ಮಂಗಳೂರು: ಮನಪಾ ಕಚೇರಿಗೆ ಮುತ್ತಿಗೆಗೆ ಯತ್ನ; ಸಿಪಿಐಎಂ ಮುಖಂಡರ ಬಂಧನ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಗೆ ಮುತ್ತಿಗೆಗೆ ಯತ್ನಿಸಿದ ಸಿಪಿಐಎಂ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಮಂಗಳೂರು ಮಹಾ ನಗರ ಪಾಲಿಕೆಯ ಆಯುಕ್ತರನ್ನು ವಜಾಗೊಳಿಸಲು ಒತ್ತಾಯಿಸಿ ಮನಪಾ ಕಚೇರಿ ಮುಂದೆ ಸಿಪಿಐಎಂ ಮುಖಂಡರು ಮತ್ತು ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪ್ರತಿಭಟನೆ ನಡೆಸಿದ ಸಿಪಿಐಎಂ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹೊಡೆದಾಡಿಕೊಂಡ ಉಪನ್ಯಾಸಕರು

ಇಬ್ಬರು ಉಪನ್ಯಾಸಕರ ನಡುವೆ ಜಗಳವಾಗಿ ಹೊಡೆದಾಡಿಕೊಂಡಿರುವ ಘಟನೆ ಕೋಲಾರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಕೋಲಾರ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ, ಹಾಲಿ ರಾಜ್ಯಶಾಸ್ತ್ರ ಉಪನ್ಯಾಸಕ ನಾಗಾನಂದ ಕೆಂಪರಾಜು ಮತ್ತು ಕನ್ನಡ ಉನ್ಯಾಸಕ ಜೆ.ಜಿ ನಾಗರಾಜ್ ನಡುವೆ ಜಗಳ ನಡೆದಿದೆ. ಗಲಾಟೆಯಲ್ಲಿ ನಾಗರಾಜ್ ಅವರ ಕಪಾಳಕ್ಕೆ ಹೊಡೆದು ಹಲ್ಲೆ ಮಾಡಿಲಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ನೇಹಿತರಾಗಿದ್ದ ನಾಗನಂದ ಕೆಂಪರಾಜು ಹಾಗೂ ಜೆ.ಜಿ.ನಾಗರಾಜ ಮಧ್ಯೆ ಕಳೆದ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ವಿಷಯವಾಗಿ ಮನಸ್ಥಾಪಗಳು […]
ಬೆಂಗಳೂರು: ಕೋರ್ಟ್ ಆವರಣದಲ್ಲಿ ವಕೀಲೆಗೆ ಚೂರಿ ಇರಿತ

ಬೆಂಗಳೂರು: ಮ್ಯಾಜಿಸ್ಟ್ರೇಟ್ ಕೋರ್ಟ್ ಹಾಲ್‌ನಲ್ಲಿ ಇಂದು ಬೆಳಗ್ಗೆ ವಕೀಲೆಗೆ ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಆರೋಪಿ ಜಯರಾಮನನ್ನು ಹಲಸೂರು ಗೇಟ್ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಕೀಲೆ ವಿಮಾಲ ಮತ್ತು ಜಯರಾಮ ಇಬ್ಬರು ಸ್ನೇಹಿರು. ಇಬ್ಬರು ಇದ್ದ ಖಾಸಗಿ ಕ್ಷಣಗಳನ್ನು ಜಯರಾಮ್ ಮೊಬೈಲ್ನಲ್ಲಿ ಶೂಟ್ ಮಾಡಿಕೊಂಡು ಬ್ಲಾಕ್ ಮೇಲೆ ಮಾಡಿ ಕೋಟಿಗಟ್ಟಲೆ ಹಣ ಪೀಕಿದ್ದಾನೆ. ನಂತರ ಜಮೀನು ವಿಷಯವಾಗಿ ಇಬ್ಬರಿಗೆ ಜಗಳವಾಗಿ ವಕೀಲೆ ವಿಮಲಾ ಶೇಷಾದ್ರಿಪುರಂ ಠಾಣೆಯಲ್ಲಿ ಜಯರಾಮ ವಿರುದ್ಧ ದೌರ್ಜನ್ಯ ಮತ್ತು […]
ಕೇಂದ್ರ ಬಜೆಟ್ 2024; ಯಾವುದರ ಬೆಲೆ ಅಗ್ಗ? ಯಾವುದು ದುಬಾರಿ; ಬಜೆಟ್ ಕುರಿತ ಸಂಕ್ಷಿಪ್ತ ಮಾಹಿತಿ…

