ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಕಾನೂನು ಅರಿವು ಮತ್ತು ನೆರವು ಶಿಬಿರ

ಜನವಾಹಿನಿ News ಮಡಿಕೇರಿ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಹಿರಿಯ ನಾಗರಿಕರಿಗಾಗಿ ಕೇಂದ್ರ ಪ್ರಾಯೋಜಿತ ಅಟಲ್ ವಯೋ ಅಭ್ಯುದಯ ಯೋಜನೆಯಡಿ ಕೇಂದ್ರ ಸರ್ಕಾರದ ಸ್ಟೇಟ್ ಆಕ್ಷನ್ ಪ್ಲಾನ್ ಫಾರ್ ಸೀನಿಯರ್ ಸಿಟಿಜನ್ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಸಲುವಾಗಿ ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆ ಇವರ ಸಹಯೋಗದಲ್ಲಿ ಹಿರಿಯ ನಾಗರಿಕರ ಕಾಯ್ದೆ 2007, ಹಿರಿಯ ನಾಗರಿಕರ ಆಸ್ತಿ ಸಂರಕ್ಷಣೆ, ಹಿರಿಯ ನಾಗರಿಕರಿಗೆ ಇರುವ ಸೌಲಭ್ಯಗಳ ಕುರಿತಾಗಿ ಸಾರ್ವಜನಿಕರಿಗೆ […]
ಪಾಲಿಬೆಟ್ಟ: ರಾಷ್ಟ್ರೀಯ ಮಟ್ಟದ ಫುಟ್ಬಾಲ್ ಪಂದ್ಯಾವಳಿ – ರೆಡ್ ಯುನೈಟೆಡ್ ಊಟಿ ತಂಡ ಚಾಂಪಿಯನ್

ಜನವಾಹಿನಿ News ಪಾಲಿಬೆಟ್ಟ : ಯಂಗ್ ಇಂಡಿಯಾ ಯೂತ್ ಕ್ಲಬ್ ನ ಸುವರ್ಣ ಮಹೋತ್ಸವದ ಅಂಗವಾಗಿ ರಾಷ್ಟ ಮಟ್ಟದ ಸೂಪರ್ ಫೈ ಕಾಲ್ಚೆಂಡು ಕ್ರೀಡಾ ಹಬ್ಬಕ್ಕೆ ವರಣರಂಜಿತ ತೆರೆಕಂಡಿದೆ. ಪಾಲಿಬೆಟ್ಟ ಸಾರ್ವಜನಿಕ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆದ ಪಂದ್ಯಾವಳಿಯ ಅಂತಿಮ ಫೈನಲ್ ಪಂದ್ಯಾಟದಲ್ಲಿ ಕ್ಲಾಸಿಕ್ ಸ್ಪೋರ್ಟ್ ಕ್ಲಬ್ ಮತ್ತು ರೆಡ್ ಯುನೈಟೆಡ್ ಊಟಿ ತಂಡದ ನಡುವೆ ನಡೆದ ರೋಮಾಂಚನಕಾರಿ ಪಂದ್ಯಾವಳಿಯಲ್ಲಿ 3-0 ಗೋಲುಗಳಿಂದ ರೆಡ್ ಯುನೈಟೆಡ್ ಊಟಿ ತಂಡ ಗೆಲುವು ಸಾಧಿಸುವ ಮೂಲಕ ಚಾಂಪಿಯನ್ […]
ಅಮ್ಮತ್ತಿ ಒಂಟಿಯಂಗಡಿ ಪ್ರೀಮಿಯರ್ ಲೀಗ್ : AFC ಅಮ್ಮತ್ತಿ ಚಾಂಪಿಯನ್ಸ್

