ಸ್ವಾತಂತ್ರ್ಯೋತ್ಸವದ ಪೂರ್ವಭಾವಿ ಸಭೆ : ಅರ್ಥಪೂರ್ಣ ಆಚರಣೆಗೆ ಕೊಡಗು ಜಿಲ್ಲಾಡಳಿತ ನಿರ್ಧಾರ

ಸ್ವಾತಂತ್ರ್ಯೋತ್ಸವದ ಪೂರ್ವಭಾವಿ ಸಭೆ : ಅರ್ಥಪೂರ್ಣ ಆಚರಣೆಗೆ ಕೊಡಗು ಜಿಲ್ಲಾಡಳಿತ ನಿರ್ಧಾರ ಮಡಿಕೇರಿ :* ಪ್ರತಿ ವರ್ಷದಂತೆ ಈ ಬಾರಿಯೂ ಆ.15 ರಂದು ನಗರದ ಕೋಟೆ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಕೊಡಗು ಜಿಲ್ಲಾಡಳಿತ ನಿರ್ಧರಿಸಿದೆ. ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು. ಕಳೆದ ಬಾರಿಯಂತೆ ಸ್ವಾಗತ, ಧ್ವಜಾರೋಹಣ, ವೇದಿಕೆ, ಕವಾಯತ್ತು ಉಪಹಾರ, ಭಾಷಣ, ಬಹುಮಾನ ಹೀಗೆ ವಿವಿಧ ಆಯಾಯ ಉಪ ಸಮಿತಿಗಳು ತಮ್ಮ […]
ಆ.೧೦ ರಂದು ಕಗ್ಗೋಡ್ಲುವಿನಲ್ಲಿ ಆಟಿಡೊಂಜಿ ದಿನ ಕೆಸರ‍್ದ ಗೊಬ್ಬು ಕೆಸರುಗದ್ದೆ ಕ್ರೀಡಾಕೂಟ

ಮಡಿಕೇರಿ : ಆಟಿ ಪ್ರಯುಕ್ತ ಕೊಡಗು ಜಿಲ್ಲಾ ಬಂಟರ ಸಂಘ, ಕೊಡಗು ಯುವ ಬಂಟ್ಸ್ ಅಸೋಸಿಯೇಷನ್ ಆಶ್ರಯದಲ್ಲಿ ಆ.೧೦ ರಂದು ಕಗ್ಗೋಡ್ಲುವಿನಲ್ಲಿ ಆಟಿಡೊಂಜಿ ದಿನ ಕೆಸರ‍್ದ ಗೊಬ್ಬು ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದೆ. ನಗರದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಯುವ ಬಂಟ್ಸ್ ಅಸೋಸಿಯೇಷನ್ ಸದಸ್ಯ ಶರತ್ ಕುಮಾರ್ ಶೆಟ್ಟಿ, ಮಡಿಕೇರಿ ನಗರ ಬಂಟರ ಮಹಿಳಾ ಘಟಕ, ಮಡಿಕೇರಿ ತಾಲೂಕು ಬಂಟರ ಮಹಿಳಾ ಘಟಕ, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕು ಮಹಿಳಾ ಬಂಟರ ಸಂಘ, ಕಗ್ಗೊಡ್ಲು ಹೋಬಳಿ ಬಂಟರ ಸಂಘದ […]
ದೂರು ನೀಡಿದರೂ ಆರೋಪಿ ವಿರುದ್ಧ ಕ್ರಮ ಕೈಗೊಂಡಿಲ್ಲ : ದಲಿತ ಸಂಘರ್ಷ ಸಮಿತಿ ಆರೋಪ