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಲೋಕಸಭೆಯಲ್ಲಿ 2024-2025ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಬಜೆಟ್ ನಲ್ಲಿ ವಿವಿಧ ಕ್ಷೇತ್ರಗಳಿಗೆ ಅನುದಾನ ನೀಡಲಾಗಿದ್ದು, ಈ ಬಾರಿಯ ಬಜೆಟ್‌ನಲ್ಲಿ ಏನೇನಿದೆ ಎಂಬುವುದರ ಬಗ್ಗೆ ಯಾವುದು ಅಗ್ಗ: ಕ್ಯಾನ್ಸರ್ ಔಷಧ, ಪೆಟ್ರೋಲ್ ದರ 2 ರೂ. ಇಳಿಕೆ, ಮೊಬೈಲ್ ಫೋನ್, ಆಮದು ಚಿನ್ನ, ಆಮದು ಬೆಳ್ಳಿ, ಚರ್ಮದ ವಸ್ತು, ಸೀ ಫುಡ್, ವಿದ್ಯುತ್ ತಂತಿ, ಎಕ್ಸರೇ ಮೆಷಿನ್, ಸೋಲಾರ್ ಪ್ಯಾನಲ್ ಯಾವುದು ದುಬಾರಿ: ವಿದ್ಯುತ್ ಉಪಕರಣ, ಪ್ಲಾಸ್ಟಿಕ್, ಬಟ್ಟೆ, ಮೊಬೈಲ್ ಟವರ್ […]
ವಾಲ್ಮಿಕಿ ನಿಗಮದ ಹಗರಣದಲ್ಲಿ ಸಿಎಂ, ಮಾಜಿ ಸಚಿವರ ಹೆಸರು ಹೇಳುವಂತೆ ಈಡಿ ಅಧಿಕಾರಿಗಳಿಂದ ಒತ್ತಡದ ಆರೋಪ; ದೂರು ದಾಖಲು

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ 187 ಕೋಟಿ ರೂ. ಅವ್ಯವಹಾರ ಆರೋಪಕ್ಕೆ ಸಂಬಂಧಿಸಿ ಮಹತ್ತರವಾದ ಬೆಳವಣಿಗೆ ನಡೆದಿದ್ದು, ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ , ಮಾಜಿ ಸಚಿವ ನಾಗೇಂದ್ರ ಹಾಗೂ ಹಣಕಾಸು ಇಲಾಖೆಯನ್ನು ಸಿಲುಕಿಸುವಂತೆ ರಾಜ್ಯ ಸರ್ಕಾರಿ ಅಧಿಕಾರಿಯೊಬ್ಬರಿಗೆ ಇಡಿ ಅಧಿಕಾರಿಗಳು ಒತ್ತಡ ಹೇರಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ಕುರಿತು ಪ್ರಕರಣ ಕೂಡ ದಾಖಲಾಗಿದೆ. ಜುಲೈ 16 ರಂದು ನಡೆದ ವಿಚಾರಣೆ ವೇಳೆ ಕಣ್ಣನ್ 17 ಪ್ರಶ್ನೆಗಳನ್ನು ಕೇಳಿದ್ದು, ಅದಕ್ಕೆ […]
ವರದಕ್ಷಿಣೆಗಾಗಿ ಗರ್ಭಿಣಿ ಮಹಿಳೆಯ ಕೈಕಾಲು ಕತ್ತರಿಸಿ ಭೀಕರವಾಗಿ ಕೊಲೆ

