ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್ ನಲ್ಲಿ ಹಿಡೆನ್ ಕ್ಯಾಮೆರಾ ಪತ್ತೆ; ಇಬ್ಬರು ವಿದ್ಯಾರ್ಥಿಗಳ ಬಂಧನ

ಇಂಜಿನಿಯರಿಂಗ್ ಕಾಲೇಜಿನ ಮಹಿಳಾ ಹಾಸ್ಟೆಲ್ ಶೌಚಾಲಯದಲ್ಲಿ ಹಿಡನ್ ಕ್ಯಾಮೆರಾ ಪತ್ತೆಯಾಗಿದ್ದು, ಇದರ ಬೆನ್ನಲ್ಲೇ ಪ್ರತಿಭಟನೆಗಳು ಭುಗಿಲೆದ್ದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಇಬ್ಬರು ವಿದ್ಯಾರ್ಥಿಗಳನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದು ಬಂದಿದೆ. ಕೃಷ್ಣಾ ಜಿಲ್ಲೆಯ ಗುಡ್ಲವಲ್ಲೇರು ಇಂಜಿನಿಯರಿಂಗ್ ಕಾಲೇಜಿನ ಮಹಿಳಾ ಹಾಸ್ಟೆಲ್ ಶೌಚಾಲಯದಲ್ಲಿ ವಿದ್ಯಾರ್ಥಿಯೊಬ್ಬರ ಕಣ್ಣಿಗೆ ಕ್ಯಾಮೆರಾ ಬಿದ್ದಿದೆ. ಇದರ ಬೆನ್ನಲ್ಲೇ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆಗಿಳಿದಿದ್ದು, ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಖಾಸಗಿತನದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕ್ಯಾಮರಾದಲ್ಲಿ ದಾಖಲಾಗಿರುವ ಕೆಲ ವಿಡಿಯೋಗಳು […]
ಒಮಾನ್ ನಲ್ಲಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಕನ್ನಡಿಗರು ದುರ್ಮರಣ

ಒಮಾನ್ ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಳಗಾವಿ ಮೂಲದ ಒಂದೇ ಕುಟುಂಬದ ನಾಲ್ವರು ಕನ್ನಡಿಗರು ಸಜೀವ ದಹನವಾಗಿದ್ದಾರೆ. ಹೈಮಾ ಪ್ರದೇಶದಲ್ಲಿ ಕಾರಿಗೆ ಲಾರಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಜಯಾ ತಹಶಿಲ್ದಾರ, ಪೂಜಾ, ಪವನ್ ಕುಮಾರ, ಆದಿಶೇಷ ಮೃತರು ಎಂದು ಗುರುತಿಸಲಾಗಿದೆ ಕಾರ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು ಸಜೀವ ದಹನವಾಗಿದ್ದಾರೆ. ಮೃತರ ಶವಗಳನ್ನು ಭಾರತಕ್ಕೆ ತರಲು ಸಹಾಯ ಮಾಡುವಂತೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ವಿದೇಶಾಂಗ […]
ಮಂಗಳೂರು: ಬಸ್ ಢಿಕ್ಕಿಯಾಗಿ ಆಟೋ ಚಾಲಕ ಮೃತ್ಯು

