ಮಲಯಾಳಂ ಚಿತ್ರರಂಗದ ಹಿರಿಯ ನಟ, ಶಾಸಕ ಮುಕೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಹೇಮಾ ಸಮಿತಿ ವರದಿಯ ಬೆನ್ನಲ್ಲೇ ಕೇರಳ ಚಲನಚಿತ್ರ ರಂಗದಲ್ಲಿ ತಲ್ಲಣ ಸೃಷ್ಟಿಯಾಗಿದೆ. ಇದೀಗ ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಕೇರಳದ ಆಡಳಿತಾರೂಡ ಸಿಪಿಐ(ಎಂ) ಶಾಸಕ, ಮಲಯಾಳಂ ಚಿತ್ರರಂಗದ ಖ್ಯಾತ ನಟ ಮುಕೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ನಟ ಮುಕೇಶ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ನಟಿಯೊಬ್ಬರ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಬುಧವಾರ ರಾತ್ರಿ ಕೊಚ್ಚಿ ನಗರದ ಮಾರಾಡು ಪೊಲೀಸ್ ಠಾಣೆಯಲ್ಲಿ ನಟನ ವಿರುದ್ಧ […]
ವಿವಿ ಸಿಂಡಿಕೇಟ್ ಗೆ ಯುಟಿ ಫರ್ಝಾನ ನಾಮ ನಿರ್ದೇಶನ: ಕಾಂಗ್ರೆಸ್ ಕಾರ್ಯಕರ್ತರಿಂದ ವಿರೋಧ

ಯು.ಟಿ.ಫರ್ಝಾನಾ ಅಶ್ರಫ್ ಅವರನ್ನು ಬೆಂಗಳೂರು ಸೆಂಟ್ರಲ್ ಯೂನಿವರ್ಸಿಟಿ ಸಿಂಡಿಕೇಟ್ ಸದಸ್ಯೆಯಾಗಿ ನಾಮ ನಿರ್ದೇಶನ ಮಾಡಿರುವುದು ಹಲವು ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಕುರಿತು ಕಾಂಗ್ರೆಸ್ ಮುಖಂಡೆಯರಾದ ಕವಿತಾ ರೆಡ್ಡಿ ಹಾಗೂ ರೇಖಾ ಶ್ರೀನಿವಾಸ್ ಬಹಿರಂಗವಾಗಿಯೇ ಅಸಮಧಾನ ತೋಡಿಕೊಂಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಕವಿತಾ ರೆಡ್ಡಿ, ಪ್ರತಿದಿನ ಬಿಜೆಪಿಯ ದಾಳಿಯನ್ನು ಸಹಿಸಿಕೊಳ್ಳುತ್ತಾ ಪಕ್ಷಕ್ಕಾಗಿ ದುಡಿಯುತ್ತಿರುವ ಮಹಿಳೆ ರೇಖಾ ಶ್ರೀನಿವಾಸ್ ಅವರಿಗೆ ಇದರಿಂದ ಭಾರೀ ಅನ್ಯಾಯವಾಗಿದೆ ಎಂದಿದ್ದರೆ, ರೇಖಾ ಶ್ರೀನಿವಾಸ್ ಅವರು ಪ್ರತಿಕ್ರಿಯಿಸಿ, ಪಕ್ಷ ಕಟ್ಟಿದ ಸಾವಿರಾರು ಹೆಣ್ಣು […]
ಪತಿಗೆ ತಾನೇ ಮುಂದೆ ನಿಂತು 2ನೇ ವಿವಾಹ ಮಾಡಿಸಿದ ಪತ್ನಿ; ಅಪರೂಪದ ಘಟನೆ

