ಸ್ವಾತಂತ್ರ್ಯ ಉತ್ಸವದ ವಿಶೇಷ ರಾಯಭಾರಿಯನ್ನು ಸನ್ಮಾನಿಸಿದ ಡಾ ಮಂತರ್ ಗೌಡ.

ಸ್ವಾತಂತ್ರ್ಯ ಉತ್ಸವದ ವಿಶೇಷ ರಾಯಭಾರಿಯನ್ನು ಸನ್ಮಾನಿಸಿದ ಡಾ ಮಂತರ್ ಗೌಡ. ಮಡಿಕೇರಿ : ಆಗಷ್ಟ್ 15 ರಂದು ದೆಹಲಿಯಲ್ಲಿ ನಡೆಯುವ ಸ್ವಾತಂತ್ರ್ಯ ಉತ್ಸವದಲ್ಲಿ ವಿಶೇಷ ಯುವ ರಾಯಭಾರಿಯಾಗಿ ಪ್ರಧಾನ ಮಂತ್ರಿ ಸೇರಿದಂತೆ ಗಣ್ಯರೊಂದಿಗೆ ವೇದಿಕೆ ಹಂಚಿಕೊಳ್ಳುವ ಅವಕಾಶ ಪಡೆದ ಕೊಡಗು ಜಿಲ್ಲೆಯ ಪ್ರತಿಭಾನ್ವಿತ ಯುವಕ ಯಶಸ್ ರೈ ರವರನ್ನು ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡ ರವರು ಇಂದು ಸುದರ್ಶನ ಅತಿಥಿಗೃಹದಲ್ಲಿ ಶಾಲು ಹೊದಿಸಿ ಸನ್ಮಾನಿಸಿದರು. ಮಡಿಕೇರಿ ತಾಲೂಕಿನ ಮೂರ್ನಾಡು ಗ್ರಾಮದ ಲವ […]
ಕೊಡಗು: ನೇಣು ಬಿಗಿದು ಶಿಕ್ಷಕಿ ಆತ್ಮಹ*ತ್ಯೆ – ಕೊ*ಲೆ ಶಂಕೆ…!

ನಾಪೋಕ್ಲು : ಶಿಕ್ಷಕಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಾಪೋಕ್ಲು ವ್ಯಾಪ್ತಿಗೆ ಒಳಪಡುವ ಎಮ್ಮೆಮಾಡುವಿನಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಸಫ್ರೀನಾ(32)ಆತ್ಮಹ*ತ್ಯೆ ಮಾಡಿಕೊಂಡ ಶಿಕ್ಷಕಿ. ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ನಿನ್ನೆ ಮಧ್ಯರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಮುಂದಾಗಿದ್ದಾರೆ. ಗಂಭೀರ ಸ್ವರೂಪದಲ್ಲಿದ್ದ ಅವರನ್ನು ತಕ್ಷಣ ನಾಪೋಕ್ಲು ಆಪತ್ರೆಗೆ ಕರೆತರುವಷ್ಟರಲ್ಲಿ ಮೃತಪಟ್ಟಿದ್ದಾರೆ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗಿದೆ. ಈ ನಡುವೆ ಪತಿ ನಜೀರ್ ವಿರುದ್ಧ ಸಫ್ರೀನಾ ಕುಟುಂಬಸ್ಥರು […]
ಅಗಲಿದ ಜನ ನಾಯಕ ವಿ.ಎಸ್.ಅಚ್ಯುತಾನಂದನ್ ಅವರಿಗೆ ಶ್ರದ್ಧಾಂಜಲಿ

