Breaking News :

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಅನುಗ್ರಹ ಕಾಲೇಜು ವಿದ್ಯಾರ್ಥಿ

  ಜನವಾಹಿನಿ News ಕುಶಾಲನಗರ : ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಕುಶಾಲನಗರ ಅನುಗ್ರಹ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಹೆಚ್ ಎಸ್ ಜೀವನ್ ಜಿಮ್ನಾಸ್ಟಿಕ್ ಸ್ಪರ್ಧೆಯಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು ಕಾಲೇಜಿಗೆ ಕೀರ್ತಿ ತಂದಿದ್ದಾನೆ. ಇವನಿಗೆ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರು ಪ್ರಾಂಶುಪಾಲರು ದೈಹಿಕ ಶಿಕ್ಷಣ ನಿರ್ದೇಶಕರು, ಉಪನ್ಯಾಸಕ ವೃಂದದವರು ಆಡಳಿತ ವರ್ಗದವರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ ಹಾಗೂ ರಾಷ್ಟ್ರಮಟ್ಟದಲ್ಲಿಯೂ ಇದೇ ರೀತಿಯಾದ ಸಾಧನೆಯನ್ನು ಮಾಡಿ ತಂದೆ ತಾಯಿಗಳಿಗೆ ಹಾಗೂ […]

ಕೃಷಿ ಇಲಾಖೆಯ ಮುಖಾಂತರ ಸ್ಪ್ರಿಂಕ್ಲರ್‍ಗೆ ಸಹಾಯಧನ

  ಜನವಾಹಿನಿ News ಮಡಿಕೇರಿ : 2024-25ನೇ ಸಾಲಿನಲ್ಲಿ ಕೃಷಿ ಇಲಾಖೆಯ ಮುಖಾಂತರ ಸ್ಪ್ರಿಂಕ್ಲರ್‍ಗೆ ಶೇ.90ರಷ್ಟು ಸಹಾಯಧನ ನೀಡಲಾಗುತ್ತಿದೆ. ಈ ಸೌಲಭ್ಯವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದವರಿಗೂ ಸಹ ಶೇ.90 ರಷ್ಟು ಸಹಾಯಧನ ನೀಡಲಾಗುತ್ತದೆ. ರೈತ ಬಾಂಧವರು ತಮ್ಮ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ರೈತ ಸಂಪರ್ಕ ಕೇಂದ್ರದಲ್ಲಿ ಉಚಿತವಾಗಿ ನೀಡುವ ಅರ್ಜಿಯೊಂದಿಗೆ ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್, ಪಹಣಿ, ಬ್ಯಾಂಕ್ ಪಾಸ್‍ಪುಸ್ತಕ ಪ್ರತಿ ಹಾಗೂ ಎರಡು ಸ್ಟ್ಯಾಂಪ್ ಅಳತೆಯ […]

ಡಿ.01 ರಂದು ವಿಶ್ವ ಏಡ್ಸ್ ದಿನಾಚರಣೆ

  ಜನವಾಹಿನಿ News ಮಡಿಕೇರಿ : ವಿಶ್ವ ಏಡ್ಸ್ ದಿನಾಚರಣೆ ಪ್ರಯುಕ್ತ ಡಿಸೆಂಬರ್, 01 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಿಂದ ಜಾಥಾ ಪ್ರಾರಂಭವಾಗಲಿದೆ. ಜಾಥವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಿಂದ ಪ್ರಾರಂಭವಾಗಿ ಚೌಕಿ ವೃತ್ತದ ಮುಖಾಂತರ ಸರ್ಕಾರಿ ಪದವಿ ಪೂರ್ವ ಕಾಲೇಜು ವರೆಗೆ ತಲುಪುವುದು. ನಂತರ ಬೆಳಗ್ಗೆ 11 ಗಂಟೆಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಮಾರಂಭ ನಡೆಯಲಿದೆ ಎಂದು ಜಿಲ್ಲಾ […]

