ವಯನಾಡು ಭೂಕುಸಿತ: ಮನೆಯೊಳಗಡೆ ಕುರ್ಚಿಗಳ ಮೇಲೆ ಕುಳಿತುಕೊಂಡ, ಮಂಚಗಳ ಮೇಲೆ ಮಲಗಿರುವ ಸ್ಥಿತಿಯಲ್ಲಿ ಕಂಡು ಬಂದ ಮೃತದೇಹಗಳು

ಕೇರಳದ ವಯನಾಡ್ ಜಿಲ್ಲೆಯ ಮುಂಡಕ್ಕೈ ಕುಗ್ರಾಮದಲ್ಲಿ ಭೂಕುಸಿತದಿಂದ ಮೃತರ ಸಂಖ್ಯೆ 276ಕ್ಕೆ ಏರಿಕೆಯಾಗಿದೆ. ಈ ಮಧ್ಯೆ ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಈ ವೇಳೆ ಹಲವು ಹೃದಯ ವಿದ್ರಾಹಕ ದೃಶ್ಯಗಳು ಕಂಡು ಬಂದಿದೆ. ಭೂಕುಸಿತಕ್ಕೆ ನಾಶವಾದ ಮನೆಗಳ ಒಳಗೆ ಕುಳಿತಿರುವ ಮತ್ತು ಮಲಗಿರುವ ಸ್ಥಿತಿಯಲ್ಲಿ ಮೃತದೇಹಗಳ ಭಯಾನಕ ದೃಶ್ಯಗಳು ಕಂಡುಬಂದಿದೆ. ಭೂಕುಸಿತ ಸಂಭವಿಸಿದ ಸ್ಥಳದಲ್ಲಿ ಸೇನೆಯ ಸಿಬ್ಬಂದಿ ಸಂಪೂರ್ಣವಾಗಿ ಮಣ್ಣಿನಲ್ಲಿ ಮುಳುಗಿದ್ದ ಮನೆಯ ಮೇಲ್ಛಾವಣಿಯನ್ನು ಮುರಿದು ಒಳಗೆ ಪ್ರವೇಶಿಸಲು ಹಗ್ಗಗಳನ್ನು ಬಳಸಿ ಅಲ್ಲಿ ಸಿಕ್ಕಿಬಿದ್ದವರ ಶವಗಳನ್ನು […]
ವಯನಾಡು ದುರಂತ; ಪ್ರವಾಹದ ನೀರಿನಲ್ಲಿ ಸಿಲುಕಿದ ಮಗುವನ್ನು ರಕ್ಷಿಸುವಾಗ ಸ್ವಂತ ಮಗುವನ್ನು ಕಳೆದುಕೊಂಡ ಮಹಿಳೆ

ಮೆಪ್ಪಾಡಿ: ಕೇರಳದ ವಯನಾಡು ಮೆಪ್ಪಾಡು ಭೂಕುಸಿತ ಪ್ರದೇಶದಲ್ಲಿ 276ಕ್ಕೂ ಅಧಿಕ ಮಂದಿಯ ಮೃತದೇಹ ಪತ್ತೆಯಾಗಿದೆ. ನೂರಾರು ಮಂದಿ ಇನ್ನು ಕೂಡ ನಾಪತ್ತೆಯಾಗಿದ್ದಾರೆ. ಈ ವೇಳೆ ಹಲವು ಘಟನೆಗಳು ನಡೆದಿದೆ. ಧಾರಾಕಾರ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯಾರದ್ದೋ ಮಗುವನ್ನು ರಕ್ಷಿಸುವ ಪ್ರಯತ್ನದಲ್ಲಿ ಪ್ರಜಿತಾ ಎಂಬ ಮಹಿಳೆ ತನ್ನ ಸ್ವಂತ ಮಗಳನ್ನು ಕಳೆದುಕೊಂಡಿದ್ದಾರೆ. ಪ್ರವಾಹದ ನೀರಿನಲ್ಲಿ ಸಿಲುಕಿದ ಮಗುವನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾಗ ಪ್ರಜಿತಾ ಅವರ 10 ವರ್ಷದ ಮಗಳು ಅಹನ್ಯಾಗೆ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿದ್ದಾಳೆ. ಅಹನ್ಯಾಳನ್ನು ಎಳೆಯಲು ಹೋದ […]
ಪತಿಯ ಹಂತಕರ ಬಿಡುಗಡೆ ಬಗ್ಗೆ ಸದನದಲ್ಲಿ ಕಣ್ಣೀರು ಹಾಕಿದ ಶಾಸಕಿ

