Breaking News :

ಜನನ ಮತ್ತು ಮರಣ ನಾಗರಿಕ ನೋಂದಣಿ ನಿಖರವಾಗಿ ದಾಖಲಿಸಿ: ವೆಂಕಟ್ ರಾಜಾ

ಜನವಾಹಿನಿ News ಮಡಿಕೇರಿ : ಜನನ ಮತ್ತು ಮರಣ ನಾಗರಿಕ ನೋಂದಣಿ ಪದ್ಧತಿಯನ್ನು ನಿಖರವಾಗಿ ದಾಖಲಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಜನನ ಮತ್ತು ಮರಣ ನಾಗರಿಕ ನೋಂದಣಿ ಪದ್ಧತಿಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಷ್ಟ್ರದ ನಾಗರಿಕ ನೋಂದಣಿ ಜನನ ಮತ್ತು ಮರಣ ಅಧಿನಿಯಮ 1960 ರನ್ವಯ ಕರ್ನಾಟಕ ಜನನ ಮತ್ತು ಮರಣ ನೋಂದಣಿ 1970 ಮತ್ತು ಪುನರ್ […]

ಉರುಳಿಗೆ ಸಿಲುಕಿ ಬೃಹತ್ ಹುಲಿ ಸಾವು

  ಜನವಾಹಿನಿ News ಮಡಿಕೇರಿ : ಕೊಡಗು ಜಿಲ್ಲೆಯ ಚೆಟ್ಟಳ್ಳಿ ಸಮೀಪದ ಶ್ರೀಮಂಗಲ ಗ್ರಾಮದ ಭಗವತಿ ದೇವಾಲಯ ಬಳಿಯ ಕೆಚ್ಚೆಟ್ಟೀರ ಕುಟುಂಬದ ತೋಟದಲ್ಲಿ ಮಧ್ಯವಯಸ್ಸಿನ ಹುಲಿಯೊಂದು ಸಾವಿಗೀಡಾಗಿರುವ ಘಟನೆ ನಡೆದಿದೆ. ತೋಟದಲ್ಲಿ ಕೆಲಸಕ್ಕೆ ತೆರಳಿದ್ದ ಕಾರ್ಮಿಕರು ಹುಲಿಯ ಮೃತದೇಹ ಕಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಜಮೀನಿನಲ್ಲಿ ಕಾಡು ಹಂದಿಗಾಗಿ ಹಾಕಿದ್ದ ಉರುಳಿಗೆ ಸಿಲುಕಿದ್ದ ಹುಲಿ ಸಾವನ್ನಪ್ಪಿರುವುದ ಬೆಳಕಿಗೆ ಬಂದಿದೆ. ಮಾಹಿತಿ […]

ಪ್ರಧಾನಿ ಅವಹೇಳನ : ಆರೋಪಿಗಳು ಮಡಿಕೇರಿ ಬಿಜೆಪಿ ಮುಖಂಡರ ಚೇಲಾಗಳು ಕೊಡಗು ಕಾಂಗ್ರೆಸ್ ಆರೋಪ

ಜನವಾಹಿನಿ News ಮಡಿಕೇರಿ : ದೇಶದ ಪ್ರಧಾನ ಮಂತ್ರಿಗಳನ್ನು ಅಪಮಾನಿಸಿ ಬಂಧಿತರಾಗಿರುವ ಕಿಡಿಗೇಡಿ ಆರೋಪಿಗಳು ಮಡಿಕೇರಿ ನಗರ ಬಿಜೆಪಿ ಮುಖಂಡರ ಚೇಲಾಗಳಾಗಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ಗಂಭೀರ ಆರೋಪ ಮಾಡಿದ್ದಾರೆ. ಸಂವಿಧಾನ ಬದ್ದ ಹುದ್ದೆಯಲ್ಲಿ ಪರಮ್ಮೋಚ್ಛ ಸ್ಥಾನದಲ್ಲಿರುವ ದೇಶದ ಪ್ರಧಾನ ಮಂತ್ರಿಗಳನ್ನು ಮಡಿಕೇರಿಯ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿ ಅನಧಿಕೃತ ಮಳಿಗೆಗಳನ್ನು ಮಡಿಕೇರಿ ಬಿಜೆಪಿ ಮುಖಂಡರ ಬಹಿರಂಗ ಕುಮ್ಮಕ್ಕಿನಿಂದ ನಡೆಸುತ್ತಿರುವ ವ್ಯಕ್ತಿಯ ಸಿಬ್ಬಂದಿಗಳು ಅತ್ಯಂತ ಕೀಳಾಗಿ ನಿಂದಿಸಿ ವಿಡಿಯೋ ಹರಿಯಬಿಟ್ಟಿದ್ದು ಈ ಹಿನ್ನಲೆಯಲ್ಲಿ ಮಡಿಕೇರಿ […]

