ಏ.10 ರಂದು ತಲಕಾವೇರಿ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

ಜನವಾಹಿನಿ News ಮಡಿಕೇರಿ : ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿರುವ ಶ್ರೀ ತಲಕಾವೇರಿ ದೇವಾಲಯದಲ್ಲಿ ಶ್ರೀ ಉಚ್ಚಿಲ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಏಪ್ರಿಲ್, 10 ರಂದು ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಲಿದೆ. ಏಪ್ರಿಲ್, 10 ರಂದು ಬೆಳಗ್ಗೆ 9 ಗಂಟೆಯಿಂದ ಗಣಪತಿ ಹೋಮ, ಪುಣ್ಯಾಹ, ಅಗಸ್ತ್ಯೇಶ್ವರ ಸಾನಿಧ್ಯದಲ್ಲಿ ಕಳಶ ಪೂಜೆ, ಕಲಶಾಭಿಷೇಕ, ಮಹಾಪೂಜೆ, ಕಾವೇರಿ ಅಮ್ಮನವರಿಗೆ ಸಂಪ್ರೋಕ್ಷಣೆ ಹಾಗೂ ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾಧಿಗಳು ದೇವಾಲಯದಲ್ಲಿ ನಡೆಯಲಿರುವ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ […]
ರಾಜಾಸೀಟು ಉದ್ಯಾನವನಕ್ಕೆ ಜಿಲ್ಲಾಧಿಕಾರಿ ಭೇಟಿ ; ಪರಿಶೀಲನೆ

ಜನವಾಹಿನಿ News ಮಡಿಕೇರಿ : ಪ್ರವಾಸಿಗರ ಕೇಂದ್ರ ಬಿಂದು ರಾಜಾಸೀಟು ಉದ್ಯಾನವನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಶುಕ್ರವಾರ ಭೇಟಿ ನೀಡಿ ವೀಕ್ಷಿಸಿದರು. ಹಾಗೆಯೇ ಗ್ರೇಟರ್ ರಾಜಾಸೀಟು, ಪುಟಾಣಿ ರೈಲು ಮಾರ್ಗ ಮತ್ತು ಕೂರ್ಗ್ ವಿಲೇಜ್‍ಗೆ ತೆರಳಿ ಅಭಿವೃದ್ಧಿ ಸಂಬಂಧ ಮಾಹಿತಿ ಪಡೆದರು. ರಾಜಸೀಟು ಉದ್ಯಾನವನ ಬಳಿಯ ಟಿಕೇಟ್ ಕೌಂಟರ್, ಮಾಹಿತಿ ಕೇಂದ್ರ ಹಾಗೂ ಉದ್ಯಾನವನದೊಳಗೆ ಸಿಸಿಟಿವಿ ಹಾಗೂ ಗೇಟ್ ಅನ್ನು ಪರಿಶೀಲಿಸಿದರು. ಉದ್ಯಾನವನ ಸುತ್ತಲೂ ಸಿಸಿಟಿವಿ ವೈರ್ ಹಾಗೂ ವಿದ್ಯುತ್ ತಂತಿಗಳಿಂದ ಕೂಡಿದ್ದು, ಉದ್ಯಾನವನದ ಸೌಂದರ್ಯ ಹಾಳಾಗಿದೆ. […]
ಮಾ.24 ರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅನಧಿಕೃತ ಬೋರ್ಡ್ ಮತ್ತು ಮಳಿಗೆಗಳ ತೆರವು ಕಾರ್ಯ

