ಕಾವೇರಿ ನದಿ ಸಂರಕ್ಷಣೆಗೆ ಒತ್ತಾಯಿಸಿ ಮಡಿಕೇರಿಯಲ್ಲಿ ಪ್ರತಿಭಟನೆ

ಜನವಾಹಿನಿ News ಮಡಿಕೇರಿ : ಕಾವೇರಿ ನದಿಗೆ ತ್ಯಾಜ್ಯ ವಸ್ತುಗಳು ಹಾಗೂ ಕಸ ಎಸೆಯುತ್ತಿರುವ ಅಕ್ರಮದ ಕುರಿತು ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕೊಡಗು ಅಭಿವೃದ್ಧಿ ಸಮಿತಿ ವತಿಯಿಂದ ಕರ್ನಾಟಕ ರಕ್ಷಣಾ ವೇದಿಕೆ, ಕರ್ನಾಟಕ ಯುವ ರಕ್ಷಣಾ ವೇದಿಕೆ ಸಹಯೋಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಕೊಡಗು ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಸನ್ನ ಭಟ್ ಮಾತನಾಡಿ, ಕಾವೇರಿ ನದಿ ಹರಿಯುವ ಪ್ರದೇಶಗಳಲ್ಲಿ ಘನ ತ್ಯಾಜ್ಯ, ಪ್ಲಾಸ್ಟಿಕ್ ವಸ್ತುಗಳು, ಹೋಟೆಲ್ ಮತ್ತು ವ್ಯಾಪಾರಿಕ ತ್ಯಾಜ್ಯ ನದಿಗೆ […]
ಕಲ್ಕಂದೂರಿನಲ್ಲಿ ಅಕ್ರಮ ಗೋಮಾಂಸ ಸಾಗಾಟ: ಗೋಮಾಂಸ, ಆರೋಪಿಗಳ ಸಮೇತ ವಾಹನ ಮುಟ್ಟುಗೋಲು

ಜನವಾಹಿನಿ News ಸೋಮವಾರಪೇಟೆ : ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಕಲ್ಕಂದೂರಿನಲ್ಲಿ KA50 M 6232 ನೋಂದಣಿ ಸಂಖ್ಯೆಯ ಆಲ್ಟೋ ಕಾರಿನಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯನ್ನಾಧರಿಸಿ ಕಾರ್ಯಾಚರಣೆ ನಡೆಸಿದ ಬಜರಂಗದಳ ಹಾಗೂ ಹಿಂಜಾವೇ ಕಾರ್ಯಕರ್ತರು ಕಲ್ಕಂದೂರಿನ ಅದ್ರಾಮ ಮತ್ತು ನಾಲ್ವರು ಅಸ್ಸಾಂ ಕಾರ್ಮಿಕರೂ ಸೇರಿದಂತೆ ಗೋಮಾಂಸ ಸಾಗಾಟ ಮಾಡುತ್ತಿದ್ದ ಒಟ್ಟು 5 ಆರೋಪಿಗಳ ಸಮೇತ ಆಲ್ಟೋ ಕಾರನ್ನು ಪೋಲೀಸರಿಗೆ ಒಪ್ಪಿಸಿದ್ದಾರೆ.
ಗಿಡದಿಂದ ಕಾಫಿ ಹಣ್ಣು ಕಳವು : ಆರೋಪಿಗಳ ಬಂಧನ – ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಶಂಕೆ

ಜನವಾಹಿನಿ News ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಡಗ ಬಾಣಂಗಾಲದ ಎಲ್ಕಿನ್ ಎಸ್ಟೇಟ್ ನಲ್ಲಿ ಗಿಡದಿಂದಲೆ ಕಾಫಿ ಕಳವು ಮಾಡಿರುವುದಾಗಿ ವ್ಯವಸ್ಥಾಪಕ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕ್ಷಿಪ್ರ ಕಾರ್ಯಾಚ ರಣೆ ನಡೆಸಿ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾ ಗಿದ್ದಾರೆ. ತೋಟದ ವ್ಯವಸ್ಥಾಪಕ ಕಾವೇರಪ್ಪ ಸಿಬ್ಬಂದಿಯ ಜತೆ ಡಿ. 27ರ ಮಧ್ಯಾಹ್ನ 2.30ರ ಸುಮಾರಿಗೆ ತೋಟದಲ್ಲಿ ಗಸ್ತು ನಡೆಸುವ ಸಂದರ್ಭದಲ್ಲಿ ಆರ್ಗನಿಕ್ಟಿಬಿ ಬ್ಲಾಕ್ ಬಳಿಯ ರಸ್ತೆಯ ಬದಿ ಸ್ಕೂಟಿಯೊಂದು ನಿಂತಿರುವುದನ್ನು […]
ಇತಿಹಾಸ ಮರೆತು ಇತಿಹಾಸ ನಿರ್ಮಿಸಲು ಸಾದ್ಯವಿಲ್ಲ : ಶಾಸಕ ಎ.ಎಸ್.ಪೊನ್ನಣ್ಣ

