ರೈತರ ಸರ್ವತೋಮುಖ ಅಭಿವೃದ್ಧಿಗೆ ಜಿಲ್ಲಾ ಸಹಕಾರ ಯುನಿಯನ್ ಪ್ರಾಧಾನ್ಯತೆ ನೀಡಿದೆ : ಮನು ಮುತ್ತಪ್ಪ

ಜನವಾಹಿನಿ NEWS ಮಡಿಕೇರಿ : ರೈತರ ಸರ್ವತೋಮುಖ ಅಭಿವೃದ್ಧಿಗಾಗಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಒತ್ತು ನೀಡಿದೆ ಎಂದು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎ.ಕೆ.ಮನು ಮುತ್ತಪ್ಪ ತಿಳಿಸಿದರು. ನಗರದ ಯೂನಿಯನ್ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಕೊಡಗು ಜಿಲ್ಲಾ ಸಹಕಾರ ಯೂನಿಯನ್‌ನ ೨೦೨೪-೨೫ನೇ ಸಾಲಿನ ಹಾಗೂ ೫೮ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯೂನಿಯನ್‌ನ ಮುಖ್ಯ ಉದ್ದೇಶ, ಸಹಕಾರ ಶಿಕ್ಷಣ, ತರಬೇತಿ, ಪ್ರಚಾರವಾಗಿದೆ. ಈ ಕಾರ್ಯಕ್ರಮಗಳನ್ನು ಮಹಾಮಂಡಳದ ಮಾರ್ಗದರ್ಶನದ ಮೂಲಕ ಜಿಲ್ಲೆಯ ವಿವಿಧ ವಲಯಗಳಿಗೆ […]
ಮೊಬೈಲ್ ಶಾಪ್ ದರೋಡೆ ಮಾಡಿದ್ದ ಆರೋಪಿ ಅರೆಸ್ಟ್

ಜನವಾಹಿನಿ NEWS ಮಡಿಕೇರಿ : ಆ.24ರಂದು ರಾತ್ರಿ ವೇಳೆ ಗೋಣಿಕೊಪ್ಪಲು ಮುಖ್ಯರಸ್ತೆಯಲ್ಲಿರುವ ಫಲೀಲ್ ಎಂಬುವವರಿಗೆ ಸೇರಿದ Harmony Phones ಅಂಗಡಿಯ ರೋಲಿಂಗ್ ಶೆಟರ್ಸ್ ಮುರಿದು ವಿವಿಧ ಕಂಪೆನಿಗಳ ಹೊಸ 32 ಮೊಬೈಲ್ ಫೋನ್ ಗಳು ಮತ್ತು ರೂ. 3 ಸಾವಿರ ನಗದು ಹಣ ದರೋಡೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತೇಗೂರು ಗ್ರಾಮದ ನಿವಾಸಿ, ಅಸ್ಸಾಂ ಮೂಲದ ಜೋಹುರ್ ಆಲಿ (28) ಎಂಬಾತ ಬಂಧಿತ ಆರೋಪಿಯಾಗಿದ್ದು, ಈತನಿಂದ 32 ಮೊಬೈಲ್ […]
ನಾಳೆ ಶಾಸಕ ಮಂತರ್ ಗೌಡ ಅಧ್ಯಕ್ಷತೆಯಲ್ಲಿ ದಸರಾ ಪೂರ್ವಭಾವಿ ಸಭೆ

ಜನವಾಹಿನಿ NEWS ಮಡಿಕೇರಿ : ಈ ಬಾರಿಯ ಮಡಿಕೇರಿ ದಸರಾ ಉತ್ಸವವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳ ಪೂರ್ವ ತಯಾರಿ ಇತ್ಯಾದಿ ವಿಚಾರಗಳ ಕುರಿತು ಚರ್ಚಿಸಲು ಮಡಿಕೇರಿ ಶಾಸಕ ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ನಾಳೆ ಪೂರ್ವಭಾವಿ ಸಭೆ ನಡೆಯಲಿದೆ. ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಾಳೆ ಪೂರ್ವಾಹ್ನ 12.30 ಗಂಟೆಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಉಪಸ್ಥಿತಿಯಲ್ಲಿ ನಡೆಯಲಿರುವ ಸಭೆಯಲ್ಲಿ ದಸರಾ ಉತ್ಸವ ಸಮಿತಿ ಹಾಗೂ ದಶಮಂಟಪ್ಪ ಸಮಿತಿಯ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಆ.30 ರಂದು ವಿರಾಜಪೇಟೆ ತಾಲೂಕಿನ ವಿವಿಧೆಡೆ ಕರೆಂಟ್ ಇರಲ್ಲ

