ಕನ್ವರ್ ಯಾತ್ರಿಗಳು ಸಾಗುವ ದಾರಿಯಲ್ಲಿದ್ದ ಮಸೀದಿಗಳನ್ನು ಬಿಳಿ ಪರದೆ ಮೂಲಕ ಮುಚ್ಚಿದ ಅಧಿಕಾರಿಗಳು: ಹಿಂದೆ ಎಂದೂ ಈ ರೀತಿ ನಡೆದಿರಲಿಲ್ಲ ಎಂದ ಮಸೀದಿ ಆಡಳಿತ

ಕನ್ವರ್ ಯಾತ್ರಿಗಳು ಸಾಗುವ ದಾರಿಯಲ್ಲಿರುವ ಮಸೀದಿಗಳು, ದರ್ಗಾಗಳು ಕಾಣದಂತೆ ಬಿಳಿ ಪರದೆ ಮುಚ್ಚಿರುವ ಘಟನೆ ಉತ್ತರಾಖಂಡದ ಹರಿದ್ವಾರದಲ್ಲಿ ನಡೆದಿದೆ. ಕನ್ವರ್ ಯಾತ್ರೆಯ ಮಾರ್ಗದಲ್ಲಿ ಹರಿದ್ವಾರದಲ್ಲಿ ಎರಡು ಮಸೀದಿಗಳು ಮತ್ತು ಮಜಾರ್ ಗೆ ಶುಕ್ರವಾರ ಬೆಳಿಗ್ಗೆ ದೊಡ್ಡ ಬಿಳಿ ಪರದೆಗಳನ್ನು ಬಳಸಿ ಮರೆಮಾಡಲಾಗಿದೆ. ಸಂಜೆಯ ವೇಳೆಗೆ ಜಿಲ್ಲಾಡಳಿತ ಪರದೆಗಳನ್ನು ತೆಗೆದಿದ್ದಾರೆ. ಪರದೆ ಹಾಕಲು ನಾವು ಯಾವುದೇ ಆದೇಶವನ್ನು ನೀಡಿಲ್ಲ ಎಂದು ಜಿಲ್ಲಾ ಆಡಳಿತವು ಹೇಳಿಕೊಂಡರೆ, ಹರಿದ್ವಾರ ಜಿಲ್ಲಾ ಉಸ್ತುವಾರಿ ಸಚಿವ ಸತ್ಪಾಲ್ ಮಹಾರಾಜ್ ಯಾವುದೇ ಗಲಾಟೆ ಅಥವಾ ಅಶಾಂತಿಯನ್ನು […]
ರೈಲಿನಲ್ಲಿ ರೀಲ್ಸ್ ಮಾಡುವವನನ್ನು ಹುಡುಕುತ್ತಾ ಹೋದಾಗ ಪೊಲೀಸರಿಗೆ ಕಾದಿತ್ತು ಶಾಕ್; ಎಡ ಕೈ ಕಾಲು ಕಳೆದುಕೊಂಡು ಹಾಸಿಗೆ ಪಾಲಾಗಿದ್ದ ಪರ್ಹಾತ್

