Breaking News :

ವಿಟ್ಲ ಜಮಾಅತ್ ಯೂತ್ ವಿಂಗ್ ವತಿಯಿಂದ ಆ.25ಕ್ಕೆ ಮಜ್ಲಿಸ್‌ನ್ನೂರ್ ಕಾರ್ಯಕ್ರಮ

ವಿಟ್ಲ ಕೇಂದ್ರ ಜುಮಾ ಮಸೀದಿ ಅಧೀನದ ವಿಟ್ಲ ಜಮಾಅತ್ ಯೂತ್ ವಿಂಗ್ ವತಿಯಿಂದ ನಡೆಸಲ್ಪಡುತ್ತಿರುವ ಮಜ್ಲಿಸ್‌ನ್ನೂರ್ ಕಾರ್ಯಕ್ರಮವು 25-8-2024 ನೇ ಆದಿತ್ಯವಾರ ಇಶಾ ನಮಾಝ್ ನ ಬಳಿಕ ಖತೀಬರಾದ ದಾವೂದ್ ಹನೀಫಿಯವರ ನೇತೃತ್ವದಲ್ಲಿ ನಡೆಯಲಿದೆ. ಮಸೀದಿ ಅಧ್ಯಕ್ಷರಾದ ಅಶ್ರಫ್ ಮಹಮ್ಮದ್ ಪೊನ್ನೋಟು ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಸಂಘಟಕರು ವಿನಂತಿ ಮಾಡಿಕೊಂಡಿದ್ದಾರೆ.  

ಕಾರ್ಕಳ: ಬಸ್ಸಿನಿಂದ ಎಸೆಯಲ್ಪಟ್ಟು ಕಾಲೇಜು ವಿದ್ಯಾರ್ಥಿ ಮೃತ್ಯು

ಕಾರ್ಕಳ: ಬಸ್ಸಿನಿಂದ ಎಸೆಯಲ್ಪಟ್ಟು ಕಾಲೇಜ್ ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ಬುಧವಾರ ಬೆಳಗ್ಗೆ ಕಾರ್ಕಳದ ನಿಟ್ಟೆಯಲ್ಲಿ ಸಂಭವಿಸಿದೆ. ಮಾಳ ಗ್ರಾಮದ ಹುಕ್ರಟ್ಟೆಯ ಜನಿತ್‌ ಶೆಟ್ಟಿ (19) ಮೃತ ವಿದ್ಯಾರ್ಥಿಯಾಗಿದ್ದಾನೆ. ಜನಿತ್ ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದು, ಇಂದು ಬೆಳಿಗ್ಗೆ ಕಾರ್ಕಳದಿಂದ ಮಂಗಳೂರಿಗೆ ಹೋಗುವ ಖಾಸಗಿ ಬಸ್ಸಿನಲ್ಲಿ ಕಾಲೇಜಿಗೆ ಹೋಗುತ್ತಿದ್ದ ಸಂದರ್ಭ ಚಲಿಸುತ್ತಿದ್ದ ಬಸ್ಸಿನಿಂದ ಕೆಳಗೆ ಎಸೆಯಲ್ಪಟ್ಟಿದ್ದು ಈ ಸಂದರ್ಭ ಆತನ ಮೈ ಮೇಲೆ ಬಸ್ಸಿನ ಹಿಂಬದಿಯ ಚಕ್ರ ಹರಿದ ಪರಿಣಾಮ ಗಂಭೀರ ಗಾಯಗೊಂಡಿದ್ದ. […]

ಸನ್ನಿವೇಶ ಬಂದರೆ ಯಾವುದೇ ಮುಲಾಜಿ ಇಲ್ಲದೆ ಕುಮಾರಸ್ವಾಮಿಯನ್ನು ಬಂಧಿಸುತ್ತೇವೆ; ಸಿಎಂ ಸಿದ್ದರಾಮಯ್ಯ

