Breaking News :

ಉಡುಪಿ: ತಾಯಿ ಮಕ್ಕಳ ಕೊಲೆ ಪ್ರಕರಣ, ಆರೋಪಿಯ ವಿಚಾರಣೆಗಿದ್ದ ತಡೆಯಾಜ್ಞೆ ತೆರವು

ಉಡುಪಿಯ ನೇಜಾರಿನಲ್ಲಿ ನಡೆದಿದ್ದ ತಾಯಿ ಮತ್ತು ಮಕ್ಕಳ ಕೊಲೆ ಪ್ರಕರಣದ ವಿಚಾರಣೆಗೆ ನೀಡಿದ ತಡೆಯಾಜ್ಞೆಯನ್ನು ತೆರವುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ‌‌. ಇದಲ್ಲದೆ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆಯನ್ನು ಮುಂದುವರೆಸಲು ಅನುಮತಿ ನೀಡಿದೆ. ಬೆದರಿಕೆಯ ಹಿನ್ನೆಲೆಯಲ್ಲಿ ಜಿಲ್ಲಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾ ಯಿಸುವಂತೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಗೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದನು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆಯನ್ನು […]

ಲೈಂಗಿಕ ದೌರ್ಜನ್ಯ ಆರೋಪ: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ ಲೈಂಗಿಕ ದೌರ್ಜನ್ಯದ ಫೋಟೊ, ಸೆಲ್ಫಿ ವೀಡಿಯೋ ಮಾಡಿ ಬ್ಲ್ಯಾಕ್​ಮೇಲ್ ಮಾಡಿರುವುದಾಗಿ ಆರೋಪಿಸಲಾಗಿದೆ. ಅರುಣ್ ಕುಮಾರ್ ಪುತ್ತಿಲ ವಿರುದ್ಧ ಐಪಿಸಿ ಸೆಕ್ಷನ್ 417, 354A, 506ರಡಿ ಪ್ರಕರಣ ದಾಖಲಾಗಿರುವ ಬಗ್ಗೆ ವರದಿಯಾಗಿದೆ. 47 ವರ್ಷದ ಮಹಿಳೆಯಿಂದ ಬೆಂಗಳೂರಿನ ಹೋಟೆಲ್​ನಲ್ಲಿ ಲೈಂಗಿಕ ದೌರ್ಜನ್ಯ ಆರೋಪ ಮಾಡಲಾಗಿದ್ದು, 2023 ಜೂನ್​ನಲ್ಲಿ ಹೋಟೆಲ್​ನಲ್ಲಿ ಲೈಂಗಿಕ ದೌರ್ಜನ್ಯವೆಸಗಿ ಫೋಟೊ, […]

ಅಸ್ಸಾಂ: ನಮಾಝ್ ಗೆ ವಿರಾಮ ರದ್ಧತಿ ಮಾಡಿದ ಸರಕಾರದ ನಿರ್ಧಾರಕ್ಕೆ ಎನ್ ಡಿಎ ಮೈತ್ರಿ ಪಕ್ಷದಲ್ಲೇ ವಿರೋಧ

ಅಸ್ಸಾಂ ಸರ್ಕಾರ ತೆಗೆದುಕೊಂಡಿರುವ ನಮಾಜ್ ವಿರಾಮದ ರದ್ಧತಿ ಬಗ್ಗೆ ಎನ್ ಡಿಎ ಮಿತ್ರಪಕ್ಷ ವಿರೋಧವನ್ನು ವ್ಯಕ್ತಪಡಿಸಿದೆ. ಈ ಕುರಿತು ಬಿಹಾರ ಸಿಎಂ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಮತ್ತು ಸಂಸದ ಚಿರಾಗ್ ಪಾಸ್ವಾನ್ ನೇತೃತ್ವದ ಎಲ್‌ಜೆಪಿ ಬಹಿರಂಗವಾಗಿಯೇ ಅಭಿಪ್ರಾಯ ವ್ಯಕ್ತಪಡಿಸಿದೆ. ಅಸ್ಸಾಂ ರಾಜ್ಯ ಅಸೆಂಬ್ಲಿಯಲ್ಲಿ ಈ ಹಿಂದೆ ನಮಾಜ್ ಮಾಡಲು ಮುಸ್ಲಿಂ ಶಾಸಕರಿಗೆ ಪ್ರತಿ ಶುಕ್ರವಾರದ ಎರಡು ಗಂಟೆಗಳ ವಿರಾಮವನ್ನು ನೀಡಲಾಗುತ್ತಿತ್ತು. ಇದೀಗ ಅಸ್ಸಾಂ ಬಿಜೆಪಿ ಸರ್ಕಾರ ಇದನ್ನು ಸ್ಥಗಿತಗೊಳಿಸಿದೆ. ಹೀಗಾಗಿ ಸರ್ಕಾರದ ಈ ನಿರ್ಧಾರ ಸಂವಿಧಾನದ […]

ಕಾಪು: ಸಮುದ್ರ ಪಾಲಾಗುತ್ತಿದ್ದ ಯುವಕನ ರಕ್ಷಣೆ

ಕಾಪು: ಸಮುದ್ರ ಪಾಲಾಗುತ್ತಿದ್ದ ಯುವಕನನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ ಘಟನೆ ಇಂದು ಕಾಪು ಬೀಚ್ ನಲ್ಲಿ ನಡೆದಿದೆ. ಕಾಪು ಪಡುಗ್ರಾಮದ ನಿವಾಸಿ ಸಚಿನ್(31) ಸ್ಥಳೀಯ ಮೀನುಗಾರರಿಂದ ರಕ್ಚಿಸಲ್ಪಟ್ಟ ಯುವಕ. ಸಚಿನ್ ಸಾಂಪ್ರದಾಯಿಕ ಮೀನುಗಾರಿಕೆಗಾಗಿ ಬಲೆ ಇಡಲೆಂದು ಬಲೆಯೊಂದಿಗೆ ತೆರಳಿದ್ದ ವೇಳೆ ಸಮುದ್ರದಲ್ಲಿ ಮುಳುಗಿ, ಸಮುದ್ರ ಪಾಲಾಗುವ ಭೀತಿ ಎದುರಾಗಿತ್ತು. ಇದನ್ನು ಗಮನಿಸಿದ ಮೀನುಗಾರಿಕಾ ವೃತ್ತಿನಿರತರಾದ ಶರ್ಮಾ, ಹರೀಶ್ ಕರ್ಕೇರ ಅವರು ಸಮುದ್ರಕ್ಕೆ ಇಳಿದು ಯುವಕನ ಪ್ರಾಣ ರಕ್ಷಿಸಿದ್ದಾರೆ. ಯುವಕನನ್ನು ರಕ್ಷಿಸಿ ಮೇಲಕ್ಕೆ ಕರೆತರುವಾಗ ರಕ್ಷಣಾ ದೋಣಿ ಕೂಡಾ […]

ಮಂಡ್ಯ; ಅಪ್ರಾಪ್ತ ಬಾಲಕರಿಂದ ಕಿರುಕುಳ: ಬಾಲಕಿ ಆತ್ಮಹತ್ಯೆ

ಮಂಡ್ಯ: ಅಪ್ರಾಪ್ತ ಬಾಲಕರಿಂದ ಕಿರುಕುಳ ಹಿನ್ನಲೆ ‌15 ವರ್ಷದ ಬಾಲಕಿ ನೇಣಿಗೆ ಶರಣಾಗಿರುವ ಘಟನೆ ಮಂಡ್ಯ ತಾಲೂಕಿನ ಹನಕೆರೆ ಗ್ರಾಮದಲ್ಲಿ ನಡೆದಿದೆ. ಇಂಪನ(15) ಮೃತ ಬಾಲಕಿ. ಬಾಲಕಿಯನ್ನು ಪ್ರೀತಿಸುವ ವಿಚಾರವಾಗಿ ಯುವಕರ ನಡುವೆ ಮಾತಿನ ಚಕಮಕಿ ನಡೆದಿದ್ದು, ಬಾಲಕಿಗೆ ಪ್ರೀತಿಸುವಂತೆ ಕೂಡ ಬಾಲಕರು ಒತ್ತಾಯ ಮಾಡಿದ್ದಾರೆ. ಇವರ ಮಾತಿನ ಚಕಮಕಿಯ ಆಡಿಯೋ ವೈರಲ್ ಆಗಿದೆ. ಇದಲ್ಲದೆ ಆಡಿಯೊವನ್ನು ಮೃತ ಬಾಲಕಿಯ ತಾಯಿಯ ವಾಟ್ಸಪ್​ಗೂ ಬಾಲಕರು ಕಳುಹಿಸಿದ್ದಾರೆ. ಇದರಿಂದ ಮನನೊಂದು ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆ […]