ರೀಲ್ಸ್ ವಿಡಿಯೊಗಾಗಿ ಚಲಿಸುವ ರೈಲಿನಲ್ಲಿ ಸಾಹಸ ಮಾಡಲು ಹೋಗಿ ಯುವಕನೊಬ್ಬ ತನ್ನ ಎಡಗಾಲು ಹಾಗೂ ಎಡಗೈಯನ್ನು ಕಳೆದುಕೊಂಡಿದ್ದಾನೆ. ಫರ್ಹಾತ್ ಎನ್ನುವ ಮುಂಬೈನ ಯುವಕ ರೀಲ್ಸ್ ಹುಚ್ಚು ಬೆಳೆಸಿಕೊಂಡಿದ್ದ. ಇದಕ್ಕಾಗಿ ಆತ ಚಲಿಸುವ ರೈಲಿನಲ್ಲಿ ಸಾಹಸ ಮಾಡುತ್ತಿದ್ದ. ಆ ವಿಡಿಯೊಗಳನ್ನು ಇನ್‌ಸ್ಟಾಗ್ರಾಂ, ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳುತ್ತಿದ್ದ. ಈ ವಿಷಯ ಮುಂಬೈನ ಸೆಂಟ್ರಲ್ ರೈಲ್ವೆ ಆರ್‌ಪಿಎಫ್ ಪೊಲೀಸ್ ಅಧಿಕಾರಿಗಳ ಗಮನಕ್ಕೆ ಬಂದು ವಿಡಿಯೊದಲ್ಲಿರುವವನನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲು ಹೋದಾಗ ಅಚ್ಚರಿ ಕಾದಿತ್ತು. ಫರ್ಹಾತ್ ಚಲಿಸುವ ರೈಲಿನಲ್ಲಿ ರೀಲ್ಸ್ ಮಾಡಲು ಹೋಗಿ […]
ಖ್ಯಾತ ನ್ಯೂಸ್ ಆಂಕರ್ ಬ್ಲಡ್ ಕ್ಯಾನ್ಸರ್ ಗೆ ಬಲಿ

ಖ್ಯಾತ ತಮಿಳು ನ್ಯೂಸ್ ಆಂಕರ್ ಬ್ಲಡ್ ಕ್ಯಾನ್ಸರ್ ನಿಂದಾಗಿ ಸಾವನ್ನಪ್ಪಿದ್ದಾರೆ. ತಮಿಳಿನ ಖಾಸಗಿ ದೂರದರ್ಶನದಲ್ಲಿ ಸುದ್ದಿ ವಾಚಕಿಯಾಗಿ ಕೆಲಸ ಮಾಡುತ್ತಿದ್ದ ಸೌಂದರ್ಯ ಅಮುದಮೊಳಿ ಮೃತರು. ಅವರು ಬ್ಲಡ್ ಕ್ಯಾನ್ಸರ್ ನಿಂದ ಕಳೆದ ಒಂದು ವರ್ಷದಿಂದ ಬಳಲುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇವರು ಜನಪ್ರಿಯ ಟಿವಿ ಚಾನೆಲ್‌ಗಳಾದ ಸತ್ಯಂ, ಪಾಲಿಮರ್ ಮತ್ತು ನ್ಯೂಸ್ ತಮಿಳಿನಲ್ಲಿ ಕೆಲಸ ಮಾಡಿದ್ದಾರೆ. ಕಳೆದ ವರ್ಷ ಸೌಂದರ್ಯ ಅವರ ಆರೋಗ್ಯ ಹದಗೆಟ್ಟಿತ್ತು. ವೈದ್ಯರ ಸಲಹೆಯಂತೆ ಕ್ಯಾನ್ಸರ್ ತಪಾಸಣೆಗೆ ಒಳಗಾಗಿದ್ದರು. ಈ ವೇಳೆ ಅವರಿಗೆ […]
ಕೇರಳದಲ್ಲಿ ಭೀಕರ ದುರಂತ; ಕಾರಿನೊಳಗಡೆ ಸುಟ್ಟು ಕರಕಲಾದ ದಂಪತಿ

ಕೇರಳದಲ್ಲಿ ಭೀಕರ ದುರಂತವೊಂದರಲ್ಲಿ ಕಾರಿಗೆ ಬೆಂಕಿ ತಗುಲಿ ಕಾರಿನಲ್ಲಿದ್ದ ವೃದ್ಧ ದಂಪತಿಗಳು ಸುಟ್ಟು ಕರಕಲಾಗಿದ್ದಾರೆ. ಪತ್ತನಂತಿಟ್ಟ ಜಿಲ್ಲೆಯ ತಿರುವಲ್ಲಾದ ವೆಂಗಲ್‌ನಲ್ಲಿ ಶುಕ್ರವಾರ ಈ ಘಟನೆ ನಡೆದಿದ್ದು, ಮೃತರನ್ನು ತಿರುವಲ್ಲಾದ ತುಕಲಶ್ಶೇರಿ ನಿವಾಸಿಗಳಾದ ರಾಜು ಥಾಮಸ್ (69) ಮತ್ತು ಅವರ ಪತ್ನಿ ಲೈಜಿ ಥಾಮಸ್ (63) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ದಂಪತಿಯ ಪುತ್ರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವೃದ್ಧ ದಂಪತಿಗಳ ಮೃತದೇಹದ ಅವಶೇಷಗಳು ಸಂಪೂರ್ಣವಾಗಿ ಸುಟ್ಟು ವಿರೂಪಗೊಂಡಿದ್ದರಿಂದ ಮಹಿಳೆ ಧರಿಸಿದ್ದ ಆಭರಣಗಳ ಮೂಲಕ ಅವರನ್ನು ಗುರುತಿಸಲಾಗಿದೆ. ಸ್ಥಳದಲ್ಲಿ ಗಸ್ತು ತಿರುಗುತ್ತಿದ್ದ […]
ಉಳ್ಳಾಲ: ಸಯ್ಯದ್ ಅಲವಿ ತಂಙಳ್ ನಿಧನ