ಉತ್ತರಪ್ರದೇಶದಲ್ಲಿ ಜವಾಹರ್ ಯಾದವ್ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಬಿಜೆಪಿಯ ಮಾಜಿ ಶಾಸಕ ಉದಯ್ ಭಾನ್ ಕಾರವಾರಿಯಾ ಬಿಡುಗಡೆ ಬಗ್ಗೆ ಪ್ರತಿಕ್ರಿಯಿಸಿದ ಅವರ ಪತ್ನಿ ಶಾಸಕಿ ವಿಜ್ಮಾ ಯಾದವ್, ಪತಿಯಂತೆ ತಾವೂ ಸಹ ಕೊಲೆಯಾಗಬಹುದು ಎಂಬ ಆತಂಕವನ್ನು ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಕಣ್ಣೀರು ಸುರಿಸುತ್ತಾ ಮಾತನಾಡಿದ ಅವರು, ನನ್ನ ಪತಿ ಶಾಸಕರಾಗಿದ್ದರು. ಅವರೊಂದಿಗೆ ಮೂವರನ್ನು ಹತ್ಯೆ ಮಾಡಲಾಗಿತ್ತು. ಹಗಲು ಹೊತ್ತಿನಲ್ಲಿ ಎಕೆ 47 ಬಂದೂಕು ಬಳಸಿ ಗುಂಡಿಕ್ಕಿದವರನ್ನು ಈಗ ಖುಲಾಸೆಗೊಳಿಸಲಾಗಿದೆ. ನಾಳೆ ನಾನು ಕೂಡ […]
ವಯನಾಡು ದುರಂತ; ಮೃತರ ಸಂಖ್ಯೆ 276ಕ್ಕೆ ಏರಿಕೆ, ಅವಶೇಷಗಳಡಿ ಇನ್ನೂ ಸಿಲುಕಿರುವ ನೂರಾರು ಮಂದಿ

ವಯನಾಡಿನಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಮೃತರ ಮೃತರ ಸಂಖ್ಯೆ 276ಕ್ಕೆ ಏರಿಕೆಯಾಗಿದೆ. ಇನ್ನು ಕೂಡ 200 ಮಂದಿ ನಾಪತ್ತೆಯಾಗಿದ್ದು, 1,592 ಜನರನ್ನು ರಕ್ಷಣೆ ಮಾಡಲಾಗಿದೆ. ಸ್ಥಳದಲ್ಲಿ 1,592 ಜನರನ್ನು ರಕ್ಷಿಸಿ, ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. 8 ಸಾವಿರಕ್ಕೂ ಹೆಚ್ಚು ಜನರನ್ನು ಸಾಂತ್ವನ ಕೇಂದ್ರಕ್ಕೆ ಸ್ಥಾಳಂತರಿಸಲಾಗಿದೆ. 3,332 ಪುರುಷರು ಹಾಗೂ 3398 ಮಂದಿ ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. 82 ನಿರಾಶ್ರಿತರ ಶಿಬಿರವನ್ನು ತೆರೆಯಲಾಗಿದೆ. 8 ಕ್ಯಾಂಪ್ ನ್ನು ಚೋರ್ ಮಂಡಲಾದಲ್ಲಿ ಓಪನ್ ಮಾಡಲಾಗಿದೆ. ಈವರೆಗೆ 1884 ಮಕ್ಕಳನ್ನು ರಕ್ಷಿಸಲಾಗಿದ್ದು, […]
ದೆಹಲಿಯಲ್ಲಿ ಹವಾಂತರ ಸೃಷ್ಟಿಸಿದ ಮಳೆ; ಜನಜೀವನ ಹಸ್ತವ್ಯಸ್ತ, ಸಾವು ನೋವು ವರದಿ