ರೈಲಿನಲ್ಲಿ ದನದ ಮಾಂಸ ಸಾಗಾಟ ಮಾಡುತ್ತಿದ್ದಿ ಎಂದು ಆರೋಪಿಸಿ ವೃದ್ಧನಿಗೆ ಥಳಿಸಿದ ಗುಂಪು

ಚಲಿಸುತ್ತಿದ್ದ ರೈಲಿನಲ್ಲಿ ದನದ ಮಾಂಸ ಸಾಗಿಸುತ್ತಿದ್ದಾರೆ ಎಂದು ಆರೋಪಿಸಿ ವೃದ್ಧನೊಬ್ಬನ ಮೇಲೆ ದುಷ್ಕರ್ಮಿಗಳ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ನಡೆದಿದೆ. ವೃದ್ಧನ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೊ ವೈರಲ್ ಆಗಿದೆ. ಅದರಲ್ಲಿ ಹನ್ನೆರಡು ಮಂದಿ ಸುತ್ತುವರಿದು ಆ ವ್ಯಕ್ತಿಗೆ ಹಲ್ಲೆ ನಡೆಸುವುದು, ಅವಾಚ್ಯ ಶಬ್ದಗಳಿಂದ ನಿಂದಿಸುವುದು ಮತ್ತು ಬೆದರಿಕೆಗಳನ್ನು ಹಾಕುವುದನ್ನು ಕಾಣಬಹುದು. ಘಟನೆಯ ಕುರಿತು ಸರ್ಕಾರಿ ರೈಲ್ವೆ ಪೊಲೀಸರು ತನಿಖೆ ಆರಂಭಿಸಿದ್ದು, ಇದರಲ್ಲಿ ಭಾಗಿಯಾಗಿರುವ ಕೆಲವು ವ್ಯಕ್ತಿಗಳನ್ನು ಗುರುತಿಸಲಾಗಿದೆ. ದಾಳಿ ಮಾಡಿರುವ ಆರೋಪಿಗಳನ್ನು […]

ಸಿಎಂ ಕೈ ಸೇರಿದ ಬಿಜೆಪಿ ಅವಧಿಯ ಕೋವಿಡ್ ಹಗರಣದ ವರದಿ; ಮುಡಾ ಹಗರಣದ ಆರೋಪದ ಮಧ್ಯೆ ಮಹತ್ವ ಪಡೆದುಕೊಂಡ ಬೆಳವಣಿಗೆ

ಬಿಜೆಪಿ ಸರ್ಕಾರದ ಸವಧಿಯಲ್ಲಿ ನಡೆದ ಕೋವಿಡ್‌ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಜಸ್ಟಿನ್‌ ಜಾನ್‌ ಮೈಕಲ್‌ ಡಿ.ಕುನ್ಹಾ ನೇತೃತ್ವದ ಆಯೋಗ ವರದಿಯನ್ನು ಸಲ್ಲಿಕೆ ಮಾಡಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಹಗರಣ ಭಾರೀ ಸದ್ದು ಮಾಡಿತ್ತು. ವೆಂಟಿಲೇಟರ್‌, ಆಕ್ಸಿಜನ್‌ ಉಪಕರಣಗಳ ಖರೀದಿ, ನಿರ್ವಹಣೆ ಲೋಪ, ಕೋವಿಡ್‌-19 ನಿರ್ವಹಣಾ ಉಪಕರಣಗಳು, ರ್ಯಾಪಿಡ್‌ ಆಂಟಿಜೆನ್‌ ಟೆಸ್ಟ್‌ ಕಿಟ್‌ಗಳ ಖದೀದಿ ಮತ್ತು ಸಂಗ್ರಹಣೆಯಲ್ಲಿ ಅಕ್ರಮ ನಡೆದ ಆರೋಪಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಎಕ್ಸ್‌ […]