ಉಳ್ಳಾಲ: ಸಯ್ಯದ್ ಆಲವಿ ತಂಙಳ್ ಅವರು ಕುಸಿದು ಬಿದ್ದು ಮೃತಪಟ್ಟ ಘಟನೆ ಬೆಳರಿಂಗೆಯಲ್ಲಿ ನಡೆದಿದೆ. ಕಿನ್ಯ ಸುನ್ನೀ ಸೆಂಟರ್ ಎಸ್ ವೈ ಎಸ್ ಕಚೇರಿಯಲ್ಲಿ ನಡೆದ ಕೂರ ತಂಙಳ್ ಅನುಸ್ಮರಣೆ ಕಾರ್ಯಕ್ರಮದಲ್ಲಿ ಸಯ್ಯದ್ ಆಲವಿ ತಂಙಳ್ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಕುಸಿದು ಬಿದ್ದಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಈ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ತಂಙಳ್ ಅವರು ಹೊಸನಗರ, ಬಾಳೆಹೊನ್ನೂರು, ಚಿಕ್ಕಮಗಳೂರು ಸಹಿತ ವಿವಿಧೆಡೆ ಖತೀಬ್ ರಾಗಿ ಸೇವೆ ಸಲ್ಲಿಸಿದ್ದರು.
ಕುರಿ ಮಾಂಸ ಸಾಗಾಟದ ವೇಳೆ ತಡೆದು ನಾಯಿ ಮಾಂಸ ಎಂದ ಪುನೀತ್ ಕೆರೆಹಳ್ಳಿ; ರೈಲ್ವೇ ನಿಲ್ದಾಣದಲ್ಲಿ ರಾದ್ದಾಂತ ಸೃಷ್ಟಿ, ಬಂಧನ

ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ಸರಬರಾಜು ಆಗುತ್ತಿದೆ ಎಂದು ಇದ್ರೀಶ್ ಪಾಷಾ ಕೊಲೆ ಪ್ರಕರಣದ ಆರೋಪಿ ಪುನೀತ್ ಕೆರೆಹಳ್ಳಿ ತನ್ನ ಗ್ಯಾಂಗ್ ಜೊತೆ ಬಂದು ರಾದ್ದಾಂತ ಸೃಷ್ಟಿಸಿರುವ ಘಟನೆ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಅಬ್ದುಲ್ ರಜಾಕ್ ಎಂಬುವರು ಕಳೆದ 12 ವರ್ಷಗಳಿಂದ ರಾಜಸ್ಥಾನದಿಂದ ಬೆಂಗಳೂರಿಗೆ ಕುರಿ ಮಾಂಸ ತರಿಸಿ ವ್ಯಾಪಾರ ಮಾಡುತ್ತಿದ್ದರು. ಎರಡು ದಿನಕ್ಕೊಮ್ಮೆ ಜೈಪುರದಿಂದ ಬೆಂಗಳೂರಿಗೆ ಕುರಿ ಮಾಂಸ ಬರುತ್ತದೆ. ನಿನ್ನೆ ಎರಡು ಸಾವಿರ ಕೆಜಿ ಮಾಂಸ ಬಂದಿದೆ. ಪುನೀತ್ ಕೆರೆಹಳ್ಳಿ ಟೀಂ ಆರೋಪದ […]
ಕಾಂಗ್ರೆಸ್ ಕಾರ್ಯಕರ್ತನನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿ ಹತ್ಯೆ

