Breaking News :

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲು

ಬೆಳ್ತಂಗಡಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜಾ, ಮಹಾತ್ಮ ಗಾಂಧೀಜಿಯ ಕುರಿತು ಅವಮಾನದ ರೀತಿಯಲ್ಲಿ ಭಾಷಣ ಮಾಡಿದ್ದು, ಸಮಾಜದಲ್ಲಿ ಹಿಂದೂ-ಮುಸ್ಲಿಂ ಸಮುದಾಯದವರಲ್ಲಿ ಕಂದಕವನ್ನು ಸೃಷ್ಟಿ ಮಾಡಿ ಸಮಾಜದ ನೆಮ್ಮದಿ ಮತ್ತು ಶಾಂತಿಯನ್ನು ಕದಡಲು ಪ್ರೇರಣೆ ನೀಡಿದ್ದಾರೆ ಎಂದು ಆರೋಪಿಸಿ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಅವರ ನೇತೃತ್ವದ ನಿಯೋಗ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದೆ. ಬೆಳ್ತಂಗಡಿಯ ಆಡಳಿತ ಸೌಧದ ಮುಂಭಾಗದಲ್ಲಿ ಸ್ವಾತಂತ್ರೋತ್ಸವದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.  ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ […]

ಜಮ್ಮು-ಕಾಶ್ಮೀರ, ಹರ್ಯಾಣ ವಿಧಾನಸಭೆಗಳಿಗೆ ಚುನಾವಣಾ ದಿನಾಂಕ ಘೋಷಣೆ

ಹೊಸದಿಲ್ಲಿ: ಚುನಾವಣಾ ಆಯೋಗವು ಇಂದು ಜಮ್ಮು & ಕಾಶ್ಮೀರ, ಹರ್ಯಾಣ ರಾಜ್ಯಗಳ ವಿಧಾನಸಭೆಗೆ ಚುನಾವಣೆ ದಿನಾಂಕ ಘೋಷಿಸಿದೆ. ಹರಿಯಾಣದಲ್ಲಿ ಅಕ್ಟೋಬರ್ 1ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 4 ರಂದು ಫಲಿತಾಂಶ ಹೊರಬೀಳಲಿದೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ. ಹರಿಯಾಣದಲ್ಲಿ 90 ವಿಧಾನಸಭಾ ಕ್ಷೇತ್ರಗಳಿವೆ. ಈ ಪೈಕಿ 73 ಜನರಲ್, ಎಸ್ಸಿ 17 ಕ್ಷೇತ್ರಗಳಿದೆ. ಜಮ್ಮು-ಕಾಶ್ಮೀರದ ವಿಧಾನಸಭಾ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಲಾಗಿದೆ. 90 ಕ್ಷೇತ್ರಗಳಿಗೆ 3 ಹಂತಗಳಲ್ಲಿ ಮತದಾನವನ್ನು ನಡೆಸುತ್ತಿರುವುದಾಗಿ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗದಿಂದ ಘೋಷಣೆ […]

ಮತ್ತೆ ಭೂಕುಸಿತ; ಮಂಗಳೂರು- ಬೆಂಗಳೂರು ರೈಲು ಸಂಚಾರ ಬಂದ್

ಹಾಸನ; ಸಕಲೇಶಪುರ ತಾಲೂಕಿನ ಆಚಂಗಿ-ದೊಡ್ಡನಾಗರ ಬಳಿ ರೈಲ್ವೆ ಹಳಿ ಮೇಲೆ ಮತ್ತೆ ಭೂಕುಸಿತವಾಗಿದೆ. ಹೀಗಾಗಿ ಬೆಂಗಳೂರು-ಮಂಗಳೂರು ನಡುವಿನ ರೈಲುಗಳ ಸಂಚಾರ ಸ್ಥಗಿತವಾಗಿದೆ. ವಾರದ ಹಿಂದೆ ಇದೆ ಜಾಗದಲ್ಲಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿತ್ತು. ಬಳಿಕ ಮಣ್ಣು ತೆರವು ಮಾಡಿ ರೈಲು ಸಂಚಾರ ಆರಂಭ ಮಾಡಲಾಗಿತ್ತು. ಇದೀಗ ಮತ್ತೆ ಅದೇ ಜಾಗದಲ್ಲಿ ಮಣ್ಣು ಕುಸಿತವಾಗಿದೆ. ಭೂಕುಸಿತದಿಂದಾಗಿ ಮಾರ್ಗಮಧ್ಯೆ ಯಶವಂತಪುರ-ಕಾರವಾರ ಎಕ್ಸ್‌ಪ್ರೆಸ್‌ ರೈಲು ಬಾಳ್ಳುಪೇಟೆ ಬಳಿ ನಿಂತುಕೊಂಡಿದೆ. ಘಟನಾ ಸ್ಥಳಕ್ಕೆ ರೈಲ್ವೆ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದು ಪರಿಶೀಲನೆ ಮಾಡಿದ್ದಾರೆ.

