ಕಾಪು ಪುರಸಭೆ ಚುನಾವಣೆ; ಎಸ್ ಡಿಪಿಐ ಸದಸ್ಯೆ ಬಿಜೆಪಿ ಸೇರ್ಪಡೆ, ಉಪಾಧ್ಯಕ್ಷೆಯಾಗಿ ಆಯ್ಕೆ

ಕಾಪು ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಆಪರೇಷನ್ ಕಮಲ ಸದ್ದು ಮಾಡಿದ್ದು, ಎಸ್‌ಡಿಪಿಐಗೆ ಭಾರತೀಯ ಜನತಾ ಪಕ್ಷ ಆಪರೇಷನ್ ಮಾಡಿದೆ. ಎಸ್‌ಡಿಪಿಐನಿಂದ ಗೆದ್ದಿರುವ ಸರಿತಾ ಶಿವಾನಂದ್ ಬಿಜೆಪಿಗೆ ಸೇರ್ಪಡೆಯಾಗಿ ಉಪಾಧ್ಯಕ್ಷೆಯಾಗಿದ್ದಾರೆ. ಕಾಪು ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಸರಿತಾ ಶಿವಾನಂದ್ ಬಿಜೆಪಿ ಸೇರ್ಪಡೆಯಾಗಿ ಮಧ್ಯಾಹ್ನ ಪುರಸಭೆ ಉಪಾಧ್ಯಕ್ಷೆಯಾಗಿದ್ದಾರೆ. ಕಾಪು ಬಿಜೆಪಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಮ್ಮುಖದಲ್ಲಿ ಸರಿತಾ ಶಿವಾನಂದ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಅಧ್ಯಕ್ಷ /ಉಪಾಧ್ಯಕ್ಷ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಉಪಾಧ್ಯಕ್ಷ ಸ್ಥಾನ […]
ಉಪ್ಪಿನಂಗಡಿ: ಕುಖ್ಯಾತ ಗರುಡ ಗ್ಯಾಂಗಿನ ಸದಸ್ಯ ಅರೆಸ್ಟ್

ಉಪ್ಪಿನಂಗಡಿ: ರಸ್ತೆ ಕನ್ ಸ್ಟ್ರಕ್ಷನ್ ಕಂಪೆನಿಗೆ ಸೇರಿದ 40 ಕಬ್ಬಿಣದ ಪ್ಲೇಟ್ ಗಳನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಅಂತರ್ ಜಿಲ್ಲಾ ಕಳ್ಳ ಹಾಗೂ ಕುಖ್ಯಾತ ಗರುಡ ಗ್ಯಾಂಗಿನ ಸದಸ್ಯನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಡಬ ತಾಲೂಕು ಐತ್ತೂರು ಗ್ರಾಮದ ಕಾರ್ಯತಡ್ಕ ನಿವಾಸಿ ಅಬ್ದುಲ್ ಹಮೀದ್ ಅಲಿಯಾಸ್ ಹಮೀದ್(27) ಎಂದು ಗುರುತಿಸಲಾಗಿದೆ. ಈತ 10ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಲ್ಲಿ ರಾಜ್ಯದ ವಿವಿಧ ಠಾಣೆಯ ಪೊಲೀಸರಿಗೆ ಬೇಕಾಗಿದ್ದ ಎನ್ನಲಾಗಿದೆ. ಆರೋಪಿಯು ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಪರಿಯಶಾಂತಿ, […]
ಎಂಎಲ್ ಸಿ ಐವನ್ ಡಿಸೋಜಾ ಮನೆಗೆ ಕಲ್ಲು ಎಸೆತ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಎಂಎಲ್ ಸಿ ಐವನ್ ಡಿಸೋಜಾ ಮನೆಗೆ ಕಲ್ಲು ಎಸೆದ ಪ್ರಕರಣದಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಲ್ಲಡ್ಕದ ದಿನೇಶ್(20) ಮತ್ತು ಭರತ್(24) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಬಂಧಿತರಿಬ್ಬರೂ ವಿಎಚ್ ಪಿ ಹಾಗೂ ಬಜರಂಗದಳದ ಕಾರ್ಯಕರ್ತರು ಎಂದು ಹೇಳಲಾಗಿದೆ. ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾದ ದೃಶ್ಯವನ್ನು ಆಧರಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಬುಧವಾರ ರಾತ್ರಿ ಬೈಕ್ ನಲ್ಲಿ ಹೆಲ್ಮೆಟ್ ಹಾಕಿ ಬಂದ ಇಬ್ಬರು ಕಿಡಿಗೇಡಿಗಳು ಐವನ್ ಮನೆಗೆ ಕಲ್ಲುತೂರಾಟ ನಡೆಸಿ, ಪರಾರಿಯಾಗಿದ್ದರು.
ಮಲಯಾಳಂ ನಟ ಸಿದ್ದೀಕ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ತಿರುವನಂತಪುರಂ: ಮಲಯಾಳಂ ನಟ ಸಿದ್ದೀಕ್ ಅವರು 2016ರಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ನಟಿ ಆರೋಪಿಸಿದ ಹಿನ್ನೆಲೆಯಲ್ಲಿ, ಸಿದ್ದೀಕ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಮ್ಯೂಸಿಯಂ ಪೊಲೀಸ್ ಠಾಣೆಯಲ್ಲಿ ಸಿದ್ದೀಕ್ ವಿರುದ್ಧ ಸೆಕ್ಷನ್ 376 (ಅತ್ಯಾಚಾರ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಅಪರಾಧವು 2016ರಲ್ಲಿ ನಡೆದಿರುವ ಕಾರಣ ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಹೆಚ್ಚು ಸಿಹಿತಿಂಡಿಗಳನ್ನು ತಿಂದರೆ ಶುಗರ್ ಬರುತ್ತಾ? ನಿಮ್ಮ ಅನುಮಾನಗಳಿಗೆ ಇಲ್ಲಿದೆ ಉತ್ತರ…