ಏ.24ರಿಂದ ಕೊಡವ ಜಮ್ಮಾ ಮುಸ್ಲಿಂ ಕುಟುಂಬಸ್ಥರ ಕ್ರಿಕೆಟ್ ಪಂದ್ಯಾವಳಿ

ಜನವಾಹಿನಿ News ಮಡಿಕೇರಿ : ಪುಡಿಯಂಡ ದೇವಣಗೇರಿ-ಕೊಂಡಂಗೇರಿ ಕುಟುಂಬಸ್ಥರ ವತಿಯಿಂದ ಕೊಡವ ಜಮ್ಮಾ ಮುಸ್ಲಿಂ ಸ್ಫೋರ್ಟ್ಸ್ ಮತ್ತು ಕಲ್ಚರಲ್ ಅಸೋಷಿಯೇಷನ್ ಆಶ್ರಯದಲ್ಲಿ ಕೊಡವ ಜಮ್ಮಾ ಮುಸ್ಲಿಂ ಸಮಾಜಬಾಂದವರಿಗೆ ೩ನೇ ಆವೃತ್ತಿಯ ಕ್ರಿಕೆಟ್ ಪಂದ್ಯಾಟವನ್ನು ೨೦೨೬ರ ಏ.೨೪ರಿಂದ ಮೇ.೧ರವರೆಗೆ ಎಸ್.ಎಂ.ಎಸ್ ಶಾಲಾ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪುಡಿಯಂಡ ಕುಟುಂಬದ ಅಧ್ಯಕ್ಷ ಉಸ್ಮಾನ್ ತಿಳಿಸಿದರು. ಮೊದಲ ವರ್ಷ ಕುವಲೆರ ಚಾಮಿಯಾಲ ಕುಟುಂಬ ಮತ್ತು ಎರಡನೇ ಪರ್ಷ ಆಲಿರ ಕುಟುಂಬಸ್ಥರು ಕ್ರಿಕೆಟ್ ಕ್ರೀಡಾಕೂಟವನ್ನು ಆಯೋಜಿಸಿದ್ದು, ೭೦ ಕುಟುಂಬಸ್ಥರು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಈ […]

ಜ.10, 11ರಂದು ಎಸ್‌ಆರ್‌ವಿ ಕನೆಕ್ಟ್-ಹಳೆ ವಿದ್ಯಾರ್ಥಿಗಳ ಕ್ರೀಡಾಕೂಟ

ಜನವಾಹಿನಿ News ಮಡಿಕೇರಿ : ಶ್ರೀ ರಾಜೇಶ್ವರಿ ವಿದ್ಯಾಲಯ ಮತ್ತು ವಿದ್ಯಾಲಯದ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಸಂಘದ ಸದಸ್ಯರಿಗೆ ಎಸ್‌ಆರ್‌ವಿ ಕನೆಕ್ಟ್-ಹಳೆ ವಿದ್ಯಾರ್ಥಿಗಳ ಕ್ರೀಡಾಕೂಟ ಜ.೧೦,೧೧ ರಂದು ನಗರದ ಗಾಂಧಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ರಾಜೇಶ್ವರಿ ವಿದ್ಯಾಲಯ ಅಧ್ಯಕ್ಷ ಗೋವಿಂದರಾಜ್ ತಿಳಿಸಿದರು. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀ ರಾಜೇಶ್ವರಿ ವಿದ್ಯಾಲಯದಲ್ಲಿ ೧೯೯೧ ಬ್ಯಾಚ್‌ನಿಂದ ೨೦೨೪ರವರೆಗೆ ಸುಮಾರು ೪,೦೦೦ಕ್ಕೂ ಅಧಿಕ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಹಳೆ ವಿದ್ಯಾರ್ಥಿಗಳನ್ನು ಒಂದೆಡೆ ಸೇರಿಸುವ ದೃಷ್ಠಿಯಿಂದ ಎಸ್‌ಆರ್‌ವಿ ಕನೆಕ್ಟ್-ಹಳೆ […]