ಮಡಿಕೇರಿ : ಜಾತಿ ನಿಂದನೆ ಮತ್ತು ಅವಾಚ್ಯ ಶಬ್ಧಗಳಿಂದ ನಿಂದಿಸಿದ ವ್ಯಕ್ತಿಯ ವಿರುದ್ಧ ದೂರು ನೀಡಿದ್ದರು ಪೊಲೀಸ್ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದಲಿತ ಸಂಘರ್ಷ ಸಮಿತಿ ಆರೋಪಿಸಿದೆ. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಜಿಲ್ಲಾ ಸಂಚಾಲಕ ಸಿ.ಸಿ.ಲೋಕೇಶ್, ಇತ್ತೀಚೆಗೆ ಸಮಿತಿಯ ಜಿಲ್ಲಾ ಸಂಚಾಲಕರಾದ ಡಿ.ಜೆ.ಈರಪ್ಪ ಅವರು ನಾಕಲಗೂಡುದಿಂದ ಕೆಲಸಗಾರರೊಬ್ಬರನ್ನು ಕರೆತರಲು ತೆಳಿದ್ದರು. ಈ ಸಂದರ್ಭ ಕೆಲಸಗಾರ ಬರುವವರೆಗೆ ರಸ್ತೆ ಬದಿಯಲ್ಲಿ ಕಾರು ನಿಲುಗಡೆಗೊಳಿಸಿದ್ದರು. ಈ ಸಂದರ್ಭ ವ್ಯಕ್ತಿಯೊಬ್ಬ ಕಾರಿನಲ್ಲಿ ಬಂದು ನಿಲ್ಲಿಸಿ ಅವಾಚ್ಯ […]
ನೀರು ಕೇಳುವ ನೆಪದಲ್ಲಿ ಹಲ್ಲೆ ನಡೆಸಿ ಕಳ್ಳತನ : ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ನೀರು ಕೇಳುವ ನೆಪದಲ್ಲಿ ಹಲ್ಲೆ ನಡೆಸಿ ಕಳ್ಳತನ : ಆರೋಪಿಯನ್ನು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು ಮಡಿಕೇರಿ : ಮಹಿಳೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಕತ್ತಿನಲ್ಲಿದ್ದ ಸರ ಕದ್ದೊಯ್ದಿರುವ ಘಟನೆ ಕೊಂಡಗೇರಿಯಲ್ಲಿ ಇಂದು ಮಧ್ಯಾಹ್ನ ನಡೆದಿದ್ದು, ಜಿಲ್ಲೆಯ ಜನ ಬೆಚ್ಚಿ ಬೀಳುವಂತೆ ಮಾಡಿದೆ. ಕೊಂಡಂಗೇರಿಯ ಸಾರಮ್ಮ ಎಂಬುವವರೇ ಹಲ್ಲೆಗೊಳಗಾದ ಮಹಿಳೆಯಾಗಿದ್ದಾರೆ. ಏನಿದು ಪ್ರಕರಣ :: ಸಾರಮ್ಮ ತನ್ನ ಸೊಸೆಯೊಂದಿಗೆ ಮನೆಯಲ್ಲಿದ್ದು, ʼನಾನು ಪಕ್ಕದಲ್ಲಿ ಕೆಲಸಕ್ಕೆ ಬಂದಿದ್ದೇನೆ. ಕುಡಿಯೋಕೆ ನೀರು ಕೊಡಿʼ ಅಂತ ವ್ಯಕ್ತಿಯೊಬ್ಬ […]
ಭಾಗಮಂಡಲ ಭಗಂಡೇಶ್ವರ ದೇವಾಲಯದ ಆವರಣ ಸ್ವಚ್ಛಗೊಳಿಸಿದ ಗಜಾನನ ಯುವಕ ಸಂಘ ಸದಸ್ಯರು