ಮಂಗಳೂರು: ಬಸ್ ಆಟೋಗೆ ಡಿಕ್ಕಿಯಾಗಿ ಆಟೋ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಮಂಗಳೂರು ನಗರದ ಹಂಪನಕಟ್ಟೆ ಖಾಸಗಿ ಹೊಟೇಲ್ ಬಳಿ ಇಂದು ನಡೆದಿದೆ. ಆಟೋ ಚಾಲಕ ದೇವರಾಜ್ ಮೃತರು. ಅವಘಡದಲ್ಲಿ ಆಟೋ ಚಾಲಕ ದೇವರಾಜ್ ಅವರಿಗೆ ಗಂಭೀರ ಗಾಯವಾಗಿದ್ದರಿಂದ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ದೇವರಾಜ್ ಅವರು ಚಿಕಿತ್ಸೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಡಿಕ್ಕಿ ರಭಸಕ್ಕೆ ಆಟೋ ನಜ್ಜುಗುಜ್ಜಾಗಿದೆ. ಇನ್ನು ಸ್ಥಳಕ್ಕೆ ಮಂಗಳೂರು ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಪುತ್ತೂರು: ಅನುಮಾನಾಸ್ಪದ ಚಟುವಟಿಕೆ ಆರೋಪ; ಇಬ್ಬರು ಮಹಿಳೆಯರು ವಶಕ್ಕೆ

ಪುತ್ತೂರು: ಬನ್ನೂರು ಕರ್ಮಲದ ಪೊಲೀಸ್ ವಸತಿ ನಿಲಯದ ಸಮೀಪದ ಬಾಡಿಗೆ ಮನೆಯೊಂದರ ಮೇಲೆ ನಗರ ಠಾಣಾ ಪೊಲೀಸರು ದಾಳಿ ನಡೆಸಿ ಇಬ್ಬರು ಮಹಿಳೆಯರನ್ನು ವಶಕ್ಕೆ ಪಡೆದಿದ್ದಾರೆ. ಕೆಲವು ದಿನಗಳಿಂದ ಅನುಮಾನಾಸ್ಪದ ಚಟುವಟಿಕೆ ನಡೆಯುತ್ತಿದೆ ಎಂಬ ಬಗ್ಗೆ ಸಾರ್ವಜನಿಕ ದೂರಿನ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಇಬ್ಬರು ಮಹಿಳೆಯರು ಮಾತ್ರ ಇದ್ದು ಬೇರೆ ಯಾರೂ ಕಂಡು ಬಂದಿಲ್ಲ. ವಿಚಾರಣೆ ವೇಳೆ ಇನ್ನೋರ್ವ ಮಹಿಳೆ ಮನೆಯೊಡತಿಯ ಗೆಳತಿ ಎಂದು ಹೇಳಿದ್ದಾಳೆನ್ನಲಾಗಿದೆ. ಇಬ್ಬರು ಮಹಿಳೆಯರ ಪೈಕಿ ಒಬ್ಬರು ಮುಸ್ಲಿಂ, […]
ವಿವಿಧ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ; ಸರಕಾರದಿಂದ ಜನಸಾಮಾನ್ಯರಿಗೆ ಗುಡ್ ನ್ಯೂಸ್

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಿವಿಧ ನಿಗಮಗಳಾದ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಸವಿತಾ-ಸಮಾಜ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಅಲೆಮಾರಿ-ಅರೆಮಾರಿ ಅಭಿವೃದ್ಧಿ […]
BIG News ವಕೀಲ ಕೆ.ಎನ್ ಜಗದೀಶ್ ಅರೆಸ್ಟ್..

ಬೆಂಗಳೂರು: ವಾರೆಂಟ್ ಜಾರಿಯಾದ್ರೂ ಕೋರ್ಟ್ ಗೆ ಹಾಜರಾಗದ ಹಿನ್ನೆಲೆ ವಕೀಲ ಕೆ.ಎನ್. ಜಗದೀಶ್ ಕುಮಾರ್ ರನ್ನು ಅರೆಸ್ಟ್ ಮಾಡಲಾಗಿದೆ. ಕೊಡಿಗೇಹಳ್ಳಿ ಪೊಲೀಸರಿಂದ ಗೋವಾದಲ್ಲಿ ಜಗದೀಶ್ ಅವರನ್ನು ಬಂಧಿಸಿದ್ದಾರೆ. ಜಗದೀಶ್ ಅವರನ್ನು ಗೋವಾದಲ್ಲಿ ಬಂಧಿಸಿ ಬೆಂಗಳೂರಿಗೆ ಪೊಲೀಸರು ಕರೆ ತಂದಿದ್ದಾರೆ. 2022ರಲ್ಲಿ ಇವರ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲಾಗಿತ್ತು. ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು. ಆದರೆ ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದರು. ಇದೀಗ ಪೊಲೀಸರು ವಕೀಲ ಜಗದೀಶ್ ಕುಮಾರ್ ಅವರನ್ನು ಅರೆಸ್ಟ್ ಮಾಡಿದ್ದಾರೆ ಎಂದು […]
ಮಲಯಾಳಂ ನಿರ್ದೇಶಕ ರಂಜಿತ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ ಯುವಕ