ರಾಷ್ಟ್ರ ರಾಜಧಾನಿಯಲ್ಲಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಳಿಸಿದೆ. ಮಳೆ ಸಂಬಂಧಿತ ಅವಘಡದಲ್ಲಿ ದೆಹಲಿಯಲ್ಲಿ ಈಗಾಗಲೇ ಇಬ್ಬರು ಮೃತಪಟ್ಟಿದ್ದಾರೆ. ದೆಹಲಿ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ 24 ಗಂಟೆಗಳಲ್ಲಿ ವ್ಯಾಪಕ ಮಳೆ ನಿರೀಕ್ಷಿಸಲಾಗಿದೆ. ಆಗಸ್ಟ್ 5ರವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ದೆಹಲಿಯ ರಸ್ತೆಗಳಲ್ಲಿ ನೀರು ನಿಂತಿದ್ದು, ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ದುಬೈನಿಂದ ಆಗಮಿಸಬೇಕಾದ ಎಐ918, ಪುಣೆಯಿಂದ ಆಗಮಿಸುವ ಯುಕೆ 998 ಸೇರಿ ಹಲವು ವಿಮಾನಗಳ ಸಂಚಾರದಲ್ಲಿ ಬದಲಾವಣೆ […]
ಭಾರೀ ಮಳೆ ಹಿನ್ನೆಲೆ; ಆ.1ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯಲ್ಲಿ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶವನ್ನು ನೀಡಿದ್ದಾರೆ.
ಎಸಿಪಿ ಚಂದನ್ ಗೆ ಧಮ್ಕಿ ಹಾಕಿದ ಸಂಸದ ಪ್ರತಾಪ್ ಸಿಂಹ

ಬೆಂಗಳೂರಿನಲ್ಲಿ ಮಾಂಸಕ್ಕೆ ಸಂಬಂಧಿಸಿ ವಿವಾದ ಸೃಷ್ಟಿಸಿದ್ದ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದ ಪೊಲೀಸ್ ಅಧಿಕಾರಿಗೆ ಮಾಜಿ ಸಂಸದ ಪ್ರತಾಪ್ ಸಿಂಹ ಧಮ್ಕಿ ಹಾಕಿದ್ದು, ಇದಕ್ಕೆ ಸಾಮಾಜಿಕ ಜಾಲತಾಣ ಬಳಕೆದಾರರು ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಪುನೀತ್ ಕೆರೆಹಳ್ಳಿಗೆ ಲಾಕಪ್ ನಲ್ಲಿ ಬಟ್ಟೆ ಬಿಚ್ಚಿ ಕೂರಿಸುವ ಮೂಲಕ ಅವರನ್ನು ಅಪಮಾನಿಸಿದ್ದಾರೆಂದು ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪಿಸಿ ACP ಚಂದನ್ ಅವರಿಗೆ ಠಾಣೆಗೆ ಬರ್ತಿನಿ ನೀವು ಇರಬೇಕು ಎಂದು ಧಮ್ಕಿ ಹಾಕಿದ್ದಾರೆ. ಬೆಂಗಳೂರಿನ ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಜೈಪುರದಿಂದ ರೈಲೊಂದರಲ್ಲಿ […]
ಉಡುಪಿ; ಖಾಸಗಿ ಬಸ್ ಗಳೆರಡರ ನಡುವೆ ಅಪಘಾತ; ಹಲವರಿಗೆ ಗಾಯ

