Breaking News :

ಮಡಿಕೇರಿ ಕೊಡವ ಸಮಾಜದಿಂದ ಜನರಲ್ ತಿಮ್ಮಯ್ಯ ಅವರ ಜನ್ಮ ದಿನಾಚರಣೆ : ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಭಾರತೀಯ ಸೇನಾ ಕ್ಷೇತ್ರದಲ್ಲಿನ ಕಣ್ಮಣಿಗಳು: ಡಾ.ಮಂತರ್ ಗೌಡ

  ಜನವಾಹಿನಿ News ಮಡಿಕೇರಿ : ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿರುವ ಜನರಲ್ ತಿಮ್ಮಯ್ಯ ಪ್ರತಿಮೆಗೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮಾಜಿ ಸಚಿವರಾದ ಎಂ.ಸಿ.ನಾಣಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ನಿತಿನ್ […]

ಜಿಲ್ಲಾಡಳಿತದಿಂದ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಜನ್ಮ ದಿನಾಚರಣೆ : ಸೇನಾ ಕ್ಷೇತ್ರದಲ್ಲಿ ಜನರಲ್ ತಿಮ್ಮಯ್ಯ ಅವರ ಸಾಹಸ, ಸಾಧನೆ ಅಪಾರ: ಎ.ಎಸ್.ಪೊನ್ನಣ್ಣ

  ಜನವಾಹಿನಿ News  ಮಡಿಕೇರಿ : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಪದ್ಮಭೂಷಣ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಜನ್ಮ ದಿನಾಚರಣೆಯನ್ನು ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಸ್ಮಾರಕ ಭವನ (ಸನ್ನಿಸೈಡ್)ದಲ್ಲಿ ಮಂಗಳವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ದೀಪ ಬೆಳಗಿ, ಜನರಲ್ ತಿಮ್ಮಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಗೌರವ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಶಾಸಕರು […]

ಎಸ್‌ಐಆರ್ ಅಡಿಯಲ್ಲಿ ಮತದಾರರ ಪಟ್ಟಿ ಅಪ್ಡೇಟ್ ಕಡ್ಡಾಯ : ಇಂದೇ ಮಾಹಿತಿ ಅಪ್ಡೇಟ್ ಮಾಡಿಸಿ ತಪ್ಪಿದಲ್ಲಿ, ಮತದಾನದ ಹಕ್ಕನ್ನೇ ಕಳೆದುಕೊಳ್ಳುವಿರಿ ಹುಷಾರ್…!

ಜನವಾಹಿನಿ News ಮಡಿಕೇರಿ : ಚುನಾವಣಾ ಆಯೋಗವು ನಡೆಸುವ ಈ ಪರಿಷ್ಕರಣೆ ಮತದಾರರ ಪಟ್ಟಿಯನ್ನು ನಿಖರಗೊಳಿಸಲು ಕಡ್ಡಾಯ. ಯಾರಿಗೆ ಅನ್ವಯ: ಅರ್ಹ ಮತದಾರರ ಪಟ್ಟಿಗೆ ಸೇರ್ಪಡೆ, ತಿದ್ದುಪಡಿ ಅಥವಾ ತೆಗೆದುಹಾಕುವಿಕೆಗಾಗಿ ಇದು ಅನ್ವಯಿಸುತ್ತದೆ. ಬೂತ್ ಮಟ್ಟದ ಅಧಿಕಾರಿಗಳು (BLO) ಮನೆಗಳಿಗೆ ಭೇಟಿ ನೀಡಿ, ದಾಖಲೆಗಳನ್ನು ಪರಿಶೀಲಿಸಿ ಮತದಾರರ ಪಟ್ಟಿಯನ್ನು ಅಪ್ಡೇಟ್ ಮಾಡುತ್ತಾರೆ. ಎಸ್‌ಐಆರ್ ಅಡಿಯಲ್ಲಿ ಮತದಾರರ ಪಟ್ಟಿ ಅಪ್ಡೇಟ್ ಆಗುವುದರಿಂದ ಪ್ರತಿಯೊಬ್ಬ ಮತದಾರರು ಪರಿಶೀಲನೆಗೆ ಸಹಕರಿಸುವುದು ಮುಖ್ಯ.ಇದು ಮತದಾರರ ಪಟ್ಟಿಯಲ್ಲಿ ಯಾವುದೇ ತಪ್ಪುಗಳಿಲ್ಲದೆ, ಹೊಸ ಮತದಾರರು ಸೇರ್ಪಡೆಗೊಳ್ಳಲು […]

