Breaking News :

ವಿಟ್ಲ: ಕೆರೆಗೆ ಜಾರಿ ಬಿದ್ದು ಯುವಕ ಮೃತ್ಯು

ವಿಟ್ಲ; ತೆಂಗಿನಕಾಯಿ ತರಲು ಹೋಗುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕೇಪು ಗ್ರಾಮದಲ್ಲಿ ಆ.27ರ ಮಂಗಳವಾರ ನಡೆದಿದೆ. ಕೇಪು ಗ್ರಾಮದ ಗುತ್ತುದಡ್ಕ ನಿವಾಸಿ ಕೊರಗಪ್ಪ ನಾಯ್ಕ ಅವರ ಪುತ್ರ ನವೀನ್‌ ನಾಯ್ಕ(35) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ನವೀನ್‌ ನಾಯ್ಕ ಅವರು ತೆಂಗಿನಕಾಯಿ ತರಲು ತೋಟಕ್ಕೆ ತೆರಳಿದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗೃಹಲಕ್ಷ್ಮಿ ಹಣ ಕೂಡಿಟ್ಟು ಸೊಸೆಗೆ ಫ್ಯಾನ್ಸಿ ಅಂಗಡಿ ಹಾಕಿ ಕೊಟ್ಟ ಅತ್ತೆ

ಅತ್ತೆಯೋರ್ವಳು ತನಗೆ ಬಂದ ಗೃಹಲಕ್ಷ್ಮೀ ಹಣವನ್ನು ಕೂಡಿಟ್ಟು ಸೊಸೆಯ ಜೀವನೋಪಾಯಕ್ಕೆ ಹೊಸ ದಾರಿ ಮಾಡಿಕೊಟ್ಟು ಸುದ್ದಿಯಾಗಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾವಿ ತಾಲ್ಲೂಕು ನೀರಲಗಿಯಲ್ಲಿ ಅತ್ತೆಯೊಬ್ಬರು ತನಗೆ ಬಂದ ಗೃಹಲಕ್ಷ್ಮೀ ಹಣವನ್ನು ಕೂಡಿಟ್ಟು ಸೊಸೆಗೆ ಫ್ಯಾನ್ಸಿ ಅಂಗಡಿಯನ್ನು ಮಾಡಿಕೊಟ್ಟಿದ್ದಾರೆ. ಈ ಮೂಲಕ ಆದರ್ಶ ಅತ್ತೆಯಾಗಿ ಭಾರೀ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇದೀಗ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಪ್ರಯೋಜನವನ್ನು ಪಡೆದು ಸೊಸೆಯ ಬದುಕಿಗೆ ಅತ್ತೆ ಹೊಸ ದಾರಿ ಕಂಡುಕೊಂಡಿದ್ದಾರೆ. ಈ ಮೂಲಕ ಈ ಅತ್ತೆ ಸೊಸೆ […]

ಮಲಯಾಳಂ ಚಲನಚಿತ್ರ ಕಲಾವಿದರ ಸಂಘ ʼಅಮ್ಮʼ ಅಧ್ಯಕ್ಷ ಸ್ಥಾನಕ್ಕೆ ನಟ ಮೋಹನ್ ಲಾಲ್ ರಾಜೀನಾಮೆ

ಮಲಯಾಳಂ ಚಲನಚಿತ್ರ ಕಲಾವಿದರ ಸಂಘ ʼಅಮ್ಮʼ ಅಧ್ಯಕ್ಷ ಸ್ಥಾನಕ್ಕೆ ನಟ ಮೋಹನ್ ಲಾಲ್ ರಾಜೀನಾಮೆ ನೀಡಿದ್ದಾರೆ. ವರದಿಗಳ ಪ್ರಕಾರ, ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು ಜಂಟಿಯಾಗಿ ರಾಜೀನಾಮೆ ಸಲ್ಲಿಸಿದ್ದು ಸಂಪೂರ್ಣ ಸಮಿತಿ ವಿಸರ್ಜಿಸಲಾಗಿದೆ. ಮಲಯಾಳಂ ಸಿನಿಮಾ ರಂಗದಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳದ ಬಗ್ಗೆ ನ್ಯಾಯಮೂರ್ತಿ ಕೆ ಹೇಮಾ ಸಮಿತಿಯ ಸ್ಫೋಟಕ ವರದಿಯ ಬೆನ್ನಲ್ಲೇ ಹಲವು ನಾಯಕ ನಟರ ವಿರುದ್ಧ ಕಲಾವಿದೆಯರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಆ ನಂತರ ಈ ಬೆಳವಣಿಗೆ ನಡೆದಿದೆ. […]