ಉಡುಪಿ: ಖಾಸಗಿ ಬಸ್‌ಗಳೆರಡರ ನಡುವೆ ಅಪಘಾತ ಸಂಭವಿಸಿ ಹಲವು ಮಂದಿ ಗಾಯಗೊಂಡ ಘಟನೆ ಮುಂಜಾನೆ ಇಂದ್ರಾಳಿಯಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ದುರ್ಗಾಂಬಾ ಬಸ್, ಅಂಬಾಜಿ ಬಸ್‌ನ ಹಿಂಬದಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ದುರ್ಗಾಂಬ ಬಸ್‌ನ ಚಾಲಕ ಮತ್ತು ಹಲವಾರು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಸೀದಿಯೊಳಗೆ ಬಿಯರ್ ಬಾಟಲಿ ಎಸೆತ: ಪ್ರತಿಭಟನೆ

ರಾಯಚೂರು; ಮಸೀದಿಯೊಳಗೆ ಮದ್ಯದ ಬಾಟಲಿ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ ಕೆಲ ಆಗಂತುಕರು ಮದ್ಯ ಕುಡಿದು ಬಿಯರ್ ಬಾಟಲಿಯನ್ನು ಮಸೀದಿ ಒಳಗಡೆ ಎಸೆದಿದ್ದರು. ವಿಷಯ ತಿಳಿದು ಸ್ಥಳೀಯರು ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ತಡರಾತ್ರಿ ಮುಖ್ಯರಸ್ತೆ ತಡೆದು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ರಾತ್ರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ, ಎಎಸ್ಪಿ ಶಿವಕುಮಾರ, ಡಿವೈಎಸ್ಪಿ ಬಿಎಸ್ ತಳವಾರ, ಸಿಪಿಐ ಶಶಿಕಾಂತ, ಪಿಎಸ್‌ಐ ಗುರುಚಂದ್ರ […]
ವಯನಾಡು ಭೂಕುಸಿತಕ್ಕೆ ಮೃತರ ಸಂಖ್ಯೆ 143ಕ್ಕೆ ಏರಿಕೆ: ಸಂಪರ್ಕಕ್ಕೆ ಸಿಗದ ಚಾಮರಾಜನಗರದ ಎರಡು ಕುಟುಂಬದ ಸದಸ್ಯರು

ಚಾಮರಾಜನಗರ: ಕೇರಳದ ವಯನಾಡು ಜಿಲ್ಲೆಯ ಗುಡ್ಡೆ ಕುಸಿತದ ಸ್ಥಳದಿಂದ ಈಗಾಗಲೇ 143 ಮೃತದೇಹಗಳನ್ನು ಪತ್ತೆ ಹಚ್ಚಲಾಗಿದೆ. ಹಲವರು ಇನ್ನು ಕೂಡ ನಾಪತ್ತೆಯಾಗಿದ್ದಾರೆ. ಗುಡ್ಡ ಕುಸಿದ ಪರಿಣಾಮ ಭಾರೀ ಸಾವು-ನೋವು ಸಂಭವಿಸಿದೆ. ಈ ದುರಂತದಲ್ಲಿ ಚಾಮರಾಜನಗರದ ದಂಪತಿ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ 3-4 ವರ್ಷಗಳಿಂದ ಚೂರಲ್ಮಲನಲ್ಲಿ ಕೆಲಸ ಮಾಡಿಕೊಂಡಿದ್ದ ಚಾಮರಾಜನಗರದ ಸೋಮವಾರಪೇಟೆಯ ದಂಪತಿ ರತ್ನಮ್ಮ ಹಾಗೂ ರಾಜೇಂದ್ರ ನಾಪತ್ತೆಯಾಗಿದ್ದಾರೆ. ದುರಂತದ ಬಳಿಕ ಚಾಮರಾಜನಗರದಲ್ಲಿರುವ ಕುಟುಂಬಸ್ಥರು, ರತ್ನಮ್ಮ ಹಾಗೂ ರಾಜೇಂದ್ರ ದಂಪತಿಗೆ ಕರೆ ಮಾಡಿದ್ದಾರೆ. ಆದರೆ ದಂಪತಿ […]