ಜನವಾಹಿನಿ News ಮಡಿಕೇರಿ : ಆರ್.ವಿ.ಎನ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಅಮ್ಮತ್ತಿ ಪ್ರಾಥಮಿಕ ಶಾಲಾ ಮೈದಾನದಲಿ ಆಯೋಜಿಸಲಾಗಿದ್ದ ಅಮ್ಮತ್ತಿ ಒಂಟಿಯಂಗಡಿ ಪ್ರೀಮಿಯರ್ ಲೀಗ್ 2026 ರ ಚಾಂಪಿಯನ್ ಪಟ್ಟವನ್ನು ಎ.ಎಫ್.ಸಿ ತಂಡ ತನ್ನದಾಗಿಸಿಕೊಂಡರೆ. ಸಾಕರ್ ಯುನೈಟೆಡ್ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು. ಬಿಡ್ಡಿಂಗ್ ಮಾದರಿಯಲ್ಲಿ ಆಯೋಜಿಸಲಾಗಿದ್ದ ಈ ಪಂದ್ಯಾವಳಿಯು ಜ.3ರಿಂದ ಅಮ್ಮತ್ತಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಿತು. ಪಂದ್ಯಾಟದಲ್ಲಿ ಸಿವಿ ಯುನೈಟೆಡ್ ಒಂಟಿಯಂಗಡಿ, ಸಿ.ವೈ.ಸಿ ಒಂಟಿಯಂಗಡಿ, ಬಿ.ವೈ.ಸಿ ಇಂಜಲಗೆರೆ, ಎ.ಎಫ್.ಸಿ ಅಮ್ಮತ್ತಿ, 3 ಸ್ಟಾರ್ ಅಮ್ಮತ್ತಿ, […]
ಬೈಕ್ ಮೇಲೆ ಕಾಡುಹಂದಿ ದಾಳಿ : ಸವಾರರಿಗೆ ಗಂಭೀರ ಗಾಯ

ಜನವಾಹಿನಿ News ಸಿದ್ದಾಪುರ : ಕಾಡುಹಂದಿ ದಾಳಿಗೆ ಸಿಲುಕಿ ಬೈಕ್ ಸವಾರಿಬ್ಬರು ಗಂಭೀರ ಗಾಯಗೊಂಡ ಘಟನೆ ನೆಲ್ಯಾಹುದಿಕೇರಿ ಬಳಿಯ ಅತ್ತಿಮಂಗಲ ಬಳಿ ನಡೆದಿದೆ. ಕೂಡ್ಲೂರು ಚೆಟ್ಟಳ್ಳಿ ನಿವಾಸಿಯಾಗಿರುವ ಹರಿಚಂದ್ರ ಮತ್ತು ಹರಿಲಾಲ್ ಎಂಬುವವರೇ ಹಂದಿ ದಾಳಿಗೆ ಸಿಲುಕಿ ಗಾಯಗೊಂಡವರು. ಇವರಿಬ್ಬರು ಅಪ್ಪ ಮಗ ಎಂದು ತಿಳಿದುಬಂದಿದೆ. ನೆನ್ನೆ ರಾತ್ರಿ ಕೂಡ್ಲೂರು ಚೆಟ್ಟಳ್ಳಿಯಿಂದ ಕರಡಿಗೋಡುವಿನಲ್ಲಿರುವ ತಮ್ಮ ಮಗಳ ಮನೆಗೆ ತೆರಳುತ್ತಿರುವ ಸಂದರ್ಭ ನೆಲ್ಯಾಹುದಿಕೇರಿ ವ್ಯಾಪ್ತಿಯ ಅತ್ತಿಮಂಗಲ ಬಳಿ ಘಟನೆ ನಡೆದಿದ್ದು, ಇಬ್ಬರಿಗೂ ತಲೆ, ಬೆನ್ನಿನ ಭಾಗ ಹಾಗೂ ಕೈ ಕಾಲುಗಳಿಗೆ […]
ಮಾರಣಾಂತಿಕ ಹಲ್ಲೆ ಗೋಣಿಕೊಪ್ಪದಲ್ಲಿ ಆಟೋ ಡ್ರೈವರ್ ಸಾವು