ಇತಿಹಾಸ ಪ್ರಸಿದ್ಧ ಕರಡಿಗೋಡು ಬಸವೇಶ್ವರ ದೇವರ ಉತ್ಸವದಲ್ಲಿ ಶಾಸಕ ಪೊನ್ನಣ್ಣ ಭಾಗಿ : ವಿಶೇಷ ಪ್ರಾರ್ಥನೆ 

  ಜನವಾಹಿನಿ News ಮಡಿಕೇರಿ : ಹಲವಾರು ವರ್ಷಗಳ ಇತಿಹಾಸ ಹೊಂದಿರುವ ಕರಡಿಗೊಡು ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದ ವಾರ್ಷಿಕೋತ್ಸವವು ವಿವಿಧ ಪೂಜಾ ಕಾರ್ಯಕ್ರಮಗಳೊಂದಿಗೆ ಭಾನುವಾರ ಪ್ರಾರಂಭವಾಯಿತು. ಮೂರು ದಿನಗಳ ಕಾಲ ನಡೆಯುವ ಉತ್ಸವದ ಎರಡನೇ ದಿನವಾದ ಸೋಮವಾರವೂ ಬಸವೇಶ್ವರನಿಗೆ ವಿಶೇಷ ಪೂಜಾ ಕೈಂಕರ್ಯಗಳು ಜರುಗಿತು. ಉತ್ಸವಕ್ಕೆ ಆಗಮಿಸಿದ ವಿರಾಜಪೇಟೆ ಕ್ಷೇತ್ರ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗರರಾದ ಎ.ಎಸ್ ಪೊನ್ನಣ್ಣ ಮಹಾಪೂಜೆಯಲ್ಲಿ ಪಾಲ್ಗೊಂಡು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಅವರು, ಶಾಸಕನಾಗಿ ಆಯ್ಕೆಯಾದ […]

ನಿಯಂತ್ರಣ ತಪ್ಪಿದ ಸರಕಾರಿ ಬಸ್ : ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ಅನಾಹುತ 

  ಜನವಾಹಿನಿ News ಮಡಿಕೇರಿ : ನಿಯಂತ್ರಣ ತಪ್ಪಿದ ಬಸ್ಸೊಂದು ಬಸ್ ನಿಲ್ದಾಣದ ಕಂಭಕ್ಕೆ ಡಿಕ್ಕಿಯಾಗಿ ನಿಂತ ಘಟನೆ ಮಡಿಕೇರಿ ಸರಕಾರಿ ಬಸ್ ನಿಲ್ದಾಣದಲ್ಲಿ ನಡೆದಿದ್ದು, ಭಾರಿ ಅನಾಹುತವೊಂದು ತಪ್ಪಿದಂತಾಗಿದೆ. ಮಡಿಕೇರಿಯಿಂದ ಸುಳ್ಯಕ್ಕೆ ತೆರಳಬೇಕಿದ್ದ ಸರಕಾರಿ ಶಟಲ್ ಬಸ್ಸೊಂದು ಮಡಿಕೇರಿ ಬಸ್ ನಿಲ್ದಾಣದಲ್ಲೇ ಬ್ರೇಕ್ ವಿಫಲಗೊಂಡು ನಿಲ್ದಾಣದ ಕಂಭಕ್ಕೆ ಡಿಕ್ಕಿಯಾಗಿ ನಿಂತಿದ್ದು, ಅದೃಷ್ಟವಾಸವಾಗಿ ಪ್ರಯಾಣಿಕರು ಅನಾಹುತದಿಂದ ಪಾರಾಗಿದ್ದಾರೆ. ಕಂಬ ಇಲ್ಲದೇ ಹೋಗಿದ್ದರೆ ಇತರ ಬಸ್ ಗೆ ಕಾಯುತ್ತಿದ್ದ ಮತ್ತು ನಿಲ್ದಾಣದಲ್ಲಿ ಕುಳಿತಿದ್ದ ಹತ್ತಾರು ಪ್ರಯಾಣಿಕರ ಜೀವಕ್ಕೆ ಅಪಾಯ […]

