Breaking News :

ದರ್ಶನ್ & ಗ್ಯಾಂಗ್ ನ್ನು ಬೇರೆ ಜೈಲಿಗೆ ಶಿಪ್ಟ್ ಮಾಡುವಂತೆ ಸಿಎಂ ಸೂಚನೆ

ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ವಿಚಾರವಾಗಿ, ಇಂದು ಟಿಜಿ & ಐಜಿಪಿ ಅಲೋಕ್ ಮೋಹನ್ ಅವರು ಸಿಎಂ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾಹಿತಿ ನೀಡಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈಲಿನ ನಿಯಮ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ. ಮುಂದೆ ಈ ರೀತಿ ಆಗದಂತೆ ಎಚ್ಚರವಹಿಸಿ. ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಇದೆ ವೇಳೆ ದರ್ಶನ್ ಮತ್ತು ಇತರರನ್ನು ಬೇರೆ ಕಾರಾಗೃಹಗಳಿಗೆ ಸ್ಥಳಾಂತರಕ್ಕೆ […]

ವಿಟ್ಲ; ಆಟೋ ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ಆಟೋ ಚಾಲಕರೋರ್ವರು ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಶಿವಾಜಿನಗರದಲ್ಲಿ ನಡೆದಿದೆ. ರಮೇಶ್ ಶಿವಾಜಿನಗರ(40) ಮೃತ ವ್ಯಕ್ತಿ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ರಮೇಶ್ ಆಟೋ ಚಾಲಕರಾಗಿದ್ದು, ಬಾಡಿಗೆ ಮನೆಯಲ್ಲಿ ವಾಸವಿದ್ದರು. ಆರ್ಥಿಕ ಸಂಕಷ್ಟದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.

ಯುವಕನಿಗೆ ಮಾರಣಾಂತಿಕವಾಗಿ ಥಳಿಸಿದ ಗುಂಪು

ಗುಂಪೊಂದು ಯುವಕನಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ರಾಜಧಾನಿ ಬೆಂಗಳೂರಿನ ಗೆರಟಿಗನಬೆಲೆ ಗ್ರಾಮ ಇಟ್ಟಿಗೆ ಫ್ಯಾಕ್ಟರಿಯಲ್ಲಿ ನಡೆದಿದೆ. ತಾಲ್ಲೂಕಿನ ಗೆರಟಿಗನಬೆಲೆ ಗ್ರಾಮದಲ್ಲಿ ಹತ್ತಾರು ಮಂದಿ ಸೇರಿ ಓರ್ವ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ. ಯುವಕನನ್ನ ಮಹಿಳೆ ಬಿಡಿಸಲು ಮುಂದಾದರೂ ಗುಂಪೊಂದು ಬಿಡದೆ ಹಲ್ಲೆ ನಡೆಸಿದೆ. ಹಣಕಾಸಿನ ವಿಚಾರಕ್ಕೆ ನಡೆದಿರುವ ಗಲಾಟೆ ಇದಾಗಿದ್ದು, ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಕಾರ್ಕಳ ಅತ್ಯಾಚಾರ ಪ್ರಕರಣ; ಸಂತ್ರಸ್ತೆಯ ವೈದ್ಯಕೀಯ ವರದಿಯಲ್ಲೇನಿದೆ?

