ಕೊಡವ ಕೂಟಾಳಿಯಡ ಕೂಟ ಸಂಘಟನೆಯ ಅಧ್ಯಕ್ಷರಾಗಿ ಚೊಟ್ಟಂಡ ಪ್ರಭು ಸೋಮಯ್ಯ, ಕಾರ್ಯದರ್ಶಿಯಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ ನೇಮಕ

ಮಡಿಕೇರಿ : ಕೊಡವ ಕೂಟಾಳಿಯಡ ಕೂಟ ಸಂಘಟನೆಯ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ನೂತನ ಆಡಳಿತ ಮಂಡಳಿಯ ಆಯ್ಕೆ ಗುರುವಾರ ಪೊನ್ನಂಪೇಟೆಯ ಗೋಲ್ಡನ್ ಗೇಟ್ ಸಭಾಂಗಣದಲ್ಲಿ ಸಂಘಟನೆಯ ಅಧ್ಯಕ್ಷರಾಗಿದ್ದ ಚೆಟ್ಟೋಳಿರ ಶರತ್ ಸೋಮಣ್ಣ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭ ಸಂಘಟನೆಯ ನೂತನ ಅಧ್ಯಕ್ಷರಾಗಿ ಚೊಟ್ಟಂಡ ಪ್ರಭು ಸೋಮಯ್ಯ ಉಪಾಧ್ಯಕ್ಷರಾಗಿ ಚೆಕ್ಕೆರ ರಾಜೇಶ್, ಕಾರ್ಯದರ್ಶಿಯಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಖಜಾಂಚಿಯಾಗಿ ಮಾಚಿಮಡ ಡಿಂಪಲ್ ಅವರು ನೇಮಕಗೊಂಡರು. ಸಂಘಟನೆಯ ನಿರ್ದೇಶಕರುಗಳಾಗಿ ಕಾಂಗಿರ ಸಂತೋಷ್ ದೇವಯ್ಯ, ಅಮ್ಮಾಟಂಡ ಚೇತನ್, ಚೇಂದಿರ ಪ್ರಿಯಾ ಲೋಹಿತ್, […]
ಕೊಡವಾಮೆರ ಆರ ಬೇರ ಕಾರ್ಯಕ್ರಮ

ಜನವಾಹಿನಿ NEWS ಮಡಿಕೇರಿ: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಕೊಡವ ಸಮಾಜ ಮೈಸೂರು ಇವರ ಸಹಯೋಗದಲ್ಲಿ ಇಂದು ಮೈಸೂರು ಕೊಡವ ಸಮಾಜದಲ್ಲಿ “ಕೊಡವಾಮೆರ ಆರ ಬೇರ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಚಾಲನೆ ನೀಡಿದರು. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ, ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಮೈಸೂರು ಕೊಡವ ಸಮಾಜದ ಅಧ್ಯಕ್ಷರಾದ ಪೊಂಜಂಡ […]
ಧರ್ಮಸ್ಥಳ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ : ಮಾಸ್ಕ್ ಮ್ಯಾನ್ ಮುಖವಾಡ ಕಳಚಿದ SIT – 10 ದಿನಗಳ ಕಾಲ ಕಸ್ಟಡಿಗೆ