ಪ್ರವಾದಿಯ ನಿಂದನೆ: ಆರೋಪಿಯ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಪ್ರವಾದಿ ಮಹಮ್ಮದ ಪೈಗಂಬರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಮಹಾರಾಷ್ಟ್ರದ ರಾಮಗಿರಿ ಮಹಾರಾಜ ವಿರುದ್ಧ ಬಾಗಲಕೋಟೆಯಲ್ಲಿ ಮುಸ್ಲಿಂ ಸಮುದಾಯದಿಂದ ಜಿಲ್ಲಾಡಳಿತಭವನದ ಮುಂದೆ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆ ವೇಳೆ ಸ್ವಾಮೀಜಿಯನ್ನು ಬಂಧಿಸುವಂತೆ ಒತ್ತಾಯ ಮಾಡಲಾಗಿದ್ದು, ಸ್ವಾಮೀಜಿ ವಿರುದ್ಧ ಘೋಷಣೆ ಕೂಗಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಸ್ವಾಮೀಜಿಯನ್ನು ಬಂಧಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ನಿರ್ದೇಶನ ನೀಡಲು ಮನವಿ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಈ ಬಗ್ಗೆ ಮನವಿಯನ್ನು ಸಲ್ಲಿಕೆ ಮಾಡಿದ್ದಾರೆ. ಸ್ವಾಮೀಜಿ ಆಗಸ್ಟ್ 15.ರಂದು ಮಹಾರಾಷ್ಟ್ರದ ನಾಸಿಕ […]

ಸಭೆಯಲ್ಲಿ ಕೈಕೊಟ್ಟ ಕರೆಂಟ್, ಇಂಧನ ಸಚಿವರು ಗರಂ, ಕಣ್ಣೀರಿಟ್ಟ ಅಧಿಕಾರಿ

ವಿದ್ಯುತ್ ಸಮಸ್ಯೆ ಕುರಿತು ಇಂಧನ ಸಚಿವ ಕೆ.ಜೆ.ಜಾರ್ಜ್ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸುವಾಗಲೇ ಪದೇಪದೇ ವಿದ್ಯುತ್‌ ಕೈಕೊಟ್ಟು ಮುಜುಗರ ಅನುಭವಿಸಿದ ಬಗ್ಗೆ ವರದಿಯಾಗಿದೆ. ಪದೇ ಪದೇ ವಿದ್ಯುತ್ ಸ್ಥಗಿತಗೊಂಡಾಗ ‘ಏಕೆ ಪವರ್ ಕಟ್ ಮಾಡುತ್ತೀರಿ’ ಎಂದು ಸಿಬ್ಬಂದಿಯನ್ನು ಸಿಟ್ಟಿನಿಂದ ಅವರು ಪ್ರಶ್ನಿಸಿದ್ದಾರೆ. ಬೆಂಗಳೂರಿಗೆ ತೆರಳುವ ಮುನ್ನ ಸಚಿವರು ವಿದ್ಯುತ್‌ ಅಡಚಣೆಗಾಗಿ ಬೆಸ್ಕಾಂ ಕಾರ್ಯಪಾಲಕ ಎಂಜಿನಿಯರ್‌ ಶುಭಾ ಅವರನ್ನು ತರಾಟೆ ತೆಗೆದುಕೊಂಡಿದ್ದಾರೆ. ಮುಖ್ಯಮಂತ್ರಿ ಬಂದಾಗ ಈ ರೀತಿ ಆಗಬಾರದು ಎಂದು ಎಚ್ಚರಿಕೆಯನ್ನು […]

ಮುಡಾ ಹಗರಣ: ರಾಜ್ಯಪಾಲರಿಂದ ಅಚ್ಚರಿಯ ಹೇಳಿಕೆ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಬಿಜೆಪಿ ನಾಯಕರಾದ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ಜನಾರ್ಧನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಆಗ್ರಹಿಸಿ ರಾಜಭವನದ ಚಲೋ ನಡೆಸಿದ್ದ ಕಾಂಗ್ರೆಸ್ ನಾಯಕರಿಗೆ ರಾಜ್ಯಪಲರು ಅಚ್ಚರಿ ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ರಾಜಭವನ ಚಲೋ ಪ್ರತಿಭಟನೆ ಬಳಿಕ ರಾಜ್ಯಪಾಲರನ್ನು ಭೇಟಿಯಾದ ಕಾಂಗ್ರೆಸ್ ನಾಯಕರು ಬಿಜೆಪಿ ಹಾಗೂ ಜೆಡಿಎಸ್ ನಾಯಕರ ವಿರುದ್ಧ ದಾಖಲಾಗಿರುವ […]