ಜನವಾಹಿನಿ News ಮಡಿಕೇರಿ : ರಾಷ್ಟ್ರೀಯ ಹೆದ್ದಾರಿ-275 ಕಿ.ಮೀ.71.600 ರಿಂದ ಕಿ.ಮೀ.130.21 ರವರೆಗೆ ಸಂಪಾಜೆಯಿಂದ ಕುಶಾಲನಗರ ಕಾವೇರಿ ನದಿ ಸೇತುವೆ ವರೆವಿಗೂ ಈಗಾಗಲೇ ತೆರವುಗೊಳಿಸಲಾಗಿದ್ದ ಅನಧಿಕೃತ ಜಾಹಿರಾತು ಫಲಕಗಳನ್ನು ಮತ್ತು ವ್ಯಾಪಾರಿಗಳು ಹಣ್ಣಿನ ಅಂಗಡಿ ಮತ್ತು ಗೂಡಂಗಡಿಗಳನ್ನು ರಾಷ್ಟ್ರೀಯ ಹೆದ್ದಾರಿಯ ಪರಧಿಯ ಒಳಗೆ ಪುನರ್ ಸ್ಥಾಪಿಸಿಕೊಂಡು ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ಗ್ರಾಹಕರ ವಾಹನಗಳು ಪುಟ್‍ಪಾತಿನಲ್ಲಿ ನಿಂತು ರಸ್ತೆ ಅಪಘಾತಗಳು ಸಂಭವಿಸುತ್ತಿವೆ ಮತ್ತು ವಾಹನಗಳ ಸರಾಗ ಚಲನೆಗೆ ತೊಂದರೆಯಾಗುತ್ತಿದೆ. ಆದ್ದರಿಂದ ವ್ಯಾಪಾರಿಗಳು ತಮ್ಮ ವ್ಯಾಪಾರ ವಹಿವಾಟುಗಳನ್ನು ಮತ್ತು ಅನಧಿಕೃತ […]
ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ಜನವಾಹಿನಿ News ಮಡಿಕೇರಿ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರಿಗೆ 12 ದಿನಗಳ ಅವಧಿಯ ಉಚಿತ ಫಾಸ್ಟ್ ಫುಡ್ (ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿ ಶಿಬಿರವನ್ನು ಏಪ್ರಿಲ್ 4 ರಿಂದ ಪ್ರಾರಂಭಿಸಲಾಗುತ್ತಿದೆ. ಈ ಶಿಬಿರದಲ್ಲಿ ಪಾನಿ ಪೂರಿ, ಬೇಲ್ ಪೂರಿ, ದಹಿ ಪೂರಿ, ಸೇವ್ ಪೂರಿ, ಚಾಟ್ ಮಸಾಲ, ಕಚೋರಿ, ಗೋಬಿ ಮಂಚೂರಿ, ಪ್ರೈಡ್ ರೈಸ್, ಸಮೋಸ ಇನ್ನಿತರೆ […]
ಕೊಡಗಿನಲ್ಲಿ ಏಪ್ರಿಲ್ 8 ರಿಂದ ಮೂರು ದಿನಗಳ ಕಾಲ ಪಾಸ್‌ಪೋರ್ಟ್ ಮೇಳ : ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಯದುವೀರ್ ಒಡೆಯರ್ ಮನವಿ

ಸಂಸದರ ಮನವಿಗೆ ಸ್ಪಂದಿಸಿ ಆಯೋಜಿಸಿರುವ ವಿದೇಶಾಂಗ ಸಚಿವಾಲಯ ಜನವಾಹಿನಿ News ಮಡಿಕೇರಿ : ಕೊಡಗು ಜಿಲ್ಲೆಯ ನಾಗರಿಕರಿಗೆ ಸಂತಸ ತರುವಂತಹ ಸುದ್ದಿ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪರಿಶ್ರಮದ ಫಲವಾಗಿ ಕೊಡಗಿನಲ್ಲಿ ಪಾಸ್‌ಪೋರ್ಟ್ ಮೇಳ ಆಯೋಜಿಸಲು ಬೆಂಗಳೂರು ವಿಭಾಗೀಯ ಪಾಸ್‌ಪೋರ್ಟ್ ಕಚೇರಿ ನಿರ್ಧರಿಸಿದೆ. ಏಪ್ರಿಲ್ 8ರಿಂದ ಮೂರು ದಿನಗಳ ಕಾಲ ಕೊಡಗ ಜಿಲ್ಲೆಯಲ್ಲಿ ಪಾಸ್‌ಪೋರ್ಟ್ ಮೇಳ ನಡೆಯಲಿದೆ. ಕಳೆದ ಫೆಬ್ರವರಿ ತಿಂಗಳಿನಲ್ಲಿ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದ ಯದುವೀರ್ ಒಡೆಯರ್ […]
ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಶಾಸಕ ಡಾ.ಮಂತರ್ ಗೌಡರಿಂದ ಚಾಲನೆ