ಜನರು ಹೆಚ್ಚು ಸಿಹಿತಿಂಡಿಗಳನ್ನು ಸೇವಿಸಿದರೆ ಮಧುಮೇಹದ ಅಪಾಯ ಹೆಚ್ಚು ಎಂಬುದು ನಿಜವೇ? ಈ ಪ್ರಶ್ನೆಗೆ ದೆಹಲಿಯ ಅಪೋಲೋ ಆಸ್ಪತ್ರೆ, ದೆಹಲಿಯ ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆಯ ಅಂತಃಸ್ರಾವಶಾಸ್ತ್ರದ ಹಿರಿಯ ಸಲಹೆಗಾರರಾದ ಡಾ. ರಿಚಾ ಚತುರ್ವೇದಿ ಉತ್ತರಿಸಿದ್ದಾರೆ. ಹೆಚ್ಚುವರಿ ಸಿಹಿತಿಂಡಿಗಳು ಮತ್ತು ಮಧುಮೇಹಕ್ಕೆ ನೇರ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಅತಿಯಾಗಿ ಸಿಹಿತಿಂಡಿಗಳನ್ನು ಸೇವಿಸುವ ಎಲ್ಲರಿಗೂ ಮಧುಮೇಹ ಇರುವುದು ಕಂಡುಬರುವುದಿಲ್ಲ. ಹೌದು, ಇದು ಕೆಲವು ಸಂದರ್ಭಗಳಲ್ಲಿ ಸಂಭವಿಸಬಹುದು. ವಾಸ್ತವವಾಗಿ, ಅದರ ಹಿಂದಿನ ವಿಜ್ಞಾನವೆಂದರೆ ಹೆಚ್ಚು ಸಿಹಿತಿಂಡಿಗಳು ಎಂದರೆ ಹೆಚ್ಚು ಕಾರ್ಬೋಹೈಡ್ರೇಟ್ಗಳು. ಈ […]
ನೇಜಾರು ತಾಯಿ & ಮಕ್ಕಳ ಕೊಲೆ ಪ್ರಕರಣ: ವಿಚಾರಣೆ ಮತ್ತೆ ಮುಂದೂಡಿಕೆ

