ರೈಲಿಗೆ ತಲೆ ಕೊಟ್ಟು ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಆತ್ಮಹತ್ಯೆ

ಚಲಿಸುತಿದ್ದ ರೈಲಿಗೆ ತಲೆ ಕೊಟ್ಟು ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಓರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ರೈಲ್ವೆ ನಿಲ್ದಾಣದ ಸಮೀಪ ಶನಿವಾರ ನಡೆದಿದೆ. ಮೃತರನ್ನು ಶಿವಪ್ರಕಾಶ್ ಆರಾಧ್ಯ ಎಂದು ಗುರುತಿಸಲಾಗಿದೆ. ಶಿವಪ್ರಕಾಶ್ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ತುರುವೇಕೆರೆ ಪೊಲೀಸ್ ಠಾಣೆಯಲ್ಲೂ ಕೆಲಸ ಮಾಡಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಯಶವಂತಪುರ ರೈಲ್ವೆ ಪೊಲೀಸರು ಮತ್ತು ಗುಬ್ಬಿ ಪೊಲೀಸರು ಭೇಟಿ ನೀಡಿ […]
ಜೀವಾವಧಿ ಶಿಕ್ಷೆಗೆ ಗುರಿಯಾಗಿ ಜೈಲಿನಲ್ಲಿ ಬಂಧಿಯಾಗಿರುವ ನೊಬೆಲ್ ಪ್ರಶಸ್ತಿ ಪುರಸ್ಕೃತ ಮುಹಮ್ಮದ್ ಯೂನಸ್

ಖ್ಯಾತ ಬಾಂಗ್ಲಾದೇಶದ ಅರ್ಥಶಾಸ್ತ್ರಜ್ಞ ಮತ್ತು ನೊಬೆಲ್ ಪ್ರಶಸ್ತಿ ಪುರಸ್ಕೃತ ಪ್ರೊಫೆಸರ್ ಮುಹಮ್ಮದ್ ಯೂನಸ್, ಕಾರ್ಮಿಕ ಕಾನೂನು ಉಲ್ಲಂಘನೆ ಮತ್ತು ಭ್ರಷ್ಟಾಚಾರದ ಆರೋಪದ ಮೇಲೆ ಪ್ರಸ್ತುತ ತನ್ನ ತಾಯ್ನಾಡಿನಲ್ಲಿ ಜೀವಾವಧಿ ಶಿಕ್ಷೆಯನ್ನು ಎದುರಿಸುತ್ತಿದ್ದಾರೆ ಎಂದು ಬ್ಲೂಮ್‌ಬರ್ಗ್ ವರದಿ ಮಾಡಿದೆ. ಕಿರುಬಂಡವಾಳ ಆಂದೋಲನದ ಪ್ರವರ್ತಕರಾಗಿರುವ ಯೂನಸ್, 1983ರಲ್ಲಿ ಗ್ರಾಮೀಣ ಬ್ಯಾಂಕ್ ಪರಿಕಲ್ಪನೆಯನ್ನು ರೂಪಿಸಿದರು, ಇದು ಬಡ ಜನರಿಗೆ ಸಣ್ಣ ಸಾಲಗಳನ್ನು ನೀಡುವ ಮೂಲಕ ಕ್ರಾಂತಿಯನ್ನೇ ಸೃಷ್ಟಿಸಿತ್ತು. ಈ ಕಲ್ಪನೆಯು ಜಾಗತಿಕವಾಗಿ ಗಮನವನ್ನು ಸೆಳೆದಿದೆ. ಇದು ಲಕ್ಷಾಂತರ ಜನರನ್ನು ಬಡತನದಿಂದ ಮೇಲಕ್ಕೆತ್ತಿದೆ. […]
ಬಂಟ್ವಾಳ; ಪೆಂಡಾಲ್ ಹಾಕುವಾಗ ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು, ನಾಲ್ವರಿಗೆ ಗಾಯ