ಪ್ರಧಾನಿಗೆ ಅವಹೇಳನ ಪ್ರಕರಣ : ಆರೋಪಿಗಳ ಗಡಿಪಾರಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಜನವಾಹಿನಿ News ಮಡಿಕೇರಿ : ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಹೇಳನ ಮಾಡಿದ ಯುವಕರ ಗಡಿಪಾರಿಗೆ ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು. ಇಂದಿರಾಗಾಂಧಿ ವೃತ್ತದಲ್ಲಿ ಸೇರಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯ ಸರಕಾರದ ವಿರುದ್ಧ ಧಿಕ್ಕಾರ ಕೂಗಿ ಅಸಮಾಧಾನ ಹೊರಹಾಕಿದರಲ್ಲದೆ, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು. ಈ ಸಂದರ್ಭ ಮಾತನಾಡಿದ ಮಾಜಿ ಶಾಸಕ ಅಪ್ಪಚ್ಚು ರಂಜನ್‌, ಭಾರತದ ಪ್ರಧಾನಿ ನರೇಂದ್ರ ಮೋದಿ ಇಡೀ ಪ್ರಪಂಚದಲ್ಲಿಯೇ ವಿಶ್ವಗುರು ಎಂದು […]

ಕೊಡಗಿನ ಇತಿಹಾಸದಲ್ಲೇ ಮೊದಲ ಬಾರಿಗೆ ಕೊಲೆ ಪ್ರಕರಣದ ಆರೋಪಿಗೆ ಗಲ್ಲು ಶಿಕ್ಷೆ..!

ಜನವಾಹಿನಿ News ಮಡಿಕೇರಿ : ಕೊಡಗು ಜಿಲ್ಲೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ, ವಿರಾಜಪೇಟೆ ಸೆಷನ್ಸ್‌ ನ್ಯಾಯಾಲಯವು ಸಾಮೂಹಿಕ ಹತ್ಯೆ ಪ್ರಕರಣದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಒಂದೇ ಕುಟುಂಬದ ನಾಲ್ವರ ಹತ್ಯೆ ಗೈದಿದ್ದ ಆರೋಪಿ :2024 ರಲ್ಲಿ ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದ ಕೊಳತೋಡು ಎಂಬಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೇರಳ ಮೂಲದ ಗಿರೀಶ್ (37) ಎಂಬಾತ ಬರ್ಬರವಾಗಿ ಹತ್ಯೆ ಮಾಡಿದ್ದ. ಮೃತಪಟ್ಟವರನ್ನು ನಾಗಿ (35), ಆಕೆಯ ಆರು ವರ್ಷದ ಮಗಳು […]

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆಯ ವಾರ್ಷಿಕ ಮಹಾಸಭೆ 

  ಜನವಾಹಿನಿ News ಮಡಿಕೇರಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆಯ ವಾರ್ಷಿಕ ಮಹಾಸಭೆಯು ಸೋಮವಾರ ಪೊನ್ನಮ್ಮ ಕುಶಾಲಪ್ಪ ಸ್ಕೌಟ್ಸ್ ಮತ್ತು ಗೈಡ್ಸ್ ಭವನ ಸಭಾಂಗಣದಲ್ಲಿ ಕೊಡಗು ಜಿಲ್ಲೆಯ ಉಪ ವಿಭಾಗಧಿಕಾರಿ ನಿತಿನ್ ಚಕ್ಕಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮೊದಲಿಗೆ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು. ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯೂ ಅವರು ಆಗಮಿಸಿದ ಸರ್ವರನ್ನು ಸ್ವಾಗತಿಸಿದ್ದರು. ಸ್ವಪರಿಚಯ ಮಾಡಲಾಯಿತು. 2024-2025 ನೇ ಸಾಲಿನಲ್ಲಿ ನಿಧನರಾದ ಸೋಮವಾರಪೇಟೆ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಚಂದ್ರಶೇಖರ್, ಸಾವಿತ್ರಿ, […]

