ್ರಾಮ ಪಂಚಾಯಿತಿಯ ಚೇಲಾವರ ಗ್ರಾಮದ ಚೇಲಾವರ ಜಲಪಾತ ಹಾಗೂ ಕಬ್ಬೆಬೆಟ್ಟಕ್ಕೆ ಬರುವ ಪ್ರವಾಸಿಗರಿಂದ ಗ್ರಾಮಸ್ಥರಿಗೆ ಉಂಟಾಗುತ್ತಿರುವ ತೊಂದರೆಗಳ ಬಗ್ಗೆ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲು ತಾ. 6ರ ಸೋಮವಾರ ಬೆಳಿಗ್ಗೆ 11ಗಂಟೆಗೆ ಚೇಲಾವರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಸಭೆ ಕರೆಯಲಾಗಿದ್ದು. ಸಭೆಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪೋಲ್ಗೊಂಡು ಸಭೆಯನ್ನು ಯಶಸ್ವಿಗೊಳಿಸಬೇಕೆಂದು ನರಿಯಂದಡ ಗ್ರಾಮ ಪಂಚಾಯಿತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಸ ವಿಲೇವಾರಿ ಘಟಕಕ್ಕೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಭೇಟಿ : ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡಿ: ಕೆ.ಎನ್.ಫಣೀಂದ್ರ  

    ಜನವಾಹಿನಿ NEWS ಮಡಿಕೇರಿ : ನಗರದ ಹೊರವಲಯದ ಸ್ಟೀವರ್ಟ್ ಹಿಲ್ ಬಳಿ ಸಂಗ್ರಹಿಸಲಾಗುವ ಕಸ ವಿಲೇವಾರಿ ಘಟಕಕ್ಕೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಶುಕ್ರವಾರ ಭೇಟಿ ನೀಡಿ ವೀಕ್ಷಿಸಿದರು. ಕಸ ವಿಲೇವಾರಿ ಘಟಕದ ಗೇಟ್ ಬಳಿಗೆ ಇಳಿಯುತ್ತಿದ್ದಂತೆ ರಸ್ತೆಯನ್ನೇ ಸರಿಯಾಗಿ ಇಟ್ಟುಕೊಂಡಿಲ್ಲ, ಇನ್ನು ಕಸವನ್ನು ಹೇಗೆ ವಿಲೇವಾರಿ ಮಾಡುತ್ತಿದ್ದೀರ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಕನಿಷ್ಟ ಓಡಾಡಲು ರಸ್ತೆ ಸುಗಮವಾಗಿರಬೇಕು. ಹೆಚ್ಚು ಮಳೆ ಬೀಳುವ ಪ್ರದೇಶದಲ್ಲಿ ಕಸವನ್ನು ವಿಲೇವಾರಿ ಮಾಡುವುದು ಹೀಗೆಯೇ ಎಂದು ಆಕ್ರೋಶ […]

ನಾಗರಹೊಳೆ ಅರಣ್ಯ ಪ್ರದೇಶದ ನಾನಾಚ್ಚಿ ಸರ್ಕಾರಿ ಶಾಲೆಗೆ ನಾರಿ ಟ್ರಸ್ಟ್‌ನಿಂದ 8 ಶೌಚಾಲಯಗಳ ಕೊಡುಗೆ