ಗೋಮಾಂಸ ಇರುವ ಶಂಕೆಯಲ್ಲಿ ಮನೆಗೆ ದಾಳಿ: ಪೊಲೀಸರನ್ನು ಕಂಡು ಹೃದಯಾಘಾತವಾಗಿ ಮಹಿಳೆ ಮೃತ್ಯು

ಮನೆಯಲ್ಲಿ ಗೋಮಾಂಸ ಸಂಗ್ರಹಿಸಲಾಗಿದೆ ಎಂದು ಶಂಕಿಸಿ ಪೊಲೀಸರು ದಾಳಿ ನಡೆಸಿದ್ದರಿಂದ ಆಘಾತಕ್ಕೊಳಗಾಗಿ ಮಹಿಳೆ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಖತಾಯಿ ಗ್ರಾಮದ ನಿವಾಸಿ ರಝಿಯಾ(55) ಎಂದು ಗುರುತಿಸಲಾಗಿದೆ. ಗೋಮಾಂಸ ಸಂಗ್ರಹಿಸಲಾಗಿದೆ ಎಂಬ ಪೊಲೀಸ್ ಮಾಹಿತಿದಾರನ ಸುಳಿವನ್ನು ಆಧರಿಸಿ ನಾಲ್ವರು ಕಾನ್ಸ್‌ಟೇಬಲ್‌ಗಳ ತಂಡ ಪೊಲೀಸ್ ಲೈನ್ ನಲ್ಲಿರುವ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಆದರೆ ಅವರಿಗೆ ಅಲ್ಲಿ ಯಾವುದೇ ವಸ್ತುಗಳು ಕಂಡು ಬಂದಿಲ್ಲ ಎಂದು ತಿಳಿದು ಬಂದಿದೆ. ಗೋಮಾಂಸ ಮಾರಾಟ ಅಥವಾ […]

ತಾಯಿ & ಮಗಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ತಾಯಿ ಮತ್ತು ಮಗಳು ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಮತ್ತೆಯಾಗಿರುವ ಘಟ‌ನೆ ಕೇರಳದ ತ್ರಿಶೂರ್‌ನ ಕಡಂಗೋಟ್ ಉದ್ದೂರಿನ ಮನೆಯೊಂದರಲ್ಲಿ ನಡೆದಿದೆ. ದೀರ್ಘೂರ್ ತಂಗುಪ್ಪಾಟಿ ಕಂಠರಸ್ಸೆ ಮನೆಯ ರೇಖಾ(35) ಮತ್ತು ಆಕೆಯ ಮಗಳು ಆರತಿ(10)ಮೃತ ದುರ್ದೈವಿಗಳಾಗಿದ್ದಾರೆ. ಸೋಮವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಈ ಘಟನೆ ಬೆಳಕಿಗೆ ಬಂದಿದೆ. ಎರುಮಪೆಟ್ಟಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ದರ್ಶನ್ ವಿರುದ್ದ ಮತ್ತೆ ಮೂರು ಪ್ರಕರಣ ದಾಖಲು

ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಹಿನ್ನೆಲೆಯಲ್ಲಿ ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತೀಮಾ ಅವರು ಪ್ರಕರಣದ ತನಿಖೆಗೆ ಮೂರು ವಿಶೇಷ ತಂಡಗಳ ರಚನೆ ಮಾಡಿದ್ದಾರೆ. ಬೇಗೂರು ಇನ್ಸ್‌ಪೆಕ್ಟರ್ ಕೃಷ್ಣ ಕುಮಾರ್, ರೌಡಿಶೀಟರ್‌ಗಳ ಜತೆ ದರ್ಶನ್ ಬೇರೆತಿದ್ದು ಹೇಗೆ? ಲಾನ್‌ನಲ್ಲಿ ಎಲ್ಲರು ಒಟ್ಟಿಗೆ ಕೂರಲು ಚೇರ್ ವ್ಯವಸ್ಥೆ ಮಾಡಿದವರು ಯಾರು? ಕಾಫಿ ಮಗ್ ಹೇಗೆ ಬಂತು, ಹಾಗೂ ಜೈಲಿನಲ್ಲಿ ಸಿಗರೇಟ್, ಮದ್ಯ, ಮಾದಕವಸ್ತು ನಿಷೇಧ ಇದ್ದರೂ ಸಿಗರೇಟ್ ಹೇಗೆ ಸಿಕ್ಕಿತು ಎಂದು ತನಿಖೆ ನಡೆಸಲಿದ್ದಾರೆ. ಇನ್ನೂ ಎರಡನೇ ಪ್ರಕರಣದ […]

ವಯನಾಡು ಭೂಕುಸಿತದ ಸಂತ್ರಸ್ತರನ್ನು ಆಶ್ರಯ ಕೇಂದ್ರಗಳಿಂದ ತೆರವು

ಕೇರಳದ ವಯನಾಡ್ ಜಿಲ್ಲೆಯ ಮುಂಡಕ್ಕೈ, ಚೂರಲ್ಮಾಲ ಹಾಗೂ ಪುಂಜಿರಿಮಟ್ಟಂನಲ್ಲಿ ನಡೆದಿದ್ದ ಭೂ ಕುಸಿತದ ಸಂತ್ರಸ್ತರನ್ನು ಕಾಳಜಿ ಕೇಂದ್ರದಿಂದ ಸ್ಥಳಾಂತರಿಸಲಾಗಿದೆ. ಕಾಳಜಿ ಕೇಂದ್ರಗಳನ್ನಾಗಿ ಮಾಡಿದ್ದ ಶಾಲೆಗಳಲ್ಲಿ ಮಂಗಳವಾರದಿಂದ ತರಗತಿಗಳು ಅರಂಭವಾಗಲಿದೆ. ಈ ಹಿನ್ನೆಲೆಯಲ್ಲಿ 2 ಸಾವಿರಕ್ಕೂ ಅಧಿಕ ಮಂದಿಯನ್ನು ಸ್ಥಳಾಂತರಿಸಲಾಗಿದೆ. ಕೆಲವರು ಸಂಬಂಧಿಕರ ಮನೆಗೆ ತೆರಳಿದರೆ, ಇನ್ನೂ ಕೆಲವರು ಸರ್ಕಾರ ವ್ಯವಸ್ಥೆ ಮಾಡಿರುವ ಬಾಡಿಗೆ ಮನೆಗೆ ತೆರಳಿದ್ದಾರೆ. ಭೂಕುಸಿತ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ಪ್ರಕ್ರಿಯೆ ಶನಿವಾರ ಪೂರ್ಣಗೊಂಡಿದೆ ಎಂದು ಸರ್ಕಾರ ಹೇಳಿದೆ. ಕಾಳಜಿ ಕೇಂದ್ರದಲ್ಲಿದ್ದ 728 ಕುಟುಂಬಗಳನ್ನು ಬಾಡಿಗೆ […]

ಉದ್ಘಾಟನೆಗೊಂಡ 8 ತಿಂಗಳಿಗೆ ಕುಸಿದು ಬಿದ್ದ ಶಿವಾಜಿ ಪ್ರತಿಮೆ; ಮೋದಿ ಉದ್ಘಾಟಿಸಿದ್ದ ಪ್ರತಿಮೆ

ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದ್ದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಸೋಮವಾರ ಕುಸಿದು ಬಿದ್ದಿರುವ ಘಟನೆ ಮಹರಾಷ್ಟ್ರದ ಮಾಲ್ವಾನ್‌ನ ರಾಜ್‌ಕೋಟ್ ಕೋಟೆಯಲ್ಲಿ ನಡೆದಿದೆ. ಮರಾಠ ರಾಜನ 35 ಅಡಿ ಎತ್ತರದ ಪ್ರತಿಮೆ ಕುಸಿದಿದ್ದು, ಪೊಲೀಸ್ ಮತ್ತು ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ. ತಜ್ಞರು ಪ್ರತಿಮೆ ಕುಸಿತಕ್ಕೆ ನಿಖರವಾದ ಕಾರಣವನ್ನು ಖಚಿತಪಡಿಸಲಿದ್ದಾರೆ, ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಭಾರಿ ಮಳೆ ಮತ್ತು ಬಿರುಗಾಳಿ ಬೀಸಿದೆ ಎಂದು ಅಧಿಕಾರಿ ಹೇಳಿದ್ದಾರೆ. ಈ […]

ಹಗಲಿನಲ್ಲಿ ಮಲಗುವುದು ಒಳ್ಳೆಯದಾ? ಇಲ್ಲಿದೆ ನಿಮ್ಮ ಅನುಮಾನಗಳಿಗೆ ಉತ್ತರ..