ಸಂವಿಧಾನ ತತ್ವಗಳೇ ಕಾಂಗ್ರೆಸ್ ಪಕ್ಷದ ಸಿದ್ಧಾಂತ: ಎ.ಎಸ್ ಪೊನ್ನಣ್ಣ

    ಜನವಾಹಿನಿ News ಬೆಂಗಳೂರು : ಸಮಾಜ, ಧರ್ಮ ನಿರಪೇಕ್ಷತೆ, ಜಾತ್ಯತೀತತೆ…ಇವೇ ನಮ್ಮ ಸಂವಿಧಾನದ ತತ್ವಗಳು. ಇವೇ ಸಂವಿಧಾನದ ಸಿದ್ಧಾಂತಗಳು. ಇದೇ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳು ಕೂಡ ಎಂದು ಮಾನ್ಯ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಶ್ರೀ ಅಜ್ಜಿಕುಟ್ಟಿರ ಎಸ್.‌ ಪೊನ್ನಣ್ಣ ಅವರು ತಿಳಿಸಿದರು. ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ, ಕಾನೂನು-ಮಾನವ ಹಕ್ಕು-ಆರ್‌ಟಿಐ ವಿಭಾಗವು, ಸಂವಿಧಾನ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ “ಚುನಾವಣೆ ಪ್ರಕ್ರಿಯೆಯಲ್ಲಿ ಸುಧಾರಣೆ” ಕುರಿತ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಮಾತನಾಡಿದರು. ಇಡೀ ಪ್ರಪಂಚದಲ್ಲಿರುವ […]

ನ.28 ರಂದು ಆಲದ ಗಿಡ ನೆಡುವ ಕಾರ್ಯಕ್ರಮ

  ಜನವಾಹಿನಿ News ಮಡಿಕೇರಿ : ಕೊಡವ ಸಮಾಜ ವತಿಯಿಂದ ನವೆಂಬರ್, 28 ರಂದು ಬೆಳಗ್ಗೆ 8 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದ ಬಳಿ ಆಲದ ಗಿಡ ನೆಡುವ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್‍ಗೌಡ, ಮಾಜಿ ಕಾನೂನು ಮಂತ್ರಿ ಮೇರಿಯಂಡ ಸಿ.ನಾಣಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ, […]

ಕೊಡಗು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

  ಜನವಾಹಿನಿ News ಮಡಿಕೇರಿ : ಕೊಡಗು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ ಅವರು ನಗರದ ಡಿ.ಎ.ಆರ್.ಕವಾಯತು ಮೈದಾನದಲ್ಲಿ ಗುರುವಾರ ಚಾಲನೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಬಿ.ಪಿ.ದಿನೇಶ್ ಕುಮಾರ್ ಇತರರು ಇದ್ದರು. ನವೆಂಬರ್, 29 ರಂದು ಸಂಜೆ 4 ಗಂಟೆಗೆ ನಗರದ ಡಿಎಆರ್ ಕವಾಯತು ಮೈದಾನದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಮೈಸೂರು ದಕ್ಷಿಣ ವಲಯದ ಪೊಲೀಸ್ ಉಪ ಮಹಾ ನಿರೀಕ್ಷಕರಾದ ಡಾ.ಎಂ.ಬಿ.ಬೋರಲಿಂಗಯ್ಯ ಇತರರು ಪಾಲ್ಗೊಳ್ಳಲಿದ್ದಾರೆ.

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ರಕ್ತದಾನ ಅತ್ಯಗತ್ಯ : ವಿಜು ಸುಬ್ರಮಣಿ

  ಜನವಾಹಿನಿ News ಸಿದ್ದಾಪುರ : ತುರ್ತು ಸಂದರ್ಭದಲ್ಲಿ ಅತ್ಯವಶ್ಯಕವಾಗಿರುವ ರಕ್ತದಾನಕ್ಕೆ ಬೆಲೆ ಕಟ್ಟಲಾಗದು ಮನುಷ್ಯನ ಪ್ರಾಣ ಉಳಿಸಲು ನೀಡುವ ರಕ್ತದಾನವೇ ಶ್ರೇಷ್ಠವಾಗಿದ್ದು, ಅಮೂಲ್ಯ ಜೀವಗಳನ್ನು ಉಳಿಸಲು ಯುವ ಸಮೂಹ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಬೇಕೆಂದು ಜಿಲ್ಲಾ ಪಂಚಾಯತಿ ಸಾಮಾಜಿಕ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಮೂಕೊಂಡ ವಿಜು ಸುಬ್ರಮಣಿ ‌ಕರೆ ನೀಡಿದರು. ಅಕ್ಷಯ ಚಾರಿಟೇಬಲ್ ಟ್ರಸ್ಟ್ ಮತ್ತು ಸಂಜೀವಿನಿ ಒಕ್ಕೂಟ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಸಹಕಾರದೊಂದಿಗೆ ಸಿದ್ದಾಪುರ ಗುಹ್ಯ ಅಗಸ್ಥೇಶ್ವರ ಸಹಕಾರ ಸಭಾಂಗಣದಲ್ಲಿ ನಡೆದ ರಕ್ತದಾನ ಶಿಬಿರ ಕಾರ್ಯಾಕ್ರಮ […]

ವಿರಾಜಪೇಟೆ : ರಸ್ತೆ ಕಾಮಗಾರಿ ಆರಂಭಿಸುವಂತೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

