Breaking News :

ದುಬೈನಲ್ಲಿ 16 ಕೋಟಿ ಲಾಟರಿ ಗೆದ್ದ ಇಬ್ಬರು ಮಲಯಾಳಿಗಳು

ಮಿಲೇನಿಯಂ ಮಿಲಿಯನೇರ್ ಡ್ರಾದಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿರುವ ಕೇರಳ ಮೂಲದ ಇಬ್ಬರಿಗೆ ಬುಧವಾರದಂದು 16 ಕೋಟಿ ರೂ ಬಹುಮಾನ ಬಂದಿದೆ. ಬಹುಮಾನ ಗೆದ್ದ ಮೊದಲ ಗುಂಪಿನಲ್ಲಿ ಮಲಯಾಳಿ ಅಬ್ದುಲ್ ಅಜೀಜ್ ಹೆಸರಿನಲ್ಲಿ ಖರೀದಿಸಿದ ಚೀಟಿಗೆ ಬಹುಮಾನ ಲಭಿಸಿದೆ. 38 ವರ್ಷದ ಅಬ್ದುಲ್ ಅಜೀಜ್ ಅವರು ಆಗಸ್ಟ್ 31 ರಂದು ಖರೀದಿಸಿದ ಟಿಕೆಟ್ ಸಂಖ್ಯೆ 3361 ನೊಂದಿಗೆ ಮಿಲೇನಿಯಂ ಮಿಲಿಯನೇರ್ ಸರಣಿ 472 ರಲ್ಲಿ ವಿಜೇತರಾದರು. ತನ್ನ ಸಹೋದರ ಮತ್ತು ಸ್ನೇಹಿತರೊಂದಿಗೆ ಅಜೀಜ್ ಬಹುಮಾನ ವಿಜೇತ […]

ಸುನೀತಾ ವಿಲಿಯಂ, ವಿಲ್ಮೋರ್‌ ಅವರನ್ನು ಬಾಹ್ಯಾಕಾಶದಲ್ಲೇ ಬಿಟ್ಟು ಭೂಮಿಗೆ ವಾಪಾಸ್ಸಾದ ಸ್ಟಾರ್ ಲೈನರ್

ಗಗನಯಾತ್ರಿಗಳಾದ ಸುನೀತಾ ವಿಲಿಯಂ ಹಾಗೂ ಬುಚ್‌ ವಿಲ್ಮೋರ್‌ ಅವಬಾಹ್ಯಾಕಾಶಕ್ಕೆ ಕರೆದೊಯ್ದಿದ್ದ ಬಾಹ್ಯಾಕಾಶ ನೌಕೆ ಸ್ಟಾರ್‌ಲೈನರ್‌ ಅವರಿಬ್ಬರನ್ನೂ ಅಲ್ಲೇ ಬಿಟ್ಟು ಭೂಮಿಗೆ ಮರಳಿದೆ. ಬೋಯಿಂಗ್‌ ಸಂಸ್ಥೆಯ ನೌಕೆ ಸ್ಟಾರ್‌ಲೈನರ್‌ನಲ್ಲಿ ದೋಷ ಕಾಣಿಸಿಕೊಂಡಿದ್ದರಿಂದ, ಅದರಲ್ಲಿ ಗಗನಯಾತ್ರಿಗಳನ್ನು ಕರೆಸಿಕೊಳ್ಳುವ ರಿಕ್ಸ್‌ ತೆಗೆದುಕೊಳ್ಳಲು ಇಚ್ಛಿಸದ ನಾಸಾ (NASA),ಅವರಿಲ್ಲದೇ ಸ್ಟಾರ್‌ಲೈನರ್‌ ಅನ್ನು ಮರಳಿ ತರಿಸಿದೆ. ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಇದೀಗ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (Internationa Space Station – ISS) ಉಳಿದಿದ್ದಾರೆ. ತಡರಾತ್ರಿ ಐಸ್‌ಎಸ್‌ನಿಂದ ಕಳಚಿಕೊಂಡು ಹೊರಟ ಕ್ಯಾಪ್ಸುಲ್, […]

ಬಂಟ್ವಾಳ: ಭೀಕರ ಕಾರು ಅಪಘಾತ; ನವವಿವಾಹಿತೆ ಸಾವು

ಬಂಟ್ವಾಳ: ಭೀಕರ ಕಾರು ಅಪಘಾತದಲ್ಲಿ ನವ ವಿವಾಹಿತೆ ಸಾವನ್ನಪ್ಪಿದ್ದು, ಪತಿಗೆ ಗಂಭೀರ ಗಾಯವಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಮೃತರು. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಅವರಿಗೆ ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಿ.ಸಿ.ರೋಡ್ ಕಡೆಯಿಂದ ‌ಮಂಗಳೂರು ಕಡೆಗೆ ಆಲ್ಟೋ ಕಾರಿನಲ್ಲಿ ನವದಂಪತಿ ಪ್ರಯಾಣಿಸುತ್ತಿದ್ದರು. ಈ ವೇಳೆ ನಿಯಂತ್ರಣ ಕಳೆದುಕೊಂಡು ಡಿವೈಡರ್​ಗೆ ಗುದ್ದಿ ಹಾರಿ […]

ಶಾಲೆಗೆ ಮಾಂಸಹಾರ ತಂದಿದ್ದಕ್ಕೆ ಮುಸ್ಲಿಂ ವಿದ್ಯಾರ್ಥಿಯನ್ನು ಅಮಾನತು ಮಾಡಿದ ಪ್ರಾಂಶುಪಾಲ!

ಶಾಲೆಗೆ ಮಾಂಸಹಾರ ತಂದಿದ್ದಿ ಎಂದು ಆರೋಪಿಸಿ ಪ್ರಾಂಶುಪಾಲನೋರ್ವ ಮುಸ್ಲಿಂ ವಿದ್ಯಾರ್ಥಿಯನ್ನು ಸ್ಕೂಲ್​ನಿಂದ ಅಮಾನತು ಮಾಡಿರುವ ಘಟನೆ ಉತ್ತರಪ್ರದೇಶದ ಅಮ್ರೋಹಾದಲ್ಲಿ ನಡೆದಿದೆ. ಅಮ್ರೋಹಾದ ಹಿಲ್ಟನ್​ ಪಬ್ಲಿಕ್​ ಸ್ಕೂಲ್​ನಲ್ಲಿ ಈ ಘಟನೆ ನಡೆದಿದ್ದು, ವ್ಯಾಪಕ ಖಂಡನೆಗೆ ಗುರಿಯಾಗಿದೆ. ವೈರಲ್​ ಆಗಿರುವ ವಿಡಿಯೋ ನೋಡುವುದಾದರೆ ಪ್ರಾಂಶುಪಾಲರು ಮತ್ತು ಮಗುವಿನ ತಾಯಿ ನಡುವೆ ತೀವ್ರ ವಾಗ್ವಾದ ನಡೆದಿರುವುದನ್ನು ನೋಡಬಹುದಾಗಿದೆ. ನಾನ್ ವೆಜ್ ತಿನ್ನಿಸಿ ಅವರನ್ನು ಇಸ್ಲಾಂಗೆ ಪರಿವರ್ತಿಸುತ್ತಾನೆಂದು ಬಾಲಕನ ವಿರುದ್ಧ ಪ್ರಾಂಶುಪಾಲರು ಆರೋಪಿಸಿದ್ದಾರೆ. ವೈರಲ್​ ಆಗಿರುವ ವಿಡಿಯೋದಲ್ಲಿ ವಿದ್ಯಾರ್ಥಿಯ ತಾಯಿ ತನ್ನ ಮಗನು […]

ಭಾರೀ ಅವಘಢವೊಂದರಿಂದ ಪಾರಾದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಪಕ್ಕದಲ್ಲೇ ಹೈಸ್ಪೀಡ್ ರೈಲು ಹಾದು ಹೋಗಿದ್ದರಿಂದ ಸ್ವಲ್ಪದರಲ್ಲೇ ಅವರು ಅಪಾಯದಿಂದ ಪಾರಾಗಿದ್ದಾರೆ. ಗುರುವಾರ ಉನ್ನತ ಅಧಿಕಾರಿಗಳೊಂದಿಗೆ ಅವರು ಪ್ರವಾಹ ಪೀಡಿತ ಮಧುರಾನಗರದ ಬುಡಮೇರುಗೆ ಭೇಟಿ ನೀಡಿದ್ದರು. ಚಂದ್ರಬಾಬು ನಾಯ್ಡು ಅವರು ರೈಲ್ವೆ ಸೇತುವೆಯ ಮೇಲೆ ನಿಂತು ಪ್ರವಾಹ ಪರಿಸ್ಥಿತಿಯ ಅವಲೋಕನ ನಡೆಸುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಹೈಸ್ಪೀಡ್ ರೈಲು ಬಂದಿದೆ. ಕೂಡಲೇ ತಮ್ಮ ಭದ್ರತಾ ಸಿಬ್ಬಂದಿಯೊಂದಿಗೆ ಬದಿಯಲ್ಲಿ ಬಂದು ನಿಂತಿದ್ದರಿಂದ ಭಾರೀ ಅವಘಡವೊಂದು ತಪ್ಪಿದಂತಾಗಿದೆ. ಅದೃಷ್ಟವಶಾತ್ ಅವರಿಗೆ ಏನೂ ಆಗಲಿಲ್ಲ […]

ಮಂಗಳೂರು; ಏರ್ ಪೋರ್ಟ್ ರಸ್ತೆಯಲ್ಲಿ ಅಪಘಾತ; ಇಬ್ಬರು ಯುವಕರು ಮೃತ್ಯು

ಮಂಗಳೂರು: ಯೆಯ್ಯಾಡಿ ಏರ್ ರ್ಪೋರ್ಟ್ ರೋಡಲ್ಲಿ ತಡ ರಾತ್ರಿ ಬೈಕೊಂದು ಸ್ಕಿಡ್ ಆಗಿ ಇಬ್ಬರು ಸವಾರರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಯೆಯ್ಯಾಡಿ ಸಮೀಪದ ಹರಿಪದವು ಎಂಬಲ್ಲಿ ಈ ಅವಘಡ ಸಂಭವಿಸಿದ್ದು ಕೋಡಿಕಲ್ ನಿವಾಸಿ ಕಾಶೀನಾಥ್(17) ಮತ್ತು ಉಪ್ಪಿನಂಗಡಿಯ ಚೇತನ್(24) ಮೃತ ದುರ್ದೈವಿಗಳಾಗಿದ್ದಾರೆ. ಇವರಿಬ್ಬರಿದ್ದ ಬೈಕ್ ಲಾರಿಯೊಂದಕ್ಕೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಉರುಳಿಬಿದ್ದಿದೆ. ಇದರಿಂದ ರಸ್ತೆಗೆ ಎಸೆಯಲ್ಪಟ್ಟ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಮಂಗಳೂರು ಸಂಚಾರಿ ಪೊಲೀಸರು ಪ್ರಕರಣ […]

ನಾನು ಬಿಜೆಪಿಗೆ ಸೇರ್ಪಡೆಯಾಗಿಲ್ಲ; ಸ್ಪಷ್ಟನೆ ನೀಡಿದ ದೇವದಾಸ್ ಕಾಪಿಕಾಡ್

ಮಂಗಳೂರು: ಬಿಜೆಪಿ ಸದಸ್ಯತ್ವ ಬಗ್ಗೆ ತುಳುನಾಡ ಕಲಾವಿದ, ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ಸ್ಪಷ್ಟನೆ ನೀಡಿದ್ದು ಈ ಬಗ್ಗೆ ಮಾತನಾಡಿದ ಆಡಿಯೋ ಒಂದು ವೈರಲ್ ಆಗಿದೆ. ನಾನು ಯಾವುದೇ ಪಕ್ಷಕ್ಕೂ ಸೇರಿದವನಲ್ಲ, ಯಾವುದೇ ಪಕ್ಷಕ್ಕೆ ನಾನು ಸೇರ್ಪಡೆಯಾಗಿಲ್ಲ, ಎಲ್ಲಾ ಪಕ್ಷಗಳ ಮುಖಂಡರ ಜೊತೆ ನನಗೆ ಉತ್ತಮ ಸಂಬಂಧ ಇದೆ, ಬಿಜೆಪಿ ನಾಯಕರ ಜೊತೆ ಕೇವಲ ಸೌಹಾರ್ದ ಭೇಟಿ ನಡೆದಿದೆ’ ಎಂಬ ಸ್ಪಷ್ಟನೆ ಆಡಿಯೋದಲ್ಲಿ ಇದೆ. ಬಿಜೆಪಿ ನಾಯಕರು ಕರೆಮಾಡಿ ನಿಮ್ಮ ಮನೆಗೆ ಬರುತ್ತೇವೆ ಎಂದಾಗ ಬನ್ನಿ ಎಂದು […]