    ಜನವಾಹಿನಿ NEWS ಮೈಸೂರು : ಆದಿವಾಸಿ ಮಕ್ಕಳ ಆರೋಗ್ಯ, ಸ್ವಚ್ಛತೆ ಹಾಗೂ ಗೌರವಯುತ ಶಾಲಾ ವಾತಾವರಣವನ್ನು ಉತ್ತೇಜಿಸುವ ಉದ್ದೇಶದಿಂದ ನಾರಿ ಟ್ರಸ್ಟ್ (NAARITRUST), ಮೈಸೂರು ವತಿಯಿಂದ ಡೆಸ್ಮೆಟ್ (Desmet) ಸಂಸ್ಥೆಯ ಸಿಎಸ್‌ಆರ್ ನಿಧಿಯ ಸಹಾಯದಿಂದ ನಾಗರಹೊಳೆ ಅರಣ್ಯ ವ್ಯಾಪ್ತಿಯ ನಾನಾಚ್ಚಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8 ಶೌಚಾಲಯಗಳ ಘಟಕವನ್ನು ನಿರ್ಮಿಸಿ ಶಾಲೆಗೆ ಸಮರ್ಪಿಸಲಾಗಿದೆ. ಇಲ್ಲಿಯವರೆಗೆ ಶಾಲೆಯಲ್ಲಿ ಸಮರ್ಪಕ ಶೌಚಾಲಯಗಳ ಕೊರತೆಯಿಂದ ವಿದ್ಯಾರ್ಥಿಗಳು, ವಿಶೇಷವಾಗಿ ಬಾಲಕಿಯರು, ಅನೇಕ ತೊಂದರೆಗಳನ್ನು ಅನುಭವಿಸುತ್ತಿದ್ದರು. ಹೊಸ ಶೌಚಾಲಯಗಳ ನಿರ್ಮಾಣದಿಂದ ವಿದ್ಯಾರ್ಥಿಗಳಿಗೆ […]

ಓಂಕಾರೇಶ್ವರ ದೇವಾಲಯ; ಕೊಠಡಿ ಉದ್ಘಾಟನೆ 

  ಜನವಾಹಿನಿ NEWS ಮಡಿಕೇರಿ : ಪ್ರವಾಸೋದ್ಯಮ ಇಲಾಖೆ ವತಿಯಿಂದ ನಗರದ ಶ್ರೀ ಓಂಕಾರೇಶ್ವರ ದೇವಸ್ಥಾನದ ಬಳಿ ರೂ.36.60 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಶೌಚಾಲಯ ಮತ್ತು ಬಟ್ಟೆ ಬದಲಿಸುವ ಕೊಠಡಿಯನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಓಂಕಾರೇಶ್ವರ ದೇವಾಲಯದ ಭಾಗದಲ್ಲಿ ಹಲವಾರು ವರ್ಷಗಳಿಂದ ಶೌಚಾಲಯ ಹಾಗೂ ಪಾರ್ಕಿಂಗ್ ವ್ಯವಸ್ಥೆ ಬೇಡಿಕೆ ಇತ್ತು. ಈ ಹಿನ್ನೆಲೆ ಪ್ರವಾಸೋದ್ಯಮ ಇಲಾಖೆಯಿಂದ ಅನುದಾನ ಬಿಡುಗಡೆ ಮಾಡಿ ರೂ.36.60 ಲಕ್ಷ ವೆಚ್ಚದಲ್ಲಿ ಮಹಿಳೆಯರು […]

ಕೊಡವ ಅಕಾಡೆಮಿ ಮತ್ತು ನಾಪೋಕ್ಲು ಕೊಡವ ಸಮಾಜದಿಂದ ಮಕ್ಕಡ ನಮ್ಮೆ

    ಜನವಾಹಿನಿ NEWS ಮಡಿಕೇರಿ : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ನಾಪೋಕ್ಲು ಕೊಡವ ಸಮಾಜದ ಜಂಟಿ ಆಶ್ರಯದಲ್ಲಿ ‘ಮಕ್ಕಡ ನಮ್ಮೆ’ಯನ್ನು ಆಯೋಜಿಸಲು, ಇತ್ತೀಚೆಗೆ ನಡೆದ ಉಭಯ ಸಂಸ್ಥೆಗಳ ಜಂಟಿ ಸಭೆಯಲ್ಲಿ ತೀರ್ಮಾನಿಸಲಾಯಿತು. ನಾಪೋಕ್ಲು ಕೊಡವ ಸಮಾಜದಲ್ಲಿ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಹಾಗೂ ನಾಪೋಕ್ಲು ಕೊಡವ ಸಮಾಜ ಅಧ್ಯಕ್ಷರಾದ ಮುಂಡಂಡ ಸಿ.ನಾಣಯ್ಯ ಮುಂದಾಳತ್ವದ ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಲಾಯಿತು. ಈ ವರ್ಷದ ಅಕ್ಟೋಬರ್ 24-25 ರಂದು ಆಯೋಜಿಸಲು ಉದ್ಧೇಶಿಸಿರುವ ‘ಮಕ್ಕಡ ನಮ್ಮೆ’ಯಲ್ಲಿ ಯಾವುದೇ […]