ಜನವಾಹಿನಿ NEWS ಮಡಿಕೇರಿ : 66/33/11 ಕೆ.ವಿ ವಿರಾಜಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರ ಮಗ್ಗುಲ, 33/11 ಕೆವಿ ಮೂರ್ನಾಡು ಹಾಗೂ 33/11ಕೆವಿ ಸಿದ್ದಾಪುರ ವಿದ್ಯುತ್ ಉಪ ಕೆಂದ್ರದಲ್ಲಿ ನಿರ್ವಾಹಣಾ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ಆಗಸ್ಟ್, 30 ರಂದು ಬೆಳಗ್ಗೆ 09.30 ರಿಂದ ಸಂಜೆ 3 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಆದ್ದರಿಂದ ವಿರಾಜಪೇಟೆ ಪಟ್ಟಣ, ಸಿದ್ದಾಪುರ, ಅಮ್ಮತ್ತಿ, ಪಾಲಿಬೆಟ್ಟ, ಆರ್ಜಿ, ಬೇಟೋಳಿ, ಕದನೂರು, ಕಾಕೋಟುಪರಂಬು, ಕೆದಮುಳ್ಳೂರು, ಬಿಟ್ಟಂಗಾಲ, […]
ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಲೋಕಾಯುಕ್ತ ಉಪ ಅಧೀಕ್ಷಕರು

ಜನವಾಹಿನಿ NEWS ಮಡಿಕೇರಿ : ಕರ್ನಾಟಕ ಲೋಕಾಯುಕ್ತ ಕೊಡಗು ಉಪ ಅಧೀಕ್ಷರಾದ ದಿನಕರ ಶೆಟ್ಟಿ ಮತ್ತು ಪೊಲೀಸ್ ನಿರೀಕ್ಷಕರಾದ ವೀಣಾ ನಾಯ್ಕ್ ಅವರು ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಇಂದು ಭೇಟಿ ನೀಡಿ ಪರಿಶೀಲಿಸಿದರು. ಶಿಕ್ಷಕರ ಗೈರು, ಗುಣಮಟ್ಟದ ಆಹಾರ ಪೂರೈಸುವುದು, ಶುಚಿತ್ವಕ್ಕೆ ಒತ್ತು ನೀಡುವುದು, ಶುದ್ಧ ಕುಡಿಯುವ ನೀರು ಪೂರೈಸುವುದು ಸೇರಿದಂತೆ ಹಲವು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು. ಮುಂದಿನ ದಿನಗಳಲ್ಲಿ ವಸತಿ ಶಾಲೆಯಲ್ಲಿ ಯಾವುದೇ ರೀತಿಯ ದೂರು […]
ಕೊಡಗಿನಲ್ಲಿ ಮದ್ಯ ಮಾರಾಟ ನಿಷೇಧ

ಜನವಾಹಿನಿ NEWS ಮಡಿಕೇರಿ : ಮಡಿಕೇರಿ ನಗರದಲ್ಲಿ ಹಾಗೂ ವಿರಾಜಪೇಟೆ ನಗರದಲ್ಲಿ ಗೌರಿ-ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965ರ ಕಲಂ 21 ರಲ್ಲಿ ದತ್ತವಾದ ಅಧಿಕಾರದಂತೆ ಆಗಸ್ಟ್, 29 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮಡಿಕೇರಿ ನಗರದ ವ್ಯಾಪ್ತಿಯಲ್ಲಿ, ಸೆಪ್ಟೆಂಬರ್, 06 ರಂದು ಬೆಳಗ್ಗೆ 6 ಗಂಟೆಯಿಂದ ಸೆಪ್ಟೆಂಬರ್, 07 ರ ಬೆಳಗ್ಗೆ 10 ಗಂಟೆಯವರೆಗೆ ವಿರಾಜಪೇಟೆ ನಗರ […]
ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟ – ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ಗೆ 42 ಪದಕ

ಜನವಾಹಿನಿ NEWS : ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ(ರಿ.) ವತಿಯಿಂದ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋಟ್ಸ್ ಕ್ಲಬ್‌ನ ಕ್ರೀಡಾಪಟುಗಳಿಗೆ 19 ಚಿನ್ನ, 15 ಬೆಳ್ಳಿ, 8 ಕಂಚು ಒಟ್ಟು 42 ಪದಕಗಳು, 3 ನೂತನ ಕೂಟ ದಾಖಲೆ ಹಾಗೂ 1 ವಿಭಾಗ ಕ್ರೀಡಾಕೂಟದ ವೈಯಕ್ತಿಕ ಪ್ರಶಸ್ತಿಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ಇದರಲ್ಲಿ ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ನ ಕ್ರೀಡಾಪಟುಗಳು ಸಮಗ್ರ ಪ್ರಶಸ್ತಿಯನ್ನು […]
ಮುಳಿಯ ಜ್ಯುವೆಲ್ಸ್‌ನ ಶ್ಯಾಮ್ ಭಟ್ ರವರ ಪತ್ನಿ ಸುಲೋಚನಾ ಭಟ್ ನಿಧನ

