Breaking News :

ಶಿವಮೊಗ್ಗ; ಪ್ರಿಯತಮೆಯನ್ನು ಕತ್ತು ಹಿಸುಕಿ ಕೊಲೆ ಮಾಡಿದ ಯುವಕ

ಶಿವಮೊಗ್ಗ: ಯುವಕನೋರ್ವ ತನ್ನ ಪ್ರಿಯತಮೆಯನ್ನೇ ಕತ್ತುಹಿಸುಕಿ ಕೊಲೆ ಮಾಡಿರುವ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಸೌಮ್ಯ ಕೊಲೆಯಾದವಳು. ಪ್ರಕರಣಕ್ಕೆ ಸಂಬಂದಿಸಿದಂತೆ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಆರೋಪಿ ಸೃಜನ್​ನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ಸೌಮ್ಯ ಮದುವೆಯಾಗುವಂತೆ ಸೃಜನ್​ನನ್ನು ಕೇಳಿಕೊಂಡಿದ್ದಳು. ಇದರಿಂದ ಸೃಜನ್ ಪ್ರಿಯತಮೆಯನ್ನೇ ಕೊಲೆ ಮಾಡಿ ಮೃತದೇಹವನ್ನು ಶಿವಮೊಗ್ಗದ ಮುಂಬಾಳು ಗ್ರಾಮದ ಬಳಿ ಹೂತಿಟ್ಟಿದ್ದ. ಮಗಳು ನಾಪತ್ತೆ ಹಿನ್ನೆಲೆ ಯುವತಿಯ ಪೋಷಕರು ನಾಪತ್ತೆ ಪ್ರಕರಣ […]

ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿ ಪೊಲೀಸ್ ವಶಕ್ಕೆ

ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪುತ್ತೂರು ತಾಲೂಕಿನ ಬಲ್ನಾಡು ನಿವಾಸಿ ಪ್ರಸಾದ್(42) ಬಂಧಿತ ಆರೋಪಿ. ಈತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ದೂರಿನ ಹಿನ್ನಲೆಯಲ್ಲಿ ಗ್ರಾಮಾಂತರ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.    

ಬಂಟ್ವಾಳ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬಂಟ್ವಾಳ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡ ಘಟನೆ ಮಾಣಿ ಸಮೀಪದ ಬುಡೋಳಿ ಮಡಲ ಎಂಬಲ್ಲಿ ಬೆಳಿಗ್ಗೆ ನಡೆದಿದೆ. ಬುಡೋಳಿ ಮಡಲ ನಿವಾಸಿ ಸುಶಾಂತ್ (25)ಎಂಬಾತ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಸುಶಾಂತ್ ಅವರು ಮಿನಿ ಬಸ್ ಖರೀದಿಸಿ ಸ್ವಂತ ವಾಹನದಲ್ಲಿ ಚಾಲಕನಾಗಿ ದುಡಿಯುತ್ತಿದ್ದರು. ಆತ್ಮಹತ್ಯೆ ಮಾಡಿಕೊಳ್ಳಲು ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ. ವಿಟ್ಲ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ಜೈಲಿನಿಂದ ಬಿಡುಗಡೆ ಬಳಿಕ ಸೂರಜ್ ರೇವಣ್ಣ ಹೇಳಿದ್ದೇನು?

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತ ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣ ಅವರು ಜನಪ್ರತಿನಿಧಿಗಳ ನ್ಯಾಯಾಲಯವು ಜಾಮೀನು ನೀಡಿದ ಬಳಿಕ ಜೈಲಿನಿಂದ ಹೊರ ಬಂದಿದ್ದಾರೆ. ಬಳಿಕ ಸೂರಜ್‌ ರೇವಣ್ಣ ಮಾಧ್ಯಮಗಳ ಜೊತೆಗೆ ಮಾತನಾಡಿದ್ದು, ಕುಟುಂಬದ ವಿರುದ್ಧ ಷಡ್ಯಂತ್ರ ಮಾಡಿ ತೇಜೋವಧೆ ಮಾಡಿದ್ದಾರೆ. ತೇಜೋವಧೆ ಮಾಡುವ ದುರುದ್ದೇಶದಿಂದ ಕೇಸ್ ದಾಖಲಿಸಿದ್ದಾರೆ. ನಾವು ಯಾವುದಕ್ಕೂ ಹೆದರಿಕೊಂಡು ಎಲ್ಲಿಗೂ ಓಡಿ ಹೋಗಲ್ಲ.ಎರಡು ಮೂರು ದಿನದಲ್ಲಿ ಎಲ್ಲದಕ್ಕೂ ಸ್ಪಷ್ಟನೆ ಕೊಡುತ್ತೇನೆ. ತನಿಖಾಧಿಕಾರಿಗಳಿಗೆ ಸಹಕಾರ ನೀಡಿದ್ದೇನೆ. ಕಾನೂನು ನ್ಯಾಯಾಂಗದ ಮೇಲೆ ಸಂಪೂರ್ಣ ವಿಶ್ವಾಸವಿದೆ ಎಂದು […]

