ವಿದ್ಯುತ್ ತಂತಿ ತಗುಲಿ ಯುವ ರೈತ ಮೃತ್ಯು

ಕಲಬುರಗಿ : ಜಮೀನಿನಲ್ಲಿ ಕೆಲಸ ಮಾಡುವಾಗ ವಿದ್ಯುತ್ ತಂತಿ ತಗುಲಿ ರೈತ ಮೃತಪಟ್ಟಿರುವ ಘಟನೆ ಕಲಬುರಗಿಯ ಹಡಗಿಲ್ ಹಾರುತಿ ಗ್ರಾಮದಲ್ಲಿ ನಡೆದಿದೆ. ಮೃತ ರೈತನನ್ನು ಖಾಜಪ್ಪ ಭಜಂತ್ರಿ ಎಂದು ಗುರುತಿಸಲಾಗಿದೆ. ಪರಿಚಯಸ್ಥರ ಜಮೀನಿನಲ್ಲಿ ಕೆಲಸ ಮಾಡುವಾಗ ಈ ದುರ್ಘಟನೆ ಸಂಭವಿಸಿದ್ದು, ಘಟನೆಯ ಬಳಿಕ ಆಸ್ಪತ್ರೆ ಕರೆದೊಯ್ಯುವ ಮಾರ್ಗಮದ್ಯೆ ಖಾಜಪ್ಪ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಕಲಬುರಗಿ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ: ಮುಂದುವರಿದ ಮಳೆ, ವಿವಿಧೆಡೆ ಹಾನಿ