ಮಂಗಳೂರು: ಪುಟ್ಬಾಲ್ ಆಟದ ವಿಚಾರದಲ್ಲಿ ಕಿಡ್ನಾಪ್ ಮಾಡಿ ವಿದ್ಯಾರ್ಥಿಗಳ ಮೇಲೆ ಹಲ್ಲೆ

ಮಂಗಳೂರು: ಫುಟ್ಬಾಲ್ ಆಟದ ವೇಳೆ ವಿದ್ಯಾರ್ಥಿಗಳ ನಡುವೆ ಜಗಳ ನಡೆದು, ಕಿಡ್ನ್ಯಾಪ್ ಮಾಡಿ ಹಲ್ಲೆ ನಡೆಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಎರಡು ಕಾಲೇಜಿನ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ಮಂಗಳೂರಿನ ಯೆನಪೊಯ ಮತ್ತು ಅಲೋಶಿಯಸ್ ಕಾಲೇಜು ವಿದ್ಯಾರ್ಥಿಗಳ ನಡುವೆ ಜಗಳ ನಡೆದಿದೆ. ಘಟನೆಯಲ್ಲಿ ಮಹಮ್ಮದ್ ಶುರೈ, ಮಹಮ್ಮದ್ ಅಫ್ರಾನ್, ಇಬ್ರಾಹಿಂ ಖಲೀಲ್ ಮತ್ತು ಮಹಮ್ಮದ್ ಜನ್ಮದ್ ಎಂಬ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡಿದ ದಿಯಾನ್, ಅನ್ನೈ, ತಸ್ಮಿನ್, ಸಲ್ಮಾನ್, ಅನಾಸ್ ಎಂಬ ವಿದ್ಯಾರ್ಥಿಗಳನ್ನು ಪೊಲೀಸರು […]
ಬಂಟ್ವಾಳ; ಡೆತ್ ನೋಟು ಬರೆದಿಟ್ಟು ಶಾಲಾ ಬಾಲಕ ಆತ್ಮಹತ್ಯೆ

ಬಂಟ್ವಾಳ; ಕೆರೆಗೆ ಹಾರಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿನಾಲ್ಕೂರು ಗ್ರಾಮದ ಮಾವಿನಕಟ್ಟೆಯ ಕೋಕಲ ಎಂಬಲ್ಲಿ ನಡೆದಿದೆ. ಸಾಯಿಶಾಂತಿ ಎಂಬವರ ಪುತ್ರ ಸುಶಾಂತ್ ಆತ್ಮಹತ್ಯೆ ಮಾಡಿಕೊಂಡ ಬಾಲಕ. ಮುಂಜಾನೆ 5 ಗಂಟೆ ಹೊತ್ತಿಗೆ ಕೆರೆ ಬಳಿ ತೆರಳಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆತ್ಮಹತ್ಯೆಗೆ ಮುನ್ನ ಬಾಲಕ ಡೆತ್ ನೋಟು ಬರೆದಿಟ್ಟಿದ್ದಾನೆ ಎನ್ನಲಾಗಿದ್ದು, ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಟೀ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕನಿಗೆ ಬೆದರಿಸಿ ಲಿಂಗ ಪರಿವರ್ತನೆ? ಮಂಗಳ ಮುಖಿಯರ ವಿರುದ್ಧ ಗಂಭೀರ ಆರೋಪ

ಸಿಲಿಕಾನ್ ಸಿಟಿಯಲ್ಲಿ ಮಂಗಳಮುಖಿಯರು ಟೀ ಅಂಗಡಿಯಲ್ಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದ ಯುವಕನನ್ನು ಲಿಂಗ ಪರಿವರ್ತನೆ ಮಾಡಿ ಭಿಕ್ಷಾಟನೆಗೆ ಒತ್ತಾಯಿಸಿದ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಫ್ರೇಜರ್ ಟೌನ್ ನಲ್ಲಿ ಚಿತ್ರಾ, ಪ್ರೀತಿ, ಕಾಜಲ್, ಅಶ್ವಿನಿ, ಮುಗಿಲಿ ಎನ್ನುವ ಐದು ಮಂದಿ ವಿರುದ್ಧ ಕಸೀಪಾ ಅಲಿಯಾಸ್ ಮೊಹಮ್ಮದ್ ಅಬೂಬಕ್ಕರ್ ಸೇಠ್ ಪುಲಿಕೇಶಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಏನಿದೆ? ನಾನು ಮೂರು ವರ್ಷಗಳ ಹಿಂದೆ ಅಂಬೇಡ್ಕರ್ ಕಾಲೇಜ್ ಬಳಿ ಬರ್ಕತ್ ಎಂಬುವವರ ಟೀ ಅಂಗಡಿಯಲ್ಲಿ […]
ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು

ವಿದ್ಯುತ್ ಶಾಕ್ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಮಂಜೇಶ್ವರದ ಹೊಸ ಬೆಟ್ಟು ಎಂಬಲ್ಲಿ ನಡೆದಿದೆ. ಮೃತರನ್ನು ಯಶವಂತ(21) ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಮನೆಯ ಟೆರೇಸ್ ನಲ್ಲಿ ಬಿದ್ದಿದ್ದ ತೆಂಗಿನ ಗರಿಯನ್ನು ತೆಗೆಯಲು ತೆರಳಿದ್ದಾಗ ಅಲ್ಲೇ ಹತ್ತಿರದಲ್ಲಿ ಹಾದು ಹೋಗಿದ್ದ ಹೈಟೆನ್ಶನ್ ವಿದ್ಯುತ್ ತಂತಿಗೆ ತಗುಲಿದ್ದು, ಯಶವಂತ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟಿದ್ದಾರೆ. ಬಹಳ ಹೊತ್ತು ಕಳೆದರೂ ಯಶವಂತ ಕೆಳಗೆ ಬಾರದ ಕಾರಣ ಅವರ ಸಹೋದರಿ ಟೆರೇಸ್ ಗೆ ಮೇಲೇರಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ […]
ಪುತ್ತೂರು; ದ್ವಿಚಕ್ರ ವಾಹನ ಸವಾರನ ಮೇಲೆ ಕಾಡು ಹಂದಿ ದಾಳಿ

ಪುತ್ತೂರು: ದ್ವಿಚಕ್ರ ವಾಹನ ಸವಾರನೋರ್ವನ ಮೇಲೆ ಕಾಡು ಹಂದಿಯೊಂದು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪ ನಡೆದಿದೆ. ಸ್ಥಳೀಯ ನಿವಾಸಿ ಧನುಷ್(30) ಗಾಯಗೊಂಡವರು. ಕುಂಬ್ರ ಪೆಟ್ರೋಲ್ ಬಂಕ್ ನಲ್ಲಿ ಮ್ಯಾನೇಜರ್ ಆಗಿರುವ ಧನುಷ್ ಎಂದಿನಂತೆ ಇಂದು ಬೆಳಗ್ಗೆ ಸ್ಕೂಟರ್ ನಲ್ಲಿ ಪೆಟ್ರೋಲ್ ಬಂಕ್ ಗೆ ತೆರಳುತ್ತಿದ್ದಾಗ ಕುರುಂಜ ಮಣ್ಣಾಪು ಬಳಿ ಏಕಾಏಕಿ ಕಾಡು ಹಂದಿಯೊಂದು ಧನುಷ್ ಚಲಾಯಿಸುತ್ತಿದ್ದ ಸ್ಕೂಟರ್ ಮೇಲೆ ದಾಳಿ ನಡೆಸಿದೆ. ಈ ವೇಳೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಧನುಷ್ […]
ಮೂಡಾ ಹಗರಣ; ಸಿದ್ದರಾಮಯ್ಯ ವಿರುದ್ಧದ ಆರೋಪದ ಬಗ್ಗೆ ಸಹೋದರ ಹೇಳಿದ್ದೇನು ಗೊತ್ತಾ?