ಪತ್ನಿಯೋರ್ವಳು ಪತಿಗೆ ತಾನೇ ಮುಂದೆ ನಿಂತು 2ನೇ ವಿವಾಹ ಮಾಡಿರುವ ಅಪರೂಪದ ಘಟನೆ ಮೆಹಬೂಬಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಸುರೇಶ್ ಹಾಗೂ ಸರಿತಾ ಕೆಲ ವರ್ಷಗಳ ಹಿಂದೆ ವಿವಾಹವಾಗಿದ್ದರು. ದಂಪತಿಗೆ ಗಂಡು ಮಗುವಿದೆ. ಅದೇ ಸಮಯದಲ್ಲಿ ಸುರೇಶ್ಗೆ ಸಂಧ್ಯಾ ಎಂಬ ಯುವತಿ ಮೇಲೆ ಲವ್ ಆಗಿದೆ. ಸಂಧ್ಯಾ, ಮಾನಸಿಕ ಅಸ್ವಸ್ಥೆಯಾಗಿದ್ದಾಳೆ. ಸಂಧ್ಯಾ ಅವರ ತಂದೆ ತಾಯಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಈಕೆ ಎರಡನೇ ಮಗಳು. ಮೊದಲ ಮಗಳಿಗೆ ಈಗಾಗಲೇ ಮದುವೆಯಾಗಿದೆ. ಈ ಸಂಧ್ಯಾ, ಸುರೇಶ್ ಅವರ ಸಂಬಂಧಿಕರ ಮಗಳು. […]
ಹೆಣ್ಣುಮಕ್ಕಳ ವಿವಾಹ ಪ್ರಾಯ 18 ರಿಂದ 21ಕ್ಕೆ ಏರಿಕೆ ಮಾಡಿದ ರಾಜ್ಯ: ಈ ಕುರಿತ ಬಿಲ್ ವಿಧಾನ ಸಭೆಯಲ್ಲಿ ಅಂಗೀಕಾರ

ಹೆಣ್ಣುಮಕ್ಕಳ ಮದುವೆ ವಯಸ್ಸನ್ನು 18ರಿಂದ 21ಕ್ಕೇ ಏರಿಕೆ ಮಾಡುವ ಮಸೂದೆಯನ್ನು ಹಿಮಾಚಲ ಪ್ರದೇಶದ ಮುಂಗಾರು ಅಧಿವೇಶನದಲ್ಲಿ ವಿಧಾನಸಭೆ ಅಂಗೀಕರಿಸಿದೆ. ಇದೀಗ ಅಂತಿಮ ಅನುಮೋಧನೆಗಾಗಿ ಮಸೂದೆಯನ್ನು ರಾಜ್ಯಪಾಲರ ಒಪ್ಪಿಗೆಗೆ ಕಳುಹಿಸಲಾಗಿದೆ. ಬಾಲ್ಯ ವಿವಾಹ ನಿಷೇಧ ಮಸೂದೆ-2024ನ್ನು ಮಂಗಳವಾರ ವಿಧಾನಸಭೆಯಲ್ಲಿ ಸವಾರ್ನುಮತದಿಂದ ಅಂಗೀಕರಿಸಲಾಗಿದೆ. ಈ ಮೂಲಕ ಹೆಣ್ಣುಮಕ್ಕಳ ಮದುವೆ ವಯಸ್ಸನ್ನು 3 ವರ್ಷ ಏರಿಕೆ ಮಾಡಲಾಗಿದೆ. ಗಂಡು ಮತ್ತು ಹೆಣ್ಣು ನಡುವಿನ ಲಿಂಗ ಸಮಾನತೆ ನೀಡಲು ಇಬ್ಬರ ವಿವಾಹದ ವಯಸ್ಸನ್ನು 21 ವರ್ಷಕ್ಕೆ ಇಡುವುದು ಸರಿಯಾಗಿದೆ ಎಂದು ಸಚಿವ ಧನಿರಾಮ್ […]
ಪ್ಯಾರಸಿಟಮಲ್ ಮಾತ್ರೆ ಅತಿಯಾಗಿ ತೆಗೆದುಕೊಂಡರೆ ಏನೆಲ್ಲಾ ತೊಂದರೆಯಿದೆ? ಡಿಟೇಲ್ಸ್…