ಕೋಲ್ಕತ್ತಾ: ಕಾಂಗ್ರೆಸ್ ಕಾರ್ಯಕರ್ತನನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿ ಹತ್ಯೆಗೈದಿರುವ ಘಟನೆ ಪಶ್ಚಿಮ ಬಂಗಾಳದ ಜಲ್ಪಾಯಿಗುರಿ ಜಿಲ್ಲೆಯಲ್ಲಿ ನಡೆದಿದೆ. ಮೊಯ್ನಾಗುರಿಯ ಖರ್ಗಬಾರಿ-1 ಗ್ರಾಮ ಪಂಚಾಯತಿ ವ್ಯಾಪ್ತಿಯ ಹಥಾತ್ ಕಾಲನಿಯಲ್ಲಿ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಮಾಣಿಕ್ ರಾಯ್ ಎಂದು ಗುರುತಿಸಲಾಗಿದೆ. ಈ ಸಂಬಂಧ ಗುರುವಾರ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಗುಂಪೊಂದು ವೈಮನಸ್ಸಿನ ಕಾರಣಕ್ಕೆ ಮಾಣಿಕ್ ಅವರನ್ನು ಕಟ್ಟಿಹಾಕಿ ಗಂಭೀರವಾಗಿ ಹಲ್ಲೆ ನಡೆಸಿದೆ. ಸುದ್ದಿ ತಿಳಿಯುತ್ತಿದ್ದಂತೆಯೆ ಸ್ಥಳಕ್ಕೆ ಧಾವಿಸಿದ ಪೊಲೀಸರು, ಗಂಭೀರವಾಗಿ ಗಾಯಗೊಂಡಿದ್ದ ಮಾಣಿಕ್ ರಾಯ್ ಅನ್ನು ಮೊಯ್ನಾಗುರಿಯಿಂದ […]
ಬೆಳ್ತಂಗಡಿ; ನೆರಿಯ ಗ್ರಾಮದಲ್ಲಿ ಬಿರುಗಾಳಿ ಮಳೆಗೆ ಜನಜೀವನ ಅಸ್ತವ್ಯಸ್ತ, ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು

ಬೆಳ್ತಂಗಡಿ: ಭಾರೀ ಗಾಳಿ ಮಳೆಗೆ ಬೆಳ್ತಂಗಡಿ ತಾಲೂಕಿನ ನೆರಿಯ ಸೇರಿದಂತೆ ವಿವಿಧೆಡೆ ವ್ಯಾಪಕ ಹಾನಿಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಅಣಿಯೂರಿನಿಂದ ನೆರಿಯ ಗ್ರಾಮ ಪಂಚಾಯತ್ ವರೆಗೆ ರಸ್ತೆ ಬದಿಯಲ್ಲಿದ್ದ ಮರಗಳು ಧರೆಗೆ ಉರುಳಿವೆ. ಪೆರಿಯಡ್ಕ ರಸ್ತೆಯಲ್ಲೂ ಹಲವು ಮರಗಳು ನೆಲಕ್ಕುರುಳಿವೆ. ಅಣಿಯೂರು ಬೀಟಿಗೆ ರಸ್ತೆ, ಅಪ್ಪಿಲ ಕುಕ್ಕೆಜಾಲು ರಸ್ತೆ ಸೇರಿದಂತೆ ವಿವಿಧೆಡೆ ಮರಗಳು ಮುರಿದು ಬಿದ್ದಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಸ್ಥಳೀಯರ ಮಾಹಿತಿ ಪ್ರಕಾರ 40ಕ್ಕೂ ಅಧಿಕ ವಿದ್ಯುತ್ ಕಂಬಗಳು ನೆರಿಯ ಒಂದೇ ಗ್ರಾಮದಲ್ಲಿ ಉರುಳಿಬಿದ್ದಿವೆ. ಇದರಿಂದ ನೆರಿಯ […]
ವೈದ್ಯರ ನಿರ್ಲಕ್ಷ್ಯಕ್ಷೆ ಯುವಕ ಬಲಿ; ಕುಟುಂಬಸ್ಥರ ಆರೋಪ