ಬಂಧಿಸುವ ಸನ್ನಿವೇಶ ಬಂದರೆ ಯಾವುದೇ ಮುಲಾಜಿ ಇಲ್ಲದೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಅರೆಸ್ಟ್ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕೊಪ್ಪಳದ ಬಸಾಪೂರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಸದ್ಯಕ್ಕೆ ಕುಮಾರಸ್ವಾಮಿಯನ್ನು ಬಂಧಿಸುವ ಸನ್ನಿವೇಶ ಬಂದಿಲ್ಲ. ಕುಮಾರಸ್ವಾಮಿ ಮೇಲೆ ಈಗಾಗಲೇ ಲೋಕಾಯುಕ್ತ ಹಾಗೂ ಎಸಿಬಿ ಸಂಸ್ಥೆಗಳು ತನಿಖೆ ಮಾಡಿವೆ. ಕುಮಾರಸ್ವಾಮಿ ವಿರುದ್ಧ ಸಾಕಷ್ಟು ದಾಖಲೆ ಸಿಕ್ಕಿವೆ. ಈ ಹಿನ್ನೆಲೆ ಲೋಕಾಯುಕ್ತ ಸಂಸ್ಥೆ ಪ್ರಾಸಿಕ್ಯೂಷನ್ ಗೆ ಪರವಾನಗಿ ನೀಡುವಂತೆ ರಾಜ್ಯಪಾಲರನ್ನು ಕೇಳಿದ್ದಾರೆ. ಕುಮಾರಸ್ವಾಮಿಗೆ ಭಯ ಬಂದಿದೆ. […]

ನನ್ನ ತಂದೆಯನ್ನು ಜೈಲಿಗೆ ಕಳಿಸಿ ಎಂದು ಪೊಲೀಸ್ ಠಾಣೆಗೆ ತೆರಳಿ ದೂರು ಕೊಟ್ಟ 5 ವರ್ಷದ ಬಾಲಕ!

5 ವರ್ಷದ ಬಾಲಕನೊಬ್ಬ ತನ್ನ ತಂದೆಯ ವಿರುದ್ಧ ಎಫ್‌ಐಆರ್ ದಾಖಲಿಸಲು ನೇರವಾಗಿ ಪೊಲೀಸ್ ಠಾಣೆಗೆ ತೆರಳಿದ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿದೆ. ತಂದೆ ನದಿಗೆ ಹೋಗದಂತೆ ಮತ್ತು ರಸ್ತೆಯಲ್ಲಿ ಆಟವಾಡದಂತೆ ತಡೆಯುತ್ತಾರೆಂದು ಮುಗ್ಧ ಬಾಲಕ ಪೊಲೀಸ್ ಠಾಣೆಗೆ ತೆರಳಿ ಎಫ್‌ಐಆರ್ ದಾಖಲಿಸುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.     <script async src=”https://pagead2.googlesyndication.com/pagead/js/adsbygoogle.js?client=ca-pub-4685621585864602″ crossorigin=”anonymous”></script> <!– Ads 1 –> <ins class=”adsbygoogle” style=”display:block” data-ad-client=”ca-pub-4685621585864602″ data-ad-slot=”6927469720″ data-ad-format=”auto” data-full-width-responsive=”true”></ins> <script> (adsbygoogle […]

ವಿದಾಯ ಭಾಷಣ: ಅಮೆರಿಕ ಅಧ್ಯಕ್ಷ ಜೋ ಬೈಡನ್ ಭಾವುಕ

ಅಮೆರಿಕಾದ ಅಧ್ಯಕ್ಷ ಜೋ ಬೈಡನ್ ಸೋಮವಾರ ರಾತ್ರಿ ತಮ್ಮ ರಾಜಕೀಯದ ಕೊನೆಯ ಭಾಷಣ ಮಾಡಿದ್ದು ಈ ವೇಳೆ ನೆರೆದಿದ್ದ ಜನಸಮೂಹ ಚಪ್ಪಾಳೆಯ ಸುರಿಮಳೆ ಗೈದಿದ್ದಾರೆ. ಭಾಷಣದ ವೇಳೆ ಬೈಡನ್ ಭಾವುಕರಾದ ಪ್ರಸಂಗವು ನಡೆಯಿತು. ಡೆಮಾಕ್ರಟಿಕ್ ನ್ಯಾಷನಲ್ ಸಮಾವೇಶವನ್ನು ಉದ್ದೇಶಿಸಿ ಭಾಷಣ ಮಾಡಿದ ಜೋ ಬೈಡನ್​ಗೆ ಅಮೆರಿಕಾದ ಜನರು ವಿದಾಯ ಹೇಳಿದರು. ಸಮಾವೇಶದಲ್ಲಿ ನೆರೆದಿದ್ದವರು, ಡೆಮಾಕ್ರಟಿಕ್ ನ್ಯಾಷನಲ್ ಪಕ್ಷದ ಬೆಂಬಲಿಗರು ನಿರಂತರ 4 ನಿಮಿಷಗಳ ಕಾಲ ಎದ್ದು ನಿಂತು ಚಪ್ಪಾಳೆ ತಟ್ಟುವ ಮೂಲಕ ತಮ್ಮ ಅಧ್ಯಕ್ಷನನ್ನು ಬೀಳ್ಕೊಟ್ಟರು. ಕೆಲವೊಂದು […]

ಬಂಟ್ವಾಳ; ನದಿಯಲ್ಲಿ ತೇಲಿಕೊಂಡು ಬಂದ ಮಹಿಳೆಯ ಮೃತದೇಹ!

ಬಂಟ್ವಾಳ:  ಮಹಿಳೆಯೋರ್ವರ ಮೃತದೇಹ ಕೊಳೆತ ಸ್ಥಿತಿಯಲ್ಲಿ  ಶಂಭೂರು ಗ್ರಾಮದಲ್ಲಿರುವ ಎಎಂಆರ್ ಪವರ್ ಡ್ಯಾಮಿನ‌ 6 ನೇ ಗೇಟ್ ಬಳಿ ಸಿಕ್ಕಿದೆ. ಮಹಿಳೆಗೆ ಸುಮಾರು 40-50 ವರ್ಷ ಪ್ರಾಯ ಆಗಿರಬಹುದೆಂದು ಅಂದಾಜಿಸಲಾಗಿದ್ದು, 15 ದಿನಗಳ ಹಿಂದೆ ಈ ಅಪರಿಚಿತ ಮಹಿಳೆ ನೇತ್ರಾವತಿ ನದಿಗೆ ಆಕಸ್ಮಿಕವಾಗಿ ಬಿದ್ದು ಅಥವಾ ನದಿಗೆ ಹಾರಿರುವ ಶಂಕೆ ಇದೆ. ಮೃತದೇಹ ನದಿ ನೀರಿನಲ್ಲಿ ತೇಲಿಕೊಂಡು ಬಂದು ಶಂಭೂರು ಡ್ಯಾಮಿನಲ್ಲಿ ಸಿಕ್ಕಿ ಹಾಕಿಕೊಂಡಿರಬೇಕೆಂದು ಶಂಕಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಟ್ಟದಿಂದ ಉರುಳಿ ಬಂದ ಬೃಹತ್ ಗಾತ್ರದ ಬಂಡೆ; ಕೂದಳೆಲೆ ಅಂತರದಲ್ಲಿ ಪಾರಾದ 20ಕ್ಕೂ ಅಧಿಕ ಜನ

ಮಳೆಯಿಂದಾಗಿ ಬೆಟ್ಟದಿಂದ ಬೃಹತ್‌ ಗಾತ್ರದ ಕಲ್ಲುಬಂಡೆ ಉರುಳಿದ್ದು,‌ ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ಜನರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಾಲೂಕಿನ ಸಂಗಾಪುರದ 2ನೇ ವಾಡರ್ ಗದ್ವಾಲ್ ಏರಿಯಾದ ಸಮೀಪದಲ್ಲಿರುವ ಬೆಟ್ಟದಿಂದ ಬೃಹತ್ ಗಾತ್ರದ ಕಲ್ಲು ಬಂಡೆಯೊಂದು ಉರುಳಿದೆ.  ಐದಾರು ಮನೆಗಳಿಗೆ ಹಾನಿಯಾಗುವುದು ಕೂದಲೆಳೆಯ ಅಂತರದಿಂದ ತಪ್ಪಿ ಹೋಗಿದೆ. ಉರುಳಿ ಬಂದ ಬಂಡೆ ಕುಡಿಯುವ ನೀರಿಗಾಗಿ ಹಾಕಲಾಗಿದ್ದ ನಾಲ್ಕು ಇಂಚು ಗಾತ್ರದ ಕಬ್ಬಿಣದ ಪೈಪ್ ನಿಂದಾಗಿ ನಿಂತುಕೊಂಡಿದೆ. ಇದರಿಂದ ನಾಲ್ಕೈದು ಮನೆಯಲ್ಲಿ ವಾಸವಿದ್ದ ಸುಮಾರು 20ಕ್ಕೂ ಹೆಚ್ಚು ಜನರ […]

ಕಾಲೇಜು ಹಾಸ್ಟೆಲ್​​ನಲ್ಲಿ ವಿದ್ಯಾರ್ಥಿನಿ ಸಾವು ಪ್ರಕರಣಕ್ಕೆ ಟ್ವಿಸ್ಟ್; ಕಾಲೇಜು ಆಡಳಿತ ಮಂಡಳಿ ವಿರುದ್ಧ ಗಂಭೀರ ಆರೋಪ ಮಾಡಿದ ಕುಟುಂಬ

ಮೈಸೂರಿನ ಹೂಟಗಳ್ಳಿಯಲ್ಲಿ ಕಾಲೇಜು ಹಾಸ್ಟೆಲ್​​ನಲ್ಲಿ ಅನಾರೋಗ್ಯದಿಂದ ವಿದ್ಯಾರ್ಥಿನಿ ಮೃತಪಟ್ಟಿರುವ ಪ್ರಕರಣ ಇದೀಗ ವಿಭಿನ್ನ ತಿರುವು ಪಡೆದುಕೊಂಡಿದೆ. ಮಗಳ ಸಾವಿಗೆ ಕಾಲೇಜು ಆಡಳಿತ ಮಂಡಳಿಯೇ ಕಾರಣವೆಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲದ ಜಯಪ್ರಾರ್ಥನಾ (17) ಮೃತ ವಿದ್ಯಾರ್ಥಿನಿ. ಜಯಪ್ರಾರ್ಥನಾ ಪಿಯು ಕಾಲೇಜಿನಲ್ಲಿ ದ್ವಿತೀಯ ವರ್ಷ ವ್ಯಾಸಂಗ ಮಾಡುತಿದ್ದರು. ಊಟದ ಬಳಿಕ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ವಿಚಾರ ತಿಳಿದು ಖಾಸಗಿ ಆಸ್ಪತ್ರೆಯಲ್ಲಿ ಆಡಳಿತ ಮಂಡಳಿ ಚಿಕಿತ್ಸೆ ಕೊಡಿಸಿತ್ತು. ಆದರೆ ಅನಾರೋಗ್ಯದ ವಿಚಾರವನ್ನು ಪೋಷಕರ ಗಮನಕ್ಕೆ ತರದೇ […]

ರಕ್ಷಿತ್ ಶಿವರಾಂ ವಿರುದ್ಧ ಬೆಳ್ತಂಗಡಿ ಠಾಣೆಗೆ ದೂರು

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಂ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಬಿಜೆಪಿ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದೆ. ಆ.19ರಂದು ಬೆಳ್ತಂಗಡಿ ಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರತಿಭಟನೆಯಲ್ಲಿ ಪ್ರಧಾನಿ ಯವರೇ ಒಂದು ವಿಚಾರ ವನ್ನು ತಿಳಿದುಕೊಳ್ಳಿ, ಬಾಂಗ್ಲಾ ದೇಶದಲ್ಲಿ ಹಾಸಿಗೆ ದಿಂಬು ಹಿಡ್ಕೊಂಡು ಹೋದ್ರಲ್ಲ ಆ ಪ್ರಸಂಗ ನಿಮಗೂ ಕೂಡ ಅತೀ ಶೀಘ್ರದಲ್ಲಿ ಬರಲಿದೆ ಎಚ್ಚರವಾಗಿರಿ ಎಂದು ದೇಶದಲ್ಲಿ ಅರಾಜಕತೆ ಸೃಷ್ಟಿಸುವ ರಾಷ್ಟ್ರ ವಿರೋಧಿ […]

ಕೃತ್ಯಕ್ಕೆ ಮೊದಲು ಎರಡು ವೇಶ್ಯಾಗೃಹಗಳಿಗೆ ತೆರಳಿದ್ದ!; ಕಲ್ಕತ್ತಾ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣದ ತನಿಖೆಯ ವೇಳೆ ಮತ್ತಷ್ಟು ಮಾಹಿತಿ ಬಯಲು

ನಗರದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಬರ್ಬರ ಅತ್ಯಾಚಾರ ಹಾಗೂ ಕೊಲೆ ಪ್ರಕರಕ್ಕೆ ಸಂಬಂಧಿಸಿ ಮಹತ್ವದ ಮಾಹಿತಿಯೊಂದು ಬಯಲಾಗಿದ್ದು, ಕೃತ್ಯಕ್ಕೆ ಮೊದಲು ಕಾಮುಕ ಹಿಂದಿನ ದಿನ ರಾತ್ರಿ ನಗರದ ಎರಡು ವೇಶ್ಯಾಗೃಹಗಳಿಗೆ ಭೇಟಿ ನೀಡಿದ್ದ ಎನ್ನುವುದು ಬಯಲಾಗಿದೆ ಆರೋಪಿ ಸಂಜಯ್ ರಾಯ್ ಆಗಸ್ಟ್ 8ರ ರಾತ್ರಿ ಕೋಲ್ಕತಾದ ಸೋನಾಗಚಿ ರೆಡ್ ಲೈಟ್ ಏರಿಯಾದಲ್ಲಿದ್ದ. ಅಲ್ಲಿ ಆತ ಮದ್ಯ ಸೇವಿಸಿ ಎರಡು ವೇಶ್ಯಾಗೃಹಗಳಿಗೆ ಭೇಟಿ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಜೂನಿಯರ್ ಡಾಕ್ಟರ್ ಮಲಗಿದ್ದ ಆರ್‌ಜಿ ಕರ್ […]