ಮೈಸೂರಿನ ವಿಜಯಶಂಕರ್ ಸೇರಿ 6 ಮಂದಿಯನ್ನು ನೂತನ ರಾಜ್ಯಪಾಲರಾಗಿ ನೇಮಿಸಿದ ರಾಷ್ಟ್ರಪತಿ: ರಾಜ್ಯಪಾಲ ಹುದ್ದೆಗೇರಿದ ವಿಜಯಶಂಕರ್ ಹಿನ್ನೆಲೆ ಏನು?

ರಾಷ್ಟ್ರಪತಿ ದ್ರೌಪದಿ ಮುರ್ಮು 6 ಮಂದಿ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ಆದೇಶವನ್ನು ಹೊರಡಿಸಿದ್ದಾರೆ. 6 ಮಂದಿ ನೂತನ ರಾಜ್ಯಪಾಲರಲ್ಲಿ ಕರ್ನಾಟಕದ ಮಾಜಿ ಸಂಸದ, ಮಾಜಿ ಸಚಿವ, ಸಿ.ಎಚ್.ವಿಜಯ್ ಶಂಕರ್ ಅವರನ್ನು ಮೇಘಾಲಯಕ್ಕೆ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ ತೆಲಂಗಾಣ ಹಾಗೂ ಜಾರ್ಖಂಡ್‌ನ ಹಾಲಿ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರನ್ನು ಮಹಾರಾಷ್ಟ್ರಕ್ಕೆ ನೇಮಿಸಲಾಗಿದೆ. ಹರಿಬಾವ್ ಕಿಶನ್ ಬಾವ್ ಬಾಗಡೆ ಅವರನ್ನು ರಾಜಸ್ಥಾನಕ್ಕೆ, ಸಂತೋಷ್ ಕುಮಾರ್ ಗಂಗ್ವಾರ್ ಅವರನ್ನು ಜಾರ್ಖಂಡ್‌ಗೆ ನೇಮಿಸಲಾಗಿದೆ. ರಾಮನ್ ಡೇಕಾ ಅವರನ್ನು ಛತ್ತೀಸ್‌ಗಢ ರಾಜ್ಯಪಾಲರಾಗಿ, ಜಿಷ್ಣು ದೇವ್ […]
ತೆರಿಗೆ ವಿಚಾರದಲ್ಲಿ ಮುಸ್ಲಿಮರ ವಿರುದ್ಧ ಅವಹೇಳನಾಕಾರಿ ಪೋಸ್ಟ್: ಇಬ್ಬರ ಬಂಧನ

ಕೋಲಾರ: ತೆರಿಗೆ ಕಟ್ಟುವ ವಿಚಾರದಲ್ಲಿ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದಲ್ಲಿ ಬಿಜೆಪಿ ಮುಖಂಡ ಸೇರಿದಂತೆ ಇಬ್ಬರನ್ನು ಜಿಲ್ಲೆಯ ಕೆಜಿಎಫ್ನ ರಾಬರ್ಟ್ಸನ್ ಪೇಟೆ ಪೊಲೀಸರು ಬಂಧಿಸಿದ್ದಾರೆ. ನವೀನ್ ಜೈನ್, ಚೇತನ್ ಬಂಧಿತರು. ಇವರು ತೆರಿಗೆ ಕಟ್ಟುವ ವಿಚಾರದಲ್ಲಿ ಮುಸ್ಲಿಂ ಸಮಾಜವನ್ನು ಟೀಕಿಸಿ ಕಾರ್ಟೂನ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದರು. ಇದರಿಂದ ಸಿಟ್ಟಿಗೆದ್ದ ಮುಸ್ಲಿಂ ಸಮುದಾಯದ ಜನರು ರಾತ್ರಿ ರಾಬರ್ಟಸನ್‌ಪೇಟೆ ಪೊಲೀಸ್ ಠಾಣೆ ಮುಂದೆ ಜಮಾಯಿಸಿದರು. ಆರೋಪಿಗಳನ್ನು ಬಂಧಿಸಿ, ಅವರಿಂದ ಕ್ಷಮೆ ಕೇಳಿಸಬೇಕೆಂದು ಒತ್ತಾಯಿಸಿದ್ದರು. ಸ್ಥಳಕ್ಕೆ […]
ಬೆಳ್ತಂಗಡಿ; ಬೈಕ್ ಗೆ ಬೊಲೆರೋ ಢಿಕ್ಕಿ; ಬಾಲಕಿ ಮೃತ್ಯು