ಹೇಮಾ ಸಮಿತಿ ವರದಿ ಬೆನ್ನಲ್ಲಿ ಕೇರಳ ಚಿತ್ರ ರಂಗದಲ್ಲಿ ಅಲ್ಲೋಲ ಕಲ್ಲೋಲವಾಗಿದೆ. ಖ್ಯಾತ ನಿರ್ದೇಶಕ ರಂಜಿತ್ ವಿರುದ್ಧ ಅಸ್ವಾಭಾವಿಕ ಲೈಂಗಿಕ ಕಿರುಕುಳದ ಆರೋಪದಲ್ಲಿ ಯುವಕನೋರ್ವ ದೂರು ದಾಖಲಿಸಿದ್ದಾರೆ. ಪ್ರಕರಣವು 2012ರಲ್ಲಿ ಬೆಂಗಳೂರಿನಲ್ಲಿ ನಡೆದಿತ್ತು ಎನ್ನಲಾಗಿದ್ದು, ಚಿತ್ರರಂಗದೊಳಗಿನ ದುರ್ನಡತೆಯ ಕುರಿತು ತನಿಖೆ ನಡೆಸುತ್ತಿರುವ SIT ಪೊಲೀಸ್ ತಂಡಕ್ಕೆ ದೂರು ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಪ್ರಸ್ತುತ ಕೋಯಿಕ್ಕೋಡ್‌ನ ಪಂಚತಾರಾ ಹೊಟೇಲ್ ಉದ್ಯೋಗದಲ್ಲಿರುವ ಸಂತ್ರಸ್ತ ಯುವಕ, 2012 ರಲ್ಲಿ ಕೋಝಿಕ್ಕೋಡ್‌ನಲ್ಲಿ ʼಬವುತ್ತಿಯುಡೆ ನಾಮತಿಲ್ʼ ಚಿತ್ರದ ಶೂಟಿಂಗ್‌ನಲ್ಲಿ ರಂಜಿತ್ ಅವರನ್ನು ಮೊದಲು […]
ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಶುಭ ಸುದ್ದಿ: ಯೂನಿಯನ್ ಬ್ಯಾಂಕ್ ನಲ್ಲಿದೆ ಉದ್ಯೋಗಾವಕಾಶ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ದೇಶಾದ್ಯಂತ ತನ್ನ ಹಲವು ಶಾಖೆಗಳಲ್ಲಿ 500 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಗಸ್ಟ್ 28ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 17ರೊಳಗೆ ಅರ್ಜಿ ಸಲ್ಲಿಸಬಹುದು. ಕರ್ನಾಟಕದಲ್ಲಿ 40 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇವೆ. ಅಭ್ಯರ್ಥಿಗಳು ತಮ್ಮ ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಮಾತ್ರ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೂ ಮುನ್ನ ಅರ್ಹತಾ ಮಾನದಂಡಗಳನ್ನು ಸಂಪೂರ್ಣ ಪರಿಶೀಲಿಸಲು ಯುಬಿಐ ಬ್ಯಾಂಕ್ ಅಭ್ಯರ್ಥಿಗಳಿಗೆ ಸಲಹೆ ನೀಡಿದೆ. ಅರ್ಜಿ […]
ಅಡ್ಕತ್ತಬೈಲು ಮುಹಮ್ಮದ್ ಹಾಜಿ ಕೊಲೆ ಪ್ರಕರಣ, ಆರೋಪಿಗಳಿಗೆ ಕಠಿಣ ಜೀವಾವಧಿ ಶಿಕ್ಷೆ