ಜನವಾಹಿನಿ News ಗೋಣಿಕೊಪ್ಪ : ದೊಣ್ಣೆಯಿಂದ ಹೊಡೆದು ಆಟೋ ಡ್ರೈವರ್ ಒಬ್ಬರನ್ನು ಕೊಲೆ ಮಾಡಿರುವ ಘಟನೆ ಗೋಣಿಕೊಪ್ಪಲು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಂದು ಬೆಳಗಿನ ಜಾವ ಗೋಣಿಕೊಪ್ಪಲು ಆಸ್ಪತ್ರೆಗೆ ಹಲ್ಲೆಗೆ ಒಳಗಾದವನನ್ನು ಚಿಕಿತ್ಸೆಗೆ ಕರೆದುಕೊಂಡು ಬಂದ ಕೆಲವೇ ಕ್ಷಣಗಳಲ್ಲಿ ಆತ ಮೃತಪಟ್ಟಿದ್ದಾನೆ. ಗೋಣಿಕೊಪ್ಪಲಿನ ಹರಿಶ್ಚಂದ್ರ ಪುರದ ನಿವಾಸಿ ಖಾಸಗಿ ಸಂಸ್ಥೆಯಲ್ಲಿ ಡ್ರೈವರ್ ಹಾಗೂ ಉಳಿದ ಸಮಯದಲ್ಲಿ ಆಟೋ ಡ್ರೈವರ್, ಆಗಿ ಕಾರ್ಯ ನಿರ್ವಹಿಸುತ್ತಿದ್ದ ನವಾಜ್ (39) ಎಂಬುವನೆ ಹತ್ತಿಗಿಡಾಗಿದ್ದಾನೆ. ರಾತ್ರಿ ಹಾತುರೂ ಕುಂದಾ ರಸ್ತೆ ಮಾರ್ಗಕ್ಕೆ ಆಟೋ […]
ಇಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ : ನಾಲ್ಕಕ್ಕೂ ಅಧಿಕ ಅಂಗಡಿಗಳು ಸುಟ್ಟು ಭಸ್ಮ

ಜನವಾಹಿನಿ News ಬಂಟ್ವಾಳ : ವಿಟ್ಲ ಕಲ್ಲಡ್ಕ ರಸ್ತೆಯಲ್ಲಿರುವ ಇಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಭಸ್ಮಗೊಂಡ ಘಟನೆ ಬುಧವಾರ ರಾತ್ರಿ ನಡೆದಿದೆ. ಸಂತೋಷ್ ಎಂಬವರ ಮಾಲಕತ್ವದ ಶ್ರೀ ಇಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಬೆಂಕಿ ಧಗಧಗನೇ ಸಂಪೂರ್ಣ ಅಂಗಡಿಯನ್ನು ಆಹುತಿ ಪಡೆದುಕೊಂಡಿದ್ದು, ಹತ್ತಿರದ ಟೈಲರ್ ಶಾಪ್,ಅಮಿತ್ ಹೋಟೆಲ್, ಗಣೇಶ್ ಡ್ರೈವಿಂಗ್ ಸ್ಕೂಲ್ ಅಂಗಡಿ ಕಟ್ಟಡಗಳೂ ಬೆಂಕಿಗಾಹುತಿಯಾಗಿದೆ. ಶಾರ್ಟ್ ಸರ್ಕ್ಯೂಟ್ ಕಾರಣದಿಂದ ಬೆಂಕಿ ಹತ್ತಿಕೊಂಡಿದೆನ್ನಲಾಗಿದೆ. ಘಟನಾ ಸ್ಥಳದ ಸುತ್ತಮುತ್ತ ಹಲವಾರು […]
ತರಾತುರಿಯಲ್ಲಿ ಕಾಮಗಾರಿ ಸ್ಥಗಿತ : ರಾತ್ರೋ ರಾತ್ರಿ ಸಾಮಗ್ರಿಗಳನ್ನು ಕೊಂಡೊಯ್ದ ಗ್ರಾಮ ಪಂಚಾಯತಿ : ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾದ ಪಂಚಾಯತಿ ನಡೆ..!

ಜನವಾಹಿನಿ News ಸಿದ್ದಾಪುರ : ಇಲ್ಲಿನ ಗುಹ್ಯ ಗ್ರಾಮದ ನೇತಾಜಿ ಬಡಾವಣೆಯಲ್ಲಿ ನೀರಿನ ಸಮಸ್ಯೆ ತಾಂಡವಾಡುತ್ತಿದ್ದು, ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆ ಇಲ್ಲಿಗೆ ಅದಷ್ಟು ಬೇಗ ಕುಡಿಯುವ ನೀರಿನ ಪೂರೈಕೆಗೆ ಕ್ರಮ ಕೈಗೊಂಡು ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿ ಇಲ್ಲಿನ ನಿವಾಸಿಗಳು ಸೋಮವಾರ ಗ್ರಾಮ ಪಂಚಾಯತಿಗೆ ತೆರಳಿ ಮನವಿ ಸಲ್ಲಿಸಿದ್ದು, 15 ದಿನಗಳ ಗಡುವು ನೀಡಿದ್ದಾರೆ. ಇದರ ಬೆನ್ನಲ್ಲೇ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಬಡಾವಣೆಯಲ್ಲಿ ತಂದಿಟ್ಟಿದ್ದ ಮೋಟಾರ್ ಸೇರಿದಂತೆ ಸಾಮಗ್ರಿಗಳನ್ನು ರಾತ್ರೋ ರಾತ್ರಿ ಸ್ಥಳಕ್ಕೆ ಆಗಮಿಸಿದ ಸಿದ್ದಾಪುರ ಗ್ರಾಮ ಪಂಚಾಯಿತಿಯ […]
ಪೆರಾಜೆ : ಶಾಸಕರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಭೂಮಿ ಪೂಜೆ