ಭಾಗಮಂಡಲ ಭಗಂಡೇಶ್ವರ ದೇವಾಲಯದ ಆವರಣ ಸ್ವಚ್ಛಗೊಳಿಸಿದ ಗಜಾನನ ಯುವಕ ಸಂಘ ಸದಸ್ಯರು… ಭಾಗಮಂಡಲ : ಇಲ್ಲಿನ ಗಜಾನನ ಯುವಕ ಸಂಘದ ವತಿಯಿಂದ ಭಗಂಡೇಶ್ವರ ದೇವಾಲಯದ ಆವರಣವನ್ನು ಶುಚಿಗೊಳಿಸಲಾಯಿತು. ಎರಡು ತಿಂಗಳಿನಿಂದ ಸುರಿಯುತ್ತಿರುವ ನಿರಂತರ ಮಳೆಯ ಪರಿಣಾಮ ದೇವಾಲಯದ ಆವರಣದಲ್ಲಿ ಹಾವಸೆ(ಪಾಚಿ) ನಿರ್ಮಾಣವಾಗಿತ್ತು. ಇದರಿಂದಾಗಿ ದೇವಾಲಯಕ್ಕೆ ಆಗಮಿಸುವ ಭಕ್ತರು ಪ್ರಾಂಗಣದಲ್ಲಿ ಪ್ರದಕ್ಷಿಣೆ ಹಾಕುವಾಗ ಜಾರುವ ಪರಿಸ್ಥಿತಿ ಎದುರಾಗಿತ್ತು. ಈ ಬಗ್ಗೆ ಇಲ್ಲಿನ ಅರ್ಚಕರು ಇತ್ತೀಚೆಗೆ ಯುವಕ ಸಂಘದ ಪದಾಧಿಕಾರಿಗಳ ಗಮನಕ್ಕೆ ತಂದಿದ್ದರು. ಈ ಹಿನ್ನೆಲೆಯಲ್ಲಿ ಯುವಕ ಸಂಘದ ಸದಸ್ಯರು […]
ತ್ರಿವೇಣಿ ಶಾಲೆಯಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ

ತ್ರಿವೇಣಿ ಶಾಲೆಯಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ವಿರಾಜಪೇಟೆ : ಪಟ್ಟಣದ ತ್ರಿವೇಣಿ ಶಾಲೆಯಲ್ಲಿ ನೂತನ ವಿದ್ಯಾರ್ಥಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಈ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಜರುಗಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿರಾಜಪೇಟೆ ಕೊಡವ ಸಮಾಜದ ಅಧ್ಯಕ್ಷರಾದ ಕುಂಬೆರ ಮನು ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಮಕ್ಕಳಲ್ಲಿ ಪ್ರೀತಿ, ಅನುಕಂಪ, ಸಹನೆ ಹಾಗೂ ಉದಾತ್ತ ಗುಣಗಳು ಬೆಳೆಯಬೇಕು. ಪರಸ್ಪರ ಸಹಕಾರ, ಸೌಹಾರ್ದತೆಯಿಂದ ಬಾಳ್ವೆ ನಡೆಸಿ ಸಮಾಜಕ್ಕೆ ಕೊಡುಗೆಯನ್ನು ನೀಡಿ […]
ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ ತನಿಖೆ : ಎಸ್ಐಟಿಗೆ ವಹಿಸಿದ ಸರ್ಕಾರ

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ ತನಿಖೆ ಎಸ್ಐಟಿಗೆ ವಹಿಸಿದ ಸರ್ಕಾರ ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ನಡೆದಿರುವುದಾಗಿ ಆರೋಪಿಸಲಾದ ಸರಣಿ ಹತ್ಯೆಗಳು ಮತ್ತು ಶವಗಳನ್ನು ಹೂತಿಡುವ ಪ್ರಕರಣದ ಸಮಗ್ರ ತನಿಖೆಗಾಗಿ ರಾಜ್ಯ ಸರ್ಕಾರವು 4 ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ SIT ತಂಡವನ್ನು ರಚಿಸಿದೆ. ಈ ತಂಡವನ್ನು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಡಾ. ಪ್ರಣವ್ ಮೊಹಾಂತಿ ಅವರ ನೇತೃತ್ವದಲ್ಲಿ ರಚಿಸಲಾಗಿದ್ದು, ಅನುಚೇತ್, ಸೌಮ್ಯಲತಾ, ಜಿತೇಂದ್ರಕುಮಾರ್ ಅವರನ್ನು ಎಸ್ಐಟಿ ಸದಸ್ಯರಾಗಿ ನಿಯೋಜಿಸಲಾಗಿದೆ. ಮಹಿಳಾ […]
ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನ ಹೆಗ್ಗಡದೇವನಕೋಟೆ ಬಳಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ, ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ಈ ಸಂದರ್ಭ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
ಭಾಗಂಮಡಲ : ಗಜಾನನ ಯುವಕ ಸಂಘದ ವತಿಯಿಂದ ಆಂಬುಲೆನ್ಸ್ ಸೇವೆ ಆರಂಭ