ಆರೋಗ್ಯವಾಗಿರಲು ನಿದ್ರೆ ಅತ್ಯಗತ್ಯ. ರಾತ್ರಿ ನಿದ್ರೆ ಆರೋಗ್ಯಕ್ಕೆ ಅತ್ಯಗತ್ಯ. ಆದರೆ ಕೆಲವರು ಹಗಲಿನಲ್ಲಿ ಸಾಂದರ್ಭಿಕವಾಗಿ ಮಲಗುತ್ತಾರೆ.ಕೆಲವರು ವಿಶ್ರಾಂತಿ ಪಡೆಯಲು ಅರ್ಧ ಗಂಟೆ ಮಲಗಿದರೆ, ಇನ್ನು ಕೆಲವರು ಗಂಟೆಗಳ ಕಾಲ ಮಲಗುತ್ತಾರೆ. ಹಗಲಿನಲ್ಲಿ ಮಲಗುವುದು ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಅನೇಕ ಜನರು ಹೇಳುತ್ತಾರೆ. ಆಗಾದರೆ ಹಗಲಿನಲ್ಲಿ ಮಲಗುವುದು ಒಳ್ಳೆಯದಾ ಎಂಬುವುದನ್ನು ಈ ಸುದ್ದಿ ಮೂಲಕ ತಿಳಿದುಕೊಳ್ಳಿ ನೀವು ಹಗಲಿನಲ್ಲಿ ಮಲಗಿದರೆ, ಆಲಸ್ಯಕ್ಕಾಗಿ ನೀವು ಮಲಗುತ್ತಿದ್ದೀರಿ ಎಂದು ಅನೇಕ ಜನರು ಹೇಳುತ್ತಾರೆ. ಆದರೆ ಹಗಲಿನಲ್ಲಿ ಸ್ವಲ್ಪ ಸಮಯ ಮಲಗುವುದು ಆರೋಗ್ಯಕ್ಕೆ […]

ಏನಿದು ಮಲಯಾಳಂ ಚಿತ್ರರಂಗವನ್ನು ಅಲ್ಲೋಲ- ಕಲ್ಲೋಲಗೊಳಿಸಿದ ಹೇಮಾ ಸಮಿತಿ ವರದಿ?

ಮಲಯಾಳಂ ಚಿತ್ರರಂಗದ ಖ್ಯಾತ ನಟಿಯ ಮೇಲೆ 2017ರಲ್ಲಿ ನಡೆದ ಲೈಂಗಿಕ ದೌರ್ಜನ್ಯ ರಾಷ್ಟ್ರವ್ಯಾಪಿ ಭಾರಿ ಸದ್ದು ಮಾಡಿತ್ತು. ಇಂದಿಗೂ ಈ ಪ್ರಕರಣದ ವಿಚಾರಣೆ ನಡೆಯುತ್ತಲೇ ಇದೆ. ಈ ಪ್ರಕರಣದ ಬೆನ್ನಲ್ಲೇ ನ್ಯಾಯಾಮೂರ್ತಿ ಕೆ. ಹೇಮಾ (ನಿವೃತ್ತ) ಅವರ ನೇತೃತ್ವದಲ್ಲಿ ಮಾಜಿ ಅಧಿಕಾರಿ ಕೆಬಿ ವಲ್ಸಲಕುಮಾರಿ ಮತ್ತು ಹಿರಿಯ ನಟಿ ಶಾರದಾ ಅವರನ್ನೊಳಗೊಂಡ ತ್ರಿಸದಸ್ಯ ಸಮಿತಿಯನ್ನು ಕೇರಳ ಸರ್ಕಾರ ರಚನೆ ಮಾಡಿತ್ತು. ಈ ಸಮಿತಿ 2019ರ ಡಿಸೆಂಬರ್​ನಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ನಾಲ್ಕೂವರೆ ವರ್ಷಗಳ ಬಳಿಕ ವರದಿಯನ್ನು ಸಾರ್ವಜನಿಕವಾಗಿ […]