  ಜನವಾಹಿನಿ News ವಿರಾಜಪೇಟೆ : ಮಳೆ ನಿಂತ ಮೇಲೆ ಮುಖ್ಯ ರಸ್ತೆಯ ಕಾಮಗಾರಿ ಮಾಡುತ್ತೇವೆ ಎಂದು ಹೇಳಿದ್ದ ಶಾಸಕರು ಮಳೆಗಾಲ ಮುಗಿದು ಬಿಸಿಲು ಆರಂಭಿಸಿದೆ ಆದರೂ ಕೂಡ ರಸ್ತೆಯ ಕಾಮಗಾರಿ ಮಾಡಲು ನಿರ್ಲಕ್ಷ್ಯ ತೋರಿದ್ದಾರೆ ಎಂದು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಲೋಕೋಪಯೋಗಿ ಇಲಾಖೆಯ ಕಛೇರಿಯ ಮುಂದೆ ಪ್ರತಿಭಟನೆ ನಡೆಸಿದರು. ವಿರಾಜಪೇಟೆ ಮಂಡಳ ಬಿ ಜೆ.ಪಿ ವತಿಯಿಂದ ನಡೆದ ಪ್ರತಿಭಟನೆ ನಲ್ಲಿ ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ ಮಾತನಾಡಿ ನನ್ನ ಅಧಿಕಾರದ ಅವಧಿಯಲ್ಲಿ ಮಾಡಿದ್ದ ತಿತಿಮತಿ ಗೋಣಿಕೊಪ್ಪ […]

ಕೊಡಗು – PWD ಎಂಜಿನಿಯರ್ ಗಿರೀಶ್ ಕಚೇರಿ, ಹಾಗೂ ಮನೆಯಮೇಲೆ ಲೊಕಾಯುಕ್ತ ದಾಳಿ

ಜನವಾಹಿನಿ News ಮಡಿಕೇರಿ : ಲೋಕೋಪಯೋಗಿ ಕಚೇರಿ ಸಹಾಯಕ‌ ಕಾರ್ಯಪಾಲಕ ಎಂಜಿನಿಯರ್ ಗಿರೀಶ್ ರವರ ಮಡಿಕೇರಿ‌ ಕಚೇರಿ, ಕುಶಾಲನಗರ, ಮೈಸೂರಿನ ಮನೆಗಳ‌ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ‌ ಆಸ್ತಿ ಸಂಪಾದನೆ ದೂರಿನ ಹಿನ್ನೆಲೆ ಲೋಕಾಯುಕ್ತ DYSP ದಿನಕರ್ ಶೆಟ್ಟಿ ನೇತೃತ್ವದಲ್ಲಿ ಮೈಸೂರಿನಲ್ಲಿ ದಾಳಿ ನಡೆಸಲಾಗಿದ್ದು, ಮಡಿಕೇರಿಯಲ್ಲಿ ಲೋಕಾಯುಕ್ತ ಸಬ್ ಇನ್ಸ್‌ಪೆಕ್ಟರ್ ವೀಣಾ ನಾಯ್ಕ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಏಕ ಕಾಲದಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಅಗತ್ಯ ದಾಖಲೆಗಳು ಹಾಗೂ ಕಡತಗಳನ್ನು ಪರಿಶೀಲಿಸಿದ್ದಾರೆ.  

ಗಾಳಿಬೀಡು; ಕುಷ್ಠರೋಗ ಪತ್ತೆ ಆಂದೋಲನಕ್ಕೆ ಚಾಲನೆ

  ಜನವಾಹಿನಿ News ಮಡಿಕೇರಿ : ಗಾಳಿಬೀಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಗಾಳಿಬೀಡು ಗ್ರಾಮದಲ್ಲಿ ಕುಷ್ಟರೋಗ ಪತ್ತೆ ಹಚ್ಚುವ ಆಂದೋಲನದಡಿಯಲ್ಲಿ ನವೆಂಬರ್, 24 ರಿಂದ ಡಿಸೆಂಬರ್, 09 ರವರೆಗಿನ 14 ದಿನಗಳು ಆಶಾ ಕಾರ್ಯಕರ್ತರು ಮತ್ತು ಸ್ವಯಂ ಸೇವಕರು ಮನೆ ಮನೆಗಳಿಗೆ ಭೇಟಿ ನೀಡಿ ರೋಗದ ಚಿಹ್ನೆಗಳನ್ನು ಪರೀಕ್ಷಿಸಿ ಆರೋಗ್ಯ ಶಿಕ್ಷಣ ಮತ್ತು ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶಶಿ ಕಿರಣ್ ಅವರು ಚಾಲನೆ ನೀಡಿದರು. ಸಭೆಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ […]