Breaking News :

ಗಸ್ತು ತಿರುಗುತ್ತಿದ್ದ ಅರಣ್ಯ ವೀಕ್ಷಕನ ಮೇಲೆ ಕರಡಿ ದಾಳಿ : ಸಿಬ್ಬಂದಿ ಗಂಭೀರ 

  ಗಸ್ತು ತಿರುಗುತ್ತಿದ್ದ ಅರಣ್ಯ ವೀಕ್ಷಕನ ಮೇಲೆ ಕರಡಿ ದಾಳಿ : ಸಿಬ್ಬಂದಿ ಗಂಭೀರ  ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅಂತರಸಂತೆ ಅರಣ್ಯ ವಲಯದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಕರಡಿಯೊಂದು ದಾಳಿ ನಡೆಸಿ, ಅರಣ್ಯ ಇಲಾಖೆಯ ಪಿಸಿಪಿ ಸಿಬ್ಬಂದಿಯನ್ನು ಗಂಭೀರವಾಗಿ ಗಾಯಗೊಳಿಸಿದೆ. ಅರಣ್ಯ ವೀಕ್ಷಕ ಮಾದ (35) ಎಂಬುವರು ಕರಡಿ ದಾಳಿಗೆ ತುತ್ತಾಗಿದ್ದು, ತಲೆ ಮತ್ತು ಮುಖದ ಭಾಗಕ್ಕೆ ಗಂಭೀರ ಗಾಯಗಳಾಗಿದೆ. ಎಚ್.ಡಿ.ಕೋಟೆ ತಾಲೂಕಿನ ಸೋಗಹಳ್ಳಿ ಸಮೀಪದ ಎಂ.ಜಿ.ಹಳ್ಳಿ ಹಾಡಿಯ ನಿವಾಸಿ ಮಾದ ಅವರು ಎಂದಿನಂತೆ ಕರ್ತವ್ಯಕ್ಕೆ […]

ವಿರಾಜಪೇಟೆಯ ಆದ್ಯ ಸಿಂಗ್ 4ನೇ ಏಷಿಯನ್ ಸರ್ಫಿಂಗ್ ಚಾಂಪಿಯನ್ ಶಿಪ್‌ಗೆ ಆಯ್ಕೆ

ವಿರಾಜಪೇಟೆಯ ಆದ್ಯ ಸಿಂಗ್ 4ನೇ ಏಷಿಯನ್ ಸರ್ಫಿಂಗ್ ಚಾಂಪಿಯನ್ ಶಿಪ್‌ಗೆ ಆಯ್ಕೆ ಕೊಡಗು : ಜಿಲ್ಲೆಯ ವಿರಾಜಪೇಟೆ ನಗರದ ತೆಲುಗರ ಬೀದಿ ನಿವಾಸಿಗಳಾದ ಅಜಯ್ ಸಿಂಗ್ ಹಾಗು ವಿಭಾ ದಂಪತಿಗಳ ಮಗಳು ಹಾಗೂ ಗೋಣಿಕೊಪ್ಪ ಕಾಪ್ಸ್ ವಿದ್ಯಾಸಂಸ್ಥೆಯ 10ನೇ ತರಗತಿ ವಿದ್ಯಾರ್ಥಿನಿ ಆದ್ಯ ಸಿಂಗ್ 4ನೇ ಏಷಿಯನ್ ಸರ್ಫಿಂಗ್ ಚಾಂಪಿಯನ್ ಶಿಪ್‌ಗೆ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. 2025-26ನೇ ಸಾಲಿನ 4ನೇ ಏಷಿಯನ್ ಸರ್ಫಿಂಗ್ ಚಾಂಪಿಯನ್ ಶಿಪ್ ತಮಿಳುನಾಡಿನ ಮಹಾಬಲಿಪುರಂನಲ್ಲಿ ಆಗಸ್ಟ್ ತಿಂಗಳಿನಲ್ಲಿ ನಡೆಯಲಿದ್ದು, ಇದರಲ್ಲಿ ಜೂನಿಯ‌ರ್ ವಿಭಾಗದಲ್ಲಿ […]

ತುಳುರಂಗಭೂಮಿ‌ ಕಲಾವಿದ ಮೌನೇಶ ಆಚಾರ್ಯ ಹೃದಯಾಘಾತದಿಂದ ಸಾವು

ಬಂಟ್ವಾಳ : ಪ್ರತಿಭಾನ್ವಿತ ಯುವಕ, ತುಳುರಂಗಭೂಮಿ‌ ಕಲಾವಿದ, ಕಾಪಿಕಾಡು‌ ನಿವಾಸಿ ಮೌನೇಶ ಆಚಾರ್ಯ ಮಾಣಿ(44) ಇವರು ಮಂಗಳವಾರ ಮುಂಜಾನೆ ತಮ್ಮ‌ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು. ಚಿನ್ನದ ಕೆಲಸ‌ಮಾಡುತ್ತಿದ್ದ ಇವರು ಜೊತೆಗೆ ಮನೆಸಮೀಪವೇ ಚಿಕ್ಕ‌ ದಿನಸಿ‌ಅಂಗಡಿ ನಡೆಸುತ್ತಿದ್ದರು. ಹಾಸ್ಯಪ್ರಜ್ಞೆ ಉಳ್ಳವರಾಗಿದ್ದ ಇವರು ಜಯಂ ಕಲಾನಿಕೇತನ ಮಾಣಿ ನೃತ್ಯತಂಡದಲ್ಲಿ ಕಲಾವಿದರಾಗಿದ್ದ ಇವರು ಕಲಾಮಾತೆ ನಾಗನವಳಚ್ಚಿಲ್ ತಂಡದ ಕಲಾವಿದರಾಗಿದ್ದು, ಶಾಂತರಾಮ್ ಕಲ್ಲಡ್ಕ ನಿರ್ದೇಶನದ ತುಳು ಅಪ್ಪೆಜೋಕ್ಲು ಕಲಾ ಬಳಗದ ನಾಟಕಗಳಲ್ಲಿಯೂ ಅಭಿನಯಿಸಿದ್ದರು.‌ಪ್ರಸ್ತುತ ನಮ್ಮ‌ಕಲಾವಿದರು ನೆಲ್ಯಾಡಿ ತುಳುನಾಟಕ ತಂಡದ ಕಲಾವಿದರಾಗಿದ್ದ ಇವರು, ಯುವ ಕಲಾವಿದ […]

ಸಿದ್ದಾಪುರ : ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ

ಸಿದ್ದಾಪುರ : ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ  ಠಾಣಾಧಿಕಾರಿ ಮಂಜುನಾಥ್ ಮತ್ತು ಸಿಬ್ಬಂದಿಗಳ ಜತೆ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಸಾಥ್  ಮಡಿಕೇರಿ : ಸಾರ್ವಜನಿಕರ ಸಮಸ್ಯೆ, ದೂರು ಆಲಿಸಲು ಪೊಲೀಸ್‌ ಸಿಬ್ಬಂದಿಯೇ ಮನೆಬಾಗಿಲಿಗೆ ಬರುವಂತಹ ವಿನೂತನ ಪರಿಕಲ್ಪನೆಯಾದ ‘ಮನೆ ಮನೆಗೆ ಪೊಲೀಸ್‌’ ಕಾರ್ಯಕ್ರಮಕ್ಕೆ ಸಿದ್ದಾಪುರ ಠಾಣಾ ವ್ಯಾಪ್ತಿಯ ನೆಲ್ಲಿಹುದಿಕೇರಿಯಲ್ಲಿ ಚಾಲನೆ ನೀಡಲಾಯಿತು. ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಮತ್ತು ಸಿಬ್ಬಂದಿಗಳು ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪಂಚಾಯತಿ ಸದಸ್ಯರು ತೆರಳಿ ಪೊಲೀಸರ ಜನಸ್ನೇಹಿ […]

ಪತ್ರಕರ್ತರ ಸಂಘದಿಂದ ಕಥೆ ಹೇಳುವ ಸ್ಪರ್ಧೆ

ಮಡಿಕೇರಿ : ಕೊಡಗು ಜಿಲ್ಲಾ ಪತ್ರಕರ್ತರ ಸಂಘ ( ರಿ) ಸಹಯೋಗದಲ್ಲಿ ವಿರಾಜಪೇಟೆ ತಾಲೂಕು ಪತ್ರ ಕರ್ತರ ಸಂಘ ದಿಂದ *ಕಥೆ ಹೇಳುವ ಸ್ಪರ್ಧೆ* ಆಯೋಜಿಸಲಾಗಿದೆ. ಆಗಸ್ಟ್ 3 ರಂದು ಭಾನುವಾರ ‘ಕಥಾ ಸಮಯ’ ಎನ್ನುವ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಸ್ವರಚಿತ ಕಥೆ ವಾಚಿಸಲು ಮೂರರಿಂದ ಐದು ನಿಮಿಷ ಸಮಯದ ಅವಕಾಶವಿರುತ್ತದೆ. ಎಲ್ಲಾ ವಯೋಮಾನದವರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ವಿರಾಜಪೇಟೆ ತಾಲೂಕಿನ ಕಾವಾಡಿ ಗ್ರಾಮದ ಕಾಮಧೇನು ಗೋ ಶಾಲೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಆಸಕ್ತರು […]

ಮಡಿಕೇರಿ : ರಾಜಾಸೀಟಿನಲ್ಲಿ ‘ಪುಟಾಣಿ ರೈಲು’ ಆರಂಭಕ್ಕೆ ಕ್ರಮ : ವೆಂಕಟ್ ರಾಜಾ

ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆ ರಾಜಾಸೀಟಿನಲ್ಲಿ ‘ಪುಟಾಣಿ ರೈಲು’ ಆರಂಭಕ್ಕೆ ಕ್ರಮ: ವೆಂಕಟ್ ರಾಜಾ ಮಡಿಕೇರಿ : ರಾಜಾಸೀಟಿನಲ್ಲಿ ‘ಮಕ್ಕಳ ಪುಟಾಣಿ ರೈಲು’ ಆರಂಭ ಸಂಬಂಧ ದಕ್ಷಿಣ ವಲಯ ರೈಲ್ವೆ ವಿಭಾಗದ ಎಂಜಿನಿಯರ್‍ಗಳು ಪರಿಶೀಲಿಸಿದ್ದು, ಈ ಬಗ್ಗೆ ವರದಿ ಬಂದ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.  ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು […]

ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ನೀಡಲು ಸಿಎಂ ಸಿದ್ದರಾಮಯ್ಯಗೆ ಮನವಿ

ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ನೀಡಲು ಸಿಎಂ ಸಿದ್ದರಾಮಯ್ಯಗೆ ನಿಯೋಗ ಮನವಿ ಕೊಡಗು : ನೂತನ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ಭಾಗಮಂಡಲ ನಾಡಗೌಡ ಸಮಾಜದ ನಿಯೋಗ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರ ನೇತೃತ್ವದಲ್ಲಿ, ಭಾಗಮಂಡಲ ನಾಡಗೌಡ ಸಮಾಜದ ಅಧ್ಯಕ್ಷರಾದ ಕುದ್ಪಾಜೆ ಪಿ ಪಳಂಗಪ್ಪರವರ ನಿಯೋಗ ಮಾನ್ಯ ಮುಖ್ಯಮಂತ್ರಿಗಳದ ಸಿದ್ದರಾಮಯ್ಯ ರವರನ್ನು ಭೇಟಿಯಾಗಿ ಹಲವು ಪ್ರಮುಖ […]

ಕಂದಾಯ ಇಲಾಖೆಯ ಕೆಲವು ಮಸೂದೆಗಳಿಗೆ ತಿದ್ದುಪಡಿ ತರಲು ಶಾಸಕ ಪೊನ್ನಣ್ಣ ಮನವಿ

ಕೊಡಗು : ರಾಜ್ಯ ಸರಕಾರದ ಮಾನ್ಯ ಕಂದಾಯ ಸಚಿವರಾದ  ಕೃಷ್ಣ ಬೈರೇಗೌಡ ರವರನ್ನು, ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ವಿಕಾಸ ಸೌಧದ ಮಾನ್ಯ ಸಚಿವರ ಕೊಠಡಿಯಲ್ಲಿ ಭೇಟಿ ಮಾಡಿ, ಕಂದಾಯ ಇಲಾಖೆಯ ಕೆಲವು ಮಸೂದೆಗಳಿಗೆ ತಿದ್ದುಪಡಿ ತರುವಂತೆ ಮನವಿ ಸಲ್ಲಿಸಿದರು. ವಿಶೇಷವಾಗಿ, ಕೊಡಗಿನವರ ಜಮ್ಮಬಾಣೆಗೆ ಕಂದಾಯ ನಿಗದಿ, ಪಟ್ಟೇದಾರರ ಸಮಸ್ಯೆ ಮತ್ತು ಪಹಣಿ ಪತ್ರದಲ್ಲಿ P ನಂಬರ್ ಗಳ ಸಮಸ್ಯೆಯನ್ನ ನಿವಾರಣೆ ಮಾಡಲು ಸೂಕ್ತ ತಿದ್ದುಪಡಿಯನ್ನು ಕರ್ನಾಟಕ […]

ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ ಹೆಚ್ಚಳದ ಆತಂಕ : ಕೇಂದ್ರಕ್ಕೆ ಯದುವೀರ್ ಮಾಹಿತಿ

ಅಮಿತ್‌ ಶಾ ಭೇಟಿ ಮಾಡಿದ ಯದುವೀರ್‌ ಒಡೆಯರ್‌ ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ ಕೊಡಗು ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಆತಂಕದ ಬಗ್ಗೆ ಕೇಂದ್ರ ಗೃಹ ಸಚಿವರಿಗೆ ಮಾಹಿತಿ. ಮೈಸೂರು : ಕೇಂದ್ರ ಗೃಹ ಸಚಿವರಾದ ಅಮಿತ್‌ ಶಾ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ನಮ್ಮ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಇತರೆ ಪ್ರಮುಖ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ನವದೆಹಲಿಯಲ್ಲಿ ಅಮಿತ್‌ ಶಾ ಅವರನ್ನು ಭೇಟಿ ಮಾಡಿದ […]

ಅಗ್ನಿ ಅವಘಡ 2 ಮನೆಗಳಿಗೆ ಹಾನಿ

ಕೊಡಗು : ಅಗ್ನಿ ಅವಘಡದಿಂದ 2 ಮನೆಗಳಿಗೆ ಹಾನಿಯಾಗಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದಿದೆ. ವಿರಾಜಪೇಟೆಯ ಮುಖ್ಯ ರಸ್ತೆಯ ಶ್ರೀ ಗಣಪತಿ ದೇವಾಲಯದ ಹಿಂಭಾಗದಲ್ಲಿ ನಡೆದಿದೆ.  ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ಸಂಭವಿಸಿರಬಹುದೆಂದು ಹೇಳಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಈ ಘಟನೆ ನಡೆದಿದೆ. ಇದರಿಂದಾಗಿ ಭಾರೀ ಅನಾಹುತ ತಪ್ಪಿದಂತಾಗಿದೆ. ಆದರೆ ಮನೆಯಲ್ಲಿದ್ದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿಯನ್ನು ನಿಯಂತ್ರಿಸಿತು.