ಮಂಗಳೂರು: ಅಪಘಾತದಲ್ಲಿ ಯುವಕ ಮೃತ್ಯು

ಮಂಗಳೂರು: ಭೀಕರ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಕ್ಕ ಜಂಕ್ಷನ್ ನಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಹಳೆಯಂಗಡಿ ಇಂದಿರಾನಗರ ನಿವಾಸಿ ಗಣೇಶ ದೇವಾಡಿಗ(27) ಮೃತ ದುರ್ದೈವಿ. ಗಣೇಶ ಅವರು ಪಣಂಬೂರಿಗೆ ಕೆಲಸಕ್ಕೆ ಹೋಗುವಾಗ ಮುಕ್ಕ ಜಂಕ್ಷನ್ ನಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್ ಬಳಿ ಸ್ಕೂಟರ್ ಗೆ ವಾಹನವೊಂದು ಢಿಕ್ಕಿ ಹೊಡೆದಿದೆ. ಗಂಭೀರವಾಗಿದ್ದ ಅವರನ್ನು ತಕ್ಷಣ ಸಮೀಪದ ಖಾಸಗಿ ಆಸ್ಪತ್ರೆ ದಾಖಲಿಸಲಾಗಿದೆ. ಈ ವೇಳೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ […]

ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ; ಯುವಕ ಮೃತ್ಯು

ಬೈಕ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ತಾಲೂಕಿನ ಗುತ್ತಿಹಳ್ಳ ಬಳಿ ನಡೆದಿದೆ. ಶಿವಮೊಗ್ಗ ತಾಲೂಕಿನ ಸಂಪಿಗೆಹಳ್ಳ ನಿವಾಸಿಯಾಗಿರುವ ಮಂಜುನಾಥ್ ಗದ್ದೆಮನೆ(27) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಆಯನೂರಿನಿಂದ ಬೆಜ್ಜವಳ್ಳಿ ಕಡೆಗೆ ಹೋಗುತ್ತಿದ್ದ ಬೈಕ್ ಡೈರಿಗೆ ಹಾಲು ಹಾಕಿ ಸಂಪಿಗೆಹಳ್ಳದ ಮನೆಗೆ ಬರುತ್ತಿದ್ದ ಮಂಜುನಾಥ್ ಬೈಕಿಗೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ಭೀಕರತೆಗೆ ಇಬ್ಬರೂ ಬೈಕ್‌ ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಸ್ಥಳೀಯರು ಇಬ್ಬರು ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಅಪಘಾತದಲ್ಲಿ […]

ಉದ್ಯೋಗ ಸುದ್ದಿ: ನಮ್ಮ ಮೆಟ್ರೋದಲ್ಲಿರುವ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಜನರಲ್ ಮ್ಯಾನೇಜರ್, ಸಿಗ್ನಲ್ ಮ್ಯಾನೇಜರ್ ಸೇರಿದಂತೆ ಕಲ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಸೆಪ್ಟೆಂಬರ್ 25 ಆನ್ ಲೈನ್ ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ತಿಂಗಳಿಗೆ 2,06,250 ರೂಪಾಯಿ ಸಂಬಳ ಪಡೆಯಲಿದ್ದಾರೆ. 5 ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಜನರಲ್ ಮ್ಯಾನೇಜರ್( ಕಾಂಟ್ರಾಕ್ಟ್/ ಸ್ಟೋರ್) ಜನರಲ್ ಮ್ಯಾನೇಜರ್ (ಟ್ರಾಕ್ಷನ್), ಜನರಲ್ ಮ್ಯಾನೇಜರ್(ಪಿ ವೇ) ಹಾಗೂ ಜನರಲ್ […]