ಅಗಲಿದ ಜನ ನಾಯಕ ವಿ.ಎಸ್. ಅಚ್ಯುತಾನಂದನ್ ರಿಗೆ ಕೊಡಗಿನಲ್ಲಿ ಶ್ರದ್ಧಾಂಜಲಿ ಮಡಿಕೇರಿ : ಅಗಲಿದ ಹಿರಿಯ ಕಮ್ಯೂನಿಷ್ಟ್ ನಾಯಕ. ಮಾಜಿ ಕೇರಳ ಮುಖ್ಯಮಂತ್ರಿ ವಿ.ಎಸ್.ಅಚ್ಯುತಾನಂದನ್ ಅವರಿಗೆ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಕೊಡಗು ಜಿಲ್ಲಾ ಸಮಿತಿ ವತಿಯಿಂದ ಸಿದ್ದಾಪುರದಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು. ಸಿದ್ದಾಪುರ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ನಾನಾ ಕಡೆಗಳಿಂದ ಆಗಮಿಸಿದ ಸಮಿತಿಯ ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡು ಹಿರಿಯ ನಾಯಕನ ಭಾವಚಿತ್ರಕ್ಕೆ ಪುಷ್ಪ ನಮನ ಮಾಡುವ ಮೂಲಕ […]
ದೇಹದಲ್ಲಿ ರಕ್ತ ಸಂಚಾರ ಸರಾಗವಾಗಿ ನಡೆಯಲು ಫೂಟ್ ಥೆರಪಿ ಪೂರಕ : ಶಾಸಕ ಡಾ.ಮಂತರ್ ಗೌಡ

ದೇಹದಲ್ಲಿ ರಕ್ತ ಸಂಚಾರ ಸರಾಗವಾಗಿ ನಡೆಯಲು ಫೂಟ್ ಥೆರಪಿ ಪೂರಕ : ಶಾಸಕ ಡಾ. ಮಂತರ್ ಗೌಡ ಮಡಿಕೇರಿ : ನಮ್ಮ ದೇಹದಲ್ಲಿ ರಕ್ತ ಸಂಚಾರ ಸರಾಗವಾಗಿ ನಡೆಯಲು ಫೂಟ್ ಥೆರಪಿ ಚಿಕಿತ್ಸೆ ಹೆಚ್ಚು ಸಹಕಾರಿ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಹೇಳಿದ್ದಾರೆ. ಕೊಡಗು ಪತ್ರಕರ್ತರ ಸಂಘದ ಸೋಮವಾರಪೇಟೆ ತಾಲ್ಲೂಕು ಘಟಕ, ವಾಹನ ಚಾಲಕರು ಮತ್ತು ಮೋಟಾರು ಕೆಲಸಗಾರರ ಸಂಘ ಹಾಗೂ ಕಂಪಾನಿಯೋ ಅವರ ಸಹಯೋಗದಲ್ಲಿ ವಾಹನ ಚಾಲಕರು ಮತ್ತು ಮೋಟಾರು […]
ಜನಸ್ನೇಹಿ ಡಾಕ್ಟರ್ ರಾಘವೇಂದ್ರ ವರ್ಗಾವಣೆ : ತೆರವಾದ ಸ್ಥಾನಕ್ಕೆ ತಜ್ಞ ವೈದ್ಯರ ನೇಮಕಕ್ಕೆ ಆಗ್ರಹ

ಜನಸ್ನೇಹಿ ಡಾಕ್ಟರ್ ರಾಘವೇಂದ್ರ ವರ್ಗಾವಣೆ : ತೆರವಾದ ಸ್ಥಾನಕ್ಕೆ ತಜ್ಞ ವೈದ್ಯರ ನೇಮಕಕ್ಕೆ ಆಗ್ರಹ ಸಿದ್ದಾಪುರ: ಕಳೆದ ಹದಿನೈದು ವರ್ಷಗಳಿಗೂ ಅಧಿಕ ಕಾಲ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಯಾಗಿ ಸೇವೆ ಸಲಿಸುತ್ತಿದ್ದ ಡಾಕ್ಟರ್ ರಾಘವೇಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ. ಚಾಮರಾಜ ನಗರದ ಬೇಗೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆಗೊಂಡಿರುವ ಅವರು ಈಗಾಗಲೇ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಸಿದ್ದಾಪುರ ಜನರ ಆರೋಗ್ಯದ ದೃಷ್ಟಿಯಿಂದ ಹಗಲು- ರಾತ್ರಿ ಎನ್ನದೆ ಹಲವು ವರ್ಷಗಳ ಕಾಲ ಸುಧೀರ್ಘ ಸೇವೆ ಸಲ್ಲಿಸಿರುವ […]
ಸಂತ ಅನ್ನಮ್ಮ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ವಿದ್ಯಾರ್ಥಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭ.