ಜನವಾಹಿನಿ News ಮಡಿಕೇರಿ : ತೋಟಗಾರಿಕೆ ಇಲಾಖೆಯು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಇತರೆ ಅಭಿವೃದ್ದಿ ಇಲಾಖೆಗಳ ಸಹಯೋಗದೊಂದಿಗೆ ಭಾರತ ದೇಶದ ಗಣರಾಜ್ಯೋತ್ಸವದ ಪ್ರಯುಕ್ತ ನಗರದ ರಾಜಸೀಟು ಉದ್ಯಾನವನದಲ್ಲಿ ಮೂರು ದಿನಗಳ ಕಾಲ ಆಯೋಜಿಸಿರುವ ಫಲಪುಷ್ಪ ಪ್ರದರ್ಶನಕ್ಕೆ ಶಾಸಕರಾದ ಡಾ.ಮಂತರ್ ಗೌಡ ಅವರು ಶನಿವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಶಾಸಕರು ರಾಜಸೀಟು ಉದ್ಯಾನವನದ ಒಳಭಾಗದಲ್ಲಿ ಹೈಟೆಕ್ ಮಾದರಿಯ ಕ್ಯಾಂಟೀನ್ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು. ರಾಜಸೀಟು ಉದ್ಯಾನವನಲ್ಲಿ ಈ ಬಾರಿ ಪ್ರಸಿದ್ಧ ಶ್ರೀ ಭಗಂಡೇಶ್ವರ […]
ಮೈಸೂರು : ಅರಮನೆ ಬಳಿ ಸ್ಪೋಟ : ಓರ್ವ ಸಾವು ಹಲವರ ಸ್ಥಿತಿ ಗಂಭೀರ

ಜನವಾಹಿನಿ News ಮೈಸೂರು: ವಿಶ್ವವಿಖ್ಯಾತ ಮೈಸೂರು ಅರಮನೆ ಬಳಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿರುವ ಘಟನೆ ಗುರುವಾರ ನಡೆದಿದೆ. ಮೈಸೂರಿನ ಅಂಬಾವಿಲಾಸ ಅರಮನೆ ಆವರಣದಲ್ಲಿ ಈ ದುರಂತ ನಡೆದಿದ್ದು, ಅರಮನೆಯ ಜಯಮಾರ್ತಾಂಡ ದ್ವಾರದ ಊಟಿ ರಸ್ತೆಯ ಬದಿಯಲ್ಲಿ ಬಲೂನ್ ಮಾರಾಟ ಮಾಡುತ್ತಿದ್ದ ವ್ಯಾಪಾರಿಯ ಸಿಲಿಂಡರ್ ಸ್ಫೋಟಗೊಂಡಿದೆ. ಈ ವೇಳೆ ಒಟ್ಟು ನಾಲ್ಕು ಮಂದಿ ಗಾಯಗೊಂಡಿದ್ದು, ಈ ಪೈಕಿ ಓರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ನೈಟ್ರೋಜನ್ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು […]
ಗೋವಾದಲ್ಲಿ ವಿಶ್ವದ ಅತ್ಯಂತ ಎತ್ತರದ ಶ್ರೀ ರಾಮನ ಪ್ರತಿಮೆ ಅನಾವರಣ