ವೈದ್ಯರ ನಿರ್ಲಕ್ಷ್ಯದಿಂದ ಯುವಕನೋರ್ವ ಸಾವನ್ನಪ್ಪಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿರುವ ಘಟನೆ ಕಲ್ಬುರ್ಗಿಯಲ್ಲಿ ನಡೆದಿದೆ. ಯುವಕನ ಸಾವಿನ ಬೆನ್ನಲ್ಲಿ ಗುಲಬರ್ಗಾ ಹಾರ್ಟ್ ಫೌಂಡೇಷನ್ ಆಸ್ಪತ್ರೆ ವಿರುದ್ಧ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ 24 ವರ್ಷದ ಶರಣಬಸಪ್ಪ ಮೃತ ಯುವಕ. ಜೇವರ್ಗಿ ತಾಲೂಕಿನ ಅಂಕಲಗಿ ಗ್ರಾಮದ ಶರಣಬಸಪ್ಪ, ಹೊಟ್ಟೆ ನೋವು, ವಾಂತಿ ಹಿನ್ನೆಲೆಯಲ್ಲಿ ಜುಲೈ 22ರಂದು ಹಾರ್ಟ್ ಫೌಂಡೇಷನ್ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ ಎರಡು ದಿನಗಳಿಂದ ವೈದ್ಯರು ಸರಿಯಾಗಿ ಚಿಕಿತ್ಸೆ ನೀಡಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಇದೀಗ ಯುವಕ ಚಿಕಿತ್ಸೆ ಫಲಕಾರಿಯಾಗದೆ […]
ಕೋರಮಂಗಲ ಪಿಜಿಯಲ್ಲಿ ಯುವತಿಯ ಕೊಲೆ ವಿಡಿಯೋ ವೈರಲ್: ಸಂತ್ರಸ್ತೆ ಯಾಚಿಸಿದರೂ ಸಹಾಯಕ್ಕೆ ಮುಂದಾಗದ ಯುವತಿಯರು!

ಬೆಂಗಳೂರು: ಕೋರಮಂಗಲದ ಪಿಜಿಯೊಂದರಲ್ಲಿ ನಡೆದ ಕೃತಿ ಕುಮಾರಿ ಎಂಬ ಯುವತಿಯ ಮರ್ಡರ್ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ವಿಡಿಯೋವನ್ನು ವೈರಲ್ ಮಾಡಲಾಗಿದೆ. ಕೊಲೆಯ ವೇಳೆ ಯುವತಿ ರಕ್ತದ ಮಡುವಿನಲ್ಲಿ ಬಿದ್ದು ಸಹಾಯಕ್ಕಾಗಿ ಯಾಚಿಸುತ್ತಿದ್ದರೂ, ಅಲ್ಲಿದ್ದ ಇತರ ಯುವತಿಯರು ಆಕೆಯ ಸಹಾಯಕ್ಕೆ ಬರದೆ ತಮ್ಮಷ್ಟಕ್ಕೇ ಹೋಗಿದ್ದು ವಿಡಿಯೋದಲ್ಲಿ ದಾಖಲಾಗಿದ್ದು, ಟೀಕೆಗೆ ಕಾರಣವಾಗಿದೆ. ಜು.23ರಂದು ಕೋರಮಂಗಲದ ಪಿಜಿಯಲ್ಲಿ ಕೃತಿ ಕುಮಾರಿ ಕೊಲೆ ನಡೆದಿತ್ತು. ಕತ್ತು, ಎದೆ, ಹೊಟ್ಟೆ ಭಾಗ ಸೇರಿ ಹಲವು ಕಡೆ ಇರಿದು ಆಕೆಯನ್ನು ಕೊಲೆ ಮಾಡಲಾಗಿದೆ. ಆಕೆಯ […]