ಸಂತ ಅನ್ನಮ್ಮ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ವಿದ್ಯಾರ್ಥಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭ. ವಿರಾಜಪೇಟೆ :ಪಟ್ಟಣದ ಸಂತ ಅನ್ನಮ್ಮ ವಿದ್ಯಾಸಂಸ್ಥೆಯಲ್ಲಿ ಈ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿ ಪದಾಧಿಕಾರಿಗಳು ಆಯ್ಕೆಯಾಗಿದ್ದು ಅದರ ಪ್ರಯುಕ್ತ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಶಾಲಾ ಸಭಾಂಗಣದಲ್ಲಿ ಜರುಗಿತು.ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ವ್ಯವಸ್ಥಾಪಕರು ಹಾಗೂ ಸಂತ ಅನ್ನಮ್ಮ ದೇವಾಲಯದ ಪ್ರಧಾನ ಗುರುಗಳಾದ ರೆ. ಫಾ. ಜೇಮ್ಸ್ ಡೊಮಿನಿಕ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಬಳಿಕ ಅವರು ಮಾತನಾಡುತ್ತ ವಿದ್ಯಾರ್ಥಿಗಳು ನಾಯಕತ್ವದ ಗುಣವನ್ನು […]
ಯುವ ಸ್ಪಂದನ ಮತ್ತು ಜೀವನ ಕೌಶಲ್ಯ ಕಾರ್ಯಕ್ರಮ

ಯುವ ಸ್ಪಂದನ ಮತ್ತು ಜೀವನ ಕೌಶಲ್ಯ ಕಾರ್ಯಕ್ರಮ ಮಡಿಕೇರಿ : ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನಿಮ್ಹಾನ್ಸ್ ಸಹಯೋಗದೊಂದಿಗೆ ಯುವ ಸ್ಪಂದನ ಮತ್ತು ಜೀವನ ಕೌಶಲ್ಯ ಕಾರ್ಯಕ್ರಮವು ನಗರದ ಸರ್ಕಾರಿ ಪದವಿ ಕಾಲೇಜು ಸಭಾಂಗಣದಲ್ಲಿ ಬುಧವಾರ ನಡೆಯಿತು. ಯುವ ಜನತೆಗೆ ಜೀವನ ಕೌಶಲ್ಯ ಮತ್ತು ಮಹತ್ವದ ಕುರಿತು ಮಾಹಿತಿ ನೀಡಲಾಯಿತು. ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯ ಕ್ಷೇತ್ರ ಸಂಪರ್ಕ ಅಧಿಕಾರಿಯಾದ ನವ್ಯ ಆರ್. ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯದ ಬಗ್ಗೆ […]
ಶುಂಠಿಗೆ ಹೆಚ್ಚಿದ ರೋಗ: ನಿರ್ವಹಣೆಗೆ ತರಬೇತಿ ಕಾರ್ಯಕ್ರಮ

ಶುಂಠಿಗೆ ಹೆಚ್ಚಿದ ರೋಗ: ನಿರ್ವಹಣೆಗೆ ತರಬೇತಿ ಕಾರ್ಯಕ್ರಮ ಮಡಿಕೇರಿ : ರಾಜ್ಯದ ಹಲವು ಜಿಲ್ಲೆಗಳಲ್ಲಿ ಶುಂಠಿ ಬೆಳೆಯಲ್ಲಿ ಬೆಂಕಿ ರೋಗ ಕಾಣಿಸಿಕೊಂಡಿದ್ದು, ರೈತರು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡದಿದ್ದರೆ ಶೇ.60-70ರಷ್ಟು ಇಳುವರಿ ನಷ್ಠ ಅನುಭವಿಸಬೇಕಾಗುತ್ತದೆ ಎಂದು ಬೆಂಗಳೂರು ತೋಟಗಾರಿಕೆ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ.ಹರೀಶ್ ಬಿ.ಎಸ್. ಅವರು ತಿಳಿಸಿದರು. ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಮೈಸೂರು ತೋಟಗಾರಿಕೆ ಮಹಾವಿದ್ಯಾಲಯ, ಮೈಸೂರು ಕೃಷಿ ತಂತ್ರಜ್ಞರ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರ ಮಹಾವಿದ್ಯಾಲಯದ ಆವರಣದಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ, […]
ಸಿದ್ದಾಪುರ : ಜು.27ರಂದು 5 ವರ್ಷ ಮೇಲ್ಪಟ್ಟ ಮಕ್ಕಳಿಗಾಗಿ ಆಧಾರ್ ಶಿಬಿರ