ನಿವೇಶನ ರಹಿತರಿಗೆ ನಿವೇಶನಕ್ಕಾಗಿ ಆಗ್ರಹಿಸಿ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ 

  ಜನವಾಹಿನಿ News ಸಿದ್ದಾಪುರ: ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಗೋಡು ಹಾಗೂ ಗುಹ್ಯ ಗ್ರಾಮದ ಸುತ್ತಮುತ್ತಲಿರುವ ನಿರಾಶ್ರಿತರು ಹಾಗೂ ಲೈನ್ ಮನೆಗಳಲ್ಲಿರುವ ನಿವೇಶನ ರಹಿತರಿಗೆ ಶಾಶ್ವತ ನಿವೇಶನ ಒದಗಿಸಬೇಕೆಂದು ಒತ್ತಾಯಿಸಿ ಸಿಪಿಐಎಂ ಪಕ್ಷದ ಕಾರ್ಯಕರ್ತರು ಸಿದ್ದಾಪುರದಲ್ಲಿ ಪ್ರತಿಭಟನೆ ನಡೆಸಿದರು. ಮಾರುಕಟ್ಟೆ ಬಳಿಯಿರುವ ಪಕ್ಷದ ಕಚೇರಿಯಿಂದ ಬಸ್ ನಿಲ್ದಾಣದ ಮೂಲಕ ಪಂಚಾಯತಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಬಳಿಕ ಗ್ರಾಮ ಪಂಚಾಯತಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡಲು ವಿಫಲವಾಗಿರುವ ಜಿಲ್ಲಾಡಳಿತ ಹಾಗೂ ಗ್ರಾಮ […]

ಸಿದ್ದಾಪುರ : ಚುರುಕುಗೊಂಡ ರಸ್ತೆ ಕಾಮಗಾರಿ – ಭರದಿಂದ ಸಾಗುತ್ತಿರುವ ಡಾಂಬರೀಕರಣ :  ನಿಟ್ಟುಸಿರುಬಿಟ್ಟ ಜನತೆ

  ಜನವಾಹಿನಿ News ಸಿದ್ದಾಪುರ : ವರ್ಷದ ಹಿಂದೆ ಪ್ರಾರಂಭವಾದ ಸಿದ್ದಾಪುರ – ವಿರಾಜಪೇಟೆ ನಡುವಿನ ಕೊಣನೂರು ಮಾಕುಟ್ಟ ರಾಷ್ಟ್ರೀಯ ಹೆದ್ದಾರಿಯ ಅಭಿವೃದ್ಧಿ ಕಾಮಗಾರಿಯೂ ಹಲವು ದಿನಗಳಿಂದ ಮಳೆ ಮತ್ತು ಇನ್ನಿತರ ಕಾರಣಗಳಿಂದ ಆಮೆ ಗತಿಯಲ್ಲಿ ಸಾಗುತ್ತಿತ್ತು. ಆದರೆ ವರ್ಷದ ಬಳಿಕ ಇದೀಗ ರಸ್ತೆ ಕಾಮಗಾರಿ ಚುರುಕುಗೊಂಡಿದ್ದು, ಡಾಂಬರೀಕರಣ ಭರದಿಂದ ಸಾಗುತ್ತಿದೆ. ಇದರಿಂದಾಗಿ ಕೆಸರು , ವಿಪರೀತ ಧೂಳು, ಸಂಚಾರ ದಟ್ಟಣೆ ಹೀಗೆ ಹಲವು ರೀತಿಯ ತೊಂದರೆ ಅನುಭವಿಸುತ್ತಿದ್ದ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ವಾಹನ ಸವಾರರು ನಿಟ್ಟುಸಿರು […]