ಜನವಾಹಿನಿ News ಮಡಿಕೇರಿ : ಇತಿಹಾಸವನ್ನು ಮರೆತು ಇತಿಹಾಸ ನಿರ್ಮಿಸುವುದು ಅಸಾಧ್ಯ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣನವರು ಭಾರತದ ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್ ರವರ ಘೋಷವಾಕ್ಯ ವನ್ನು ಪುನರುಚ್ಚರಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ದಿವಂಗತ ಪೂಜಾರಿರ ರಾಮಪ್ಪ ನವರ ಹೆಸರಿನಲ್ಲಿ ಮೇಕೇರಿ ಬಿಳಿಗೇರಿ, ಅರ್ವತ್ತೋಕ್ಲು ಲಿಂಕ್ ರಸ್ತೆಗೆ ನಾಮಕರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಕೊಡಗಿನ ಅನೇಕ ಮಹನೀಯರು ತಮ್ಮ ಬದುಕನ್ನು ತ್ಯಾಗ ಮಾಡಿ ಪಾಲ್ಗೊಳ್ಳುವ […]
ಮನೆ ಮಂದಿ ನಿದ್ರೆಗೆ ಜಾರಿದ್ದ ವೇಳೆ ಮನೆಗೆ ನುಗ್ಗಿದ ಖತರ್ನಾಕ್ ಕಳ್ಳ ; ನಗದು, ಚಿನ್ನಾಭರಣ ದೋಚಿ ಪರಾರಿ

ಜನವಾಹಿನಿ News ಸಿದ್ದಾಪುರ : ಮನೆ ಮಂದಿ ಗಾಢ ನಿದ್ರೆಗೆ ಜಾರಿದ್ದ ಸಮಯ ಮನೆಗೆ ಕನ್ನ ಹಾಕಿದ ಕಳ್ಳರು ಚಿನ್ನಾಭರಣ ಸೇರಿದಂತೆ ನಗದು ದೋಚಿ ಪರಾರಿಯಾಗಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರದಲ್ಲಿ ನಡೆದಿದೆ. ಇಲ್ಲಿನ ಮೈಸೂರು ರಸ್ತೆಯಲ್ಲಿರುವ ಮನೆಯೊಂದರಲ್ಲಿ ಘಟನೆ ನಡೆದಿದ್ದು, ಸುಮಾರು 19.5 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ನಗದು ಕಳ್ಳತನವಾಗಿದೆ. ಶುಕ್ರವಾರ ನಸುಕಿನ ಜಾವ ಈ ಘಟನೆ ನಡೆದಿದ್ದು, ಮೈಸೂರು ರಸ್ತೆಯ ನಿವಾಸಿ ಬಿ.ಜಿ.ಚಿನ್ನಪ್ಪ ಎಂಬುವವರಿಗೆ ಸೇರಿದ ಮನೆ ಇದಾಗಿದೆ ಎನ್ನಲಾಗಿದೆ. ಏನಿದು ಪ್ರಕರಣ […]
ವಿವಿಧ ಸಂಘ ಸಂಸ್ಥೆಗಳು ಹಾಗೂ ಅಭಿಮಾನಿಗಳಿಂದ ಶಾಸಕರಾದ ಡಾ.ಮಂತರ್ ಗೌಡ ಅವರಿಗೆ ಅಭಿನಂದನೆ