ವರದಕ್ಷಿಣೆಗಾಗಿ 23 ವರ್ಷದ ಗರ್ಭಿಣಿ ಮಹಿಳೆಯನ್ನು ಕೊಲೆ ಮಾಡಿ, ಆಕೆಯ ಕೈಕಾಲುಗಳನ್ನು ಕತ್ತರಿಸಿ ದೇಹಕ್ಕೆ ಬೆಂಕಿ ಹಚ್ಚಿರುವ ಘಟನೆ ಮಧ್ಯಪ್ರದೇಶದ ರಾಜ್‍ಗಢ ಜಿಲ್ಲೆಯಲ್ಲಿ ನಡೆದಿದೆ. ಕಾಳಿಪೀಠ ಪೊಲೀಸ್ ಠಾಣೆ ವ್ಯಾಪ್ತಿಯ ತಂಡಿ ಖುರ್ದ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ದುರ್ದೈವಿ ಮಹಿಳೆಯನ್ನು ರೀನಾ ತನ್ವಾರ್ ಎಂದು ಗುರುತಿಸಲಾಗಿದೆ. ರೀನಾಗೆ ಪತಿ ಮಿಥುನ್ ಮತ್ತು ಅತ್ತೆಯಂದಿರು ವರದಕ್ಷಿಣೆಗಾಗಿ ಪೀಡಿಸುತ್ತಿದ್ದರು ಎಂದು ಕುಟುಂಬದವರು ಆರೋಪಿಸಿದ್ದಾರೆ. ರೀನಾ ತಂದೆ ರಾಮಪ್ರಸಾದ್ ತನ್ವಾರ್ ಪೊಲೀಸರೊಂದಿಗೆ ತಂಡಿ ಖುರ್ದ್ ಗ್ರಾಮಕ್ಕೆ […]
ಯುಎಇಯಲ್ಲಿ ಪ್ರತಿಭಟನೆ ನಡೆಸಿದ್ದಕ್ಕೆ 53 ಮಂದಿಗೆ 10 ವರ್ಷ ಜೈಲು ಶಿಕ್ಷೆ

ಬಾಂಗ್ಲಾದೇಶದಲ್ಲಿನ ಮೀಸಲಾತಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಯುಎಇಯಲ್ಲಿ ಪ್ರತಿಭಟನೆ ನಡೆಸಿದ 57 ಬಾಂಗ್ಲಾದೇಶಿಗರನ್ನು ಯುಎಇ ನ್ಯಾಯಾಲಯ 10 ವರ್ಷ ಜೈಲಿಗೆ ತಳ್ಳಿದೆ. ಬಾಂಗ್ಲಾದೇಶ ಸರ್ಕಾರವು ತೆಗೆದುಕೊಂಡ ಮಿಸಲಾತಿ ನಿರ್ಧಾರಗಳನ್ನು ವಿರೋಧಿಸಿ ಯುಎಇಯ ಹಲವಾರು ಬೀದಿಗಳಲ್ಲಿ ಬಾಂಗ್ಲಾದೇಶಿಗಳು ಪ್ರತಿಭಟನಾ ಜಾಥಾವನ್ನು ನಡೆಸಿದ್ದರು. ಯುಎಇಯಲ್ಲಿ ಬಾಂಗ್ಲಾದೇಶದ ವಲಸಿಗರು ಅತೀ ಹೆಚ್ಚು ಸಂಖ್ಯೆಯಲ್ಲಿದ್ದು, ಅಲ್ಲಿ ಕಡಿಮೆ ಸಂಬಳಕ್ಕೆ ಕೆಲಸ ಮಾಡುತ್ತಾರೆ. ಇದೀಗ ಬಾಂಗ್ಲಾದೇಶದ ವಿರುದ್ದ ಯುಎಇಲ್ಲಿ ಪ್ರತಿಭಟನೆ ನಡೆಸಿದ್ದಕ್ಕೆ ಅಬುಧಾಬಿ ಫೆಡರಲ್ ಮೇಲ್ಮನವಿ ನ್ಯಾಯಾಲಯವು 53 ಬಾಂಗ್ಲಾದೇಶದ ಪ್ರಜೆಗಳಿಗೆ […]
ಅಂಕೋಲಾ ಗುಡ್ಡೆ ಕುಸಿತ ಸ್ಥಳದಲ್ಲಿ 8ನೇ ಮೃತದೇಹ ಪತ್ತೆ