ಜನವಾಹಿನಿ News ಮಡಿಕೇರಿ : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲೂಕು, ಪೆರಾಜೆ ಗ್ರಾಮಕ್ಕೆ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು ಭೇಟಿ ನೀಡಿದರು. ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ನೂತನ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಮಾನ್ಯ ಶಾಸಕರು, ಸರಕಾರ ವತಿಯಿಂದ ಈಗಾಗಲೇ ತಮ್ಮ ಅವಧಿಯಲ್ಲಿ ಪೆರಾಜೆ ಗ್ರಾಮಕ್ಕೆ ಸುಮಾರು ₹ 19 ಕೋಟಿಗೂ ಅಧಿಕ ಅನುದಾನ ಅಭಿವೃದ್ಧಿ ಕಾಮಗಾರಿಗಾಗಿ ನೀಡಲಾಗಿದೆ ಎಂದು ಹೇಳಿದರು.
ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಪ್ರಯುಕ್ತ ‘ವಿಶ್ವ ಮಾನವ ದಿನಾಚರಣೆ’

ಜನವಾಹಿನಿ News ಮಡಿಕೇರಿ : ಕನ್ನಡ ನಾಡು ಹಾಗೂ ಭಾಷೆಗೆ ಅಪಾರ ಕೊಡುಗೆ ನೀಡಿರುವ ರಾಷ್ಟ್ರಕವಿ ಕುವೆಂಪು ಅವರ ಈಗಿರುವ ಪ್ರತಿಮೆ ಜಾಗದಲ್ಲಿ ಕಂಚಿನ ಪ್ರತಿಮೆ ನಿರ್ಮಾಣ ಮಾಡುವಂತಾಗಬೇಕು ಎಂದು ಜಿ.ಪಂ.ಮಾಜಿ ಅಧ್ಯಕ್ಷರು ಹಾಗೂ ಕುವೆಂಪು ಕುಟುಂಬದ ಸಂಬಂಧಿಕರಾದ ಕೆ.ಪಿ.ಚಂದ್ರಕಲಾ ಅವರು ಕೋರಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ರಾಷ್ಟ್ರಕವಿ ಕುವೆಂಪುರವರ ಜನ್ಮದಿನದ ಪ್ರಯುಕ್ತ ಸೋಮವಾರ ನಡೆದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕನ್ನಡ ಭಾಷೆಯಲ್ಲಿ […]
ವೃದ್ಧ ಮಹಿಳೆ ನಾಪತ್ತೆ : ಕಂಡಲ್ಲಿ ಮಾಹಿತಿ ನೀಡಲು ಮನವಿ

ಜನವಾಹಿನಿ News ಸಿದ್ದಾಪುರ : ಸಿದ್ದಾಪುರ :ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಗೋಡು ಗ್ರಾಮದ ನಿವಾಸಿ ಕಾಂತರಾಜ್ ರವರ ತಾಯಿ ಸಿದ್ದಮ್ಮ (80) ಅವರು ಡಿ. 25ರಂದು ಮನೆ ಮಂದಿಗೆ ತಿಳಿಸದೆ ಹೊರಟು ಹೋಗಿದ್ದಾರೆ ಎನ್ನಲಾಗಿದೆ. ಈ ಕುರಿತು ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಲ್ಲಾದರು ಪತ್ತೆಯಾದರೆ ಸಿದ್ದಾಪುರ ಪೊಲೀಸ್ ಠಾಣೆಗೆ 9480804950 ಅಥವಾ ಕೊಡಗು ಜಿಲ್ಲಾ ಪೊಲೀಸ್ ನಿಯಂತ್ರಣ ಕೊಠಡಿಗೆ 08272-228330, ಮಾಹಿತಿ ನೀಡುವಂತೆ ಕೋರಲಾಗಿದೆ.