ಮೂಡಾ ಹಗರಣಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ವಿರುದ್ಧದ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಸಹೋದರ ಸಿದ್ದೇಗೌಡ, ನಮ್ಮಣ್ಣ ಯಾವ ತಪ್ಪೂ ಮಾಡಿಲ್ಲ. ಅವರು ರಾಜೀನಾಮೆ ಕೊಡುವುದೂ ಇಲ್ಲ. ಅವನು ಯಾವದಕ್ಕೂ ಜಗ್ಗಲ್ಲ ಎಂದು ಹೇಳಿದ್ದಾರೆ. ಮುಡಾ ಹಗರಣ ಸಂಬಂಧ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದೇಗೌಡ, ಬಿಜೆಪಿ-ಜೆಡಿಎಸ್‌ನವರ ಕೈವಾಡದಿಂದ ರಾಜ್ಯಪಾಲರು ಹೀಗೆ ಮಾಡ್ತಿದ್ದಾರೆ. ಎಚ್.ಡಿ. ಕುಮಾರಸ್ವಾಮಿ ಹೇಳಿದಂತೆ ಕುಣಿಯುತ್ತಿದ್ದಾರೆ ಎಂದು ಹೇಳಿದ್ದಾರೆ. ಅಷ್ಟು ಸುಲಭದಲ್ಲಿ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ. […]
ಸಹಪಾಠಿಯಿಂದ ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ಮೃತ್ಯು

ಸಹಪಾಠಿಯಿಂದ ಇರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿ ಸೋಮವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಉದಯಪುರ ಜಿಲ್ಲೆಯಲ್ಲಿ ನಡೆದಿದೆ. ಮೃತ ಬಾಲಕನನ್ನು ದೇವರಾಜ್ (15) ಎಂದು ಗುರುತಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಗಸ್ಟ್ 16ರಂದು ಶಾಲೆಯಲ್ಲಿ ಮಧ್ಯಾಹ್ನ ಊಟಕ್ಕೆ ಬಿಟ್ಟಿದ್ದ ಸಮಯದಲ್ಲಿ ಬಾಲಕರಿಬ್ಬರ ನಡುವೆ ಗಲಾಟೆಯಾಗಿದ್ದು, ಈ ವೇಳೆ ಸಹಪಾಠಿ ವಿದ್ಯಾರ್ಥಿ ದೇವರಾಜ್ ಗೆ ಚಾಕುವಿನಿಂದ ತೊಡೆ ಭಾಗಕ್ಕೆ ಇರಿದಿದ್ದ. ಗಂಭಿರವಾಗಿ ಗಾಯಗೊಂಡಿದ್ದ ಬಾಲಕನನ್ನು […]
ಉಪ್ಪಿನಂಗಡಿ; ಮೊಬೈಲ್ ಕಸಿದುಕೊಂಡ ತಾಯಿ, ಮನನೊಂದು ಆತ್ಮಹತ್ಯೆ ಮಾಡಿಕೊಂಡ ಬಾಲಕಿ

ಉಪ್ಪಿನಂಗಡಿ: 14ರ ಹರೆಯದ ಬಾಲಕಿ ತಾಯಿಯ ಮೇಲೆ ಮುನಿಸಿಕೊಂಡು ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ರಾತ್ರಿ ಸಂಭವಿಸಿದೆ. ಕರಾಯ ಗ್ರಾಮದ ಕೊಂಬೆಟ್ಟಿ ಮಾರು ಎಂಬಲ್ಲಿ ಕೃಷಿ ಕೂಲಿ ಕಾರ್ಮಿಕರಾಗಿ ಆಗಮಿಸಿದ್ದ ಜಾರ್ಖಂಡ್ ಮೂಲದ ಕುಟುಂಬದ ಬಾಲಕಿ ನೀಲಮ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಜಾರ್ಖಂಡ್ ನ ಸರ್ಜು ಬುಯ್ಯಾನ್ ಪತ್ನಿ, ಮಗಳೊಂದಿಗೆ ವಾರದ ಹಿಂದೆ ಕರಾಯ ಗ್ರಾಮದ ಕೊಂಬೆಟ್ಟಿ ಮಾರು ಜಗದೀಶ್ ಸರಳಾಯ ಅವರ ತೋಟದ ಕೆಲಸಕ್ಕೆ ಆಗಮಿಸಿದ್ದರು. ರವಿವಾರ ರಾತ್ರಿ 7.30ರ ಸುಮಾರಿಗೆ ತೋಟದ ಮಾಲಕರು […]
ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಕೊಲೆ ಪ್ರಕರಣ; ಮರಣೋತ್ತರ ಪರೀಕ್ಷೆಯಲ್ಲಿ ಹಲವು ಶಾಕಿಂಗ್ ಅಂಶಗಳು ಉಲ್ಲೇಖ

