Breaking News :

ಪ್ರಜ್ವಲ್ ರೇವಣ್ಣ ವಿಡಿಯೋ ಅಸಲಿ, ತಿರುಚಲಾಗಿಲ್ಲ; ಎಫ್ ಎಸ್ ಎಲ್ ವರದಿಯಲ್ಲಿ ಬಹಿರಂಗ

ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಹಾಗೂ ವಿಡಿಯೋ ಚಿತ್ರೀಕರಣ ಮಾಡಿರುವ ಆರೋಪ ಎದುರಿಸುತ್ತಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಸಂಬಂಧಿಸಿದ ವಿಡಿಯೋಗಳು ಅಸಲಿಯಾಗಿದ್ದು, ವಿಡಿಯೋಗಳನ್ನು ತಿರುಚಿಲ್ಲ ಎಂದು ವಿಧಿ ವಿಜ್ಞಾನ ಪ್ರಯೋಗಾಲಯವು (FSL) ವರದಿ ನೀಡಿದೆ. ಹಾಸನ ಅಶ್ಲೀಲ ವಿಡಿಯೋ ಕೇಸ್‌ಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳು ಹಾಗೂ ಪೆನ್‌ಡ್ರೈವ್‌ಗಳಿಂದ  ಅಶ್ಲೀಲ ವಿಡಿಯೋಗಳನ್ನು ಎಸ್‌ಐಟಿ ತಂಡ ಸಂಗ್ರಹಿಸಿತ್ತು. ಖಚಿತತೆ ಪಡೆದುಕೊಳಲು ಈ ಎಲ್ಲಾ ವಿಡಿಯೋಗಳನ್ನು FSLಗೆ ಕಳುಹಿಸಲಾಗಿತ್ತು. ಪ್ರಯೋಗಾಲದಿಂದ ಈ ವಿಡಿಯೋಗಳ ಬಗ್ಗೆ ಎಸ್‌ಐಟಿ ಅಧಿಕಾರಿಗಳಿಗೆ ವರದಿ ತಲುಪಿಸಿದ್ದು, […]

ಭಾರೀ ಮಳೆ ಹಿನ್ನೆಲೆ; ಆ.2ರಂದು ಉಡುಪಿ ಜಿಲ್ಲಾ- ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಆ.2ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ.  

ಹಾಡಹಗಲೇ ಯುವಕನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ

ಹಾಡಹಗಲೆ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಶೇಷಾದ್ರಿ ಪುರಂ ಪೊಲೀಸ್ ಠಾಣೆ ಬಳಿ ನಡೆದಿದೆ. ಅಜಿತ್ ಕುಮಾರ್‌ (25) ಕೊಲೆಯಾದವನು. ಶೇಷಾದ್ರಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ರಶಿಲ್ಲಾರ್ ಸ್ಟ್ರೀಟ್‌ನಲ್ಲಿ ಅಜಿತ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಹಂತಕರಿಗಾಗಿ ಹುಡುಕಾಟ […]

ಪುನೀತ್ ಕೆರೆಹಳ್ಳಿ, ಪ್ರತಾಪ್ ಸಿಂಹ ವಿರುದ್ಧ ಮತ್ತೆ ಎಫ್ ಐಆರ್

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಇದೀಗ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಸೇರಿದಂತೆ ಮತ್ತಿತರರ ವಿರುದ್ಧ ಇದೀಗ ಬಸವೇಶ್ವರನಗರದಲ್ಲಿ ಎಫ್‌ಐಆರ್ ದಾಖಲಾಗಿದೆ. ಕುರಿ ಮಾಂಸವನ್ನು ನಾಯಿ ಮಾಂಸ ಎಂದು ಆಪಾದಿಸಿ ರಾದ್ದಾಂತ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಬಂಧಿಸಲಾಗಿತ್ತು.  ಬಂಧಿಸಿದ ಕಾರಣಕ್ಕೆ ಪೊಲೀಸ್ ಠಾಣೆ ಮುಂದೆ ಇಂದು ಕಾರ್ಯಕರ್ತರು ಸೇರಿದಂತೆ ಇನ್ನಿತರರು ಅಕ್ರಮವಾಗಿ ಗುಂಪುಗೂಡಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರ […]