ಬೆಳ್ತಂಗಡಿ : ಕಳೆದೆರಡು ತಿಂಗಳಿನಿಂದ ದೇಶದೆಲ್ಲೆಡೆ ಕುತೂಹಲಕ್ಕೆ ಕಾರಣವಾಗಿದ್ದ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತ ಪ್ರಕರಣ ಇದೀಗ ಮಹತ್ವದ ತಿರುವು ಪಡೆದಿದೆ. ಬುರುಡೆ ಹಿಡಿದುಕೊಂಡು ಬಂದು ದೂರು ನೀಡಿದ್ದ ಅನಾಮಿಕ ದೂರುದಾರನನ್ನೇ ಇದೀಗ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಶನಿವಾರ (ಆ.23) ದೂರುದಾರ ಮಾಸ್ಕ್‌ಮ್ಯಾನ್ (ಸಿ.ಎನ್.ಚಿನ್ನಯ್ಯ) ನನ್ನು ಎಸ್‌ಐಟಿ ಅಧಿಕಾರಿಗಳು ಬಂಧನಕ್ಕೆ ಒಳಪಡಿಸಿದ್ದಾರೆ. ಬೆಳಗ್ಗೆ ವೈದ್ಯಕೀಯ ತಪಾಸಣೆಯ ಬಳಿಕ ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ಜೆಎಂಎಫ್‌ಎಸ್ ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ. ಅಲ್ಲಿ ಆತನನ್ನು 10 ದಿನಗಳ ಕಾಲ […]
ಪ್ರೀತಿಸಿದ ಯುವತಿಯನ್ನೇ ಸುಟ್ಟು ಹಾಕಿದ ಭೂಪ : ಕೊಲೆಯಾದ ಯುವತಿ 8 ತಿಂಗಳ ಗರ್ಭಿಣಿ

ಚಿತ್ರದುರ್ಗ : ತಾಲ್ಲೂಕಿನ ಗೋನೂರು ಬಳಿ ಕೊಲೆಯಾದ ಪದವಿ ವಿದ್ಯಾರ್ಥಿನಿ ವರ್ಷಿತಾ ಕೊಲೆ ಕೇಸ್ಗೆ ಸ್ಪೋಟಕ ತಿರುವು ಸಿಕ್ಕಿದೆ. ಪೊಲೀಸರ ಮುಂದೆ ಕೊಲೆ ರಹಸ್ಯ ಆರೋಪಿ ಚೇತನ್ ಬಾಯ್ಬಿಟ್ಟಿದ್ದಾನೆ. ಯುವತಿಯನ್ನ ಗರ್ಭಿಣಿ ಮಾಡಿ ಮೋಸ ಮಾಡಲು ಆರೋಪಿ ಮುಂದಾಗಿದ್ದ. ನಿನ್ನಿಂದ ಗರ್ಭಿಣಿ ಆಗಿದ್ದೇನೆ, ಈಗ ಮದುವೆ ಆಗು ಎಂದು ಯುವತಿ ಪಟ್ಟು ಹಿಡಿದಿದ್ದಾಳೆ. ಈ ಸಂದರ್ಭ ರಾಷ್ಟ್ರೀಯ ಹೆದ್ದಾರಿ 48ರ ಬಳಿಯ ನಿರ್ಜನ ಪ್ರದೇಶಕ್ಕೆ ಯುವತಿಯನ್ನು ಕರೆದೊಯ್ದ ಚೇತನ್ ಮದುವೆ ಆಗಲು ಆರೋಪಿ ನಿರಾಕರಿಸಿದ್ದಾನೆ. ಇದೇ […]
ಕೊಡಗಿನ ಜನತೆ ಎದುರಿಸುತ್ತಿರುವ ಜಮ್ಮಬಾಣೆ ಹಾಗೂ ಇತರ ಕಂದಾಯ ಸಮಸ್ಯೆಗಳ ಕುರಿತು ಸಿಎಂ ಗಮನ ಸೆಳೆದ ಶಾಸಕ ಪೊನ್ನಣ್ಣ

