ಮಡಿಕೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಸ್ಥಾಪನೆಗೆ ಶಾಸಕರಾದ ಡಾ.ಮಂತರ್ ಗೌಡ ಭೂಮಿ ಪೂಜೆ ನೆರವೇರಿಸಿದರು

ಜನವಾಹಿನಿ News ಮಡಿಕೇರಿ : ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಬಳಿಯ ನಗರಸಭಾ ಉದ್ಯಾನವನದ ಜಾಗದಲ್ಲಿ ಸಂವಿಧಾನ ಶಿಲ್ಪಿ, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಶಾಸಕರಾದ ಡಾ.ಮಂತರ್ ಗೌಡ ಅವರು ಶುಕ್ರವಾರ ಭೂಮಿಪೂಜೆ ನೆರವೇರಿಸಿದರು. ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಉಪಾಧ್ಯಕ್ಷರಾದ ಮಹೇಶ್ ಜೈನಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ನಗರಸಭೆ ಸದಸ್ಯರಾದ ಅನಿತಾ ಪೂವಯ್ಯ, ಕೆ.ಎಸ್.ರಮೇಶ್, ಎಸ್.ಸಿ.ಸತೀಶ್, ಚಿತ್ರಾವತಿ, ಉಮೇಶ್ ಸುಬ್ರಮಣಿ, […]
ಇಂಜಲಗೆರೆ ಮುತ್ತಪ್ಪ ದೇಗುಲದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಪುತ್ತರಿ ವೆಳ್ಳಾಟಂ

ಜನವಾಹಿನಿ News ಸಿದ್ದಾಪುರ :: ಇಲ್ಲಿಗೆ ಸಮೀಪದ ಇಂಜಲಗೆರೆ ಶ್ರೀ ಪೂಮಡಪುರ ಮುತ್ತಪ್ಪ ಸ್ವಾಮಿ ದೇವಾಲಯದಲ್ಲಿ ಗುರುವಾರ ಸಂಜೆ ಪುತ್ತರಿ ವೆಳ್ಳಾಟಂ ಶ್ರದ್ದಾಭಕ್ತಿಯಿಂದ ನಡೆಯಿತು. ಶ್ರೀ ಮುತ್ತಪ್ಪ ಸ್ವಾಮಿ ದೇವಾಲಯ ಸಮಿತಿ ವತಿಯಿಂದ ಹುತ್ತರಿ ಹಬ್ಬದ ಪ್ರಯುಕ್ತ ಇದೇ ಮೊದಲ ಬಾರಿಗೆ ಆಯೋಜಿಸಲಾಗಿದ್ದ, ಕಾರ್ಯಕ್ರಮದಲ್ಲಿ ಇಂಜಲಗೆರೆ, ಪುಲಿಯೇರಿ ಸಿದ್ದಾಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ್ದ ಭಕ್ತರು ಮುತ್ತಪ್ಪ ಸ್ವಾಮಿ, ವಸೂರಿಮಾಲ ಹಾಗೂ ಗುಳಿಗ ದೈವಗಳ ವೆಳ್ಳಾಟಂ ಕಣ್ತುಂಬಿಸಿಕೊಂಡರು. ವೆಳ್ಳಾಟಂ ನಂತರ ಭಕ್ತರು ಮುತ್ತಪ್ಪ ಸ್ವಾಮಿ, ಗುಳಿಗ ದೈವಗಳ […]
ಪೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ ಶಿಬಿರ

ಜನವಾಹಿನಿ News ಮಡಿಕೇರಿ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿ ಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಡಿಸೆಂಬರ್ 22 ರಿಂದ ನಿರುದ್ಯೋಗಿ ಪುರುಷರಿಗೆ ಫೆÇೀಟೋಗ್ರಫಿ ಮತ್ತು ವಿಡಿಯೋಗ್ರಫಿ ಉಚಿತ ತರಬೇತಿ ಶಿಬಿರ ಏರ್ಪಡಿಸಿದೆ. ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 35 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದು. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು […]
ನಾಳೆಯಿಂದ ಮಂಡ್ಯದಲ್ಲಿ ಕೃಷಿ ಮೇಳ

