ರಾಜ್ಯಪಾಲರ ನಿರ್ಧಾರದ ವಿರುದ್ಧ ಹೈಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ

ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯಪಾಲರ ಅನುಮತಿ ರದ್ದುಪಡಿಸಲು ಕೋರಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಈ ಮೂಲಕ ಅಧಿಕೃತವಾಗಿ ಕಾನೂನು ಹೋರಾಟಕ್ಕೆ ಇಳಿದಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ವಿರುದ್ಧ ತನಿಖೆ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ರಾಜ್ಯಪಾಲರ […]
ಶಾಲಾ ಶಿಕ್ಷಕಿಯ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಕೃತ್ಯದ ಹಿಂದೆ ಅಪ್ರಾಪ್ತರು!

ಮುಳಬಾಗಿಲು ಬಳಿ ಶಾಲಾ ಶಿಕ್ಷಕಿಯನ್ನು ಕತ್ತು ಕೊಯ್ದು ಕೊಲೆ ಮಾಡಿರುವ ಪ್ರಕರಣ ಸಂಬಂಧಪಟ್ಟಂತೆ ಬಿಗ್ ಟ್ವಿಸ್ಟ್ ವೊಂದು ಸಿಕ್ಕಿದ್ದು, ಮುಳಬಾಗಿಲು ಮೂಲದ ಆರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 14ರಂದು ಸಂಜೆ ಶಿಕ್ಷಕಿ ದಿವ್ಯಶ್ರೀ (43) ಎಂಬುವವರನ್ನು ಮುಳಬಾಗಿಲು ನಗರದ ಸುಂಕೂ ಲೇಔಟ್ ನಲ್ಲಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದ ಜಾಡು ಹಿಡಿದ ನಗರ ಪೊಲೀಸರು ವಿಶೇಷ ತಂಡ ರಚಿಸಿ ಆರೋಪಿಗಳಿಗೆ ಬಲೆ ಬೀಸಿದ್ದರು. ಅದರಂತೆಯೇ ಇಂದು ತಿರುಪತಿಯಲ್ಲಿ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ […]
ತಾಯಿಯ ಮೃತದೇಹ ಮುಂದಿಟ್ಟು ಬಿಕ್ಷೆ ಬೇಡಿದ ಬಾಲಕಿ; ಹೃದಯವಿದ್ರಾಹಕ ಘಟನೆಯ ವಿಡಿಯೋ ವೈರಲ್

ಅಪ್ರಾಪ್ತ ಬಾಲಕಿಯೋರ್ವಳು ಮೃತ ತಾಯಿಯ ಅಂತ್ಯ ಸಂಸ್ಕಾರಕ್ಕೆ ಹಣವಿಲ್ಲದೆ ತಾಯಿಯ ಮೃತ ದೇಹ ಮುಂದಿಟ್ಟು ಕುಳಿತು ಭಿಕ್ಷೆ ಬೇಡಿದ ಹೃದಯವಿದ್ರಾಹಕ ಘಟನೆ ತೆಲಂಗಾಣದ ನಿರ್ಮಲ್ ಜಿಲ್ಲೆಯ ತನೂರ್ ಮಂಡಲದಲ್ಲಿರುವ ಭೇಲ್ ತರೋಡಾ ಗ್ರಾಮದಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿ ಭಿಕ್ಷೆ ಬೇಡುತ್ತಿರುವ ಮತ್ತು ತನ್ನ ತಾಯಿಯ ಅಂತ್ಯಕ್ರಿಯೆಗೆ ಹಣವನ್ನು ವ್ಯವಸ್ಥೆ ಮಾಡಲು ಪ್ರಯತ್ನಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಕೆಲವು ತಿಂಗಳ ಹಿಂದೆ ದುರ್ಗಾ ಅವರ ತಂದೆ ಅನಾರೋಗ್ಯದಿಂದ ನಿಧನರಾಗಿದ್ದರು, ಬಳಿಕ ತಾಯಿ ಗಂಗಾಮಣಿ ತನ್ನ ಚಿಕ್ಕ […]
ರಾಜ್ಯಪಾಲರು ಕುಮಾರಸ್ವಾಮಿ ಮನೆಯ ಕ್ಲರ್ಕಾ? ಸಿಎಂ ಇಬ್ರಾಹಿಂ ವಾಗ್ಧಾಳಿ