ಜನವಾಹಿನಿ News ಗೋವಾ : ದಕ್ಷಿಣ ಗೋವಾದ ಶ್ರೀ ಸಂಸ್ಥಾನ ಗೋಕರ್ಣ ಜೀವೋತ್ತಮ ಮಠದಲ್ಲಿರುವ ವಿಶ್ವದ ಅತಿ ಎತ್ತರದ ಶ್ರೀರಾಮನ ಕಂಚಿನ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದರು. 77 ಅಡಿ ಎತ್ತರ ಹೊಂದಿರುವ ಈ ಭವ್ಯ ಮೂರ್ತಿ ದೇಶದ ಸಾಂಸ್ಕೃತಿಕ ಪರಂಪರೆ, ಭಕ್ತಿ ಮತ್ತು ಶಿಲ್ಪಕಲೆಯ ಅದ್ಭುತ ಸಂಯೋಗವಾಗಿ ಗೋವಾದ ಹೊಸ ಗುರುತಾಗಲಿದೆ. ಈ ಮೂರ್ತಿಯನ್ನು ಖ್ಯಾತ ಶಿಲ್ಪಿ ರಾಮ್ ಸುತಾರ್ ಮತ್ತು ಅವರ ತಂಡ ನಿರ್ಮಿಸಿದ್ದಾರೆ. ಅಧಿಕ ಚರ್ಚೆಗೆ ಕಾರಣವಾದ ಸರ್ದಾರ್ […]
ದೆಹಲಿಯಲ್ಲಿ ಸ್ಫೋಟ ಹಿನ್ನೆಲೆ ಕೊಡಗಿನಲ್ಲೂ ಕಟ್ಟೆಚ್ಚರ – ವಿವಿಧ ಕಡೆ ಶೋಧ ಕಾರ್ಯ

ಜನವಾಹಿನಿ News ಮಡಿಕೇರಿ : ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟದ ಹಿನ್ನೆಲೆಯಲ್ಲಿ, ಕರ್ನಾಟಕದಾದ್ಯಂತ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ. ರಾಜ್ಯದ ಎಲ್ಲಾ ನಗರಗಳಲ್ಲಿ ತಪಾಸಣೆ, ಗಸ್ತು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಬಿಗಿ ಭದ್ರತೆಯನ್ನು ಹೆಚ್ಚಿಸಲು ಆದೇಶಿಸಲಾಗಿದೆ. ಈ ಹಿನ್ನೆಲೆ ಕೊಡಗಿನ ಜನನಿಬಿಡ ಪ್ರದೇಶಗಳಲ್ಲಿ, ಸರ್ಕಾರಿ ಬಸ್ಸು ನಿಲ್ದಾಣ, ರಾಜಾಸೀಟು ಸೇರಿದಂತೆ ಎಲ್ಲಾ ಪ್ರವಾಸಿ ತಾಣಗಳಲ್ಲಿ ಬಾಂಬ್ ನಿಷ್ಕ್ರಿಯ ದಳ, ಡಾಗ್ ಸ್ಕ್ವಾಡ್ ನಿಂದ ಪರಿಶೀಲನೆ ನಡೆಸಿದ್ದು, ವಿಶೇಷ ನಿಗಾ ವಹಿಸಲಾಗಿದೆ. ಮಡಿಕೇರಿ ಬಸ್ಸು ನಿಲ್ದಾಣದಲ್ಲಿದ್ದ […]
ಪ್ರವಾಸೋದ್ಯಮ/ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಜನವಾಹಿನಿ NEWS ಮಡಿಕೇರಿ : ಪ್ರವಾಸೋದ್ಯಮ ಇಲಾಖೆಯಿಂದ 2024-25 ಹಾಗೂ 2025-26 ನೇ ಸಾಲಿನಲ್ಲಿ ಪ್ರವಾಸೋದ್ಯಮ/ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಪ್ಟ್ ಇನ್ಸ್‍ಟ್ಯೂಟ್(ಎಫ್‍ಸಿಐ), ಮೈಸೂರು ಇನ್ಸ್‍ಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್ (ಐಎಚ್‍ಎಂ) ಬೆಂಗಳೂರು ರವರ ಮೂಲಕ ವಸತಿ ಸಹಿತ ಕಾರ್ಯಕ್ರಮ ಜಾರಿಗೊಳಿಸಲು ಉದ್ದೇಶಿಸಲಾಗಿದೆ. ಕಾರ್ಯಕ್ರಮಗಳ ವಿವರ –ಆಹಾರ ಮತ್ತು ಪಾನೀಯ ಸೇವೆಯ ಉಸ್ತುವಾರಿ, ಕನಿಷ್ಟ […]