ಜನವಾಹಿನಿ News ಮಡಿಕೇರಿ : ಹಲವು ದಶಕಗಳಿಂದ ಸಮಸ್ಯೆಯಾಗಿ ಉಳಿದಿದ್ದ ಕೊಡಗಿನ ಜಮ್ಮಾ ಭೂಮಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಭೂ ಕಂದಾಯ ಕಾಯ್ದೆಗೆ ತಿದ್ದುಪಡಿ ವಿದೇಯಕವನ್ನು ಸದನದಲ್ಲಿ ಮಂಡಿಸಿ ಕಾಯ್ದೆ ರೂಪಕ್ಕೆ ಜಾರಿಗೊಳಿಸುವಲ್ಲಿ ಶ್ರಮಿಸಿದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್‍ಗೌಡ ಅವರನ್ನು ಶುಕ್ರವಾರ ಅಭಿನಂದಿಸಲಾಯಿತು. ನಗರದ ಲಯನ್ಸ್ ಸಂಸ್ಥೆ ಸಭಾಂಗಣದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಶಾಸಕರಾದ ಡಾ.ಮಂತರ್ ಗೌಡ ಅವರಿಗೆ ಜಿಲ್ಲೆಯ ವಿವಿಧ ಸಂಘಟನೆಗಳು ಹಾಗೂ ಅಭಿಮಾನಿಗಳು ಶಾಲೂ, ಫಲ ತಾಂಬೂಲ, […]
ಸಂಸದರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಕೊಡಗು ಜೆಡಿಎಸ್ ಅಲ್ಪಸಂಖ್ಯಾತ ಮುಖಂಡರು

ಜನವಾಹಿನಿ News ಮಡಿಕೇರಿ : ಕೊಡಗು ಮೈಸೂರು ಲೋಕಸಭಾ ಕ್ಷೇತ್ರದಸಂಸದರಾದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡಯರ್ ರವರನ್ನು ಕೊಡಗು ಜಿಲ್ಲೆಯ ಜೆಡಿಎಸ್ ಅಲ್ಪಸಂಖ್ಯಾತ ಮುಖಂಡರು ಭೇಟಿಯಾಗಿ ವಿವಿಧ ಬೇಡಿಕೆಗಳಿಗೆ ಮನವಿ ಸಲ್ಲಿಸಿದರು. ಅಲ್ಪಸಂಖ್ಯಾತ ಸಮುದಾಯದ ಸಮುದಾಯ ಭವನ,ಮಸೀದಿ, ಕಬರ್ ಸ್ಥಾನಗಳಿಗೆ ,ತಡೆಗೋಡೆ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸಂಸದರಲ್ಲಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ವಿರಾಜಪೇಟೆ ತಾಲೂಕು ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸೈಫುದ್ದಿನ್ ಚಾಮಿಯಾಲ,ಕುಶಾಲನಗರ ತಾಲೂಕು ಅಲ್ಪಸಂಖ್ಯಾತ ಅಧ್ಯಕ್ಷ ಶಿಯಾಬುದ್ದೀನ್, ವಿ.ಪಿ.ಎ.ಸ್ ನೆಲ್ಯಹುದಿಕೇರಿ ಮಡಿಕೇರಿ […]
ಮರಗೋಡು : ರಸ್ತೆ ತಡೆ ಪ್ರತಿಭಟನೆಗೆ ಪಕ್ಷಾತೀತ ಬೆಂಬಲ – ಅಂಗಡಿ ಮುಂಗಟ್ಟು ಮುಚ್ಚಿ ರಸ್ತೆಗಿಳಿದ ವರ್ತಕರು : ಅಧಿಕಾರಿಗಳ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆದ ಪ್ರತಿಭಟನಾಕಾರರು

