Breaking News :

ಧರ್ಮಸ್ಥಳ ಪ್ರಕರಣ : ಎಸ್‍ಐಟಿ ತನಿಖೆಗೆ ಒಪ್ಪಿಸಲು ಆಗ್ರಹಿಸಿ ಕುಶಾಲನಗರದಲ್ಲಿ ಪ್ರತಿಭಟನೆ

ಧರ್ಮಸ್ಥಳ ಪ್ರಕರಣ : ಎಸ್‍ಐಟಿ ತನಿಖೆಗೆ ಒಪ್ಪಿಸಲು ಆಗ್ರಹಿಸಿ ಕುಶಾಲನಗರದಲ್ಲಿ ಪ್ರತಿಭಟನೆ ಕುಶಾಲನಗರ : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳ ತನಿಖೆಗೆ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಎಸ್‍ಐಟಿ ತನಿಖೆಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‍ಡಿಪಿಐ) ಕುಶಾಲನಗರದಲ್ಲಿ ಪ್ರತಿಭಟನೆ ನಡೆಸಿತು. ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ಎಸ್‍ಡಿಪಿಐ ಪ್ರಮುಖರು ಹಾಗೂ ಸದಸ್ಯರು ಧರ್ಮಸ್ಥಳದಲ್ಲಿ ನಡೆದಿರುವ ಘಟನೆಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು. ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ […]

ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ 

ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ  ಮೈಸೂರು : ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು.‌ ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ. ಭಾರತೀಯ ಸಾರ್ವಜನಿಕ‌ ಆಡಳಿತ ಸಂಸ್ಥೆ, ಮೈಸೂರು ಆಡಳಿತ ತರಬೇತಿ ಸಂಸ್ಥೆ, ಐಐಪಿಐ ಸಂಯುಕ್ತಾಶ್ರಯದಲ್ಲಿ ಕೆ.ಎ.ಎಸ್ ತಾಲೂಕು ನೋಡಲ್ ಅಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಸಂವಿಧಾನದ ಮೂಲ ಆಶಯ. ಸಂವಿಧಾನ ಜಾರಿಯಾಗಿ […]

ಕಾಡಾನೆ ಕಾರ್ಯಚರಣೆ ಏಳಕ್ಕೂ ಅಧಿಕ ಆನೆಗಳು ಮರಳಿ ಅರಣ್ಯಕ್ಕೆ

ಕಾಡಾನೆ ಕಾರ್ಯಚರಣೆ ಏಳಕ್ಕೂ ಅಧಿಕ ಆನೆಗಳು ಮರಳಿ ಅರಣ್ಯಕ್ಕೆ : ಉಳಿದ ಆನೆಗಳಿಗಾಗಿ ಮುಂದುವರೆಯಲಿರುವ ಕಾರ್ಯಾಚರಣೆ ಕೊಡಗು : ಪಾಲಿಬೆಟ್ಟ ಸಮೀಪದ ಬಜೆಗೊಲ್ಲಿ, ಮೇಕೂರು, ಹೊಳಮಾಲ ಸುತ್ತಮುತ್ತಲ ವ್ಯಾಪ್ತಿಯಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಅರಣ್ಯ ಅಟ್ಟುವ ಕಾರ್ಯಚರಣೆ ನಡೆಯಿತು. ವಿರಾಜಪೇಟೆ ವಲಯ ಉಪ ವಿಭಾಗ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ ಹಾಗೂ ಎಸಿಎಫ್ ಗೋಪಾಲ್ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಗಂಗಾಧರ್ ನೇತೃತ್ವದಲ್ಲಿ ಬಜೆಗೊಲ್ಲಿಯಿಂದ ಆರಂಭವಾದ ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿ ಶಶಿಧರ್ ಸೇರಿದಂತೆ ತಿತಿಮತಿ ಅರಣ್ಯ ವಲಯದ ಚೆನ್ನಾಂಗಿ ಶಾಖೆಯ […]

ಕೊಡಗು ಜಿಲ್ಲೆಯಲ್ಲಿ ಮನೆ ಬಳಿಗೆ ಆರೋಗ್ಯ ಸೇವೆ : ‘ಗೃಹ ಆರೋಗ್ಯ’ ಯೋಜನೆಗೆ ಶಾಸಕರಾದ ಡಾ.ಮಂತರ್ ಗೌಡ ಚಾಲನೆ 

ಕೊಡಗು ಜಿಲ್ಲೆಯಲ್ಲಿ ಮನೆ ಬಳಿಗೆ ಆರೋಗ್ಯ ಸೇವೆ : ‘ಗೃಹ ಆರೋಗ್ಯ’ ಯೋಜನೆಗೆ ಶಾಸಕರಾದ ಡಾ.ಮಂತರ್ ಗೌಡ ಚಾಲನೆ ಮಡಿಕೇರಿ : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ‘ವೈದ್ಯಕೀಯ ತರಬೇತಿ ಕೇಂದ್ರ’ ಆರಂಭಿಸಲು ಚಿಂತಿಸಲಾಗಿದೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ ಇವರ ವತಿಯಿಂದ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ನಡೆದ […]

ವೀರಭದ್ರೇಶ್ವರ ವರ್ಧಂತಿ ಮಹೋತ್ಸವಕ್ಕೆ ಮಾಜಿ ಪ್ರಧಾನಿ ದೇವೇಗೌಡರಿಗೆ ಆಹ್ವಾನ

ವೀರಭದ್ರೇಶ್ವರ ವರ್ಧಂತಿ ಮಹೋತ್ಸವ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯಿಂದ ಹೆಚ್.ಡಿ.ದೇವೇಗೌಡರಿಗೆ ಆಹ್ವಾನ ಕೊಡಗು : ವೀರಭದ್ರೇಶ್ವರ ವರ್ಧಂತಿ ಮಹೋತ್ಸವಕ್ಕೆ ರಾಷ್ಟ್ರದ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರನ್ನು ಆಹ್ವಾನಿಸಲಾಯಿತು.  ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ವತಿಯಿಂದ ಮುಂದಿನ ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಸಲು ಉದ್ದೇಶಿಸಿರುವ ರಾಷ್ಟ್ರೀಯ ವೀರಭದ್ರೇಶ್ವರ ವರ್ಧಂತಿ ಮಹೋತ್ಸವಕ್ಕೆ ಆಗಮಿಸುವಂತೆ ಕೋರಿ ಮಠಧೀಷರ ನೇತೃತ್ವದಲ್ಲಿ ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ನಿವಾಸಕ್ಕೆ ತೆರಳಿ ದೇವೇಗೌಡರನ್ನು ಭೇಟಿಮಾಡಿದ ತಂಡ ವೀರಭದ್ರೇಶ್ವರ ಜಯಂತಿಯ ಮಹತ್ವ ಹಾಗೂ ಆಚರಣೆಯ ಬಗ್ಗೆ ಮನವರಿಕೆ ಮಾಡಿಕೊಟ್ಟರು. ಈ […]

ಕುಶಾಲನಗರ : ಕೊಡಗು ಪತ್ರಕರ್ತರ ಸಂಘದಲ್ಲಿ ದತ್ತಿನಿಧಿ ಸ್ಥಾಪನೆ

ಕುಶಾಲನಗರ : ಕೊಡಗು ಪತ್ರಕರ್ತರ ಸಂಘದಲ್ಲಿ ದತ್ತಿನಿಧಿ ಸ್ಥಾಪನೆ ಮಡಿಕೇರಿ  : ಕೊಡಗು ಪತ್ರಕರ್ತರ ಸಂಘ, ಕುಶಾಲನಗರ ತಾಲ್ಲೂಕು ಘಟಕದಲ್ಲಿ ಕೊಡವಂಡ ವಸಂತಿ ಪೊನ್ನಪ್ಪ ಅವರು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ದತ್ತಿನಿಧಿಯನ್ನು ಸ್ಥಾಪಿಸಿದ್ದಾರೆ. ತಾಲ್ಲೂಕು ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು ಅವರಿಗೆ ರೂ.25 ಸಾವಿರ ಮೊತ್ತದ ಚೆಕ್ ಅನ್ನು ಹಸ್ತಾಂತರ ಮಾಡಿದರು. ಈ ಸಂದರ್ಭ ಕೊರವಂಡ ಪೊನ್ನಪ್ಪ, ಸಂಘದ ಗೌರವಾಧ್ಯಕ್ಷ ಕೆ.ತಿಮ್ಮಪ್ಪ, ಉಪಾಧ್ಯಕ್ಷ ಬಿ.ಸಿ.ದಿನೇಶ್, ನಿರ್ದೇಶಕರಾದ ಶಿವಣ್ಣ, ಅನಿಲ್ ಇದ್ದರು.

ವಿರಾಜಪೇಟೆ : ಕಾರ್ಮಿಕರಿಗೆ ವೆಲ್ಡಿಂಗ್ ಕಿಟ್ ವಿತರಣೆ

ಕಾರ್ಮಿಕರಿಗೆ ವೆಲ್ಡಿಂಗ್ ಕಿಟ್ ವಿತರಣೆ ಮಡಿಕೇರಿ  : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ 8 ಮಂದಿ ನೋಂದಣಿಯಾದ ವೆಲ್ಡಿಂಗ್ ಕಾರ್ಮಿಕರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ವೆಲ್ಡಿಂಗ್ ಕಿಟ್‍ಗಳನ್ನು ವಿತರಿಸಿದರು. ವಿರಾಜಪೇಟೆಯ ಪಂಜರಪೇಟೆಯಲ್ಲಿರುವ ಶಾಸಕರ ಗೃಹ ಕಚೇರಿಯಲ್ಲಿ ಕಿಟ್‍ಗಳನ್ನು ವಿತರಿಸಲಾಯಿತು. ಈ ಸಂದರ್ಭ ಸೋಮವಾರಪೇಟೆ ಹಾಗೂ ವಿರಾಜಪೇಟೆ ವೃತ್ತದ ಹಿರಿಯ ಕಾರ್ಮಿಕ ನಿರೀಕ್ಷಕ ಎಸ್.ಶಶಿಧರ್, ಮಡಿಕೇರಿ ವೃತ್ತ ಹಿರಿಯ ಕಾರ್ಮಿಕ ನಿರೀಕ್ಷಕರಾದ ಎಂ.ಎಂ. ಯತ್ನಟ್ಟಿ, ವಿರಾಜಪೇಟೆ ಹಾಗೂ ಮಡಿಕೇರಿ ಹಿರಿಯ […]

ಕೊಡಗು : ಟಿಂಬರ್ ಸಾಗಾಟ, ಸರಕು ಲಾರಿಗಳ ಓಡಾಟ ಅನುಮತಿಗೆ ಆಗ್ರಹಿಸಿ DC ಕಚೇರಿ ಚಲೋ ಪ್ರತಿಭಟನೆ

  ಕೊಡಗು : ಕೊಡಗಿನಲ್ಲಿ ಟಿಂಬರ್ ಸಾಗಾಟ, ಸರಕು ಲಾರಿಗಳ ಓಡಾಟಕ್ಕೆ ಅನುಮತಿ ನೀಡಲು ಆಗ್ರಹಿಸಿ ಕೂರ್ಗ್ ಲಾರಿ ಚಾಲಕರ ಮತ್ತು ಮಾಲೀಕರ ಸಂಘ ಹಾಗೂ ಟಿಂಬರ್ ಮರ್ಚೆಂಟ್ ಮತ್ತು ಕಾರ್ಮಿಕರ ಸಂಘದ ವತಿಯಿಂದ DC ಕಚೇರಿ ಚಲೋ ಪ್ರತಿಭಟನೆ ನಡೆಸಲಾಯಿತು. ನಗರದ ಗಾಂಧಿಮೈದಾನದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಈ ಸಂದರ್ಭ ಮಾತನಾಡಿದ ಕೂರ್ಗ್ ಲಾರಿ ಚಾಲಕರ ಮತ್ತು ಮಾಲೀಕರ ಸಂಘದ ಜಿಲ್ಲಾಧ್ಯಕ್ಷ ಮಹಮ್ಮದ್ […]

ಹವಾಮಾನ ಇಲಾಖೆಯಿಂದ ಮಳೆ ಅಬ್ಬರದ ಮುನ್ಸೂಚನೆ : ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ 

ಹವಾಮಾನ ಇಲಾಖೆಯಿಂದ ಮಳೆ ಅಬ್ಬರದ ಮುನ್ಸೂಚನೆ : ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ  ಕೊಡಗು : ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಇದೀಗ ಮತ್ತೆ ಶುರುವಾಗಿದ್ದು, ಹವಾಮಾನ ಇಲಾಖೆ (IMD) ಹಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಿದೆ. ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿರುವುದಿಂದ ರೆಡ್ ಅಲರ್ಟ್ ಘೋಷಿಸಿದೆ.  ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳಲ್ಲಿ ಗಾಳಿಯೂ 40-50ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ […]

ಕಾರ್ಮಿಕರ ಮೇಲೆ ಕಾಡಾನೆ ದಾಳಿ : ಓರ್ವ ಗಂಭೀರ ಮತ್ತೋರ್ವ ಸಣ್ಣಪುಟ್ಟ ಗಾಯಗಳೊಂದಿಗೆ ಪಾರು

ಕಾರ್ಮಿಕನ ಮೇಲೆ ಕಾಡಾನೆ ದಾಳಿ : ಓರ್ವ ಗಂಭೀರ ಕೊಡಗು ಜಿಲ್ಲೆಯ ಸಿದ್ದಾಪುರ ವ್ಯಾಪ್ತಿಯಲ್ಲಿ ಮುಂದುವರೆದ ಕಾಡಾನೆ ದಾಳಿ ಬೆಳ್ಳಂ ಬೆಳಗ್ಗೆ ಕಾರ್ಮಿಕನ ಮೇಲೆ ಕಾಡಾನೆ ಅಟ್ಯಾಕ್ ಸಿದ್ದಾಪುರ ಬಳಿಯ ಇವಾಲ್ವ್ ಬ್ಯಾಕ್ ರೆಸಾರ್ಟ್ ಮಾಲೀಕತ್ವದ ಶಿಲ್ಪಿ ಎಸ್ಟೇಟ್ ನಲ್ಲಿ ನಡೆದ ಘಟನೆ ಬೆಳಗ್ಗೆ ಕೆಲಸಕ್ಕೆಂದು ತೆರಳುತ್ತಿದ್ದ ವೇಳೆ ಕಾರ್ಮಿಕರ ಮೇಲೆ ಏಕಾಏಕಿ ದಾಳಿಗೆ ಮುಂದಾದ ಕಾಡಾನೆ. ಕಾರ್ಮಿಕನೋರ್ವನ ತಲೆ ಹಾಗೂ ಎದೆಯ ಭಾಗಕ್ಕೆ ಗಂಭೀರ ಪೆಟ್ಟಾಗಿದ್ದು , ಮತ್ತೋರ್ವನಿಗೆ ಕಾಲಿಗೆ ಪೆಟ್ಟಾಗಿದೆ. ಮೂಲತಃ ಬಾಗಲಕೋಟೆ ನಿವಾಸಿ […]