ಕೆಎಸ್‌ಎಫ್‌ಎ ಅಂತರ ಜಿಲ್ಲಾ ಫುಟ್‌ಬಾಲ್ ಟೂರ್ನಿಗೆ ಕೊಡಗು ತಂಡ ಪ್ರಕಟ : ವಿಜೇಶ್‌ಗೆ ನಾಯಕತ್ವ

  ಜುಲೈ 7ರಿಂದ ತುಮಕೂರಿನಲ್ಲಿ ನಡೆಯಲಿರುವ ಅಂತರ್ ಜಿಲ್ಲಾ ಪಂದ್ಯಾವಳಿ ಜನವಾಹಿನಿ NEWS ಮಡಿಕೇರಿ : ಕರ್ನಾಟಕ ರಾಜ್ಯ ಫುಟ್‌ಬಾಲ್ ಸಂಸ್ಥೆ (KSFA) ಆಶ್ರಯದಲ್ಲಿ ತುಮಕೂರಿನಲ್ಲಿ ಜುಲೈ 7ರಿಂದ 17ರವರೆಗೆ ನಡೆಯಲಿರುವ ರಾಜ್ಯ ಮಟ್ಟದ ಅಂತರ ಜಿಲ್ಲಾ ಫುಟ್‌ಬಾಲ್ ಪಂದ್ಯಾವಳಿಗೆ ಕೊಡಗು ಜಿಲ್ಲಾ ಫುಟ್‌ಬಾಲ್ ಸಂಸ್ಥೆ (KDFA) ತನ್ನ 18 ಸದಸ್ಯರ ತಂಡವನ್ನು ಶುಕ್ರವಾರ ಅಮ್ಮತ್ತಿ ಮೈದಾನದಲ್ಲಿ ಅಧಿಕೃತವಾಗಿ ಪ್ರಕಟಿಸಿತು. ಜಿಲ್ಲೆಯ ವಿವಿಧ ಭಾಗಗಳಿಂದ ಪ್ರತಿಭಾವಂತ ಆಟಗಾರರನ್ನು ಆಯ್ಕೆ ಮಾಡಲಾಗಿದ್ದು, ಈ ಬಾರಿ ಕೊಡಗು ತಂಡ ಉತ್ತಮ […]

ಪ್ರಧಾನಿ ನರೇಂದ್ರ ಮೋದಿಯವರನ್ನು  ಅವಾಚ್ಯ ಶಬ್ದಗಳಿಂದ ನಿಂದಿಸಿದ ವ್ಯಕ್ತಿ ವಿರುದ್ಧ ದೂರು ದಾಖಲು 

  ಜನವಾಹಿನಿ NEWS ಪೊನ್ನಂಪೇಟೆ : ದೇಶದ ಪ್ರಧಾನಿಯನ್ನು ಅವಾಚ್ಯ ಶಬ್ಧಗಳಿಂದ ನಿಂಧಿಸಿದ ವ್ಯಕ್ತಿಯ ವಿರುದ್ಧ ಪೊನ್ನಂಪೇಟೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೇಶದ ಪ್ರಧಾನಿ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಸಂಬಂಧ ಮಾಜಿ BSNL ಕೆಲಸಗಾರ ಪವಿತ್ರನ್ ಎಂಬುವವರ ವಿರುದ್ದ  ಬಿಜೆಪಿ ಪ್ರಮುಖರು ಪೋನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ  ವಿರಾಜಪೇಟೆ ಮಂಡಲ ಕಾರ್ಯದರ್ಶಿ ಕೋಟೆರ ಕಿಶನ್, ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷರು ದಿನೇಶ್ ಚೋಡುಮಾಡ, ರೈತ ಮೋರ್ಚಾ ಮಂಡಲ […]