ಜನವಾಹಿನಿ News ಮಡಿಕೇರಿ : ಮಂಡ್ಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕ ಸರ್ಕಾರದ ಕೃಷಿ, ತೋಟಗಾರಿಕೆ, ಪಶು ಸಂಗೋಪಣೆ ಮತ್ತು ಪಶು ವೈದ್ಯಕೀಯ ಸೇವೆಗಳು, ಜಲಾನಯನ ಅಭಿವೃದ್ಧಿ, ರೇಷ್ಮೆ, ಅರಣ್ಯ, ಮೀನುಗಾರಿಕೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ನಬಾರ್ಡ್ ಇವರುಗಳ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್, 05 ರಿಂದ ನಾಳೆಯಿಂದ 7 ವರೆಗೆ ಮಂಡ್ಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸಮಗ್ರ ಕೃಷಿಯಿಂದ ಸುಸ್ಥಿರತೆ ಎಂಬ ವಿಷಯದಡಿ ಕೃಷಿ ಮೇಳ-2025 ನಡೆಯಲಿದೆ. […]
ಡಿ.10 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ

ಜನವಾಹಿನಿ News ಮಡಿಕೇರಿ : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಡಿಸೆಂಬರ್, 10 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಗೆಯವರೆಗೆ ಪೊನ್ನಂಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. […]
ಚತುಷ್ಪಥ ರಸ್ತೆ ನಿರ್ಮಾಣ ನಂತರ ವಾಹನ ದಟ್ಟಣೆ ಹೆಚ್ಚಳ ಸಾಧ್ಯತೆ : ಈಗಿನಿಂದಲೇ ರಸ್ತೆ ಸುರಕ್ಷತೆಗೆ ಒತ್ತು ನೀಡಿ: ವೆಂಕಟ್ ರಾಜಾ

ಜನವಾಹಿನಿ News ಮಡಿಕೇರಿ : ಶ್ರೀರಂಗಪಟ್ಟಣದಿಂದ ಗುಡ್ಡೆಹೊಸೂರು ಬಳಿಯ ಬಸವನಹಳ್ಳಿ ವರೆಗೆ ನಾಲ್ಕು ಪಥದ ರಸ್ತೆ ಕಾಮಗಾರಿ ಈಗಾಗಲೇ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಬಸವನಹಳ್ಳಿಯಿಂದ ಸಂಪಾಜೆವರೆಗೆ ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಈಗಿನಿಂದಲೇ ಸುಗಮ ಸಾರಿಗೆ ಸಂಚಾರಕ್ಕೆ ಅಗತ್ಯ ಮುನ್ನೆಚ್ಚರ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸಲಹೆ ಮಾಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಅವರ ಸಭಾಂಗಣದಲ್ಲಿ ‘ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ’ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕುಶಾಲನಗರದ ಗುಡ್ಡೆಹೊಸೂರು […]
ವಿಶ್ವ ವಿಶೇಷಚೇತನರ ದಿನಾಚರಣೆ : ವಿಶೇಷಚೇತನರ ಸಾಂಸ್ಕøತಿಕ ಕಾರ್ಯಕ್ರಮ ವೀಕ್ಷಿಸಿ ಖುಷಿಪಟ್ಟ ಶಾಸಕ ಮಂತರ್ ಗೌಡ

ಜನವಾಹಿನಿ News ಮಡಿಕೇರಿ : ವಿಶೇಷಚೇತನರಿಗೆ ಅನುಕಂಪ ಬದಲು ಅವಕಾಶಗಳನ್ನು ಕಲ್ಪಿಸಿದ್ದಲ್ಲಿ ಇತರರಂತೆ ಜೀವನ ನಡೆಸಲು ಸಹಕಾರಿಯಾಗಲಿದೆ. ಆ ನಿಟ್ಟಿನಲ್ಲಿ ವಿಶೇಷ ಚೇತನರಿಗೂ ಸಮಾನ ಅವಕಾಶ ಕಲ್ಪಿಸಬೇಕು ಎಂದು ಶಾಸಕರಾದ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್ ಕೊಡಗು ಶಾಖೆ […]
ಬೆಳೆಗಾರರಿಗೆ ಪರಿಹಾರ ನೀಡದ ಸರ್ಕಾರ : ಖಂಡಿಸಿ ಮಡಿಕೇರಿಯಲ್ಲಿ ಪ್ರತಿಭಟನೆ