ಮಂಗಳೂರು; ಮೀನುಗಾರಿಕೆ ವೇಳೆ ಆಕಸ್ಮಿಕವಾಗಿ ನದಿಗೆ ಬಿದ್ದು ಯುವಕ ದುರ್ಮರಣ

ಮಂಗಳೂರು: ನಗರದ ಹಳೆ ಬಂದರ್‌ನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಆಯ ತಪ್ಪಿ ಬಿದ್ದು ಮೀನುಗಾರರೊಬ್ಬರು  ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ. ಬೆಂಗರೆಯ ಅಶ್ಫಾನ್ (30) ಮೃತ ಯುವಕ. ಇವರು ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ನಾಪತ್ತೆಯಾಗಿದ್ದರು. ಬಳಿಕ ಅಶ್ಫಾನ್ ಗಾಗಿ ಹುಡುಕಾಟ ನಡೆದಿತ್ತು. ರಾತ್ರಿ ವೇಳೆ ಆತನ ಮೃತದೇಹ ಪತ್ತೆಯಾಗಿದೆ. ಈ ಕುರಿತು ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಉಡುಪಿ; ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಉಡುಪಿ: ಪಿಯುಸಿ ವಿಧ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಹಿರಿಯಡ್ಕದಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಪೆರ್ಡೂರು ಪ್ರಥಮ ದರ್ಜೆ ಸರಕಾರಿ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ ಹಿರಿಯಡ್ಕ ನಿವಾಸಿ ನಯನಾ(17) ಎಂದು ಗುರುತಿಸಲಾಗಿದೆ. ಸೋಮವಾರ ಬೆಳಗ್ಗೆ ತನ್ನ ಮನೆಯಲ್ಲಿ ಒಬ್ಬಂಟಿ ಇದ್ದಾಗ ಯುವತಿ ಈ ಕೃತ್ಯ ಎಸಗಿದ್ದಾಳೆ. ಆಕೆಯ ತಾಯಿ ಶೋಭಾ ಈ ಬಗ್ಗೆ ಹಿರಿಯಡ್ಕ ಠಾಣೆಗೆ ದೂರು ನೀಡಿದ್ದಾರೆ. ನಯನಾ ತನ್ನದೇ ಚೂಡಿದಾರ್ ಶಾಲನ್ನು ಬಳಸಿ ಫ್ಯಾನಿಗೆ ನೇಣು ಬಿಗಿದುಕೊಂಡಿದ್ದಾಳೆ. ಘಟನೆಗೆ ಕಾರಣ ಏನೆಂದು […]

ಪುತ್ತೂರು; ಸ್ಕೂಟರ್ ಗೆ ಟ್ಯಾಂಕರ್ ಢಿಕ್ಕಿ; ಸ್ಕೂಟರ್ ಸವಾರ ಮೃತ್ಯು

ಪುತ್ತೂರು; ಸ್ಕೂಟರ್ ಗೆ ಟ್ಯಾಂಕರ್ ಢಿಕ್ಕಿಯಾದ ಪರಿಣಾಮ ವಿಕಲ ಚೇತನ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪುತ್ತೂರಿ‌ನ ಮಂಜಲಪಡ್ಪು ಬಳಿ ನಡೆದಿದೆ. ಮಿತ್ತೂರು ಏಮಾಜೆಯ ಶಿವರಾಮ ನಾಯ್ಕ ಎಂಬವರು ಮೃತರು. ಮಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಶಿವರಾಮ ನಾಯ್ಕ ಅವರು ಚಲಾಯಿಸುತ್ತಿದ್ದ ತ್ರಿವೀಲ್ಡ್ ಸ್ಕೂಟರ್ ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಶಿವರಾಮ ನಾಯ್ಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.  