ಉಡುಪಿ: ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ವಿಚಾರಣೆಯನ್ನು ಮತ್ತೆ ಮುಂದೂಡಲಾಗಿದೆ. ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣದ ಮುಂದಿನ ವಿಚಾರಣೆಯನ್ನು ಅ.24ಕ್ಕೆ ಮುಂದೂಡಿ ಆದೇಶ ನೀಡಿದೆ. ಕಳೆದ ಬಾರಿ ಮುಂದಿನ ವಿಚಾರಣೆಯನ್ನು ಆ.24ಕ್ಕೆ ನಿಗದಿ ಪಡಿಸಿದ್ದ ಹಿನ್ನೆಲೆಯಲ್ಲಿ ಅಂದು ಆರೋಪಿ ಪ್ರವೀಣ್ ಚೌಗುಲೆ ಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ಆರೋಪಿ ಪರ ವಕೀಲ […]
ಕಡಬ; ಕೊಂತೂರು ಶಾಲಾ ಮೇಲ್ಛಾವಣಿ ಕುಸಿದು ಮಕ್ಕಳಿಗೆ ಗಾಯ ಪ್ರಕರಣ; ಮುಖ್ಯ ಶಿಕ್ಷಕಿ ಸೇರಿ ಇಬ್ಬರನ್ನು ಅಮಾನತು ಮಾಡಿದ ಡಿಸಿ ಮುಲ್ಲೈ ಮುಗಿಲನ್

ಕಡಬ ತಾಲೂಕಿನ ಕುಂತೂರು ಸರ್ಕಾರಿ ಶಾಲೆ ಮೇಲ್ಛಾವಣಿ ಕುಸಿದು ನಾಲ್ವರು ಮಕ್ಕಳು ಗಾಯಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಮುಖ್ಯ ಶಿಕ್ಷಕಿಯನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ. ಘಟನೆ ನಡೆದ ಬೆನ್ನಲ್ಲೇ ಪುತ್ತೂರು ಬಿಇಒ ಲೋಕೇಶ್ ಎಸ್.ಆರ್.ಅವರು ಶಾಲೆಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಘಟನೆ ನಡೆದ ಸಂದರ್ಭದಲ್ಲಿ ಅನೇಕ ಮಕ್ಕಳು ಶಾಲೆಯ ಹೊರಗೆ ಇದ್ದರು. ಒಳಗೆ ಕೆಲವೇ ಮಕ್ಕಳಿದ್ದರು. ಅದರಲ್ಲಿ ನಾಲ್ವರು ಹೆಣ್ಣುಮಕ್ಕಳಿಗೆ ಗಾಯಗಳಾಗಿವೆ ಎಂದು ಬಿಇಒ ತಿಳಿಸಿದ್ದಾರೆ. ಅಷ್ಟೇ ಅಲ್ಲ ಈ ಸರ್ಕಾರಿ […]
ಮಾನಹಾನಿಕರ ಸುದ್ದಿ ಪ್ರಸಾರಕ್ಕೆ ನಿರ್ಬಂಧ ಕೋರಿ ಕೋರ್ಟ್ ಮೊರೆ ಹೋದ ಬಸವರಾಜ್ ಬೊಮ್ಮಯಿ

ತಮ್ಮ ವಿರುದ್ಧ ಮಾನಹಾನಿಕರ ಸುದ್ದಿ ಪ್ರಸಾರ ಮಾಡಿದ್ದಾರೆ ಎಂದು ಆರೋಪಿಸಿ ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ಕೋರಿ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಅವರು ಸಿವಿಲ್ ಕೋರ್ಟಗೆ ಅರ್ಜಿ ಸಲ್ಲಿಸಿದ್ದಾರೆ. ಇದಲ್ಲದೆ ವಕೀಲ ಜಗದೀಶ್ ಮಹದೇವ್ ವಿರುದ್ಧವು ಕೂಡ ನಿರ್ಬಂಧಕಾಜ್ಞೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆ ಅಥವಾ ಸುದ್ದಿ ಪ್ರಸಾರ ಮಾಡಿದಂತೆ ದಾವೇ ಹೂಡಿದ್ದಾರೆ. ಬಸವರಾಜ್ ಬೊಮ್ಮಾಯಿ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ನಾಳೆ ಕೋರ್ಟ್ ಆದೇಶ ಪ್ರಕಟಿಸಲಿದೆ ಎಂದು ಹೇಳಲಾಗುತ್ತಿದೆ.
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ; ಸಿಬಿಐ ವರದಿ ಎತ್ತಿ ಹಿಡಿದ ಸುಪ್ರೀಂಕೋರ್ಟ್, ಕೆ.ಜೆ ಜಾರ್ಜ್ ಗೆ ರಿಲೀಫ್ ಕೊಟ್ಟ ವರದಿಯಲ್ಲೇನಿತ್ತು?