ಮೂಡಾ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯುಷನ್ ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿ ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹಿಂ ಕೆಂಡಾಮಂಡಲರಾಗಿದ್ದು, ರಾಜ್ಯಪಾಲರು ಕುಮಾರಸ್ವಾಮಿ ಮನೆಯ ಕ್ಲರ್ಕಾ? ಎಂದು ಪ್ರಶ್ನಿಸಿದ್ದಾರೆ. ರಾಜ್ಯಪಾಲರು ಸಾಮಾನ್ಯ ಮನುಷ್ಯನ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿದ್ದಾರೆ. ರಾಜ್ಯಪಾಲರ ನಿರ್ಧಾರದ ವಿರುದ್ಧ ನಾನು ಪ್ರತಿಭಟನೆ ಮಾಡುತ್ತೇನೆ. ಸಿಎಂ ಸಿದ್ದರಾಮಯ್ಯ ಟಗರು ಇದ್ದಂತೆ ಧೈರ್ಯ ಹೇಳಿದ್ದೇನೆ. ಮೊದಲು ಸಿಎಂ ಜೊತೆಯಲ್ಲಿ ನಾನು ಇರಲಿಲ್ಲ. ಆದರೆ ಈಗ ಅವರ ಜೊತೆಯಲ್ಲಿ ಇರುತ್ತೇನೆ […]
ಕೇಂದ್ರ ಸಚಿವರ ಪತ್ನಿ ಡೆಂಗ್ಯೂ ಜ್ವರಕ್ಕೆ ಬಲಿ

ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಜುಯಲ್ ಓರಮ್ ಅವರ ಪತ್ನಿ ಜಿಂಗಿಯಾ ಓರಮ್ ಅವರು ಡೆಂಗ್ಯೂ ಜ್ವರದಿಂದ ನಿಧನರಾಗಿದ್ದಾರೆ. ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಜಿಂಗಿಯಾ ಓರಮ್ (58) ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಶನಿವಾರ ರಾತ್ರಿ 10:50 ರ ಸುಮಾರಿಗೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಜಿಂಗಿಯಾ ಓರಮ್ ಅವರು ಪತಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಓರಮ್ ಅಂತ್ಯಕ್ರಿಯೆಯು ಸುಂದರ್‌ಗಢ್ ಜಿಲ್ಲೆಯ ಅವರ ಗ್ರಾಮದಲ್ಲಿ ನಡೆಯಲಿದೆ […]
ಮೌಲಾನ ಮೇಲೆ ಹಲ್ಲೆ; ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದ ಜನ

ಬಾಗಲಕೋಟೆ : ತರಕಾರಿ ಮಾರುಕಟ್ಟೆಯಲ್ಲಿ ನಡೆದ ಸಣ್ಣ ಜಗಳ, ವಿಕೋಪಕ್ಕೆ ತಿರುಗಿ ಮೌಲಾನಾ ಮೇಲೆ ಹಲ್ಲೆ ನಡೆಸಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಮೌಲಾನಾ ಮೇಲೆ ಕಾರ್ತಿಕ ಮತ್ತು ಪ್ರೀತಮ್, ನಾಗರಾಜ ಎಂಬುವವರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಮುಸ್ಲಿಂ ಸಮುದಾಯದ ಪ್ರಮುಖರು, ರಾತ್ರಿ ನವನಗರ ಪೊಲೀಸ್ ಠಾಣೆ ಎದುರು ಜಮಾಯಿಸಿ ಆಕ್ರೋಶ ಹೊರ ಹಾಕಿದ್ದಾರೆ. ಮುಸ್ಲಿಂ ಮುಖಂಡರನ್ನು ಪೊಲೀಸರು ಸಮಾಧಾನಪಡಿಸಿದ್ದು, ಆರೋಪಿಗಳಾದ ಕಾರ್ತಿಕ ಮತ್ತು ಪ್ರೀತಮ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಗರಾಜ ಎಂಬಾತ […]
ವಿಟ್ಲ; ಉರಿಮಜಲು ಬಳಿ ಆಟೋ ಚಾಲಕನಿಗೆ ಚೂರಿ ಇರಿತ ಪ್ರಕರಣ; ತನಿಖೆಯ ವೇಳೆ ಕಾರಣ ಬಯಲು