ಜು.27ರಂದು ಸಿದ್ದಾಪುರದಲ್ಲಿ 5 ವರ್ಷ ಮೇಲ್ಪಟ್ಟ ಮಕ್ಕಳಿಗಾಗಿ ಆಧಾರ್ ಶಿಬಿರ ಮಡಿಕೇರಿ : 5 ವರ್ಷಗಳ ಮಕ್ಕಳಿಗೆ ಬಯೋಮೆಟ್ರಿಕ್ ಕಡ್ಡಾಯ ಯುಐಡಿಎಐ ಅಧಿಸೂಚನೆಯ ಪ್ರಕಾರ ಮಕ್ಕಳು ಐದು ವರ್ಷ ಪೂರ್ಣಗೊಳಿಸಿದ ನಂತರ ಆಧಾರ್‌ಗೆ ಬಯೋಮೆಟ್ರಿಕ್ ಮಾಹಿತಿಯನ್ನು ಸೇರಿಸುವುದು ಕಡ್ಡಾಯವನ್ನು ಮಾಡಲಾಗಿದೆ. ನೀವು ನಿಮ್ಮ ಮಗುವಿಗೆ ಏಳು ವರ್ಷದೊಳಗೆ ಅದನ್ನು ನವೀಕರಿಸದಿದ್ದರೆ, ಆಧಾರ್ ಸ್ಥಗಿತಗೊಳುವುದು ಎಂದು ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ತಿಳಿಸಿದೆ. ದಯವಿಟ್ಟು ಪೋಷಕರು 5 ವರ್ಷ ಮೇಲ್ಪಟ್ಟ ತಮ್ಮ ಮಕ್ಕಳ ಆಧಾರ್ ಕಾರ್ಡ್ […]
ವಿದೇಶದಲ್ಲಿ ಮೃತಪಟ್ಟ ವ್ಯಕ್ತಿಯ ಪಾರ್ಥಿವ ಶರೀರ ಭಾರತಕ್ಕೆ ತರಲು ಸರಕಾರದಿಂದ ನೆರವು

ವಿದೇಶದಲ್ಲಿ ಮೃತಪಟ್ಟ ವ್ಯಕ್ತಿಯ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ಸರಕಾರದಿಂದ ನೆರವು ಮಡಿಕೇರಿ : ಶಾಸಕ ಪೊನ್ನಣ್ಣ ರವರ ಪ್ರಯತ್ನದಿಂದ, ಅಮೆರಿಕದ ಗಯಾನ ದೇಶದಲ್ಲಿ ನಿಧನರಾದ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮದೆನಾಡು ಗ್ರಾಮದ, ಗಿರೀಶ್ ಪಾಲೆ ಬಾಬು ರವರ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ರಾಜ್ಯ ಸರ್ಕಾರದಿಂದ ಹಣಕಾಸಿನ ನೆರವು. ಇತ್ತೀಚೆಗೆ ಅಮೆರಿಕದ ಗಯಾನದಲ್ಲಿ ಅನಾರೋಗ್ಯದಿಂದ ಮೃತಪಟ್ಟ ಗಿರೀಶ್ ರವರ ಮೃತ ದೇಹವನ್ನು ಭಾರತಕ್ಕೆ ತರಲು ಅವರ ಬಡ ಕುಟುಂಬಕ್ಕೆ ಸಾಧ್ಯವಾಗದನ್ನು ಸ್ಥಳೀಯರಿಂದ ಮಾಹಿತಿ ಪಡೆದ […]