ಕಾಸರಗೋಡಿನಲ್ಲಿ 2008ರಲ್ಲಿ ಗಲಭೆ ಸಂದರ್ಭ ಅಡ್ಕತ್ತಬೈಲ್ ಸಮೀಪದ ಸಿ.ಎ.ಮುಹಮ್ಮದ್ ಹಾಜಿ (56) ಎಂಬವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಆರೋಪಿಗಳಿಗೆ ಕಠಿಣ ಜೀವಾವಧಿ ಸಜೆ ಮತ್ತು ತಲಾ ಒಂದು ಲಕ್ಷ ರೂ. ದಂಡ ವಿಧಿಸಿ ಕಾಸರಗೋಡು ಜಿಲ್ಲಾ ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ. ಸಂತೋಷ್ ನಾಯ್ಕ್ (36), ಕೆ. ಶಿವ ಪ್ರಸಾದ್ (40) , ಕೆ. ಅಜಿತ್ ಕುಮಾರ್ (39), ಕಿಶೋರ್ ಕುಮಾರ್ (39) ಶಿಕ್ಷೆಗೊಳಗಾದ ಆರೋಪಿಗಳು. 2008ರ ಎ.18ರಂದು ಮಸೀದಿಯಿಮದ ಮನೆಗೆ ತೆರಳುವಾಗ ಮುಹಮ್ಮದ್ ಹಾಜಿ […]
ಭಾರೀ ಮಳೆಯ ಮಧ್ಯೆ ಎಲ್ಲಿ ನೋಡಿದ್ರಲ್ಲಿ ಮೊಸಳೆ; ಆತಂಕಿತರಾದ ಜನ

ಗುಜರಾತ್‌ನಾದ್ಯಂತ ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಸೃಷ್ಟಿಯಾಗಿದೆ. ಈ ಮಧ್ಯೆ ನದಿಯಲ್ಲಿದ್ದ ಮೊಸಳೆಗಳು ನಗರ ಪ್ರದೇಶಕ್ಕೆ ಬರುತ್ತಿದ್ದು, ಜನರು ಆತಂಕಿತರಾಗಿದ್ದಾರೆ. ವಡೋದರಾದಲ್ಲಿ ನಗರ ಪ್ರದೇಶದಲ್ಲಿ 15 ಅಡಿಯ ದೈತ್ಯ ಮೊಸಳೆ ಕಂಡು ಬಂದಿದೆ. ರಕ್ಷಣಾ ತಂಡವು ಬೃಹತ್ ಗಾತ್ರದ ಮೊಸಳೆಯನ್ನು ಸೆರೆಹಿಡಿದಿದೆ. ಅದೇ ರೀತಿ ವಡೋದರಾದ ಫತೇಗುಂಜ್ ಪ್ರದೇಶದ ಕಾಮನಾಥ್ ನಗರದ ನಿವಾಸಿಗಳು ಮೊಸಳೆಯೊಂದು ಪ್ರವಾಹದ ನೀರಿನಲ್ಲಿ ಬಂದು ಕಾಲೋನಿಯ ಮನೆಗೆ ತಲುಪಿದ್ದನ್ನು ನೋಡಿ ಆತಂಕಕ್ಕೀಡಾಗಿದ್ದಾರೆ. ನಂತರ ಮೊಸಳೆಯನ್ನು ಅರಣ್ಯ ಇಲಾಖೆ ಸೆರೆ ಹಿಡಿದಿದೆ. ಕಮಲನಾಥ್ ನಗರದ ಮನೆಯೊಂದಕ್ಕೆ […]