ವಯನಾಡು ದುರಂತ ಸ್ಥಳಕ್ಕೆ ರಾಹುಲ್, ಪ್ರಿಯಾಂಕ ಭೇಟಿ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಕೇರಳದ ವಯನಾಡು ಭೂಕುಸಿತದ ದುರಂತ ಪ್ರದೇಶಕ್ಕೆ ಭೇಟಿ ಕೊಟ್ಟಿದ್ದಾರೆ. ಇಂದು ಬೆಳಗ್ಗೆ 9.30ಕ್ಕೆ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಗಾಂಧಿ ಮತ್ತು ವಾದ್ರಾ ನಂತರ ರಸ್ತೆ ಮೂಲಕ ವಯನಾಡಿಗೆ ತೆರಳಿದ್ದಾರೆ. ಈ ಕುರಿತು ಕಾಂಗ್ರೆಸ್ ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ದುರಂತ ಸಂಭವಿಸಿದ ವಯನಾಡಿನ ಮೇಪ್ಪಾಡಿಗೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ತಲುಪಿದ್ದು, ಅಲ್ಲಿ ಸಂತ್ರಸ್ತರನ್ನು ಭೇಟಿಯಾಗಿದ್ದಾರೆ […]

ಶಿರಾಡಿ ಘಾಟ್ ನ ದೊಡ್ಡತಪ್ಲು ಬಳಿ ಭೂಕುಸಿತ

ಶಿರಾಡಿ ಘಾಟ್ ನ ದೊಡ್ಡತಪ್ಲು ಬಳಿ ಮತ್ತೆ ಭೂಕುಸಿತ ಸಂಭವಿಸಿದ್ದು, ಎರಡು ಕಂಟೇನರ್ ಗಳು ಮಣ್ಣಲ್ಲಿ ಮುಳುಗಿದ್ದು, ಟ್ಯಾಂಕರ್‌ನಲ್ಲಿ ಸಿಲುಕಿದ್ದ ಚಾಲಕರನ್ನು ರಕ್ಷಿಸಲಾಗಿದೆ. ಮೂವರು ಚಾಲಕರನ್ನು ರಕ್ಷಿಲಾಗಿದ್ದು, ಸ್ಥಳದಲ್ಲಿ ಮತ್ತಷ್ಟು ಗುಡ್ಡ ಕುಸಿತ ಸಂಭವಿಸುವ ಸಾಧ್ಯತೆ ಇದೆ. ಗುಡ್ಡ ಕುಸಿತದಿಂದ ಮಣ್ಣಿನಡಿ ಸಿಲುಕಿದ ಕಂಟೇನರ್ ರೈಲ್ವೆ ಹಳಿ‌ ಮೇಲೆ ಬೀಳುವ ಆತಂಕ ಎದುರಾಗಿದೆ. ರೈಲ್ವೆ ಹಳಿ‌ ಮೇಲೆ ಹಾದು ಹೋಗಿರುವ ರಸ್ತೆಯ ತುದಿಯಲ್ಲಿ ಕಂಟೇನರ್‌ ಉರುಳಿಬಿದ್ದಿದೆ. ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್‌ನಲ್ಲಿ […]

ಮಂಗಳೂರು; ಭಾರೀ ಮಳೆಗೆ ಬಜಾಲ್ ನಲ್ಲಿ ಮನೆ ಕುಸಿತ

ಮಂಗಳೂರು: ಭಾರೀ ಮಳೆಗೆ ಮನೆಯೊಂದು ಕುಸಿದಿರುವ ಘಟನೆ ಬಜಾಲ್ ಫೈಸಲ್ ನಗರದಲ್ಲಿ ನಡೆದಿದೆ. ಘಟನೆಯ ವೇಳೆ ಮನೆಯಲ್ಲಿದ್ದ ಅಜ್ಜಿ ಮತ್ತು ಮೊಮ್ಮಗಳು ಅಪಾಯದಿಂದ ಪಾರಾಗಿದ್ದಾರೆ. ಯಮುನಾ ಎಂಬವರಿಗೆ ಸೇರಿದ ಮನೆ ಕುಸಿತವಾಗಿದೆ.  ಮನೆ ಕುಸಿಯುವ ವೇಳೆ ಯಮುನಾರ ತಾಯಿ ಮತ್ತು ಮಗಳು ಮನೆಯಲ್ಲಿದ್ದು, ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಸ್ಥಳೀಯ ಕಾರ್ಪೊರೇಟರ್ ಅಶ್ರಫ್ ಬಜಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.      