ಶಿವಮೊಗ್ಗ: ಯುವಕನ ಮೇಲೆ ಹಲ್ಲೆ ನಡೆಸಿದ ತಂಡ; ಯುವಕ ಆಸ್ಪತ್ರೆಗೆ ದಾಖಲು

-ತಬ್ರೀಜ್ ಅಹ್ಮದ್ ಹಲ್ಲೆಗೊಳಗಾದ ಯುವಕ ಶಿವಮೊಗ್ಗ; ಯುವಕನೋರ್ವನಿಗೆ ಮೂವರ ಗುಂಪೊಂದು ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಟೌನ್ ಶಿಶುಹಾರ ರಸ್ತೆಯಲ್ಲಿ ನಡೆದಿದೆ. ತಬ್ರೀಜ್ ಅಹಮ್ಮದ್ ಹಲ್ಲೆಗೊಳಗಾದ ಯುವಕ. ಇವರ ಮೇಲೆ ಪ್ರಕಾಶ್, ಮಾರುತಿ, ಮನು ಸೇರಿಕೊಂಡು ಹಲ್ಲೆ ನಡೆಸಿದ್ದಾರೆ. ಶಿಶುವಿಹಾರ ರಸ್ತೆಯಲ್ಲಿರುವ ಪಂಚಮಿ ಹೊಟೇಲ್ ಗೆ ಬಂದು ಮತ್ತೆ ವಾಪಾಸ್ಸಾಗಲು ಬೈಕ್ ಸ್ಟಾರ್ಟ್ ಮಾಡುವಾಗ ಬಂದ ಪ್ರಕಾಶ್, ಮಾರುತಿ, ಮನು, ತಬ್ರೀಜ್ ಗೆ 500 ರೂ. ಹಣ ಕೊಡುವಂತೆ ಕೇಳಿದ್ದಾರೆ. ಈ […]

ಇಥಿಯೋಪಿಯಾದಲ್ಲಿ ಭೂಕುಸಿತದಿಂದ ಮಣ್ಣಿನಡಿ ಸಿಲುಕಿದ ನೂರಾರು ಮಂದಿ; ರಕ್ಷಣಾ ಕಾರ್ಯಾಚರಣೆಗೆ ಬೇಕಿದ್ದ ಯಂತ್ರಗಳೇ ಇಲ್ಲದೆ ಪರಿಸ್ಥಿತಿ ಶೋಚನೀಯ

ಭಾರೀ ಮಳೆಯಿಂದಾಗಿ ದಕ್ಷಿಣ ಇಥಿಯೋಪಿಯಾದ ಪ್ರಾದೇಶಿಕ ರಾಜ್ಯದಲ್ಲಿನ ಗೋಫಾ ವಲಯದಲ್ಲಿ ಭೂಕುಸಿತದಿಂದ ಹಲವಾರು ಮಂದಿ ಜೀವಂತವಾಗಿ ಸಮಾಧಿಯಾಗಿದ್ದಾರೆ. ಅಲ್ಲಿನ ಸ್ಥಿತಿ ಶೋಚನೀಯವಾಗಿದ್ದು, ಮಣ್ಣಿನಡಿ ಸಿಲುಕಿದವರ ರಕ್ಷಣೆಗೆ ಪರದಾಟವೇ ನಡೆಯುತ್ತಿದೆ. ಭಾರೀ ಮಳೆಯಿಂದ ಇಥಿಯೋಪಿಯಾದ ಭಾಗದಲ್ಲಿ ಭೂ ಕುಸಿತವಾಗಿ 157 ಜನರು ಸಾವನ್ನಪ್ಪಿದ್ದಾರೆ. ಮಣ್ಣಿನ ಅಡಿಯಲ್ಲಿ ಸಿಲುಕಿದವರನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಸ್ಥಳದಿಂದ ಕೆಂಪು ಮಣ್ಣನ್ನು ಜನರು ಕೈಯಿಂದ ಅಗೆಯುತ್ತಿರುವುದು ಕಂಡು ಬರುತ್ತಿದೆ. ಅವರ ಬಳಿ ಮಣ್ಣು ತೆಗೆಯುವ ಯಂತ್ರ ಕೂಡ ಇಲ್ಲ. […]

ಹಿಟ್ ಆಂಡ್ ರನ್ ಗೆ 21 ವರ್ಷದ ಯುವಕ ಬಲಿ

ಹಿಟ್ ಆಂಡ್ ರನ್​ಗೆ ಯುವಕನೋರ್ವ ಬಲಿಯಾಗಿರುವ ಘಟನೆ ಬೆಂಗಳೂರು ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ನಡೆದಿದೆ. ಆಯುಷ್ ಅಪ್ಪಯ್ಯ (21) ಮೃತ ಯುವಕ. ಕಲ್ಪನಾ ಜಂಕ್ಷನ್ ಕಡೆಯಿಂದ ಚಂದ್ರಿಕಾ ಜಂಕ್ಷನ್ ಕಡೆಗೆ ಡಿಯೋ ಬೈಕ್​ನಲ್ಲಿ ಯುವಕ ಹೋಗುತ್ತಿದ್ದನು. ಈ ವೇಳೆ ಕನ್ನಿಂಗ್ ಹ್ಯಾಮ್ ರಸ್ತೆಯ ವಕ್ಫ್ ಬೋರ್ಡ್ ಬಳಿ ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ಘಟನೆಯಲ್ಲಿ ಯುವಕನ ತಲೆಗೆ ಗಂಭೀರವಾದ ಗಾಯವಾಗಿದೆ. ಬಳಿಕ ಕೆಲವರು  ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಈ ವೇಳೆ ಆತ […]