ಜನವಾಹಿನಿ NEWS ಪುತ್ತೂರು : ಮುಳಿಯ ಜ್ಯುವೆಲ್ಸ್ ನ ಶ್ಯಾಮ್ ಭಟ್ ಅವರ ಪತ್ನಿ ಸುಲೋಚನಾ ಶ್ಯಾಮ್ ಭಟ್ (71 ) ಅವರು ಅಲ್ಪಕಾಲದ ಅಸೌಖ್ಯದಿಂದ ಗುರುವಾರ ಸಂಜೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ ಶ್ಯಾಮ್ ಭಟ್, ಪುತ್ರರಾದ ಜ್ಯುವೆಲ್ಸ್‌ನ ಸಿಎಂಡಿ ಕೇಶವ ಪ್ರಸಾದ್ ಮುಳಿಯ, ಎಂಡಿ ಕೃಷ್ಣ ನಾರಾಯಣ ಮುಳಿಯ, ಪುತ್ರಿ, ಸೊಸೆಯಂದಿರು, ಅಳಿಯ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತಿಮ ಸಂಸ್ಕಾರವು ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಪಾಂಗಳಾಯಿ ಶ್ಯಾಮ್-ಸುಲೋಚನಾ ಭಟ್ […]
ಆ.30 ರಂದು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ

ಜನವಾಹಿನಿ NEWS ಮಡಿಕೇರಿ : 2025-26ನೇ ಸಾಲಿನಲ್ಲಿ ತಾಲ್ಲೂಕು ಮಟ್ಟದಲ್ಲಿ ವಿಜೇತರಾದ ಪುರುಷ ಹಾಗೂ ಮಹಿಳೆಯರಿಗೆ ಹಾಗೂ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಸ್ಪರ್ಧೆಗಳನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಏರ್ಪಡಿಸಲಾಗಿದೆ. ಆಗಸ್ಟ್, 30 ರಂದು ಕೊಡಗು ಜಿಲ್ಲಾ ಮಟ್ಟದ ದಸರಾ ಕ್ರೀಡಾ ಕೂಟವು ಕೂಡಿಗೆ ಕ್ರೀಡಾ ಶಾಲೆ ಮೈದಾನದಲ್ಲಿ ನಡೆಯಲಿದ್ದು, ಅಥ್ಲೇಟಿಕ್ಸ್, ವಾಲಿಬಾಲ್, ಫುಟ್ಬಾಲ್(ಪುರುಷರಿಗೆ ಮಾತ್ರ), ಖೋಖೋ, ಕಬ್ಬಡಿ, ಬಾಸ್ಕೇಟ್ ಬಾಲ್, ಕುಸ್ತಿ, ಹಾಕಿ(ಮಹಿಳೆಯರಿಗೆ ಮಾತ್ರ), ಹ್ಯಾಂಡ್‍ಬಾಲ್, ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್, ಯೋಗ, […]
ನಿಲ್ದಾಣಕ್ಕೆ ಡಿಕ್ಕಿ ಹೊಡೆದ KSRTC ಬಸ್- ಮಗು ಸೇರಿ ಐವರು ಸಾವು, 7 ಮಂದಿಗೆ ಗಾಯ

ಜನವಾಹಿನಿ NEWS ಮಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಬಸ್ ಬ್ರೇಕ್ ವಿಫಲವಾಗಿ ನಿಯಂತ್ರಣ ಕಳೆದುಕೊಂಡು ಬಸ್ ತಂಗುದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಗುರುವಾರ ಮಧ್ಯಾಹ್ನ ತಲಪಾಡಿಯಲ್ಲಿ ಸಂಭವಿಸಿದೆ. ಈ ಘಟನೆ ಮಧ್ಯಾಹ್ನ 1.30 ರ ಸುಮಾರಿಗೆ ನಡೆದಿದೆ. ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ನಾಲ್ವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೂವರು ಮಹಿಳೆಯರು ಮತ್ತು ಒಬ್ಬ ಪುರುಷ ಸೇರಿದಂತೆ ಮೃತರೆಲ್ಲರೂ ಒಂದೇ ಕುಟುಂಬದವರು ಎಂದು ಪೊಲೀಸರು ದೃಢಪಡಿಸಿದ್ದಾರೆ. ಇದಲ್ಲದೆ, ಒಂದು ಮಗು […]