ಜನವಾಹಿನಿ News ಮಡಿಕೇರಿ : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನೀತಿಯನ್ನು ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿ ರೈತ ಮೋರ್ಚ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅಮ್ಮುಣಿಚಂಡ ರಂಜಿ ಪೂಣಚ್ಚ ಮಾತನಾಡಿ, ಕೇಂದ್ರದ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ರೈತರಿಗೆ ನೀಡುತ್ತಿದ್ದ ಕಿಸಾನ್ ಸಮ್ಮಾನ್ ಯೋಜನೆಯ ರೂ.೬,೦೦೦ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದ ಬಿ.ಜೆ.ಪಿ ಸರ್ಕಾರ ರೂ.೪,೦೦೦ ಒಟ್ಟು ೧೦.೦೦೦ ರೂಪಾಯಿಗಳನ್ನು ನೀಡುತ್ತಿತ್ತು. ಕಾಂಗ್ರೆಸ್ ಆಡಳಿತಕ್ಕೆ […]
ಸರ್ವ ಸಹಾಯಿ ಮಿತ್ರ ಮಂಡಳಿಯಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ : ಕನ್ನಡಾಭಿಮಾನವನ್ನು ಮೈಗೂಡಿಸಿಕೊಳ್ಳಲು ಗಣ್ಯರ ಕರೆ

ಜನವಾಹಿನಿ News ಮಡಿಕೇರಿ : ಕನ್ನಡ ನಾಡು ನುಡಿ ಸಂಸ್ಕೃತಿ ಪರಂಪರೆಯೊಂದಿಗೆ ಪ್ರತಿಯೊಬ್ಬರು ಕನ್ನಡಾಭಿಮಾನವನ್ನು ಮೈಗೂಡಿಸಿಕೊಂಡು ಮುನ್ನಡೆಯುವ ಮೂಲಕ ಕನ್ನಡ ಪರ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯಬೇಕೆಂದು ಗಣ್ಯರು ಕರೆ ನೀಡಿದರು. ಸರ್ವ ಸಹಾಯಿ ಮಿತ್ರ ಮಂಡಳಿ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತ ಅಶ್ರದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಸರ್ಕಾರಿ ಶಾಲಾ ಆವರಣದಲ್ಲಿ ವಿವಿಧ ಅರೋಗ್ಯ ಶಿಬಿರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನೆರವೇರಿತು. ಆಚರಣೆ ಅಂಗವಾಗಿ ಆರೋಗ್ಯ,ಕಣ್ಣು , ದಂತ ತಪಾಸಣಾ ಶಿಬಿರ ಸೇರಿದಂತೆ ಮಕ್ಕಳ […]
ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಯಿಂದ ವಿಪ್ರ ಕ್ರೀಡೋತ್ಸವ

ಜನವಾಹಿನಿ News ಮಡಿಕೇರಿ: ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಮಡಿಕೇರಿ ಇವರ ನೇತೃತ್ವದಲ್ಲಿ ಕುಶಾಲನಗರ, ಸೋಮವಾರಪೇಟೆ, ಪೊನ್ನಂಪೇಟೆ, ವಿರಾಜಪೇಟೆ ತಾಲೂಕು ಬ್ರಾಹ್ಮಣ ಸಮಾಜಗಳ ಸಂಯುಕ್ತಾಶ್ರಯದಲ್ಲಿ ಡಿ.೭ ಮತ್ತು ಡಿ.೧೪ರಂದು ೪ನೇ ವರ್ಷದ ವಿಪ್ರ ಕ್ರೀಡೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಅಧ್ಯಕ್ಷ ಮೂಗೂರು ರಾಮಚಂದ್ರ ತಿಳಿಸಿದರು. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.೭ರಂದು ಜಿಲ್ಲಾಮಟ್ಟದ ಶೆಟಲ್ ಹಾಗೂ ಟೇಬಲ್ ಟೆನಿಸ್ ಪಂದ್ಯಾಟ ನಗರದ ಮ್ಯಾನ್ಸ್ ಕಾಂಪೌಂಡ್‌ನಲ್ಲಿರುವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಬೆಳಗ್ಗೆ ೯ ಗಂಟೆಗೆ ಪಂದ್ಯಾಟ ಆರಂಭಗೊಳ್ಳಲಿದ್ದು, ಪುರುಷರ […]