Breaking News :

ರಾಯಚೂರು: ದರ್ಗಾವೊಂದರಲ್ಲಿ ಕಂಡು ಬಂದ ಅಚ್ಚರಿಯ ಬೆಳವಣಿಗೆ; ಮೂಕ ವಿಸ್ಮಿತರಾದ ಜನ

ರಾಯಚೂರು: ದರ್ಗಾದಲ್ಲಿ ಅಚ್ವರಿಯ ಬೆಳವಣಿಗೆ ನಡೆದಿರುವ ಘಟನೆ  ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲೂಕಿನ ಆನಾಹೊಸೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶರಣರ ಬಾವಿ ದರ್ಗಾ ಶರೀಫ್‌ನಲ್ಲಿರುವ 3 ಮಜಾರಗಳು ಉಸಿರಾಡುತ್ತಿವೆ. ನೂರಾರು ವರ್ಷಗಳ ಧರ್ಮ ಗುರುಗಳ ಗೋರಿ ಉಸಿರಾಟ ಕುತೂಹಲ ಮೂಡಿಸಿದೆ. ಪ್ರತೀ ವರ್ಷ ಹಜರತ್ ಸೈಯದ್ ಶಾ ನಸರುದ್ದೀನ್ ನಬಿರಾ ಖಾದ್ರಿ ಉರುಸ್ ವೇಳೆಯೇ ಗೋರಿಗಳು ಉಸಿರಾಡುತ್ತವೆ ಎಂದು ಸ್ಥಳೀಯರು ಹೇಳುತ್ತಾರೆ. ಉರುಸ್‌ನ 40 ದಿನಗಳ ಕಾಲ ಮಾತ್ರ ಗೋರಿಗಳು ಉಸಿರಾಡುತ್ತವೆಯಂತೆ. ಗೋರಿಯ ಉಸಿರಾಟದಿಂದ ಹೂಗಳು ಪುಟಿಯುತ್ತವೆ. […]

ಪುತ್ತೂರು ಇರಿತ ಪ್ರಕರಣ; ಶಿಕ್ಷಕಿ ವಿರುದ್ಧ ಗಂಭೀರ ಆರೋಪ ಮಾಡಿದ ಸಂತ್ರಸ್ತ ಬಾಲಕಿ

ಪುತ್ತೂರಿನ ಕೊಂಬೆಟ್ಟು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬಾಲಕಿಯ ಕೈಗೆ ಇರಿತ ಪ್ರಕರಣಕ್ಕೆ ಸಂಬಂಧಿಸಿ ಶಿಕ್ಷಕಿ ವಿರುದ್ಧ  ಸಂತ್ರಸ್ತ ವಿದ್ಯಾರ್ಥಿನಿ ಗಂಭೀರವಾದ ಆರೋಪವನ್ನು ಮಾಡಿದ್ದಾರೆ. ಈ ಕುರಿತು ಬಾಲಕಿಯ ಹೇಳಿಕೆಯ ವಿಡಿಯೋ ವೈರಲ್ ಆಗಿದೆ. ಆಸ್ಪತ್ರೆಯಲ್ಲಿ ಹೆಸರು ಬದಲಾಯಿಸಿ ಹೇಳುವಂತೆ ಹಾಗೂ ಕೈಗೆ ಗಾಜು ತಾಗಿ ಗಾಯವಾಗಿದೆ ಎಂದು ಹೇಳಲು ಶಿಕ್ಷಕಿ ಒತ್ತಡ ಹೇರಿದ್ದಾರೆ ಎಂದು ಬಾಲಕಿಯು  ಗಂಭೀರವಾದ ಆರೋಪ ಮಾಡಿದ್ದಾಳೆ. ಈ ಹಿನ್ನೆಲೆ ಶಿಕ್ಷಕಿ ವಿರುದ್ಧ ಕ್ರಮವನ್ನು ಕೈಗೊಳ್ಳುವಂತೆ ವ್ಯಾಪಕವಾದ ಆಗ್ರಹ ವ್ಯಕ್ತವಾಗಿದೆ. ಇದರ ಬೆನ್ನಲ್ಲಿ […]