ಬೆಳ್ತಂಗಡಿ: ಬೊಲೆರೊ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 13 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಬಳಿ ನಡೆದಿದೆ. ಕಲ್ಮಂಜ ಗ್ರಾಮದ ಕುಡೆಂಚಿ ಗುರುಪ್ರಸಾದ್ ಗೋಖಲೆ ಹಾಗೂ ಗಾನವಿ ಪುತ್ರಿಯಾದ ಅನರ್ಘ್ಯ ಮೃತ ಬಾಲಕಿ. ಅನರ್ಘ್ಯ ಉಜಿರೆ ಎಸ್‌ಡಿಎಂ ಶಾಲೆಯಲ ಆರನೇ ತರಗತಿಯಲ್ಲಿ ಓದುತ್ತಿದ್ದರು. ಇಂದು ಬೈಕ್ನಲ್ಲಿ ತೆರಳುತ್ತಿದ್ದಾಗ ಡಿಕ್ಕಿ ಹೊಡೆದ ಬೊಲೆರೊ 30 ಮೀಟರ್ ಎಳೆದುಕೊಂಡು ಹೋಗಿದೆ. ಪರಿಣಾಮ ಸ್ಥಳದಲ್ಲೇ ಅನರ್ಘ್ಯ ಕೊನೆಯುಸಿರೆಳೆದಿದ್ದಾಳೆ. ಅಪಘಾತ ಬಳಿಕ ವಾಹನದ ಸಮೇತ ಪರಾರಿಯಾಗುತ್ತಿದ್ದವನನ್ನು […]
ನನ್ನ ತಂದೆಯ ಮೂಳೆಯನ್ನಾದರೂ ಹುಡುಕಿ ಕೊಡಿ: ಅಂಕೋಲಾ ಗುಡ್ಡೆ ಕುಸಿತದ ವೇಳೆ ನಾಪತ್ತೆಯಾದ ಜಗನ್ನಾಥ್ ಪುತ್ರಿಯ ಅಳಲು

ಅಂಕೋಲಾ ಗುಡ್ಡೆ ಕುಸಿತ ಸ್ಥಳದಲ್ಲಿ ಕೇರಳದ ಅರ್ಜುನ್ ಗೆ ಮಾತ್ರವಲ್ಲದೆ ಜಗನ್ನಾಥ್ ಹಾಗೂ ಲೋಕೇಶ್ ಎಂಬುವವರಿಗೆ ಕೂಡ ಹುಡುಕಾಟ ನಡೆಯುತ್ತಿದೆ. ಜುಲೈ 16ರಂದು ನಡೆದ ಗುಡ್ಡ ಕುಸಿತದಲ್ಲಿ ಜಗನ್ನಾಥ್ ಎಂಬುವವರು ಕಾಣೆಯಾಗಿದ್ದು, ಇಲ್ಲಿಯವರೆಗೂ ಅವರ ಸುಳಿವು ಕೂಡ ಸಿಕ್ಕಿಲ್ಲ. ಇದೀಗ ಅವರ ಮಗಳು ಪಲ್ಲವಿ ತಂದೆಯನ್ನು ಹುಡುಕಿಕೊಡುವಂತೆ ಮನವಿ ಮಾಡಿದ್ದಾರೆ. ತಂದೆ ಸಿಗದ ಹಿನ್ನೆಲೆ ಕಣ್ಣೀರಾಕಿರುವ ಪಲ್ಲವಿ, ನಮ್ಮ ತಂದೆ ಕಾಣೆಯಾಗಿ 12 ದಿನ ಆಯ್ತು. ಏನು ಸುದ್ದಿ ಇಲ್ಲ. ಅವರನ್ನು ಹುಡುಕಿಕೊಡಿ. ಅವರನ್ನು ನಾವೂ ನೋಡಬೇಕು. […]
ಮಮತಾ ಮಾತನಾಡುವಾಗ ಮೈಕ್ ಆಫ್; ನೀತಿ ಆಯೋಗದ ಸಭೆಯಿಂದ ಅರ್ಧದಿಂದ ಹೊರನಡೆದ ಬಂಗಾಳ ಸಿಎಂ

ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಆಯೋಜನೆಗೊಂಡಿದ್ದ ನೀತಿ ಆಯೋಗದ 9ನೇ ಆಡಳಿತಾತ್ಮಕ ಮಂಡಳಿ ಸಭೆಯಿಂದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅರ್ಧದಿಂದ ವಾಪಾಸ್ಸಾಗಿದ್ದಾರೆ. ನನಗೂ ಮೊದಲು ಮಾತನಾಡಿದ ಸಿಎಂಗಳಿಗೆ 20 ನಿಮಿಷಕ್ಕೆ ಸಮಯ ನೀಡಲಾಗಿತ್ತು. ನನಗೆ ಕೇವಲ ಐದು ನಿಮಿಷ ನೀಡಲಾಯಿತು. ನೆರವು ನಿರಾಕರಿಸಿದ ವಿಷಯ ಪ್ರಸ್ತಾಪಿಸಿದ್ದಂತೆ ಮೈಕ್ ಮ್ಯೂಟ್ ಮಾಡಲಾಗಿತ್ತು ಎಂದು ಮಮತಾ ಆರೋಪಿಸಿದ್ದಾರೆ. ರಾಷ್ಟ್ರಪತಿ ಭವನದ ಸಾಂಸ್ಕೃತಿನ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ ಸಭೆ ನಡೆಯುತ್ತಿದ್ದು ಸಭೆಯಲ್ಲಿ […]
ಕುರಿ ಮಾಂಸವನ್ನು ನಾಯಿ ಮಾಂಸ ಎಂದು ರಾದ್ದಾಂತ: ಪುನೀತ್ ಕೆರೆಹಳ್ಳಿ ವಿರುದ್ಧ ಮೂರು ಎಫ್ಐಆರ್

ಕುರಿ ಮಾಂಸದ ಸಾಗಾಟದ ವೇಳೆ ನಾಯಿ ಮಾಂಸ ಸಾಗಾಟ ಎಂದು ಆರೋಪಿಸಿ ರಾದ್ದಾಂತ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ ಹಾಗೂ ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ, ಇದೀಗ ಪ್ರಕರಣಕ್ಕೆ ಸಂಬಂದಿಸಿ ಮೂರನೇ ಎಫ್ ಐ ಆರ್ ದಾಖಲಾಗಿದೆ. ಅಕ್ರಮವಾಗಿ ಮಾಂಸ ಮಾರಾಟದ ಬಗ್ಗೆ ಮೆಜೆಸ್ಟಿಕ್ ರೈಲು ನಿಲ್ದಾಣ ಬಳಿ ಪ್ರತಿಭಟನೆ ನಡೆಸಿ ಗಲಾಟೆ ಮಾಡುತ್ತಿದ್ದ ಆರೋಪದಲ್ಲಿ ಪುನೀತ್ ಕೆರೆಹಳ್ಳಿ ಹಾಗೂ ಸಹಚರರನ್ನು ಬಂಧಿಸಲಾಗಿತ್ತು. ಗುಂಪುಗೂಡಿ ಗಲಾಟೆ, ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ ಸೇರಿ ಪುನೀತ್ […]
ಅಂಕೋಲಾ ಭೂಕುಸಿತಕ್ಕೆ ಕಾರಣಗಳೇನು? ಸಮೀಕ್ಷೆ ಏನು ಹೇಳುತ್ತಿದೆ?

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ಭೂ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಈ ಮಧ್ಯೆ ರಾಷ್ಟ್ರೀಯ ಹೆದ್ದಾರಿ 66ರ ಬಳಿ ಗುಡ್ಡ ಕುಸಿತ ಸಂಭವಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ (ಜಿಎಸ್ ಐ) ಸರ್ಕಾರಕ್ಕೆ ಪ್ರಾಥಮಿಕ ವರದಿ ಸಲ್ಲಿಸಿದ್ದು, ಕಾಮಗಾರಿಗಳ ವಿಧಾನಗಳ ಬಗ್ಗೆ ಹಲವು ಪ್ರಶ್ನೆಗಳನ್ನು ಮುಂದಿಟ್ಟಿದೆ. ಇದಲ್ಲದೆ ಹೆಚ್ಚಿನ ಹಾನಿ ತಡೆಗಟ್ಟಲು ತಕ್ಷಣದ ಹಾಗೂ ದೀರ್ಘಕಾಲೀನ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಕಾಮಗಾರಿಯಿಂದಾಗಿ ನೈಸರ್ಗಿಕ ಒಳಚರಂಡಿ ಹರಿವಿಗೆ ತೊಂದರೆಯಾಗಿದೆ […]
ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಿಯತಮೆಯನ್ನು ಆಸ್ಪತ್ರೆಗೆ ಸೇರಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡ ಯುವಕ

ಪ್ರಿಯತಮೆ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಮನನೊಂದು ಪ್ರಿಯಕರ ಕೂಡಾ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ. ಮಂಡಕಳ್ಳಿ ಗ್ರಾಮದ ಮೋನಿಕಾ(20) ಮೈಸೂರಿನ ಜ್ಯೋತಿನಗರದ ಮನು(22) ಆತ್ಮಹತ್ಯೆ ಮಾಡಿಕೊಂಡವರು. ಸಂಬಂಧಿಗಳಾದ್ದ ಇವರಿಬ್ಬರೂ ಕಳೆದ 2 ವರ್ಷಗಳಿಂದ ಪ್ರೀತಿಸುತ್ತಿದ್ದರು. ಮನೆಯವರು ಇಬ್ಬರಿಗೂ ಮದುವೆ ಮಾಡಲು ತೀರ್ಮಾನಿಸಿದ್ದರು. ಆದರೆ ಇತ್ತೀಚೆಗೆ ಇವರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಭಿನ್ನಾಭಿಪ್ರಾಯ ಉಂಟಾಗಿ ಗಲಾಟೆ ನಡೆದಿದೆ. ಇದರಿಂದ ಮೋನಿಕಾ ಮೊದಲು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಿಯತಮೆ ಆತ್ಮಹತ್ಯೆ ವಿಷಯ ತಿಳಿದ ಮನು ಸ್ಥಳಕ್ಕೆ ಧಾವಿಸಿ ಮೋನಿಕಾಳನ್ನು […]
ಮೊಬೈಲ್ ಜಾರ್ಜ್ ಇಡುವಾಗ ವಿದ್ಯುತ್ ಸ್ಪರ್ಶಿಸಿ ಬಾಲಕಿ ಮೃತ್ಯು

ತೆಲಂಗಾಣ: ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ 4ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯ ಚಿಂತಕಣಿಲ್ಲಿ ನಡೆದಿದೆ. ಖಮ್ಮಂ ಜಿಲ್ಲೆಯ ಚಿಂತಕಣಿ ಮಂಡಲದ ಮಟ್ಕೆಪಲ್ಲಿ ನಾಮವರಂ ಗ್ರಾಮದ ಕಟಿಕಳ ರಾಮಕೃಷ್ಣ ದಂಪತಿಯ ಮಗಳು ಅಂಜಲಿ ಕಾರ್ತಿಕಾ (9) ಮೃತ ಬಾಲಕಿ. ಅಂಜಲಿ ತನ್ನ ತಂದೆಯ ಮೊಬೈಲ್ ಚಾರ್ಜ್ ಮಾಡುವಾಗ ವಿದ್ಯುತ್ ಸ್ಪರ್ಶದಿಂದ ಕುಸಿದು ಬಿದ್ದಿದ್ದಾಳೆ. ತಕ್ಷಣ ಬಾಲಕಿಯನ್ನು ಆಕೆಯ ಪೋಷಕರು ವೈದ್ಯರ ಬಳಿ ಕರೆದೊಯ್ದಿದ್ದಾರೆ. ಆದರೆ ಬಾಲಕಿ ಅದಾಗಲೇ ಮೃತಪಟ್ಟಿರುವುದಾಗಿ […]
ಯುವಕನೋರ್ವನ ಮೃತದೇಹ ಸಂಶಯಾಸ್ಪದವಾಗಿ ಪತ್ತೆ

-ನಿಝಾಮುದ್ದೀನ್ ಶರೀಫ್ ಮೃತ ಯುವಕನೋರ್ವನ ಮೃತದೇಹ ಪತ್ತೆಯಾದ ಘಟನೆ ಚಿತ್ತಾಪುರ ಪಟ್ಟಣದ ಹೊರ ವಲಯದ ದಿಗ್ಗಾಂವ ಸಂಪರ್ಕಿಸುವ ರಸ್ತೆ ಬಳಿ ನಡೆದಿದೆ. ಪಟ್ಟಣದ ನಾಸರಜಂಗ್ ಬಡಾವಣೆಯ ನಿಝಾಮುದ್ದಿನ್ ಶರೀಫ್ (22) ಕೊಲೆಯಾದ ಯುವಕ. ಶರೀಫ್ ಓರಿಯಂಟ್ ಸಿಮೆಂಟ್ ಕಂಪನಿಯಲ್ಲಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದ. ಜು. 25ರ ಗುರುವಾರ ಮಧ್ಯಾಹ್ನ 2 ಗಂಟೆಗೆ ಮನೆಯಿಂದ ಹೋದವನು ರಾತ್ರಿ 9 ಗಂಟೆಯಾದರೂ ಮರಳಿ ಬಾರದಿದ್ದಾಗ ಕುಟುಂಬದವರು ಹುಡುಕಾಟ ನಡೆಸಿದ್ದರು. ಆದರೆ ರಾತ್ರಿ 11 ಗಂಟೆಗೆ ಕೆಸಿಎಲ್ ಕಂಪನಿ ಬಳಿಯ ಕಾಲೊನಿಯೊಂದರ […]