ದೇಶದಾದ್ಯಂತ ಭಾರೀ ಸದ್ದು ಮಾಡಿದ್ದ ಕೋಲ್ಕತ್ತಾದಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಮಹತ್ವದ ಮಾಹಿತಿ ಲಭ್ಯವಾಗಿದೆ. ಕೋಲ್ಕತ್ತದ ಆರ್ಜಿ ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಟ್ರೈನಿ ವೈದ್ಯೆಯ ದೇಹದಲ್ಲಿ ತುಂಬಾ ಗಾಯಳಾಗಿದ್ದು, ಅವೆಲ್ಲವೂ ಆಕೆ ಸಾಯುವ ಮೊದಲೇ ಆಗಿದೆ ಎಂದು ಮರಣೋತ್ತರ ಪರೀಕ್ಷೆ ವರದಿ ಉಲ್ಲೇಖಿಸಿ ಇಂಡಿಯಾ ಟುಡೇ ವರದಿ ಮಾಡಿದೆ. ಮರಣೋತ್ತರ ಪರೀಕ್ಷೆ ವರದಿಯಲ್ಲಿ ಸಂತ್ರಸ್ತೆಯ ಗುಪ್ತಾಂಗ, ತೋಳು, ಕುತ್ತಿಗೆ, ಮುಖ ಮತ್ತು ತಲೆಯಲ್ಲಿ ಸುಮಾರು 14ಕ್ಕೂ ಹೆಚ್ಚು […]
ಬೆಳ್ತಂಗಡಿ; ನದಿಯಲ್ಲಿ ದಿಡೀರ್ ಹರಿದು ಬಂದ ಮಣ್ಣು ಮಿಶ್ರಿತ ನೀರು, ಆತಂಕಗೊಂಡ ಜನ

ಸೋಮವಾರ ಸಂಜೆ ಬೆಳ್ತಂಗಡಿ ತಾಲೂಕಿನ ಹಲವೆಡೆ ನದಿಯಲ್ಲಿ ಏಕಾಏಕಿ ಮಣ್ಣುಮಿಶ್ರಿತ ನೀರಿನ ಪ್ರವಾಹ ಬಂದಿದ್ದು ಜನರು ಆತಂಕಕ್ಕೆ ಒಳಗಾಗಿದ್ದರು. ಒಂದು ವಾರದಿಂದ ಮಳೆ ಕಡಿಮೆಯಾಗಿ ಶಾಂತವಾಗಿದ್ದ ನೇತ್ರಾವತಿ ಮತ್ತು ಮೃತ್ಯುಂಜಯ ನದಿಗಳಲ್ಲಿ ಪ್ರವಾಹದ ಪರಿಸ್ಥಿತಿ ಸೋಮವಾರ ಸಂಜೆ ಕಂಡುಬಂದಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಸೋಮವಾರ ಮಧ್ಯಾಹ್ನ ಸಾಮಾನ್ಯ ಮಳೆಯಾಗಿತ್ತು. ಆದರೆ ಸಂಜೆ 5ರ ವೇಳೆಗೆ ನದಿಗಳು ಏಕಾಏಕಿ ತುಂಬಿ ಹರಿಯ ತೊಡಗಿದವು. ಮುಂಡಾಜೆ, ಕಲ್ಮಂಜ, ಕಡಿರುದ್ಯಾವರ, ಮಿತ್ತಬಾಗಿಲು ಮೊದಲಾದ ಗ್ರಾಮಗಳ ಕಡೆ ಹೆಚ್ಚಿನ ತೋಟಗಳಿಗೆ ಪ್ರವಾಹದ ನೀರು ನುಗ್ಗಿ […]