ವಿಟ್ಲದ ಉರಿಮಜಲು ಎಂಬಲ್ಲಿ ಹಾಡಹಗಲೇ ರಿಕ್ಷಾ ಚಾಲಕನಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಮಾಹಿತಿ ಲಭ್ಯವಾಗಿದೆ. ಎಂಎಂಎಸ್ ಆಟೋ ಚಾಲಕ ಶರೀಫ್ ಗೆ ಕಾರ್ಯಡಿ ನಿವಾಸಿ ಆಪೀ ಚೂರಿಯಿಂದ ಇರಿದಿದ್ದ. ಹುಡುಗಿ ವಿಚಾರಕ್ಕೆ ಸಂಬಂಧಿಸಿ ಶರೀಫ್ ಜೊತೆ ತಗಾದೆಯನ್ನು ತೆಗೆದ ಆಫೀ ಬಳಿಕ ಚೂರಿಯಿಂದ ಇರಿದಿದ್ದಾನೆ ಎಂದು ಹೇಳಲಾಗಿದೆ. ಇಡ್ಕಿದು ಪಂಚಾಯತ್ ಎದುರಲ್ಲಿ ಈ ಘಟನೆ ಸಂಭವಿಸಿತ್ತು. ಗಾಯಗೊಂಡಿರುವ ಶರೀಫ್ ನ್ನು ಸ್ಥಳೀಯರು ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ […]
ಗ್ರಾಹಕರೇ ಎಚ್ಚರ! ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ! ಏನಿದು ಪ್ರಕರಣ?

ನಕಲಿ ಬೆಳ್ಳುಳ್ಳಿ ಮಾರಾಟ ಮಾಡುವ ಪ್ರಕರಣ ಮಹಾರಾಷ್ಟ್ರದ ಅಕೋಲಾದಲ್ಲಿ ಬೆಳಕಿಗೆ ಬಂದಿದೆ. ಅಕೋಲಾದಲ್ಲಿ ಬೆಳ್ಳುಳ್ಳಿಯ ಬದಲು ವ್ಯಾಪಾರಿಯೊಬ್ಬರು ಸಿಮೆಂಟ್ ಬೆಳ್ಳುಳ್ಳಿ ಮಾರಾಟ ಮಾಡಿರುವ ಆರೋಪ ಕೇಳಿ ಬಂದಿದೆ. ಸದ್ಯ ಈ ಸುದ್ದಿ ವೈರಲ್ ಆಗುತ್ತಿದ್ದು, ನಾಗರೀಕರು ಮಾರಾಟಗಾರರ ವಿರುದ್ಧ ಧ್ವನಿ ಎತ್ತಿದ್ದಾರೆ. ಅದೇ ರೀತಿ ಜನರಿಗೂ ಈ ಬಗ್ಗೆ ಎಚ್ಚರಿಕೆಯನ್ನು ನೀಡಿದ್ದಾರೆ. ಇನ್ನು ಸಿಮೆಂಟ್ ಬೆಳ್ಳುಳ್ಳಿಯನ್ನು ಬೇರ್ಪಡಿಸಲು ಪ್ರಯತ್ನಿಸಿದಾಗ ನಕಲಿ ಎಂದು ಬಯಲಾಗಿದೆ. ಚಾಕುವಿನಿಂದ ಕತ್ತರಿಸಿದಾಗ ಅದು ಸಿಮೆಂಟ್ನಿಂದ ಮಾಡಿದ ಬೆಳ್ಳುಳ್ಳಿ ಎಂದು ಬೆಳಕಿಗೆ ಬಂದಿದೆ. ಅಕೋಲಾದಲ್ಲಿ […]
ಜನರಿಂದ ವಸೂಲಿ ಮಾಡಿದ ಹಣವನ್ನು ಹಂಚಿಕೆ; ಟ್ರಾಫಿಕ್ ಪೊಲೀಸರ ಕಳ್ಳಾಟದ ವಿಡಿಯೋ ವೈರಲ್