ಭಾಗಂಮಡಲ ಗಜಾನನ ಯುವಕ ಸಂಘದ ವತಿಯಿಂದ ಆಂಬುಲೆನ್ಸ್ ಸೇವೆ ಆರಂಭ ಭಾಗಮಂಡಲ : ಇಲ್ಲಿನ ಗಜಾನನ ಯುವಕ ಸಂಘ ವತಿಯಿಂದ ಗ್ರಾಮ ವ್ಯಾಪ್ತಿಯ ಜನರ ಅನುಕೂಲಕ್ಕಾಗಿ ಆಂಬುಲೆನ್ಸ್ ಸೇವೆ ಆರಂಭಿಸಲಾಗಿದೆ. ನೂತನ ಆಂಬುಲೆನ್ಸ್‌ಗೆ ಭಾಗಮಂಡಲ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹ್ಯಾರಿಸ್ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು ಸಂಘದ ಕಾರ್ಯಚಟುವಟಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಗಜಾನನ ಯುವಕ ಸಂಘ ಸಮಾಜಕ್ಕೆ ಅನುಕೂಲವಾಗುವ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ. ಯುವಕರು ಇನ್ನಷ್ಟು ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಳ್ಳಲು […]
ಪ್ರೌಢಶಾಲಾ ಶಿಕ್ಷಕರನ್ನು ಬಿಎಲ್‌ಒಗಳನ್ನಾಗಿ ನೇಮಕ ಮಾಡದಂತೆ ಜಿಲ್ಲಾಧಿಕಾರಿಗೆ ಮನವಿ

ಪ್ರೌಢಶಾಲಾ ಶಿಕ್ಷಕರನ್ನು ಬಿಎಲ್‌ಒಗಳನ್ನಾಗಿ ನೇಮಕ ಮಾಡದಂತೆ ಡಿಸಿಗೆ ಮನವಿ ಮಡಿಕೇರಿ : ಪ್ರೌಢಶಾಲಾ ಶಿಕ್ಷಕರುಗಳನ್ನು ಬಿಎಲ್‌ಒಗಳನ್ನಾಗಿ ನೇಮಕ ಮಾಡುತ್ತಿರುವುದನ್ನು ಕೈಬಿಡಬೇಕೆಂದು ಕೋರಿ ಪ್ರೌಢಶಾಲಾ ಸಹಶಿಕ್ಷಕರ ಸಂಘ ಕೊಡಗು ಘಟಕ ವತಿಯಿಂದ ಜಿಲ್ಲಾಧಿಕಾರಿ ವೆಂಕಟರಾಜಾ ರವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಮಾತನಾಡಿದ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಚ್.ಜೆ.ಕುಮಾರ್, ಪ್ರೌಢಶಾಲಾ ಸಹಶಿಕ್ಷಕರುಗಳಿಗೆ ಈಗಾಗಲೇ ಪಾಠಪ್ರವಚನಗಳ ಹೆಚ್ಚು ಕಾರ್ಯಭಾರವಿದೆ. ಇಲಾಖೆಯ ಹತ್ತು ಹಲವು ಕಾರ್ಯಕ್ರಮಗಳ ಅನುಷ್ಠಾನ ಸೇರಿದಂತೆ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತಮ ಫಲಿತಾಂಶ ತರಬೇಕಾದ ಒತ್ತಡವಿರುವುದರಿಂದ ಬಿಎಲ್‌ಒ ಕರ್ತವ್ಯ ನಿಭಾಯಿಸುವುದು […]