ಜನರು ತಲೆನೋವು, ಜ್ವರ ಬಂದರೆ ಕ್ಯಾಲ್ಪೋಲ್, ಕ್ರೋಸಿನ್, ಡೋಲೋ ಮುಂತಾದ ಪ್ಯಾರಸಿಟಮಾಲ್ ಸೇವಿಸುತ್ತಾರೆ.ವೈದ್ಯರ ಸಲಹೆ ಇಲ್ಲದೆ ಮನೆಯಲ್ಲಿಯೇ ಪ್ಯಾರಸಿಟಮಾಲ್ ತೆಗೆದುಕೊಳ್ಳುತ್ತಾರೆ. ಪ್ಯಾರಾಸಿಟಮಾಲ್ ಸ್ಟೀರಾಯ್ಡ್ ಗಳನ್ನು ಹೊಂದಿದ್ದು, ಅದರ ಅನುಚಿತ ಡೋಸೇಜ್ ನಿಂದ ಆರೋಗ್ಯಕ್ಕೆ ಹಾನಿಯಾಗುವ ಸಾಧ್ಯತೆಯಿದೆ. ಪ್ಯಾರಾಸಿಟಮಾಲ್ ಅನ್ನು ಸಾಮಾನ್ಯವಾಗಿ ಜ್ವರ, ಮೈಗ್ರೇನ್, ಅವಧಿ ನೋವು, ತಲೆನೋವು, ಮೈಕೈ ನೋವು ಮುಂತಾದ ಪರಿಸ್ಥಿತಿಗಳಲ್ಲಿ ಬಳಸಲಾಗುತ್ತದೆ. ಇದು ಕ್ಯಾಲ್ಪೋಲ್, ಕ್ರೋಸಿನ್, ಡೋಲೋ, ಸುಮೋ ಎಲ್, ಕಬಿಮೋಲ್, ಪ್ಯಾಸಿಮೋಲ್ ಮುಂತಾದ ಹೆಸರುಗಳಲ್ಲಿ ಸಾಮಾನ್ಯ ಔಷಧಿ ಅಂಗಡಿಗಳಲ್ಲೂ ಲಭ್ಯವಿದೆ. ಮಾರ್ಗಸೂಚಿಯ ಪ್ರಕಾರ […]
BIG News ಬೆಂಗಳೂರು ಏರ್ ಪೋರ್ಟ್ ನಲ್ಲೇ ವ್ಯಕ್ತಿಯೋರ್ವನ ಬರ್ಬರ ಕೊಲೆ

ಬೆಂಗಳೂರಿನ ಏರ್ ಪೋರ್ಟ್ ನಲ್ಲಿಯೇ ವ್ಯಕ್ತಿಯೋರ್ವನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ 1ರಲ್ಲೇ ಟ್ರಾಲಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದಂತಹ ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಲಾಗಿದೆ. ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಂತ ಟ್ರಾಲಿ ಆಪರೇಟರ್ ಒಬ್ಬನನ್ನು ಆಕೆಯ ಪತಿ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವುದಾಗಿ ಹೇಳಲಾಗುತ್ತಿದೆ. ಸ್ಥಳಕ್ಕೆ ಏರ್ ಪೋರ್ಟ್ ಠಾಣೆಯ ಪೊಲೀಸರು ಆಗಮಿಸಿದ್ದು, ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ […]
ಕಾಂಗ್ರೆಸ್ ಸಚಿವನ ಪುತ್ರ & ಬಿಜೆಪಿ ಶಾಸಕನ ಪುತ್ರಿ ನಿಶ್ಚಿತಾರ್ಥ