ಕಾರ್ಕಳದಲ್ಲಿ ಅತ್ಯಾಚಾರಕ್ಕೆ ಒಳಗಾದ ಯುವತಿಯ ರಕ್ತ ಪರೀಕ್ಷೆಯ ವರದಿ ಬಂದಿದ್ದು, ಆಕೆಯ ರಕ್ತದ ಮಾದರಿಯಲ್ಲಿ ಡ್ರಗ್ಸ್‌ ಅಂಶ ಪತ್ತೆಯಾಗಿದೆ. ಮೊದಲ ಆರೋಪಿ ಅಲ್ತಾಫ್‌ನ ರಕ್ತಪರೀಕ್ಷೆಯ ವರದಿ ಹಾಗೂ ಬಿಯರ್ ಬಾಟಲ್ ತಂದುಕೊಟ್ಟ ಎರಡನೇ ಆರೋಪಿ ಕ್ಸೇವಿಯರ್ ರಿಚರ್ಡ್‌ನ ರಕ್ತ ಪರೀಕ್ಷೆಯ ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ತಿಳಿಸಿದ್ಸಾರೆ. ಯುವತಿಯ ರಕ್ತದ ಮಾದರಿ ಪರೀಕ್ಷೆಯಲ್ಲಿ ಡ್ರಗ್ಸ್‌ ಅಂಶ ಪತ್ತೆಯಾಗಿರುವ ಕಾರಣ ಆರೋಪಿ ಅಲ್ತಾಫ್‌ನನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದಾಗ, ಆತ ಕಾರಿನಲ್ಲಿದ್ದ […]

ಗೃಹ ಲಕ್ಷ್ಮಿ ಹಣವನ್ನು ಕೂಡಿಟ್ಟು ಊರಿಗೆ ಊಟ ಹಾಕಿಸಿದ ವೃದ್ಧೆ

ಹತ್ತು ಕಂತಿನ ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು ಊರಿಗೆ ಹೋಳಿಗೆ ಊಟ ಹಾಕಿಸಿ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದ ವೃದ್ಧೆಯಾದ ಅಕ್ಕಾತಾಯಿ ಲಂಗೋಟಿ ಅವರು ಪ್ರಶಂಸೆಗೆ ಕಾರಣರಾಗಿದ್ದು, ಅವರಿಗೆ ಕುದ್ದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಅಕ್ಕಾತಾಯಿ ಲಂಗೋಟಿ ಅವರು ತಮ್ಮ 10 ಕಂತಿನ ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು ಊರಿಗೆ ಹೋಳಿಗೆ ಊಟ ಹಾಕಿಸಿದ್ದಾರೆ. ಗ್ರಾಮದೇವತೆ ಲಕ್ಷ್ಮಿ ದೇವಿಗೆ ಹರಕೆ ಕಟ್ಟಿಕೊಂಡು ಹೋಳಿಗೆ ಮಾಡೋಣ ಬಾ ಎಂದು ಪಕ್ಕದ ಮನೆಯವರ ಜೊತೆಗೆ ಅಜ್ಜಿ […]

ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ಅವರದ್ದು ಎನ್ನಲಾದ ಆಡಿಯೋ ವೈರಲ್

ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ಅವರದ್ದು ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗುತ್ತಿದೆ. ಈ ಹಿಂದೆ ವಿಧಾನಸಭಾ ಚುನಾವಣೆ ವೇಳೆ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯ ಅಭ್ಯರ್ಥಿಯಾಗಿ ಅರುಣ್ ಪುತ್ತಿಲ ಭಾರಿ ಸದ್ದು ಮಾಡಿದ್ದರು. ಆದರೆ, ಈಗ ಬಿಜೆಪಿ ನಾಯಕಿಯೊಬ್ಬರ ಬಳಿ ಅವರು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗುತ್ತಿದೆ. ನೀವು ಬಿಜೆಪಿಗೆ ಸೇರಿದ್ದು ನಾಚಿಕೆ ಆಗಲಿಲ್ವ ಎಂದು ಮಹಿಳೆ ಕೇಳಿದ್ದಾಳೆ. ಆದರೆ, ಇದಕ್ಕೆ ಉತ್ತರಿಸಿದ ಅರುಣ್ ಪುತ್ತಿಲ ಅವರದ್ದೆನ್ನಲಾದ ಧ್ವನಿ […]

ಕಾರ್ಕಳ ಅತ್ಯಾಚಾರ ಪ್ರಕರಣ; ಆರೋಪಿಯ ತಾಯಿ ಮತ್ತು ಸಹೋದರ ಹೇಳುವುದೇನು? ಡಿಟೇಲ್ಸ್….

ಕಾರ್ಕಳದಲ್ಲಿ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಆರೋಪಿ ಅಲ್ತಾಫ್ ತಾಯಿ ಆಯಿಷಾ ಪ್ರತಿಕ್ರಿಯೆ ನೀಡಿದ್ದು, ನನ್ನ ಮಗ ದುಡಿಯುತ್ತಾನೆ ರಾತ್ರಿ 12 ಗಂಟೆಗೆ ಬರುತ್ತಾನೆ. ನನಗೆ ಈ ಘಟನೆ ಬಗ್ಗೆ ಏನೂ ಗೊತ್ತಿಲ್ಲ. ಪೊಲೀಸರು ನಮ್ಮ ಬಳಿ ಏನೂ ಕೇಳಿಲ್ಲ. ನಮ್ಮ ಊರು ತೀರ್ಥಹಳ್ಳಿ. ನನ್ನ ಮಗ ಮರಳಿನ ವ್ಯಾಪಾರ ಮಾಡುತ್ತಿದ್ದಾನೆ, ಮದುವೆಯಾಗಿದೆ. ಎರಡು ಮಕ್ಕಳು ಇದ್ದಾರೆ. ಘಟನೆ ನಡೆದ ಮೇಲೆ ನಾವು ಪೊಲೀಸ್ ಠಾಣೆಗೆ ಹೋದಾಗ ಮತ್ತೆ […]

ವರದಕ್ಷಿಣೆ ಕಿರುಕುಳದಿಂದ ಬೇಸತ್ತು ನವವಿವಾಹಿತೆ ಆತ್ಮಹತ್ಯೆ; ಪತಿಯ ಮನೆಯ ಬಾಗಿಲಲ್ಲೇ ಅಂತ್ಯಸಂಸ್ಕಾರ ಮಾಡಲು ಮುಂದಾದ ಕುಟುಂಬ

ವರದಕ್ಷಿಣೆ ಕಿರುಕುಳದಿಂದಾಗಿ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿಯ ಮನೆಯ ಮುಂದೆ ಶವವನ್ನು ಅಂತ್ಯಸಂಸ್ಕಾರ ಮಾಡಲು ಮಹಿಳೆಯ ಪೋಷಕರು ಯತ್ನಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಪತಿಯ ಮನೆಯವರ ವರದಕ್ಷಿಣೆ ಕಿರುಕುಳದಿಂದಾಗಿ ಕೋಲಾರದಲ್ಲಿ ನವವಿವಾಹಿತೆ ಮಾನಸ ಗೌಡ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೋಲಾರ ತಾಲೂಕಿನ ತೂರಾಂಡಹಳ್ಳಿ ಗ್ರಾಮದಲ್ಲಿರುವ ಪತಿ ಉಲ್ಲಾಸ್ ಗೌಡ ಮನೆಯ ಎದುರು ಪತ್ನಿ ಮಾನಸ ಗೌಡ ಅವರ ಶವವನ್ನಿಟ್ಟು ಪ್ರತಿಭಟನೆ ಮಾಡಿದ್ದಾರೆ. 24 ವರ್ಷದ ಮಾನಸ ಗೌಡ ಹಾಗೂ ತೂರಾಂಡಹಳ್ಳಿ ಗ್ರಾಮದ ಉಲ್ಲಾಸ್ ಗೌಡ ನಡುವೆ ಕಳೆದ ವರ್ಷ […]

ಏಲಿಯನ್ಸ್‌ ಮಾನವರನ್ನು ಎರೆಹುಳಗಳಂತೆ ಪರಿಗಣಿಸುತ್ತಿವೆ, ಇದು ಅಪಾಯಕಾರಿ; ಇಸ್ರೋ ಅಧ್ಯಕ್ಷ ಸೋಮನಾಥನ್ ಸ್ಪೋಟಕ ಹೇಳಿಕೆ

ಇಸ್ರೋ ಅಧ್ಯಕ್ಷ ಸೋಮನಾಥನ್ ಸ್ಪೋಟಕ ಹೇಳಿಕೆಯನ್ನು ನೀಡಿದ್ದು, ಏಲಿಯನ್ಸ್‌ ನಮ್ಮ ಸುತ್ತಮುತ್ತಲಿದ್ದು, ಬಹುಶಃ ಅವು ಮಾನವ ನಾಗರಿಕತೆ ಮತ್ತು ಮಾನವರನ್ನು ಎರೆಹುಳಗಳಂತೆ ಪರಿಗಣಿಸುತ್ತಿವೆ ಎಂದು ಹೇಳಿದ್ದಾರೆ. ನಾವು ಮನುಷ್ಯರು ಇತ್ತೀಚೆಗೆ ಭೂಮಿಯಲ್ಲಿ ಹುಟ್ಟಿಕೊಂಡ ಜೀವರಾಶಿ, ಈ ಜೀವ ಜಗತ್ತಿನ ಎಲ್ಲೆಡೆ ಮಾನವನಿಗಿಂತಲೂ ಹೆಚ್ಚು ವಿಕಾಸಗೊಂಡಿರುವ ಜೀವರಾಶಿಗಳಿವೆ ಎಂದು ಅವರು ಹೇಳಿದ್ದಾರೆ. ರಣ್ವೀರ್‌ ಅಲಹಾಬಾದ್‌ ಪಾಡ್‌ಕಾಸ್ಟ್‌ ನಲ್ಲಿ ಮಾತನಾಡಿದ ಇಸ್ರೋ ಅಧ್ಯಕ್ಷರು, ಮಾನವ ಮತ್ತು ಏಲಿಯನ್ಸ್‌ ಮುಖಾಮುಖಿಯಾಗುವ ಸನ್ನಿವೇಶ ಅಪಾಯಕಾರಿ. ಅಂತಹ ಸಂದರ್ಭ ಬಂದರೂ ಆಶ್ಚರ್ಯವಿಲ್ಲ. ಹಾಗಾದಾಗ ನಮ್ಮ […]

ಸೌದಿ ಅರೇಬಿಯಾದ ಮರುಭೂಮಿಯಲ್ಲಿ ಸಿಲುಕಿ ಅನ್ನ, ನೀರಿಲ್ಲದೆ ಭಾರತೀಯ ಸೇರಿ ಇಬ್ಬರು ಮೃತ್ಯು: ಆಘಾತಕಾರಿ ಘಟನೆ ವರದಿ

ಸೌದಿ ಅರೇಬಿಯಾದ ರುಬ್ ಅಲ್ ಖಲಿ ಮರುಭೂಮಿಯಲ್ಲಿ ತೆಲಂಗಾಣ ಮೂಲದ 27 ವರ್ಷದ ಯುವಕ ನಿರ್ಜಲೀಕರಣ ಮತ್ತು ಬಳಲಿಕೆಯಿಂದ ಸಾವನ್ನಪ್ಪಿದ್ದಾನೆ. ಸೌದಿ ಅರೇಬಿಯಾದಲ್ಲಿ ದೂರಸಂಪರ್ಕ ಕಂಪನಿಯೊಂದರಲ್ಲಿ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದ ಕರೀಂನಗರ ನಿವಾಸಿ ಮೊಹಮ್ಮದ್ ಶೆಹಜಾದ್ ಖಾನ್ ಮರುಭೂಮಿಯ ನಿರ್ಜನ ಮತ್ತು ಅಪಾಯಕಾರಿ ಖಾಲಿ ಕ್ವಾರ್ಟರ್ ಭಾಗದಲ್ಲಿ ಸಿಲುಕಿಕೊಂಡಿದ್ದರು. 650 ಕಿಲೋಮೀಟರ್ ಗಿಂತಲೂ ಹೆಚ್ಚು ವ್ಯಾಪಿಸಿರುವ ರುಬ್ ಅಲ್ ಖಲಿ ತನ್ನ ಕಠಿಣ ಪರಿಸ್ಥಿತಿಗಳಿಗೆ ಕುಖ್ಯಾತವಾಗಿದೆ ಮತ್ತು ಸೌದಿ ಅರೇಬಿಯಾದ ದಕ್ಷಿಣ ಪ್ರದೇಶಗಳು ಮತ್ತು ನೆರೆಯ […]