ಜನವಾಹಿನಿ News ಮರಗೋಡು : ಕಳೆದ 20 ವರ್ಷಗಳಿಂದ ಡಾಂಬರೀಕರಣವಾಗದೆ ಸಂಚಾರ ಯೋಗ್ಯತೆ ಕಳೆದುಕೊಂಡ ಕಟ್ಟೆಮಾಡು–ಮರಗೋಡು ರಸ್ತೆಯ ದುಸ್ಥಿತಿಯನ್ನು ಖಂಡಿಸಿ ಮರಗೋಡಿನಲ್ಲಿ ಗ್ರಾಮಸ್ಥರು ರಸ್ತೆ ತಡೆ ಪ್ರತಿಭಟನೆ ನಡೆಸಿದರು. ಮರಗೋಡು ಆಟೋ ಚಾಲಕರ ಸಂಘ ಕರೆ ನೀಡಿದ್ದ ಪ್ರತಿಭಟನೆಗೆ ಸಾರ್ವಜನಿಕರಿಂದ ಪಕ್ಷಾತೀತ ಬೆಂಬಲ ದೊರೆಯಿತು. ಪ್ರತಿಭಟನೆಯ ಬೆನ್ನಲ್ಲೇ ಗ್ರಾಮದಲ್ಲಿನ ವರ್ತಕರು ತಮ್ಮ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ರಸ್ತೆಗಿಳಿದು ಹೋರಾಟಕ್ಕೆ ಸಂಪೂರ್ಣ ಬೆಂಬಲ ಸೂಚಿಸಿದರು. ಸಾರ್ವಜನಿಕರ ಸಂಕಷ್ಟಕ್ಕೆ ಸ್ಪಂದಿಸದೆ ನಿರ್ಲಕ್ಷ್ಯ ಧೋರಣೆ ತೋರಿದ ಅಧಿಕಾರಿಗಳು, ಜನಪ್ರತಿನಿಧಿಗಳ […]
ಮೈಸೂರು : ಅರಮನೆ ಬಳಿ ಸ್ಪೋಟ : ಓರ್ವ ಸಾವು ಹಲವರ ಸ್ಥಿತಿ ಗಂಭೀರ

ಜನವಾಹಿನಿ News ಮೈಸೂರು: ವಿಶ್ವವಿಖ್ಯಾತ ಮೈಸೂರು ಅರಮನೆ ಬಳಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿರುವ ಘಟನೆ ಗುರುವಾರ ನಡೆದಿದೆ. ಮೈಸೂರಿನ ಅಂಬಾವಿಲಾಸ ಅರಮನೆ ಆವರಣದಲ್ಲಿ ಈ ದುರಂತ ನಡೆದಿದ್ದು, ಅರಮನೆಯ ಜಯಮಾರ್ತಾಂಡ ದ್ವಾರದ ಊಟಿ ರಸ್ತೆಯ ಬದಿಯಲ್ಲಿ ಬಲೂನ್ ಮಾರಾಟ ಮಾಡುತ್ತಿದ್ದ ವ್ಯಾಪಾರಿಯ ಸಿಲಿಂಡರ್ ಸ್ಫೋಟಗೊಂಡಿದೆ. ಈ ವೇಳೆ ಒಟ್ಟು ನಾಲ್ಕು ಮಂದಿ ಗಾಯಗೊಂಡಿದ್ದು, ಈ ಪೈಕಿ ಓರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ನೈಟ್ರೋಜನ್ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು […]
ಆಂಗ್ಲೋ ವರ್ನಾಕ್ಯುಲರ್ ಶಾಲೆಯಲ್ಲಿ ವಾರ್ಷಿಕೋತ್ಸವ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭಾ ಅನಾವರಣಕ್ಕೆ ಗಣ್ಯರ ಮೆಚ್ಚುಗೆ

ಜನವಾಹಿನಿ News ಸಿದ್ದಾಪುರ: ನೆಲ್ಲಿಹುದಿಕೇರಿ ಆಂಗ್ಲೋ ವರ್ನಾಕ್ಯುಲರ್ ಶಾಲೆಯ 34ನೇ ವಾರ್ಷಿಕೋತ್ಸವ ಸಂಭ್ರಮ ವಿವಿಧ ಸಾಂಸ್ಕೃತಿಕ, ಆರೋಗ್ಯ,ಪರಿಸರ ಕಾಳಜಿ,, ಮಾದಕ ವಸ್ತುಗಳ ವಿರುದ್ಧ ಜಾಗೃತಿ ಸೇರಿದಂತೆ ಸಾಮಾಜಿಕ, ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನೆರವೇರಿತು. ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆ, ಜನರಲ್ ಸರ್ಜರಿ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ. ಸತೀಶ್ ವಿ ಶಿವಮಲ್ಲಯ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆಚಾರ ವಿಚಾರ ಸಂಸ್ಕೃತಿ ಪರಂಪರೆಯೊಂದಿಗೆ ಭಾವೈಕ್ಯತೆಯ ಸಂದೇಶ ಸಾರುವ ಮೂಲಕ ಸೌಹಾರ್ದ ಸಮಾಜ ನಿರ್ಮಾಣ ಮಾಡಲು […]