ಸಚಿವ ಬೈರತಿ ಸುರೇಶ್ ಪುತ್ರ ಹಾಗೂ ಯಲಹಂಕ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಪುತ್ರಿಯ ವಿವಾಹ ನಿಶ್ಚಿತಾರ್ಥ ಇಂದು ಅದ್ಧೂರಿಯಾಗಿ ನೆರವೇರಿದೆ. ರಾಜ್ಯದ ನಗರಾಭಿವೃದ್ಧಿ ಸಚಿವರಾಗಿರುವ ಬೈರತಿ ಸುರೇಶ್ ಮಗ ಹಾಗೂ ಬಿಜೆಪಿ ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಮಗಳು ಮುಂದಿನ ವರ್ಷ ವಿವಾಹವಾಗಲಿದ್ದಾರೆ. ಇಂದು ನಿಶ್ಚಿತಾರ್ಥ ಕಾರ್ಯಕ್ರಮ ನಡೆದಿದೆ. ಇದು ಲವ್ ಕಮ್ ಆರೆಂಜ್ ಮ್ಯಾರೇಜ್ ಎಂದು ತಿಳಿದುಬಂದಿದೆ. ಬುಧವಾರ ಖಾಸಗಿ ಹೋಟೆಲ್ನಲ್ಲಿ ವಿಶ್ವನಾಥ್ ಪುತ್ರಿ ಅಪೂರ್ವ ಹಾಗೂ ಬೈರತಿ ಸುರೇಶ್ ಪುತ್ರ ಸಂಜಯ್ […]
ಮಕ್ಕಳು ಮೊಬೈಲ್ ಹೆಚ್ಚು ಬಳಸಿದರೆ ಏನಾಗುತ್ತೆ? ಮಕ್ಕಳು ಅಳ್ತಾರೆಂದು ಮೊಬೈಲ್ ಕೊಡುವವರಿಗೆ ಈ ವಿಚಾರ ತಿಳಿದಿರಲಿ..

ಮಕ್ಕಳು ಊಟ, ತಿಂಡಿ, ಕಾಫಿಯಿಂದ ಹಿಡಿದು ಮಲಗುವ ವರೆಗೂ ಮೊಬೈಲ್ ನಲ್ಲಿ ಆಟವಾಡುತ್ತಿರುತ್ತಾರೆ. ಮೊಬೈಲ್ ಕೊಟ್ಟಿಲ್ಲ ಎಂದರೆ ಮಕ್ಕಳು ಹಠ ಹಿಡಿದು ಅಳುತ್ತಿರುತ್ತದೆ. ಹೆಚ್ಚು ಸಮಯ ಮೊಬೈಲ್ ಬಳಕೆ ಆರೋಗ್ಯಕ್ಕೆ ಹಾನಿ ಉಂಟು ಮಾಡುತ್ತದೆ ಎಂಬುದು ನಮಗೆ ತಿಳಿದೇ ಇದೆ. ದೃಷ್ಟಿ ದೋಷ, ಶ್ರವಣ ದೋಷ ಸೇರಿ ಹತ್ತು ಹಲವು ಸಮಸ್ಯೆಗೆ ನಾವು ಒಳಗಾಗುತ್ತೇವೆ. ಆದರೆ ಮಕ್ಕಳಲ್ಲಿ ಮೊಬೈಲ್ ಬಳಕೆ ಹೆಚ್ಚಾದರೆ ಮಕ್ಕಳಿಗೆ ಯಾವ ಸಮಸ್ಯೆ ಉಂಟಾಗುತ್ತಿದೆ ಎಂಬುದನ್ನು ನಾವು ತಿಳಿದುಕೊಳ್ಳೋಣ… ಮಕ್ಕಳ ಮಾನಸಿಕ ಆರೋಗ್ಯದ ಮೇಲೆ […]
ಪತ್ನಿಯನ್ನು ಕೊಲೆಗೈದು ಪೊಲೀಸರ ಮುಂದೆ ಅಮಾಯಕನಂತೆ ನಾಟಕವಾಡಿದ್ದ ಪತಿ ಅರೆಸ್ಟ್

ಪತ್ನಿಯನ್ನು ತಾನೇ ಕೊಲೆಗೈದು ಪೊಲೀಸರ ಮುಂದೆ ಅಮಾಯಕನಂತೆ ನಾಟಕವಾಡಿದ್ದ ಪತಿಯನ್ನು ಅರೆಸ್ಟ್ ಮಾಡುವಲ್ಲಿ ಬೆಂಗಳೂರಿನ ಬಾಗಲೂಟು ಠಾಣೆಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಮೆಹಬೂಬ್ ಪಾಷಾ(50) ಬಂಧಿತ ಆರೋಪಿ. ಆ.25 ರಂದು ಈತ ತನ್ನ ಪತ್ನಿ ಮಮ್ತಾಜ್‌ಳನ್ನು ಯಾರೋ ಕೊಲೆ ಮಾಡಿರುವುದಾಗಿ ದೂರು ದಾಖಲಿಸಿದ್ದ. ಕೂಲಿ ಕೆಲಸ ಮಾಡುತ್ತಿದ್ದ ಮಹಬೂಬ್ ಪಾಷಾ ತನ್ನ ಪತ್ನಿ ಮಮ್ತಾಜ್ ಜೊತೆಗೆ ಬಾಗಲೂರಿನಲ್ಲಿ ವಾಸವಾಗಿದ್ದ. ಕೌಟುಂಬಿಕ ಕಾರಣಗಳಿಂದ ಪತ್ನಿಯೊಡನೆ ಆಗಾಗೆ ಜಗಳ ನಡೆಯುತ್ತಿದ್ದು, ಭಾನುವಾರ ಜಗಳ ವಿಕೋಪಕ್ಕೆ ತಿರುಗಿತ್ತು. ಕುಪಿತಗೊಂಡ ಪಾಷಾ ತನ್ನ ಪತ್ನಿಯನ್ನು […]
ಕಾಪು ಪುರಸಭೆ ಚುನಾವಣೆ; ಎಸ್ ಡಿಪಿಐ ಸದಸ್ಯೆ ಬಿಜೆಪಿ ಸೇರ್ಪಡೆ, ಉಪಾಧ್ಯಕ್ಷೆಯಾಗಿ ಆಯ್ಕೆ

ಕಾಪು ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಆಪರೇಷನ್ ಕಮಲ ಸದ್ದು ಮಾಡಿದ್ದು, ಎಸ್‌ಡಿಪಿಐಗೆ ಭಾರತೀಯ ಜನತಾ ಪಕ್ಷ ಆಪರೇಷನ್ ಮಾಡಿದೆ. ಎಸ್‌ಡಿಪಿಐನಿಂದ ಗೆದ್ದಿರುವ ಸರಿತಾ ಶಿವಾನಂದ್ ಬಿಜೆಪಿಗೆ ಸೇರ್ಪಡೆಯಾಗಿ ಉಪಾಧ್ಯಕ್ಷೆಯಾಗಿದ್ದಾರೆ. ಕಾಪು ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಸರಿತಾ ಶಿವಾನಂದ್ ಬಿಜೆಪಿ ಸೇರ್ಪಡೆಯಾಗಿ ಮಧ್ಯಾಹ್ನ ಪುರಸಭೆ ಉಪಾಧ್ಯಕ್ಷೆಯಾಗಿದ್ದಾರೆ. ಕಾಪು ಬಿಜೆಪಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಮ್ಮುಖದಲ್ಲಿ ಸರಿತಾ ಶಿವಾನಂದ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಅಧ್ಯಕ್ಷ /ಉಪಾಧ್ಯಕ್ಷ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಉಪಾಧ್ಯಕ್ಷ ಸ್ಥಾನ […]