DySP ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ ಜಾರ್ಜ್ ಅವರಿಗೆ ಸುಪ್ರೀಂಕೋರ್ಟ್‌ನಲ್ಲಿ ಕ್ಲೀನ್ ಚಿಟ್ ಸಿಕ್ಕಿದೆ. ಸಿಬಿಐ ವರದಿ ಎತ್ತಿಹಿಡಿದ ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಸಿಬಿಐ ಕ್ರಮ ಪ್ರಶ್ನಿಸಿ ಗಣಪತಿ ಸಹೋದರಿ ಸಬಿತಾ ಹಾಗು ಮತ್ತಿತರರು ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿ ಅರ್ಜಿಯನ್ನು ವಜಾ ಮಾಡಿದೆ. ಪ್ರಕರಣದ ಕುರಿತು ಸುದೀರ್ಘ ವಿಚಾರಣೆ ನಡೆಸಿದ್ದ ಸಿಬಿಐ, 2019ರಲ್ಲಿ ವರದಿ ನೀಡಿ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಕ್ಲೀನ್ ಚಿಟ್ ನೀಡಿತ್ತು. ಅಲ್ಲದೆ, ಗಣಪತಿ ಆತ್ಮಹತ್ಯೆಗೆ ಕಿರುಕುಳ ಕಾರಣವಲ್ಲ. ಬದಲಾಗಿ ಒಂದೆರಡು […]
ಚಿಕ್ಕಮಗಳೂರು: ಸರಕಾರದ ಹಣವನ್ನು ಪ್ರಿಯತಮೆಯ ಖಾತೆಗೆ ಹಾಕಿದ ಅಧಿಕಾರಿ

ಚಿಕ್ಕಮಗಳೂರು ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿ.ಆರ್.ಎಫ್.ಓ. ಅಧಿಕಾರಿ ಓರ್ವ ರಾಣಿಝರಿ, ಬಂಡಾಜೆ ಫಾಲ್ಸ್ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ವಂಚಿಸಿ, ಸರ್ಕಾರಕ್ಕೆ ಬರುವ ಲಕ್ಷಾಂತರ ರೂಪಾಯಿಯನ್ನು ಆತನ ಪ್ರಿಯತಮೆಯ ಖಾತೆಗೆ ವರ್ಗಾಯಿಸಿರುವ ಬಗ್ಗೆ ವರದಿಯಾಗಿದೆ. ಡಿ.ಆರ್.ಎಫ್.ಓ. ಚಂದನ್ ಗೌಡ ಸರ್ಕಾರದ ಹಣವನ್ನು ಪ್ರಿಯತಮೆ ಖಾತೆಗೆ ಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲ್ಲೂಕಿನಲ್ಲಿ ನಡೆದಿದೆ.9000ರೂ. ಸರ್ಕಾರದ ಹಣವನ್ನು ಪ್ರಿಯತಮೆ ಖಾತೆಗೆ ವರ್ಗಾವಣೆ ಮಾಡಿದ್ದಾರೆ ಎನ್ನಲಾಗಿದೆ. ಬಂಡಾಜೆ ಫಾಲ್ಸ್ ಬಳಿ 200ಕ್ಕೂ ಅಧಿಕ ಜನರು ಬಂಡಾಜೆ ಫಾಲ್ಸ್ ನೋಡಲು ತೆರಳಿದ್ದರು. […]