ಜನವಾಹಿನಿ NEWS ಮಡಿಕೇರಿ : ಸದನದಲ್ಲಿ ಕೊಡಗಿನ ಜನತೆ ಎದುರಿಸುತ್ತಿರುವ ಜಮ್ಮಬಾಣೆ ಹಾಗೂ ಇತರ ಕಂದಾಯ ಸಮಸ್ಯೆಗಳ ಬಗ್ಗೆ ಗಂಭೀರವಾಗಿ ಪ್ರಸ್ತಾಪಿಸಿ, ಇದರ ಶೀಘ್ರ ಇತ್ಯರ್ಥಕ್ಕಾಗಿ ಸದನ ಸಮಿತಿ ರಚನೆಯಾಗುವಂತೆ ಮಾಡಿದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಬಳಿಕ , ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಈ ಎಲ್ಲಾ ವಿಷಯಗಳ ಕುರಿತಾಗಿ ಸವಿವರವಾದ ವಿವರಣೆಯನ್ನು ನೀಡಿ, ಅತಿ ಶೀಘ್ರದಲ್ಲೇ ಇದಕ್ಕೆ ಪರಿಹಾರ ದೊರಕಿಸಿ ಕೊಡುವಂತೆ ಮನವಿ ಮಾಡಿದರು.
ಪ್ರವಾಸೋದ್ಯಮ/ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಜನವಾಹಿನಿ NEWS ಮಡಿಕೇರಿ : ಪ್ರವಾಸೋದ್ಯಮ ಇಲಾಖೆಯಿಂದ 2024-25 ಹಾಗೂ 2025-26 ನೇ ಸಾಲಿನಲ್ಲಿ ಪ್ರವಾಸೋದ್ಯಮ/ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಪ್ಟ್ ಇನ್ಸ್‍ಟ್ಯೂಟ್(ಎಫ್‍ಸಿಐ), ಮೈಸೂರು ಇನ್ಸ್‍ಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್ (ಐಎಚ್‍ಎಂ) ಬೆಂಗಳೂರು ರವರ ಮೂಲಕ ವಸತಿ ಸಹಿತ ಕಾರ್ಯಕ್ರಮ ಜಾರಿಗೊಳಿಸಲು ಉದ್ದೇಶಿಸಲಾಗಿದೆ. ಕಾರ್ಯಕ್ರಮಗಳ ವಿವರ –ಆಹಾರ ಮತ್ತು ಪಾನೀಯ ಸೇವೆಯ ಉಸ್ತುವಾರಿ, ಕನಿಷ್ಟ […]
ಭರತನಾಟ್ಯ ಜೂನಿಯರ್ ಪರೀಕ್ಷೆ : ಭಾರತೀಯ ನೃತ್ಯ ಕಲಾ ಶಾಲೆಯ ವಿದ್ಯಾರ್ಥಿಗಳಿಂದ ಶೇ.೧೦೦ ರಷ್ಟು ಫಲಿತಾಂಶ

ಜನವಾಹಿನಿ NEWS ಸಿದ್ದಾಪುರ : ಮೈಸೂರಿನ ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾಲಯವು ೨೦೨೪-೨೫ನೇ ಸಾಲಿನಲ್ಲಿ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಭಾರತೀಯ ನೃತ್ಯ ಕಲಾ ಶಾಲೆಯ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದು ಶೇ ೧೦೦ ರಷ್ಟು ಫಲಿತಾಂಶವನ್ನು ನೀಡಿದ್ದಾರೆ. ನೃತ್ಯ ಕಲಾ ಶಾಲೆಯ ಸಿದ್ದಾಪುರದ ವಿದ್ಯಾರ್ಥಿಗಳಾದ ಹೆಚ್.ಆರ್. ರ‍್ಷಿತ, ಕೆ.ಆರ್. ಅದಿತ್ರಿ, ವಿ.ಜೆ. ಸಿಂಚನ, ಹೆಚ್.ಎಲ್. ಧೃತಿಕ ಮತ್ತು ಕೆ.ಎಸ್. ಜೀಶ್ನ ಇವರುಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಭಾರತೀಯ ನೃತ್ಯ ಕಲಾ ಶಾಲೆಯ ನೃತ್ಯ ಗುರು […]
ಕಿರು ಆಹಾರ ಸಂಸ್ಕರಣಾ ಉದ್ಯಮಕ್ಕೆ ವಿಫುಲ ಅವಕಾಶ – ಜಿಲ್ಲೆಯಲ್ಲಿ 15.20 ಕೋಟಿ ರೂ. ಸಾಲ ಮಂಜೂರು; ವೆಂಕಟ್ ರಾಜಾ