ಬಂಟ್ವಾಳ: ಪೆಂಡಾಲ್ ಹಾಕುವಾಗ ಕಬ್ಬಿಣದ ರಾಡ್ ವಿದ್ಯುತ್ ತಂತಿಗೆ ತಗುಲಿ ಬಿಹಾರ ಮೂಲದ ಯುವಕನೋರ್ವ ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ಕಡೇಶ್ವಾಲ್ಯ ಗ್ರಾಮದ ಕಾಡಬೆಟ್ಟು ಎಂಬಲ್ಲಿ ಮದ್ಯಾಹ್ನ ನಡೆದಿದೆ. ಬಿಹಾರ ಮೂಲದ ಕುಂದನ್ ಕುಮಾರ್ ಮಂಡಲ್ (18) ಎಂಬಾತ ಮೃತಪಟ್ಟಿದ್ದು, ಕಡೇಶ್ವಾಲ್ಯ ಗ್ರಾಮದ ಪ್ರಸನ್ನ , ಜಾರ್ಖಂಡ್ ಮೂಲದ ಬಬ್ಲು, ಪ್ರದೀಪ್, ಪಶ್ಚಿಮ ಬಂಗಾಳದ ರೋಹಿತ್ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆಯನ್ನು ನಡೆಸುತ್ತಿದ್ದಾರೆ.
ಸಾನಿಯಾ ಮಿರ್ಜಾ ಅವರನ್ನು ಕ್ರಿಕೆಟರ್ ಶಮಿ ನಿಜಕ್ಕೂ ವಿವಾಹವಾಗಿದ್ದಾರಾ? ಶಮಿ ಕೊಟ್ಟ ಸ್ಪಷ್ಟನೆ ಏನು?

ಮಾಜಿ ಟೆನಿಸ್ ತಾರೆ ಸಾನಿಯಾ ಮಿರ್ಜಾ, ಪಾಕಿಸ್ತಾನದ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರಿಂದ ವಿಚ್ಛೇದನ ಪಡೆದ ಬಳಿಕ ಟೀಮ್ ಇಂಡಿಯಾದ ಕ್ರಿಕೆಟಿಗ ಮೊಹಮ್ಮದ್ ಶಮಿ ಅವರನ್ನು ಮದುವೆಯಾಗುತ್ತಾರೆ ಎಂಬ ಊಹಾಪೋಹಾ ಹಬ್ಬಿತ್ತು. ಈ ಬಗ್ಗೆ ಕುದ್ದು ಶಮಿ ಸ್ಪಷ್ಟನೆಯನ್ನು ನೀಡಿದ್ದಾರೆ. ಯೂಟ್ಯೂಬ್ ಸಂವಾದವೊಂದರಲ್ಲಿ ಮಾತನಾಡಿದ ಶಮಿ, ಸಾನಿಯಾ ಜತೆಗಿನ ಮದುವೆಯ ವಿಚಾರದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನನ್ನ ಮತ್ತು ಸಾನಿಯಾ ಮದುವೆಯ ವಿಚಾರವಾಗಿ ಹರಿದಾಡುತ್ತಿರುವ ಸುದ್ದಿ ಸತ್ಯಕ್ಕೆ ದೂರವಾಗಿದೆ. ಇಂತಹ ಗಾಸಿಪ್ ಗಳಿಂದ ಕೆಲವರಿಗೆ ಮನರಂಜನೆ […]
ಜ್ಯುವೆಲ್ಲರಿ ಅಂಗಡಿ ಆರಂಭಿಸುವ ಉದ್ದೇಶದಿಂದ ತಾನು ಕೆಲಸ ಮಾಡುತ್ತಿದ್ದ ಜ್ಯುವೆಲ್ಲರಿ ಅಂಗಡಿಯಿಂದಲೇ ಚಿನ್ನಾಭರಣ ಕಳ್ಳತನ; ಆರೋಪಿ ಅರೆಸ್ಟ್

ಬೆಂಗಳೂರು; ಜ್ಯುವೆಲ್ಲರಿ ಅಂಗಡಿ ಆರಂಭಿಸಲು ತಾನು ಕೆಲಸ ಮಾಡುತ್ತಿದ್ದ ಜ್ಯುವೆಲ್ಲರಿ ಅಂಗಡಿಯಲ್ಲಿ ಚಿನ್ನ ಮತ್ತು ಬೆಳ್ಳಿಯನ್ನು ಕಳವು ಮಾಡಿದ್ದ ಆರೋಪಿಯನ್ನು ಸಂಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಪ್ರಮೋದ್ ಕುಮಾರ್(52) ಬಂಧಿತ ಆರೋಪಿಯಾಗಿದ್ದಾನೆ. ಬಂಧಿತನಿಂದ 20.75 ಲಕ್ಷ ಮೌಲ್ಯದ 300 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ 954 ಗ್ರಾಂ ಬೆಳ್ಳಿ ಸಾಮಗ್ರಿಗಳನ್ನು ಜಪ್ತಿ ಮಾಡಲಾಗಿದೆ. ಮಾಲಕ ಕಾಂತಿಲಾಲ್ ನೀಡಿದ ದೂರಿನ ಮೇರೆಗೆ ಸಂಜಯನಗರ ಠಾಣೆ ಇನ್‌ಸ್ಪೆಕ್ಟರ್ ಭಾಗ್ಯವತಿ ಕೆ.ಬಂಟಿ ನೇತೃತ್ವದಲ್ಲಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ […]
ಹೈದರಾಬಾದ್ ಮಕ್ಕಾ ಮಸೀದಿ ಧ್ವನಿವರ್ಧಕ ವಿವಾದ: ಪೊಲೀಸರಿಂದ ಸ್ಪಷ್ಟನೆ