ವಯನಾಡು ದುರಂತ; ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಂಡ ಖ್ಯಾತ ನಟಿ

ಕೇರಳದ ವಯನಾಡು ಹಿಂದೆಯೆಂದೂ ಕಂಡರಿಯದ ಭೀಕರ ದುರಂತಕ್ಕೆ ಸಾಕ್ಷಿಯಾಗಿದೆ‌. ಹಲವು ಸ್ಟಾರ್ ನಟರು ಪರಿಹಾರ ಕಾರ್ಯಕ್ಕಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಹಣ ನೀಡಿ ಸಹಾಯ ಮಾಡಿದ್ದಾರೆ. ಆದರೆ ಮಲಯಾಳಂ ಸಿನಿಮಾದಲ್ಲಿ ಇತ್ತೀಚೆಗೆ ಜನಪ್ರಿಯವಾಗಿರುವ ನಟಿ ನಿಖಿಲಾ ವಿಮಲ್ ಪರಿಹಾರ ಕಾರ್ಯದಲ್ಲಿ ಕಾರ್ಯಕರ್ತರೊಂದಿಗೆ ಸ್ಚಯಂ  ತೊಡಗಿಸಿಕೊಂಡಿದ್ದಾರೆ. ನಿಖಿಲಾ ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ವಿಡಿಯೋಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಯನಾಡಿನಲ್ಲಿ ದುರಂತಕ್ಕೀಡಾದವರಿಗೆ ಆಹಾರ ಸಾಮಗ್ರಿಗಳನ್ನು ಪೂರೈಸುವುದು, ಅದನ್ನು ಪ್ಯಾಕ್ ಮಾಡುವುದು, ಇತ್ಯಾದಿ ನೆರವು ಕಾರ್ಯ ಮಾಡುವಲ್ಲಿ ನಿಖಿಲಾ […]

ರಾಜ್ಯಪಾಲರಿಂದ ಸಿದ್ದರಾಮಯ್ಯಗೆ ನೊಟೀಸ್ ; ಕೈಪಾಳಯದಲ್ಲಿ ತಳಮಳ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಅನುಮತಿ ಕೋರಿ ವಕೀಲ ಟಿಜೆ ಅಬ್ರಹಾಂ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬೆನ್ನಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ನೋಟಿಸ್‌ ನೀಡಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಅನುಮತಿ ಕೋರಲಾಗಿದೆ. ಆರೋಪಗಳ ಕುರಿತು ವಿವರಣೆ ನೀಡುವಂತೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಸಿದ್ದರಾಮಯ್ಯ ಅವರಿಗೆ ನೋಟಿಸ್‌ ನೀಡಿದ್ದಾರೆ. ಇಂದಿನ ಸಚಿವ […]

ಬೈಕ್ ಗೆ ಲಾರಿ ಢಿಕ್ಕಿಯಾಗಿ ಭೀಕರ ಅಪಘಾತ; ಇಬ್ಬರು ಯುವಕರು ಮೃತ್ಯು

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ  ಸಂಭವಿಸಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಸಂತೇಕಲ್ಲಹಳ್ಳಿ ಬಳಿ ನಡೆದಿದೆ. ಚಿಂತಾಮಣಿ ತಾಲೂಕಿನ ಭುವನ್ (30) ಹಾಗೂ ಭಾನು ಪ್ರಕಾಶ್ (30) ಮೃತ ದುರ್ದೈವಿಗಳು. ಇವರು ಹೊಸಕೋಟೆ ಪಿಲ್ಲಗುಂಪೆ ಫ್ಯಾಕ್ಟರಿಯಲ್ಲಿ ಕೆಲಸ ಮುಗಿಸಿ ವಾಪಸ್‌ ಮನೆಗೆ ಬರುವಾಗ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಡಿವೈಎಸ್‌ಪಿ ಮುರುಳಿಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ‌‌.