ಪುತ್ತೂರು; ವಿದ್ಯಾರ್ಥಿನಿಗೆ ಇರಿತ ಪ್ರಕರಣ; ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಪುತ್ತೂರು; ಕೊಂಬೆಟ್ಟು ಕಾಲೇಜು ವಿದ್ಯಾರ್ಥಿನಿಗೆ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ಆರೋಪಿ ವಿದ್ಯಾರ್ಥಿಯ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ  ಪೋಕ್ಸೋ ಪ್ರಕರಣ ದಾಖಲಾಗಿದೆ. ಸಂತ್ರಸ್ತೆ ವಿದ್ಯಾರ್ಥಿನಿ ಕಾಲೇಜಿಗೆ ಹೋಗುವಾಗ ಬಂದ ಪರಿಚಯಸ್ಥ  ವಿದ್ಯಾರ್ಥಿ ಆಕೆಗೆ ಪ್ರೇಮ ನಿವೇದನೆ ಮಾಡಿದ್ದಾನೆ. ಇದನ್ನು ನಿರಾಕರಿಸಿದಾಗ ಬಾಲಕಿಗೆ ಆತನ ಕೈಯ್ಯಲ್ಲಿದ್ದ ಹರಿತವಾದ ಆಯುಧದಿಂದ ಇರಿದು ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.  

ಉಡುಪಿ; ಕಾಲೇಜು ಪಕ್ಕದ ಬಾವಿಯಲ್ಲಿ ಪಿಯುಸಿ ವಿದ್ಯಾರ್ಥಿಯ ಮೃತದೇಹ ಪತ್ತೆ

ಕ್ಷುಲ್ಲಕ ಕಾರಣಕ್ಕೆ ಮನೆಬಿಟ್ಟು ಹೋಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಬಾವಿಯೊಂದರಲ್ಲಿ ಪತ್ತೆಯಾದ ಘಟನೆ ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ನಡೆದಿದೆ. ಹಿರಿಯಡಕ ಅಂಜಾರು ಪೊಲೀಸ್ ಠಾಣೆಯ ಕ್ವಾಟ್ರಸ್ ಬಳಿಯ ನಿವಾಸಿ ಪ್ರಥಮೇಶ್ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಹಿರಿಯಡಕ ಪ್ರಥಮ ದರ್ಜೆ ಕಾಲೇಜಿನ ಹಿಂಬದಿಯ ಬಾವಿಯಲ್ಲಿ ಮೃತ ವಿದ್ಯಾರ್ಥಿ ಶವ ಸಿಕ್ಕಿದೆ. ಪ್ರಥಮೇಶ್ ಹಿರಿಯಡಕ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಸೋಮವಾರ ಮೊಬೈಲ್ ಕೊಡದಿದ್ದಕ್ಕೆ ಜಗಳವಾಡಿ ಆತ ಮನೆಬಿಟ್ಟು ಹೋಗಿದ್ದನು. ಬಳಿಕ ಮನೆಯವರು ಹಾಗೂ […]

ಪುತ್ತೂರು; ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ

ಪುತ್ತೂರು: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆಲ್ಲೂರಿನಲ್ಲಿ ನಡೆದಿದೆ. ಕೆಯ್ಯೂರು ಉದ್ಯೋಳೆ ನಿವಾಸಿ ಸಚಿನ್ (27) ಆತ್ಮಹತ್ಯೆ ಮಾಡಿಕೊಂಡ ಯುವಕ. ಸಚಿನ್‌ ಫಿಲೋಮಿನಾ ಕಾಲೇಜಿನಲ್ಲಿ ಬಿಸಿಎ ವಿದ್ಯಾಭ್ಯಾಸ ಮುಗಿಸಿದ್ದು, ಕೆಲಸದ ಹುಡುಕಾಟದಲ್ಲಿದ್ದರು ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಚಿ; ಬೀದಿ ದೀಪಗಳನ್ನು ಸರಿಪಡಿಸಲು Sdpiಯಿಂದ ಮನವಿ

ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಮಂಚಿ ಕಟ್ಟೆ ಜಂಕ್ಷನ್ ಕುಕ್ಕಾಜೆ ಜಂಕ್ಷನ್ ಹಾಗೂ ನೂಜಿ ಮುಂತಾದ ಕಡೆ ಹಾಕಿದ ಹೈಮಾಸ್ ಲೈಟ್ ಸರಿಪಡಿಸಲು SDPI ಮಂಚಿ ಹಾಗೂ ಕುಕ್ಕಾಜೆ ಬೂತ್ ಸಮಿತಿ ವತಿಯಿಂದ ಮಂಚಿ ಗ್ರಾಮದ ಅಭಿವೃದ್ಧಿ ಅಧಿಕಾರಿಗೆ ಮನವಿ ಸಲ್ಲಿಸಲಾಗಿದೆ. ಇದಲ್ಲದೆ ಗ್ರಾಮದ ಹಲವಾರು ಸಮಸ್ಯೆಗಳ ಬಗ್ಗೆ ಮಂಚಿ ಗ್ರಾಮ ಪಂಚಾಯತ್ ಅಧ್ಯಕ್ಷ GM ಇಬ್ರಾಹಿಂರವರಲ್ಲಿ ಚರ್ಚೆ ನಡೆಸಲಾಗಿದೆ. ಈ ಸಂದರ್ಭದಲ್ಲಿ SDPI ಕುಕ್ಕಾಜೆ ಬೂತ್ ಅಧ್ಯಕ್ಷ ಫೈಝಲ್ ಮಂಚಿ ಹಾಗೂ SDPI ಮಂಚಿ ಬೂತ್ […]

ಬೆಳ್ತಂಗಡಿ; ಮಾರಕಾಸ್ತ್ರದಿಂದ ಕೊಚ್ಚಿ ನಿವೃತ ಶಿಕ್ಷಕನ ಬರ್ಬರ ಹತ್ಯೆ

ನಿವೃತ್ತ ಶಿಕ್ಷಕರೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಗೈದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದಲ್ಲಿ ಘಟನೆ ನಡೆದಿದ್ದು, ಮಾರಕಸ್ತ್ರಗಳಿಂದ ಕೊಚ್ಚಿ ಶಿಕ್ಷಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮನೆ ಆವರಣದಲ್ಲಿ ಎಸ್ ಪಿ ಬಾಲಕೃಷ್ಣ ಭಟ್ (73) ಅವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಉಡುಪಿ; ಮೆಹಂದಿ ಕಾರ್ಯಕ್ರಮದ ದಿನ ಮದುಮಗ ನಾಪತ್ತೆ

ಮೆಹಂದಿ ಕಾರ್ಯಕ್ರಮದಂದೇ ಮದುಮಗ ನಿಗೂಢವಾಗಿ ನಾಪತ್ತೆಯಾದ ಘಟನೆ ಕುಂದಾಪುರದ ಅಳಿವೆಕೋಡಿ ಗ್ರಾಮದಲ್ಲಿ ನಡೆದಿದೆ. ಆ.19ರ ಸೋಮವಾರ ತಾಳಿ ಕಟ್ಟಲು ಸಿದ್ಧವಾಗಬೇಕಾಗಿದ್ದ ವರ, ಮದುವೆಯ ಮುಂಚಿನ ದಿನ ಇದ್ದಕ್ಕಿದಂತೆ ನಾಪತ್ತೆಯಾಗಿದ್ದಾನೆ. ಮದುವೆ ಹಿಂದಿನ ದಿನ ನಡೆಯಬೇಕಿದ್ದ ಮೆಹಂದಿ ಕಾರ್ಯಕ್ರಮದಂದೇ ಮದುಮಗ ಕಣ್ಮರೆಯಾಗಿದ್ದು, ಮನೆಯವರು ಶಾಕ್ ಗೆ ಒಳಗಾಗಿದ್ದಾರೆ. ಹುಡುಗ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡಿದ್ದಾನೆ. ಎರಡು ಕಡೆಯ ಮನೆಯವರು ಸೇರಿ ಮದುವೆ ನಿಶ್ಚಯಿಸಿದ್ದರು. ಅಳಿವೆಕೋಡಿ ಗ್ರಾಮದ ವರನೊಂದಿಗೆ ಉಪ್ಪುಂದ ಗ್ರಾಮದ ಯುವತಿಯ ಮದುವೆ ಸೋಮವಾರ ನಾಗೂರಿನಲ್ಲಿ ನಡೆಯಬೇಕಾಗಿತ್ತು. ಆ.18 […]

