Breaking News :

ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕೋಚನ ಚೇತನ್ ಆಯ್ಕೆ

  ಜನವಾಹಿನಿ News ಮಡಿಕೇರಿ : ಮಡಿಕೇರಿ ನಗರ ಕಾಂಗ್ರೆಸ್ಸಿನ ಪ್ರಧಾನ ಕಾರ್ಯದರ್ಶಿಯಾಗಿ ಕೋಚನ ಚೇತನ್ ಅವಿರೋಧ ಆಯ್ಕೆಯಾಗಿದ್ದಾರೆ. ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷರಾದ ಪ್ರಕಾಶ್ ಆಚಾರ್ಯ ಅವರು ಕೋಚನ ಚೇತನ್ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಗೊಳಿಸಿ ಆದೇಶ ಹೊರಡಿಸಿದ್ದಾರೆ. ಚೇತನ್ ನಗರದ ದೇಚೂರು ನಿವಾಸಿಯಾಗಿದ್ದು, ಕಳೆದ ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದಾರೆ.

ಕೇರಳ ಚುನಾವಣೆ ; 2 ಕ್ಷೇತ್ರಗಳ ವೀಕ್ಷಕರಾಗಿ ಶಾಸಕ ಪೊನ್ನಣ್ಣ ನೇಮಕ

  ಜನವಾಹಿನಿ News ಮಾನಂದವಾಡಿ : ಸಂಸದೆ ಹಾಗೂ ಎಐಸಿಸಿ ನಾಯಕಿ ಪ್ರಿಯಾಂಕಾ ಗಾಂಧಿಯವರ ವಯನಾಡು ಲೋಕಸಭಾ ಕ್ಷೇತ್ರದ ಭಾಗವಾಗಿರುವ, ಮಾನಂದವಾಡಿ ಹಾಗೂ ಸುಲ್ತಾನ್ ಬತ್ತೇರಿ ವಿಧಾನಸಭಾ ಕ್ಷೇತ್ರಗಳ ವೀಕ್ಷಕರಾಗಿ, ಎ.ಎಸ್ ಪೊನ್ನಣ್ಣ ರವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿಯು ನೇಮಕ ಮಾಡಿ ಆದೇಶಿಸಿದೆ.

ವಿರಾಜಪೇಟೆ ವ್ಯಾಪ್ತಿಯಲ್ಲಿ ಮತ್ತೊಂದು ಒಂಟಿ ಸಲಗ ಸೆರೆ : ಅರಣ್ಯ ಇಲಾಖೆಯಿಂದ ಯಶಸ್ವಿ ಕಾರ್ಯಾಚರಣೆ

ಜನವಾಹಿನಿ News ವಿರಾಜಪೇಟೆ : ಕೊಡಗಿನ ವಿರಾಜಪೇಟೆ ತಾಲೂಕಿನ ಕಕ್ಲೂರು-ಚೆಂಬೆಬೆಳ್ಳೂರು ಭಾಗದಲ್ಲಿ ದಾಂಧಲೆ ನಡೆಸುತ್ತಿದ್ದ ಸುಮಾರು 35 ವರ್ಷದ ಒಂಟಿ ಸಲಗ (ಕಾಡಾನೆ) ಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಭಾನುವಾರ (ಮಾ.22, 2026) ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ. ಸಾಕಾನೆಗಳ ಸಹಾಯದಿಂದ ಮೂರು ಗಂಟೆಗಳ ಕಾರ್ಯಾಚರಣೆ ನಡೆಸಿ, ಪಶುವೈದ್ಯ ಡಾ. ರಮೇಶ್ ನೇತೃತ್ವದಲ್ಲಿ ಅರವಳಿಕೆ ಮದ್ದು ನೀಡಿ ಸೆರೆಹಿಡಿಯಲಾದ ಆನೆಯನ್ನು ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ. ದುಬಾರೆ ಹಾಗೂ ಮತ್ತಿಗೋಡು ಶಿಬಿರದ ಸಾಕಾನೆಗಳಾದ ಅಭಿಮನ್ಯು, ಮಹೇಂದ್ರ, ಕಂಜನ್, ಭೀಮ, ಸುಗ್ರೀವ […]

ಕರಿಕೆ : ಶ್ರದ್ಧಾಭಕ್ತಿಯಿಂದ ಜರುಗಿದ ಮುತ್ತಪ್ಪ ವೆಳ್ಳಾಟ

  ಜನವಾಹಿನಿ News ಮಡಿಕೇರಿ : ಕರಿಕೆ ತೋಟಂ ಶ್ರೀ ಮುತ್ತಪ್ಪ ಸನ್ನಿಧಿಯಲ್ಲಿ ಪ್ರತೀವರ್ಷದಂತೆ ಮುತ್ತಪ್ಪ ವೆಳ್ಳಾಟ ಶ್ರದ್ಧಾ ಭಕ್ತಿಯಿಂದ ನೆರವೇರಿತು. ಸುತ್ತಮುತ್ತಲ ಭಾಗದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಮುತ್ತಪ್ಪ ದೇವರ ದರ್ಶನ ಪಡೆದುಕೊಂಡರು.

ಶ್ರೀ ವಿನಾಯಕ ಸೇವಾ ಟ್ರಸ್ಟ್‌ ವತಿಯಿಂದ ರಾಮನವಮಿ, ವಾರ್ಷಿಕ ಮಹಾಸಭೆ ಮಾ.26ಕ್ಕೆ

ಜನವಾಹಿನಿ News ಮಡಿಕೇರಿ : ಶ್ರೀ ವಿನಾಯಕ ಸೇವಾ ಟ್ರಸ್ಟ್‌ ಕತ್ತಲೆಕಾಡು-ಜೇನುಕೊಲ್ಲಿ ವತಿಯಿಂದ ಶ್ರೀರಾಮನವಮಿ ಆಚರಣೆ ಹಾಗೂ ಟ್ರಸ್ಟ್‌ನ 2025-26 ವಾರ್ಷಿಕ ಮಹಾಸಭೆ ಮಾರ್ಚ್‌ 26ರಂದು ನಡೆಯಲಿದೆ. ಟ್ರಸ್ಟ್‌ಗೆ ನೂತನವಾಗಿ ಖರೀದಿಸಿರುವ ಜಾಗದ ಆವರಣದಲ್ಲಿ ಅಂದು ಬೆಳಗ್ಗೆ 9 ಗಂಟೆಗೆ ಬ್ರಹ್ಮಶ್ರೀ ವೇದಮೂರ್ತಿ ಗಿರೀಶ್ ತಂತ್ರಿ ಅವರ ನೇತೃತ್ವದಲ್ಲಿ ಗಣಹೋಮ, ಬಳಿಕ ದುರ್ಗಾ ಹೋಮ, 11 ಗಂಟೆಗೆ ಶ್ರೀರಾಮನವಿ ಪ್ರಯುಕ್ತ ವಿಶೇಷ ಪೂಜೆ, ಶ್ರೀರಾಮನಿಗೆ ಆರತಿ ನೆರವೇರಲಿದೆ. ನಂತರ ಟ್ರಸ್ಟ್‌ನ ಭಜನಾ ತಂಡದಿಂದ ಭಜನೆ, ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. […]

ಐಕ್ಯತೆ ಮೂಡಿಸುವ ಶಕ್ತಿ ಕ್ರೀಡೆಗಿದೆ ಪ್ರೊ. ಮೇ. ಬಿ. ರಾಘವ : ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್ ಗೆ ಚಾಲನೆ

  ಜನವಾಹಿನಿ News ಮಡಿಕೇರಿ : ದೇಶದ ಪ್ರಗತಿ ಹಾಗೂ ಐಕ್ಯತೆ ಮೂಡಿಸುವ ಶಕ್ತಿ ಕ್ರೀಡೆಗಿದೆ ಎಂದು ಫೀ.ಮಾ. ಕೆ.ಎಂ. ಕಾರ್ಯಪ್ಪ ಕಾಲೇಜು ಪ್ರಾಂಶುಪಾಲ ಪ್ರೊ. ಮೇ. ಬಿ. ರಾಘವ ಅಭಿಮತ ವ್ಯಕ್ತಪಡಿಸಿದರು. ನಗರದ ಫೀ.ಮಾ. ಕೆ.ಎಂ. ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಆಯೋಜಿಸಿದ್ದ ನಾಲ್ಕನೇ ವರ್ಷದ ಕ್ರಿಕೆಟ್ ಪ್ರೀಮಿಯರ್ ಲೀಗ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು. ಮೋಜು-ಮಸ್ತಿಗಾಗಿ ಆರಂಭವಾದ ಕ್ರಿಕೆಟ್ ಕ್ರಮೇಣ ಜಾಗತಿಕ ಮಟ್ಟದಲ್ಲಿ ಮನ್ನಣೆ ಪಡೆದುಕೊಂಡು ಇಂದು ಎಲ್ಲಾ ವಯೋಮಾನದವರನ್ನು ಸೆಳೆಯುತ್ತಿದೆ. ಶಿಸ್ತುಬದ್ಧ […]

ಕಲೆ ಸಾಹಿತ್ಯಗಳು ನಾಡಿನ ಶ್ರೀಮಂತಿಕೆಯ ಪ್ರತೀಕ-ಗೋಪಾಲಕೃಷ್ಣ ಭಟ್

  ಜನವಾಹಿನಿ News ಪುತ್ತೂರು : ಸಂಗೀತ ನೃತ್ಯ ಸಾಹಿತ್ಯ ಮುಂತಾದ ಶಾಸ್ತ್ರೀಯ ಕಲೆಗಳು ನಾಡಿನ ಶ್ರೀಮಂತಿಕೆಯ ಪ್ರತೀಕ. ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಯ ಮೂಲಕ ನಮ್ಮ ಉತ್ಕೃಷ್ಟತೆಯ ಅಂಶಗಳನ್ನು ಸಮಾಜಕ್ಕೆ ತೋರಿಸಿಕೊಟ್ಟಂತಾಗುತ್ತದೆ ಎಂದು ದ್ವಾರಕಾ ಕಾರ್ಪೋರೇಷನ್ ಮುಖ್ಯಸ್ಥ ಗೋಪಾಲಕೃಷ್ಣ ಭಟ್ ಹೇಳಿದರು. ಪುತ್ತೂರು ಸಮೀಪದ ಮುರದ ಶಿವಸದನ ಹಿರಿಯ ನಾಗರಿಕರ ವಸತಿ ನಿಲಯದಲ್ಲಿ ಜರುಗಿದ ಸಂಗೀತ ಕಲಾವಿದ ಆಗಮ ಪೆರ್ಲ ಅವರ ಸಂಗೀತ ಕಚೇರಿಯನ್ನು ಉದ್ಘಾಟಿಸಿ ಅವರು ಮಾತಾಡಿದರು. ಕಲಾವಿದ ಆಗಮ ಪೆರ್ಲ ಓರ್ವ ಪ್ರತಿಭಾವಂತ […]

ಗೋಣಿಕೊಪ್ಪಲು : ಕಾರು ಬೈಕ್ ಗಳ ನಡುವೆ ಭೀಕರ ಅಪಘಾತ ; ಸವಾರರು ಸ್ಥಳದಲ್ಲೇ ಸಾವು 

ಜನವಾಹಿನಿ News ಗೋಣಿಕೊಪ್ಪ : ಕಾರು ಮತ್ತು ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಎರಡು ಬೈಕ್ ಗಳ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ತಿತಿಮತಿ ರಸ್ತೆಯಲ್ಲಿ ನಡೆದಿದೆ. ನಂಜನಗೂಡು ನಿವಾಸಿ ಶಿವಕುಮಾರ್(25) ಹಾಗೂ ಕೇರಳ ರಾಜ್ಯದ ಪಾಲಕ್ಕಾಡ್ ನಿವಾಸಿ ಮೊಹಮದ್ ಶಿಹಾಬ್(27) ಮೃತ ಯುವಕರೆಂದು ಗುರುತಿಸಲಾಗಿದೆ. ಅಪಘಾತದ ತೀವ್ರತೆಗೆ ಮೂರು ವಾಹನಗಳು ತೀವ್ರ ಜಖಂಗೊಂಡಿದ್ದು,ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭಾಗಮಂಡಲ; ಜನಸ್ಪಂದನದಲ್ಲಿ ಸಾರ್ವಜನಿಕರಿಂದ 85 ಅರ್ಜಿ ಸಲ್ಲಿಕೆ

ಜನವಾಹಿನಿ News ಮಡಿಕೇರಿ : ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕಿನ ಭಾಗಮಂಡಲ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಶನಿವಾರ ನಡೆದ ಜನಸ್ಪಂದನಾ ಸಭೆಯಲ್ಲಿ ಸಾರ್ವಜನಿಕರಿಂದ 85 ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾದವು. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ 15, ಗ್ರಾಮೀಣಾಭಿವೃದ್ಧಿ 7, ಪಂಚಾಯತ್ ರಾಜ್ ಸಂಬಂಧಿಸಿದಂತೆ 10, ಸೆಸ್ಕ್‌ 3, ಆಹಾರ 3, ರಸ್ತೆ ಸೇರಿದಂತೆ ವಿವಿಧ ಇಲಾಖೆಗಳ‌ 46 ಒಟ್ಟು 85 […]

ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ : ಶಾಸಕ ಪೊನ್ನಣ್ಣ

  ಜನವಾಹಿನಿ News ಮಡಿಕೇರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಳೆದ ಮೂರು ವರ್ಷದಲ್ಲಿ ಕೊಡಗು ಜಿಲ್ಲೆಗೆ ಹೆಚ್ಚಿನ‌ ಪ್ರಾಧಾನ್ಯತೆ ನೀಡಿದೆ ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ನಗರದ ಸುದರ್ಶನ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದರು. ಬಹು ವರ್ಷಗಳಿಂದ ಆದಿವಾಸಿ ಜನರ ಅಭಿವೃದ್ಧಿಗಾಗಿ ಕೇಳಿ ಬರುತ್ತಿದ್ದ ‘ಆದಿವಾಸಿಗಳ ಅಭಿವೃದ್ಧಿ ನಿಗಮ’ ಬಜೆಟ್ ನಲ್ಲಿ ಪ್ರಕಟಿಸುವ ಮೂಲಕ ಸರ್ಕಾರ ಈ ಜನರ ಧ್ವನಿಗೆ ಸ್ಪಂದಿಸಿದೆ. ಹಾಗೆಯೇ ಕೊಡವ ಅಭಿವೃದ್ಧಿ […]