ಪೇರೂರು ಗ್ರಾಮದಲ್ಲಿ ಜೀಪ್ ಅಪಘಾತ : ಬೆಳೆಗಾರ ಸಾವು

  ಜನವಾಹಿನಿ News ನಾಪೋಕ್ಲು : ನಿಯಂತ್ರಣ ತಪ್ಪಿದ ಜೀಪೊಂದು ಕಾಫಿ ತೋಟದೊಳಗೆ ಪಲ್ಟಿಯಾಗಿ ಬೆಳೆಗಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಾಪೋಕ್ಲು ಸಮೀಪದ ಬಲ್ಲಮಾವಟಿ ಪೇರೂರು ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ಪೇರೂರು ಗ್ರಾಮದ ಕಾಫಿ ಬೆಳೆಗಾರ ಬೊಟ್ಟೋಳಂಡ ಶರಿ ಮೇದಪ್ಪ (54) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೋಟದಿಂದ ಸೌದೆ ತುಂಬಿ ಮನೆಗೆ ಹಿಂತಿರುಗುತ್ತಿದ್ದ ಸಂದರ್ಭ ಇಳಿಜಾರು ರಸ್ತೆಯಲ್ಲಿ  ಶರಿ ಮೇದಪ್ಪ ಚಲಾಯಿಸುತ್ತಿದ್ದ ಜೀಪ್ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಅವಘಡದಿಂದ ಶರಿಮೇದಪ್ಪ ಅವರ ಹೊಟ್ಟೆಯ ಭಾಗಕ್ಕೆ ತೀವ್ರ ಪಟ್ಟಾಗಿದ್ದು ಅವರು […]

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸ್ಪಷ್ಟನೆ

  ಜನವಾಹಿನಿ News ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿ.ಗೆ ಯಾವುದೇ ರೀತಿಯ ‌ಕೊರತೆ ಇಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ. ರಾಜ್ಯದಲ್ಲಿ ಎಲ್‌ಪಿಜಿ ಸರಬರಾಜು ವ್ಯವಸ್ಥೆಯನ್ನು, ವಿಶೇಷವಾಗಿ ಆಟೋ ಎಲ್‌ಪಿಜಿ ಪೂರೈಕೆಯನ್ನು ರಾಜ್ಯ ಸರ್ಕಾರವು ನಿಕಟವಾಗಿ ಗಮನಿಸುತ್ತಿದೆ. ಕರ್ನಾಟಕದಾದ್ಯಂತ ಒಟ್ಟು 72 ಆಟೋ ಎಲ್‌ಪಿಜಿ ಡಿಸ್ಪೆನ್ಸಿಂಗ್ ಸ್ಟೇಷನ್‌ಗಳು (ALDS) ಕಾರ್ಯನಿರ್ವಹಿಸುತ್ತಿವೆ. ಇವುಗಳಲ್ಲಿ ಕೇವಲ ಬೆಂಗಳೂರು ನಗರವೊಂದರಲ್ಲೇ 31 […]

ನರ್ಸಿಂಗ್ ವಿದ್ಯಾರ್ಥಿಗಳ ಪದವಿ ಹಬ್ಬ : “ಸೇವಾ ಮನೋಭಾವ ಮತ್ತು ಮಾನವೀಯ ಮೌಲ್ಯಗಳನ್ನು ವೃತ್ತಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು” :  ಶ್ರೀಕಾಂತ್ ಫುಲಾರಿ

  ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ಎರಡನೇ ಘಟಿಕೋತ್ಸವ ಸಮಾರಂಭ ಜನವಾಹಿನಿ News ಮಡಿಕೇರಿ : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ಸರ್ಕಾರಿ ಶುಶ್ರೂಷಾ ಕಾಲೇಜಿನ ಎರಡನೇ ಘಟಿಕೋತ್ಸವ ಸಮಾರಂಭ ಅದ್ದೂರಿಯಾಗಿ ಸಂಭ್ರಮದಿಂದ ಜರುಗಿತು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಹಾಯಕ ನಿರ್ದೇಶಕರು ನರ್ಸಿಂಗ್ ಶಿಕ್ಷಣ ವಿಭಾಗ, ವೈದ್ಯಕೀಯ ನಿರ್ದೇಶನಾಲಯ ಬೆಂಗಳೂರು ಶ್ರೀ ಶ್ರೀಕಾಂತ್ ಫುಲಾರಿ ರವರು ತಮ್ಮ ಭಾಷಣದಲ್ಲಿ 89 ವಿದ್ಯಾರ್ಥಿಗಳು ಪದವಿ ಸ್ವೀಕರಿಸುತ್ತಿರುವುದು ನನಗೆ ಹೆಮ್ಮೆಯಾಗುತ್ತಿದೆ. ವೈಧ್ಯಕೀಯ […]

ಕುಟ್ಟ ಸರ್ಕಾರಿ ಆಸ್ಪತ್ರೆಗೆ ಶಾಸಕ ಪೊನ್ನಣ್ಣ ದಿಢೀರ್ ಭೇಟಿ, ಪರಿಶೀಲನೆ. 

      ಜನವಾಹಿನಿ News ಪೊನ್ನಂಪೇಟೆ : ಕೇರಳ ಚುನಾವಣಾ ಪ್ರಚಾರದ ಜವಾಬ್ದಾರಿ ನಡುವೆ, ಇಂದು ಕ್ಷೇತ್ರಕ್ಕೆ ಆಗಮಿಸಿದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ , ಕುಟ್ಟ ಸಾರ್ವಜನಿಕ ಆಸ್ಪತ್ರೆಗೆ ದಿಡೀರ್ ಭೇಟಿ ನೀಡಿದರು. ಕುಟ್ಟ ಆಸ್ಪತ್ರೆಯಲ್ಲಿದ್ದ ವೈದ್ಯರ ಕೊರತೆ ಹಾಗೂ ಸೌಲಭ್ಯಗಳ ಕೊರತೆಯನ್ನು ಗಮನಿಸಿದ ಶಾಸಕರು, ಅಲ್ಲಿಂದಲೇ ಉನ್ನತ ವೈದ್ಯಾಧಿಕಾರಿಗಳಿಗೆ ಕರೆ ಮಾಡಿ ಕೂಡಲೇ ಇಲ್ಲಿನ ಆಸ್ಪತ್ರೆಗೆ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರಲ್ಲದೆ […]

ಕೊಡಗು ಮೂಲದ ಪೊಲೀಸ್  ಅಧಿಕಾರಿ ಕಿಶೋರ್ ರವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ.

  ಜನವಾಹಿನಿ News ಬೆಂಗಳೂರು : ಬೆಂಗಳೂರು ನಗರದ ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಮೂಲತಃ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬೋಯಿಕೇರಿ ಗ್ರಾಮದ ಬಿ.ಟಿ. ಕಿಶೋರ್ ಅವರು 2025 ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಬಿ.ಟಿ ಕಿಶೋರ್ ರವರು ಈ ಹಿಂದೆ ಬೆಂಗಳೂರು ನಗರದ ಮಡಿವಾಳ ಪೊಲೀಸ್ ಠಾಣೆ, ಬನಶಂಕರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರಲ್ಲದೆ ಪ್ರಸ್ತುತ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. […]