ಪುತ್ತೂರು; ಕೊಂಬೆಟ್ಟು ಶಾಲೆಯಲ್ಲಿ ವಿದ್ಯಾರ್ಥಿನಿಗೆ ಚೂರಿ ಇರಿತ; ಸುಳ್ಳು ಹೇಳಿ ಪ್ರಾಂಶುಪಾಲರಿಂದ ಪ್ರಕರಣ ಮುಚ್ಚಿ ಹಾಕಲು ಯತ್ನ; ಆರೋಪ

ಪುತ್ತೂರು; ಕೊಂಬೆಟ್ಟು ಶಾಲೆಯಲ್ಲಿ ವಿದ್ಯಾರ್ಥಿನಿಗೆ ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದ ಘಟನೆ ನಡೆದಿದೆ. ವಿದ್ಯಾರ್ಥಿನಿಯ ಕೈಯಿಂದ ರಕ್ತ ಸೋರುವುದನ್ನು ಗಮನಿಸಿದ ಪ್ರಾಂಶುಪಾಲರು ಪ್ರಥಮ ಚಿಕಿತ್ಸೆ ನೀಡಿ ಕೈಗೆ ಗ್ಲಾಸ್ ಬಿದ್ದಿದೆ ಎಂದು ಸುಳ್ಳು ಹೇಳಿ ಕಳುಹಿಸಿದ್ದಾರೆ. ಇದೀಗ ನೈಜ ಘಟನೆ ಬಯಲಾಗುತ್ತಿದ್ದಂತೆ ಪ್ರಾಂಶುಪಾಲರ ವಿರುದ್ಧ ವ್ಯಾಪಕ ಆಕ್ರೋಶ ಕೇಳಿ ಬಂದಿದೆ. ಚೂರಿ ಇರಿತಕ್ಕೊಳಗಾದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ತೆರಳಿದ ಪೊಲೀಸರು ಸಿಸಿಟಿವಿ ಪರಿಶೀಲಿಸಿ ಚೂರಿಯಿಂದ ಇರಿದ ವಿದ್ಯಾರ್ಥಿಯನ್ನು ವಶಕ್ಕೆ ಪಡೆದಿದ್ದಾರೆ.  

ಮಂಚಿ-ಕೈಯ್ಯೂರ್ ರಸ್ತೆ ಸರಿಪಡಿಸಲು SDPIಯಿಂದ ಮನವಿ ಸಲ್ಲಿಕೆ

SDPI ಮಂಚಿ ಬೂತ್ ಸಮಿತಿ ವತಿಯಿಂದ ಹಲವಾರು ವರ್ಷಗಳಿಂದ ಹದಗೆಟ್ಟ ರಸ್ತೆ ಸರಿಪಡಿಸಲು ಮಂಚಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಮನವಿ ಸಲ್ಲಿಸಿ ಚರ್ಚೆ ನಡೆಸಲಾಗಿದೆ. ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಕೈಯ್ಯುರು ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ ಇದರ ಬಗ್ಗೆ ಊರಿನ ನಾಗರಿಕರು ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ದಿನಗಳಿಂದ ಆಕ್ರೋಶ ವ್ಯಕ್ತಪಡಿಸಿದ್ದರು.  ಇತ್ತೀಚೆಗೆ ನಡೆದ ಗ್ರಾಮ ಸಭೆಯಲ್ಲಿ ಕೈಯ್ಯುರಿನ ಯುವಕರು ಈ ಬಗ್ಗೆ ಪ್ರಸ್ತಾಪ ಮಾಡಿದ್ದರು. ರಸ್ತೆ ವಿಚಾರವಾಗಿ ಮಂಚಿ ಗ್ರಾಮ ಪಂಚಾಯತ್ ಅಧ್ಯಕ್ಷ GM […]