ಉತ್ತರ ಕನ್ನಡ: ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ದುರಂತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದ್ದು, ಇದೀಗ ಸ್ಥಳದಲ್ಲಿ ಮಹಿಳೆಯೋರ್ವರ ಮೃತದೇಹ ಪತ್ತೆಯಾಗಿದೆ. ಗಂಗಾವಳಿ ನದಿಯ ಗಂಗೆಕೊಳ್ಳ ಸಮೀಪ ಮತ್ತೊಂದು ಶವ ಪತ್ತೆಯಾಗಿದ್ದು, ಮೃತರನ್ನು ಉಳುವರೆ ಗ್ರಾಮದ ಸಣ್ಣಿ ಹನುಮತಗೌಡ (61) ಎಂದು ಗುರುತಿಸಲಾಗಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆಸಿರುವ ಸಿಬ್ಬಂದಿಗಳು ಉಳಿದ ಮೂವರ ಮೃತದೇಹದ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ. ಈವರೆಗೆ ದುರ್ಘಟನೆಯಲ್ಲಿ 8 ಮಂದಿಯ ಮೃತದೇಹ ಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯ ರಕ್ಷಣೆ

ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಯನ್ನು ಪೊಲೀಸರು ರಕ್ಷಣೆ ಮಾಡಿರುವಂತಹ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕುಗ್ವೆ ಗ್ರಾಮದಲ್ಲಿ ನಡೆದಿದೆ. ಸಾಗರ ತಾಲೂಕಿನ ಅಣಲೇಕೊಪ್ಪ ನಿವಾಸಿಗಳಾದ ಸಂಗೀತಾ(33) ಮತ್ತು ಮಕ್ಕಳಾದ ಪ್ರೀತಿ(13), ಪ್ರಜ್ವಲ್(9) ಆತ್ಮಹತ್ಯೆಗೆ ಯತ್ನಿಸಿದವರು. ಮಹಿಳೆ ತನ್ನ ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ಕೂಡಲೇ ಸ್ಥಳೀಯರು ಪೊಲೀಸರಿಗೆ ಕರೆಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಹಿಳೆ ಮತ್ತು ಮಕ್ಕಳನ್ನ ರಕ್ಷಿಸಿದ್ದಾರೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇಬ್ಬರು ಮಹಿಳೆಯರನ್ನು ಜೀವಂತ ಸಮಾಧಿ ಮಾಡಿದ ಗುಂಪು: ಮುಂದೇನಾಯ್ತು?

ಇಬ್ಬರು ಮಹಿಳೆಯರು ತಮ್ಮ ಪ್ರದೇಶದಲ್ಲಿ ರಸ್ತೆ ನಿರ್ಮಾಣವನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾಗ ಟ್ರಕ್‌ನಿಂದ ಮಣ್ಣು ಸುರಿದು ಅವರನ್ನು ಜೀವಂತವಾಗಿ ಭಾಗಶಃ ಸಮಾಧಿ ಮಾಡಿರುವ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ. ಈ ಆಘಾತಕಾರಿ ಘಟನೆಯ ವಿಡಿಯೋ ವೈರಲ್ ಆಗಿದೆ. ಮಂಗವಾ ಪೊಲೀಸ್ ಠಾಣಾ ವ್ಯಾಪ್ತಿಯ ಹಿನೋಟಾ ಜೋರೋಟ್ ಗ್ರಾಮದಲ್ಲಿ ಖಾಸಗಿ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾಗ ಮಮತಾ ಪಾಂಡೆ ಮತ್ತು ಆಶಾ ಪಾಂಡೆ ಎಂಬ ಮಹಿಳೆಯರನ್ನು ಮಣ್ಣಿನಲ್ಲಿ ಕುತ್ತಿಗೆಯವರೆಗೂ ಹೂತು ಹಾಕಲಾಗಿದೆ. ಘಟನೆಯ ಬಳಿಕ ಕೆಲ […]