ಜನವಾಹಿನಿ NEWS ಮಡಿಕೇರಿ : ಕಿರು ಆಹಾರ ಸಂಸ್ಕರಣಾ ಉದ್ಯಮಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸಹಾಯಧನ ದೊರೆಯಲಿದ್ದು, ಈ ಅವಕಾಶ ಬಳಸಿಕೊಂಡು ಸ್ವಉದ್ಯೋಗ ಕೈಗೊಳ್ಳುವತ್ತ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕರೆ ನೀಡಿದ್ದಾರೆ. ಪ್ರಧಾನಮಂತ್ರಿಯವರ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ(ಪಿಎಂಎಫ್‍ಎಂಇ) ಯೋಜನೆ ಕುರಿತು ನಗರದ ಜಿ.ಪಂ.ಸಭಾಂಗಣದಲ್ಲಿ ಶುಕ್ರವಾರ ನಡೆದ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಆತ್ಮ ನಿರ್ಭರ ಭಾರತ ಅಭಿಯಾನದಡಿ ಕಿರು ಆಹಾರ ಸಂಸ್ಕರಣಾ ಉದ್ಯಮ ಅಭಿವೃದ್ಧಿಗೆ […]
ನಾಳೆ ಭಾಗಮಂಡಲದಲ್ಲಿ 33 ನೇ ವರ್ಷದ ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ

ಜನವಾಹಿನಿ NEWS ಮಡಿಕೇರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೊಡಗು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು ಜಿಲ್ಲಾ ಯುವ ಒಕ್ಕೂಟ ಕೊಡಗು ಮಡಿಕೇರಿ, ವಿರಾಜಪೇಟೆ ಹಾಗೂ ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಹಾಗೂ ಶ್ರೀ ಕೃಷ್ಣ ಯೂತ್ ಕ್ಲಬ್ ಅಯ್ಯಂಗೇರಿ, ಇವರ ಸಂಯುಕ್ತ ಆಶ್ರಯದಲ್ಲಿ 33 ನೇ ವರ್ಷದ ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ ಕಾರ್ಯಕ್ರಮವು (ಆಗಸ್ಟ್, 23 ರಂದು) ನಾಳೆ ಬೆಳಗ್ಗೆ 9 ಗಂಟೆಗೆ ಭಾಗಮಂಡಲದ ಬಳ್ಳಡ್ಕ ಅಪ್ಪಾಜಿ ಮತ್ತು ಅನು […]
ಆ.26 ರಂದು ಸ್ವರ್ಣಗೌರಿ ಮಹೋತ್ಸವ ಪ್ರಯುಕ್ತ ಬಾಗಿನ ಅರ್ಪಣೆ

ಜನವಾಹಿನಿ NEWS ಮಡಿಕೇರಿ : ಶ್ರೀ ಸಿದ್ದೇಶ್ವರ ಮತ್ತು ಶ್ರೀ ಬಸವೇಶ್ವರ ಹಾಗೂ ಸ್ವರ್ಣಗೌರಿ ಹೊನ್ನಮ್ಮ ಟ್ರಸ್ಟ್ ದೊಡ್ಡಮಳ್ತೆ ಗ್ರಾಮ, ಇವರ ಸಹಯೋಗದೊಂದಿಗೆ ಶ್ರೀ ಸ್ವರ್ಣಗೌರಿ ಮಹೋತ್ಸವನ ಅಂಗವಾಗಿ ಬಾಗಿನ ಅರ್ಪಣೆ ಕಾರ್ಯಕ್ರಮವು ಆಗಸ್ಟ್, 26 ರಂದು ಬೆಳಗ್ಗೆ 10.30 ಗಂಟೆಗೆ ಸೋಮವಾರಪೇಟೆ ತಾಲ್ಲೂಕು ದೊಡ್ಡಮಳ್ತೆ ಗ್ರಾಮದ ಇತಿಹಾಸ ಪ್ರಸಿದ್ದ ಶ್ರೀ ಕ್ಷೇತ್ರ ಹೊನ್ನಮ್ಮನ ಕೆರೆಯಲ್ಲಿ ನಡೆಯಲಿದೆ. ಮೈಸೂರು ಕೊಡಗು ಲೋಕಾಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ […]