ಜು.19 ರಂದು ಮೈಸೂರಿನಲ್ಲಿ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ

ಜು.19 ರಂದು ಮೈಸೂರಿನಲ್ಲಿ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಮಡಿಕೇರಿ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ 2024-25ನೇ ಸಾಲಿನ ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜುಲೈ, 19 ರಂದು ಸಂಜೆ 4 ಗಂಟೆಗೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಘಟಿಕೋತ್ಸವ ಸಭಾಂಗಣದಲ್ಲಿ ನಡೆಯಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾದ ಅರುಣ್ ಕುಮಾರ್ ಅವರು ತಿಳಿಸಿದ್ದಾರೆ.
95 ಲಕ್ಷಕ್ಕೂ ಅಧಿಕ ಪ್ರವಾಸಿಗರು ಕೊಡಗು ಜಿಲ್ಲೆಗೆ ಭೇಟಿ

ಕಳೆದ ಎರಡುವರೆ ವರ್ಷದಲ್ಲಿ 95 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಕೊಡಗು ಜಿಲ್ಲೆಗೆ ಭೇಟಿ ಮಡಿಕೇರಿ : 2023 ನೇ ಸಾಲಿನ ಪ್ರವಾಸಿಗರ ಅಂಕಿ ಅಂಶ: 43,69,507, 2024 ನೇ ಸಾಲಿನ ಪ್ರವಾಸಿಗರ ಅಂಕಿ ಅಂಶ :45,72,790, 2025 ನೇ ಸಾಲಿನ ಜೂನ್ ಅಂತ್ಯಕ್ಕೆ 10.50 ಲಕ್ಷ ಪ್ರವಾಸಿಗರು ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್ ಅವರು ತಿಳಿಸಿದ್ದಾರೆ. ಕರ್ನಾಟಕ ಪ್ರವಾಸೋದ್ಯಮ ನೀತಿ 2020-26 ರಡಿ ಪ್ರವಾಸೋದ್ಯಮ ಇಲಾಖೆಯಿಂದ ಗುರುತಿಸಲ್ಪಟ್ಟ […]
ಜು.18 ರಂದು ಗೃಹ ಆರೋಗ್ಯ ಯೋಜನೆ ಕುರಿತು ಕಾರ್ಯಾಗಾರ

ಜು.18 ರಂದು ಗೃಹ ಆರೋಗ್ಯ ಯೋಜನೆ ಕುರಿತು ಕಾರ್ಯಾಗಾರ ಮಡಿಕೇರಿ : ಗೃಹ ಆರೋಗ್ಯ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜುಲೈ, 18 ರಂದು ಬೆಳಗ್ಗೆ 9.30 ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ‘ಗೃಹ ಆರೊಗ್ಯ’ ಯೋಜನೆಯ ಒಂದು ದಿನದ ಕಾರ್ಯಾಗಾರ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ತಿಳಿಸಿದ್ದಾರೆ.
ಪಾಲಿಬೆಟ್ಟ : ಕಾನೂನು ಅರಿವು ಕಾರ್ಯಕ್ರಮ

ಕಾನೂನು ಅರಿವು ಕಾರ್ಯಕ್ರಮ ಮಡಿಕೇರಿ : ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯ ಪಾಲಿಬೆಟ್ಟ ಇಲ್ಲಿ ಪೊಲೀಸ್ ಇಲಾಖೆ ಮತ್ತು ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಕಾನೂನು ಅರಿವು ಮತ್ತು ಹದಿಹರೆಯದ ಮಕ್ಕಳ ಆರೋಗ್ಯ ಕುರಿತ ಕಾರ್ಯಕ್ರಮ ನಡೆಯಿತು. ಪಾಲಿಬೆಟ್ಟದ ಆರಕ್ಷಕ ಉಪನಿರೀಕ್ಷಕರಾದ ಎಚ್.ಕೆ.ಮಂಜುನಾಥ್ ಅವರು ಪೋಕ್ಸೋ ಕಾಯಿದೆ, 112 ತುರ್ತು ಸಂಖ್ಯೆ, ಮಕ್ಕಳ ಸಹಾಯವಾಣಿ, ಮಾದಕ ಪದಾರ್ಥಗಳ ದುಷ್ಪರಿಣಾಮಗಳು, ಮೊಬೈಲ್ ಬಳಕೆಯ ರೀತಿ, ಸೈಬರ್ ಅಪರಾಧ, ಬಾಲ ಅಪರಾಧಗಳು, ಗುಡ್ […]
ಹಾರಂಗಿ ನೀರಿನ ಸಮರ್ಪಕ ನಿರ್ವಹಣೆಗೆ ಸೂಚನೆ

ಕೊಡಗು : ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಭೋಸರಾಜು ಅವರ ಅಧ್ಯಕ್ಷತೆಯಲ್ಲಿ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರ ಉಪಸ್ಥಿತಿಯಲ್ಲಿ ಬೆಂಗಳೂರಿನ ಕಾವೇರಿ ನೀರಾವರಿ ನಿಗಮದ ಕೇಂದ್ರ ಕಚೇರಿಯಲ್ಲಿ ಹಾರಂಗಿ ನೀರಾವರಿ ಸಲಹಾ ಸಮಿತಿ ಸಭೆಯು ಗುರುವಾರ ನಡೆಯಿತು. ಹಾರಂಗಿ ಅಚ್ಚುಕಟ್ಟು ಪ್ರದೇಶಗಳ ಸ್ಥಿತಿಗತಿ, ಜಲಾಶಯದ ಪ್ರಸ್ತುತ ನೀರಿನ ಮಟ್ಟದ ಬಗ್ಗೆ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆಯಲಾಯಿತು. ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಯೋಜಿತವಾಗಿ ನಾಲೆಗಳಿಗೆ ನೀರು ಹರಿಸುವ ಮೂಲಕ, ಸಮಪರ್ಕವಾಗಿ ನೀರಿನ ನಿರ್ವಹಣೆಯನ್ನು […]
ಜು.24 ರಂದು ಭಗಂಡೇಶ್ವರ ದೇವಾಲಯದಲ್ಲಿ ಪೊಲಿಂಕಾನ ಉತ್ಸವ

ಜು.24 ರಂದು ಭಗಂಡೇಶ್ವರ ದೇವಾಲಯದಲ್ಲಿ ಪೊಲಿಂಕಾನ ಉತ್ಸವ ಕೊಡಗು : ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ರೂಢಿ ಸಂಪ್ರದಾಯದಂತೆ ವಿಶ್ವಾವಸು ಸಂವತ್ಸರದ ಗ್ರೀಷ್ಮ ಋತುವಿನ ದಕ್ಷಿಣಾಯನ ಕರ್ಕಾಟಕ ಮಾಸ ಆಪಾಢ ಕೃಷ್ಣ ಪಕ್ಷದ ಅಮಾವಾಸ್ಯೆಯಂದು ಜುಲೈ, 24 ರಂದು ಮಧ್ಯಾಹ್ನ 12 ಗಂಟೆಗೆ ಮಹಾ ಪೂಜೆಯ ನಂತರ ಶ್ರದ್ಧಾಭಕ್ತಿಯಿಂದ ಪೊಲಿಂಕಾನ ಉತ್ಸವ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾಧಿಗಳು ದೇವಾಲಯಗಳಲ್ಲಿ ನಡೆಯಲಿರುವ ಪೊಲಿಂಕಾನ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಪೊಲಿಂಕಾನ ಉತ್ಸವ ಯಶಸ್ವಿಗೊಳಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ. ಚಂದ್ರಶೇಖರ್ […]
ಜು.೧೮ರಂದು ಜಿಲ್ಲಾ ಲಾರಿ ಮಾಲೀಕರ ಮತ್ತು ಚಾಲಕರ ಸಂಘದಿಂದ ಪ್ರತಿಭಟನೆ

ಕೊಡಗು : ಸರಕು ಸಾಗಾಣಿ ಮಾಡುವ(೧೮.೫೦೦ ಕೆ.ಜಿ. ಗಿಂತ ಹೆಚ್ಚಿನ ತೂಕ) ವಾಹನಗಳಿಗೆ ಜಿಲ್ಲಾಡಳಿತ ಏರಿರುವ ನಿರ್ಬಂಧವನ್ನು ಸಡಿಲಗೊಳಿಸುವಂತೆ ಒತ್ತಾಯಿಸಿ ಜು.೧೮ರಂದು ಜಿಲ್ಲಾಡಾಳಿತ ಭವನದ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಕೊಡಗು ಜಿಲ್ಲಾ ಲಾರಿ ಮಾಲೀಕರ ಮತ್ತು ಚಾಲಕರ ಸಂಘ ತಿಳಿಸಿದೆ. ನಗರದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಸಂಘದ ಅಧ್ಯಕ್ಷ ಮಹಮ್ಮದ್ ಇಕ್ಬಾಲ್, ಜಿಲ್ಲಾಧಿಕಾರಿಗಳ ಆದೇಶ ಕೊಡಗು ಜಿಲ್ಲೆಯ ಲಾರಿ ಮಾಲೀಕರು, ಚಾಲಕರು ಮಾತ್ರ ಪಾಲಿಸುತ್ತಿದ್ದಾರೆ. ಆದರೆ, ಜಿಲ್ಲೆಯಲ್ಲಿ ಹೊರ ಜಿಲ್ಲೆಯಿಂದ ೧೮.೫೦೦ ಕೆ.ಜಿ. ಗಿಂತ ಹೆಚ್ಚಿನ […]
ಸಚಿನ್ ನಿಂಬಾಳ್ಕರ್ ಹಾಗೂ ಐಶ್ವರ್ಯಗೆ ಮುಖ್ಯಮಂತ್ರಿ ಪದಕ

ಸಚಿನ್ ನಿಂಬಾಳ್ಕರ್ ಹಾಗೂ ಐಶ್ವರ್ಯಗೆ ಮುಖ್ಯಮಂತ್ರಿ ಪದಕ ಕೊಡಗು : ವಲಯ ಅರಣ್ಯ ವ್ಯಾಪ್ತಿಯ ಮೀನುಕೊಲ್ಲಿ ವಿಭಾಗದಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಚಿನ್ ನಿಂಬಾಳ್ಳರ್ ಹಾಗೂ ಗಂಧದಕೋಟಿ ಅರಣ್ಯ ತರಬೇತಿ ಕೇಂದ್ರದ ವಲಯ ಉಪ ಅರಣ್ಯಾಧಿಕಾರಿ ಐಶ್ವರ್ಯಾ ಆರ್. ಗೌಡಗೆ ಮುಖ್ಯಮಂತ್ರಿ ಪದಕ ಗೌರವಕ್ಕೆ ಭಾಜನರಾಗಿದ್ದಾರೆ. ಸಚಿನ್ ನಿಂಬಾಳ್ವರ್ 8 ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವಿರಾಜಪೇಟೆ ಉಪ ವಿಭಾಗದಲ್ಲಿ ಕೆಲವು ವರ್ಷ ಕರ್ತವ್ಯ ನಿರ್ವಹಿಸಿದ್ದರು. ಐಶ್ವರ್ಯಾ ಅವರು […]
ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆ ಆರಂಭ : ಸೌಲಭ್ಯ ಪಡೆಯಲು ಜಿಲ್ಲಾಧಿಕಾರಿ ಮನವಿ

ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 1711 ಮಂದಿ ಹೆಸರು ನೋಂದಣಿ ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆ ಆರಂಭ; ಸೌಲಭ್ಯ ಪಡೆಯಲು ಮನವಿ ಮಡಿಕೇರಿ : 2025 ರ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಈ ಸಂಬಂಧ ಭಿತ್ತಿಪತ್ರ ವನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಬುಧವಾರ ಬಿಡುಗಡೆ ಮಾಡಿದರು. ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಭಿತ್ತಿಪತ್ರ ಬಿಡುಗಡೆ ಮಾತನಾಡಿದ ಜಿಲ್ಲಾಧಿಕಾರಿ ಅವರು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ 2024 ರ ಜನವರಿ 01 ರಂದು […]
ಸಿದ್ದಾಪುರ : ಕಾಡಾನೆ ಅರಣ್ಯಕ್ಕೆ ಅಟ್ಟುವ ಕಾರ್ಯಾಚರಣೆ

ಸಿದ್ದಾಪುರ : ಕಾಡಾನೆ ಅರಣ್ಯಕ್ಕೆ ಅಟ್ಟುವ ಕಾರ್ಯಾಚರಣೆ ಮಡಿಕೇರಿ : ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಗೆ ಒಳಪಡುವ ಸಿದ್ದಾಪುರ ಸಮೀಪದ ಗುಹ್ಯ ಶಾಲೆಯ ಹತ್ತಿರದ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ಬುಧವಾರ ನಡೆಯಿತು. ಕೆಲದಿನಗಳಿಂದ ಇಲ್ಲಿನ ಸುತ್ತಮುತ್ತಲ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳಿಂದ ವಿದ್ಯಾರ್ಥಿಗಳು, ಪೋಷಕರಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತು. ಈ ಹಿನ್ನೆಲೆ ಕಾಡಾನೆ ಹಿಂಡನ್ನು ಅರಣ್ಯಕ್ಕೆ ಅಟ್ಟಲು ಇಲಾಖೆಗೆ ಸ್ಥಳೀಯರು ಆಗ್ರಹಿಸಿದ್ದರು. ವಿರಾಜಪೇಟೆ ವಲಯ ಉಪ ವಿಭಾಗ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ ಹಾಗೂ […]