ಪೊಲೀಸರ ಕಳ್ಳಾಟವೊಂದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಸ್ತೆಯಲ್ಲಿ ಸಾಗುವ ವಾಹನ ಸವಾರರ ಹಿಡಿದು ದಂಡ ಹಾಕಿ ತಮ್ಮ ಜೇಬು ತುಂಬಿಸಿಕೊಂಡಿದ್ದಾರೆ. ವಾಹನ ಸವಾರರಿಂದ ಸ್ವೀಕರಿಸಿದ ಲಂಚದ ಹಣವನ್ನು ಮೂವರು ಪೊಲೀಸರು ಸಮನಾಗಿ ಹಂಚಿದ್ದಾರೆ. ಈ ದೃಶ್ಯ ಪಕ್ಕದಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪರಿಣಾಮ ಈ ಮೂವರು ಟ್ರಾಫಿಕ್ ಪೊಲೀಸರು ಸೇವೆಯಿಂದ ಅಮಾನತ್ತಾದ ಘಟನೆ ದೆಹಲಿಯಲ್ಲಿ ನಡೆದಿದೆ. ಘಾಝಿಪುರದ ಥ್ರಿಲ್ ಲೌರಿ ಸರ್ಕಲ್ ಪೊಲೀಸ್ ಚೌಕಿಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರು ಈ ರಸ್ತೆಯಲ್ಲಿ ಸಾಗುವ ವಾಹನ ಸವಾರರನ್ನು ನಿಯಮ ಉಲ್ಲಂಘನೆ ನೆಪದಲ್ಲಿ ಹಣ […]
ರಾಜ್ಯಪಾಲ ಆಗೋಕೆ ನೀನು ನಾಲಾಯಕ್; ಗೆಹ್ಲೂಟ್ ವಿರುದ್ಧ ಕಾಂಗ್ರೆಸ್ ಶಾಸಕ ತೀವ್ರ ವಾಗ್ಧಾಳಿ

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವುದಕ್ಕೆ ಕಾಂಗ್ರೆಸ್ ನಿಂದ ಭಾರಿ ವಿರೋಧ ವ್ಯಕ್ತವಾಗಿದೆ. ರಾಜ್ಯಪಾಲರ ನಿಲುವನ್ನು ವಿರೋಧಿಸಿ ರಾಜ್ಯದ ವಿವಿಧೆಡೆ ಪ್ರತಿಭಟನೆ ವ್ಯಕ್ತವಾಗಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ರಾಜ್ಯಪಾಲರನ್ನು ಟೀಕಿಸುವ ಭರದಲ್ಲಿ ನಾಲಿಗೆ ಹರಿಬಿಟ್ಟಿದ್ದಾರೆ. ಸುಪ್ರೀಂ ಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡ ಅಯೋಗ್ಯ ಅರ್ಜಿ ಕೊಡ್ತಾನೆ. ಅವನ ಅರ್ಜಿ ಇಟ್ಕೊಂಡು ನೋಟಿಸ್ ಕೊಡ್ತಿರಲ್ಲಪ್ಪ. ರಾಜ್ಯಪಾಲ ಆಗೋಕೆ ನೀನು ನಾಲಾಯಕ್ […]