ಹೈದರಾಬಾದ್: ಮಕ್ಕಾ ಮಸೀದಿಯ ಧ್ವನಿವರ್ಧಕಗಳ ಬಗ್ಗೆ ಗಲಾಟೆ ನಡೆದ ನಂತರ ಹೈದರಾಬಾದ್ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಪೊಲೀಸರು ಪರಿಸ್ಥಿತಿಯನ್ನು ಗಮನಿಸಿ, ಒಂದು ಗಂಟೆಯೊಳಗೆ ಅದನ್ನು ಪರಿಹರಿಸಲಾಯಿತು ಎಂದು ದಕ್ಷಿಣ ವಲಯ ಡಿಸಿಪಿ ಸ್ನೇಹಾ ಮೆಹ್ರಾ ಹೇಳಿದ್ದಾರೆ. ಪೊಲೀಸರು ಮಕ್ಕಾ ಮಸೀದಿ ಸೂಪರಿಂಟೆಂಡೆಂಟ್‌ಗೆ ಒತ್ತಡ ಹೇರಿಲ್ಲ ಎಂದು ಸ್ಪಷ್ಟಪಡಿಸಿದ ಅವರು ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಒತ್ತಿ ಹೇಳಿದರು. ಮಕ್ಕಾ ಮಸೀದಿ ಅಧೀಕ್ಷಕರ ಸೂಚನೆ ಮೇರೆಗೆ ಧ್ವನಿವರ್ಧಕವನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಲಾಗಿದೆ. ನಿನ್ನೆ, ಹೈದರಾಬಾದ್‌ನ ಮಕ್ಕಾ ಮಸೀದಿಯಲ್ಲಿ ಅಧಿಕಾರಿಗಳು ಧ್ವನಿವರ್ಧಕಗಳ […]
ನೇಜಾರು ತಾಯಿ & ಮಕ್ಕಳ ಹತ್ಯೆ ಪ್ರಕರಣ: ವಿಚಾರಣೆ ಮುಂದೂಡಿಕೆ

ಉಡುಪಿ: ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿರುವ ಹಿನ್ನೆಲೆ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು ಆ.24ಕ್ಕೆ ಮುಂದೂಡಿದೆ. ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ, ತನಗೆ ಹಾಗೂ ತನ್ನ ವಕೀಲರಿಗೆ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಉಡುಪಿ ಕೋರ್ಟ್‌ನಲ್ಲಿ ನಡೆಯುತ್ತಿರುವ ಈ ಪ್ರಕರಣದ ವಿಚಾರಣೆಯನ್ನು ಬೆಂಗಳೂರು ಕೋರ್ಟ್‌ಗೆ ವರ್ಗಾಯಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಧೀಶರು, ಮುಂದಿನ ವಿಚಾರಣೆವರೆಗೆ […]
ಬಸ್ ನಿಲ್ಧಾಣದಲ್ಲಿ ನಿಲ್ಲಿಸಿದ್ದ ಬಸ್ ನ್ನೇ ಕಳ್ಳತನ ಮಾಡಿದ ಕಳ್ಳರು!

ಚಿತ್ರದುರ್ಗ: ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್ ನ್ನು ಕಳ್ಳರು ಕಳ್ಳತನ ಮಾಡಿ ಪರಾರಿಯಾದ ಘಟನೆ ಚಿತ್ರದುರ್ಗದಿಂದ ವರದಿಯಾಗಿದೆ. ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್ ನ್ನು ಜುಲೈ 19 ಬೆಳಗಿನ ಜಾವ 2 ಗಂಟೆ ಸುಮಾರಿಗೆ ಕಳ್ಳರು ಕದ್ದು ಎಸ್ಕೇಪ್ ಆಗಿದ್ದಾರೆ. ನಾಯಕನಹಟ್ಟಿ ಮೂಲದ ಎಸ್‌ಆರ್‌ಇ ಬಸ್ ಮಾಲೀಕ ಸಯ್ಯದ್ ಅನ್ವರ್ ಬಾಷ ಅವರಿಗೆ ಸೇರಿದ ಎಸ್‌ಆರ್ ಎಕ್ಸ್‌ಪ್ರೆಸ್ ಬಸ್ ಕಳವು ಮಾಡಲಾಗಿದೆ. ಚಿತ್ರದುರ್ಗ- ಚಳ್ಳಕೆರೆ- ಜಗಳೂರು ಮಾರ್ಗದಲ್ಲಿ ಬಸ್ ಓಡಾಟ ನಡೆಸುತ್ತಿತ್ತು. ರಾತ್ರಿ ವೇಳೆ […]
ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಮಗ ಜೈಲು ಪಾಲಾದ ಕೊರಗಿನಲ್ಲಿ ಪ್ರಾಣ ಬಿಟ್ಟ ತಾಯಿ

ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲಿನಲ್ಲಿರುವ 4ನೇ ಆರೋಪಿ ರಾಘವೇಂದ್ರ ರಘು ತಾಯಿ ಮಂಜುಳಮ್ಮ ನಿಧನರಾಗಿದ್ದಾರೆ. ಚಿತ್ರದುರ್ಗದ ಕೋಳಿ ಬುರುಜನಹಟ್ಟಿ ನಿವಾಸದಲ್ಲಿ ಬೆಳಗಿನ ಜಾವ ಮಂಜುಳಮ್ಮ ಮೃತಪಟ್ಟಿದ್ದಾರೆ. ರಘುವನ್ನು ಪೊಲೀಸರು ತಾಯಿಯ ಅಂತ್ಯ ಸಂಸ್ಕಾರಕ್ಕೆ ಕರೆ ತರುವ ಸಾಧ್ಯತೆ ಇದೆ. ರಘು ಜೈಲು ಸೇರಿದ್ದರಿಂದ ಮಂಜುಳಮ್ಮ ಖಿನ್ನತೆಗೆ ಒಳಗಾಗಿ ಅನಾರೋಗ್ಯದಿಂದ ಬಳಲುತಿದ್ದರು ಎಂದು ರಾಘವೇಂದ್ರ ಸಹೋದರ ಹೇಳಿಕೊಂಡಿದ್ದಾರೆ. ಈ ಹಿಂದೆ ಪ್ರಕರಣದ ಮತ್ತೊಬ್ಬ ಆರೋಪಿ ಮನು ತಂದೆ ಕೂಡ ತಮ್ಮ ಮಗ ಅರೆಸ್ಟ್ ಆದ ಸುದ್ದಿ ಕೇಳಿ ಹೃದಯಾಘಾತಕ್ಕೊಳಗಾಗಿ […]
ಟ್ರಂಪ್ ಗೆ ಗುಂಡೇಟು ಘಟನೆಯನ್ನು ರಿಕ್ರಿಯೇಟ್ ಮಾಡಿದ ಉಗಾಂಡದ ಮಕ್ಕಳು!

ಅಮೆರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಇತ್ತೀಚೆಗೆ ನಡೆದ ಗುಂಡಿನ ದಾಳಿ ವಿಶ್ವದಾದ್ಯಂತ ಭಾರೀ ಸುದ್ದಿಯಾಗಿತ್ತು. ಇದೀಗ ಉಗಾಂಡದ ಕೆಲವು ಮಕ್ಕಳು ಮನರಂಜನೆಗಾಗಿ ಮರದ ಆಟಿಕೆ ಬಂದೂಕು ಮತ್ತು ಪ್ಲಾಸ್ಟಿಕ್ ಪೆಟ್ಟಿಗೆಗಳನ್ನು ಬಳಸಿ ಘಟನೆ ಮರುಸೃಷ್ಟಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಬುಲೆಟ್ ತಗುಲಿದಾಗ ಟ್ರಂಪ್ ಅವರ ಮುಖಭಾವ, ಕೆಳಗೆ ಬಾಗಿದ ದೃಶ್ಯ, ಗುಪ್ತದಳದ ಸಿಬ್ಬಂದಿ ತಕ್ಷಣ ಅವರನ್ನು ಸುತ್ತುವರಿದು ಸುರಕ್ಷಿತ ಪ್ರದೇಶಕ್ಕೆ ಕರೆದೊಯ್ದ ಘಟನೆಗಳನ್ನು ಉಗಾಂಡಾ ಮಕ್ಕಳು ಹಾಗೆಯೇ ಅಭಿನಯಿಸಿದ್ದಾರೆ. ಈ ಗುಂಪಿನಲ್ಲಿ […]