ಸ್ವಾತಂತ್ರ್ಯದ ದಿನ ಪ್ಯಾಲೆಸ್ತೀನ್ ಬಾವುಟ ಪ್ರದರ್ಶನ; ಐವರು ಪೊಲೀಸ್ ವಶಕ್ಕೆ

ಸ್ವಾತಂತ್ರ್ಯದಿನಾಚರಣೆ ಅಂಗವಾಗಿ ತುಮಕೂರಿನ ಜಿಕೆಬಿಎಂಎಸ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದ ಸ್ಥಳಕ್ಕೆ ಬಂದ ಯುವಕರ ಗುಂಪು ಯುದ್ಧ ಪೀಡಿತ ಪ್ಯಾಲೆಸ್ತೀನ್ ಬಾವುಟ ಪ್ರದರ್ಶನಕ್ಕೆ ಯತ್ನ ನಡೆಸಿದ ಹಿನ್ನೆಲೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕುಣಿಗಲ್‌ ಪಟ್ಟಣದ ಷರೀಫ್‌ ಮೊಹಲ್ಲಾ ನಿವಾಸಿಗಳಾದ ಜಾವೀದ್‌ ಪಾಷಾ ಅಲಿಯಾಸ್ ಚೋಟು (23), ನ್ಯಾಮತ್‌ ಉಲ್ಲಾ (28) ಮತ್ತು ಫುರ್ಕಾನ್‌ (18) ಬಂಧಿತರು. ಫುರ್ಕಾನ್‌ ವಿದ್ಯಾರ್ಥಿಯಾಗಿದ್ದು, ಜಾವೀದ್‌ ಪೈಂಟಿಂಗ್‌ ಕೆಲಸ ಮಾಡುತ್ತಿದ್ದ. ಇದಲ್ಲದೆ ಇಬ್ಬರು ಬಾಲಕರನ್ನು ಕೂಡ ವಶಕ್ಕೆ ಪಡೆಯಲಾಗಿದೆ. ಕುಣಿಗಲ್‌ ಸರ್ಕಾರಿ […]

ವಯನಾಡಿನಲ್ಲಿ ದಿಟ್ಟ ಸೇವೆ: ತಮಿಳುನಾಡು ನರ್ಸ್ ಎ.ಸಬೀನಾಗೆ ಕಲ್ಪನಾ ಚಾವ್ಲ ಪ್ರಶಸ್ತಿ

ಈ ಬಾರಿಯ ‘ಕಲ್ಪನಾ ಚಾವ್ಲ ಪ್ರಶಸ್ತಿ’ಯನ್ನು ತಮಿಳುನಾಡಿನ ನೀಲಗರಿ ಜಿಲ್ಲೆಯ ನರ್ಸ್ ಎ.ಸಬೀನಾ ಅವರಿಗೆ ನೀಡಲಾಗಿದೆ. ಕೇರಳದ ವಯನಾಡ್ ನಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಧೈರ್ಯ ಮತ್ತು ಸಾಹಸದಿಂದ ಹಲವು ಜೀವಗಳನ್ನು ರಕ್ಷಿಸಿದ್ದನ್ನು ಪರಿಗಣಿಸಿ ಈ ಪ್ರಶಸ್ತಿಗೆ ಸಬೀನಾ ಅವರನ್ನು ಆಯ್ಕೆ ಮಾಡಲಾಗಿದೆ. ಭೂಕುಸಿತದಿಂದಾಗಿ ಮುಂಡಕೈ-ಸುರಲ್ಮಲೈ ನಡುವಿನ ಸಂಪರ್ಕ ಸೇತುವೆ ಹಾನಿಗೀಡಾಗಿ ಕ್ರಮೇಣ ಕುಸಿದಿತ್ತು. ಇದರಿಂದಾಗಿ ಜನ ಅತಂತ್ರರಾಗಿ, ಸುರಕ್ಷಿತ ಪ್ರದೇಶಗಳಿಗೆ ತೆರಳಲು ಸಾಧ್ಯವಾಗಿರಲಿಲ್ಲ ಹಾಗೂ ಪರಿಹಾರ ಕಾರ್ಯಾಚರಣೆ ಕೂಡಾ ದುಸ್ತರವಾಗಿತ್ತು.ಪರಿಹಾರ ಮತ್ತು ರಕ್ಷಣಾ […]

ಮಂಗಳೂರು; ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಶಾಲಾ ಶಿಕ್ಷಕಿ ಶಾಹಿದಾ ಮೃತ್ಯು

ಮಂಗಳೂರು ಬಂದರ್ ನಲ್ಲಿ  ನಡೆದ ರಸ್ತೆ ಅಪಘಾತದಲ್ಲಿ ಶಿಕ್ಷಕಿಯೋರ್ವರು ಮೃತಪಟ್ಟಿರುವ ಘಟನೆ ನಡೆದಿದೆ. ನಗರದ ಬೆಂಗರೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಶಾಹಿದಾ ಮೃತಪಟ್ಟವರು. ಇವರ ಪತಿ ಪೊಲೀಸ್‌ ಇಲಾಖೆಯಲ್ಲಿ ಉದ್ಯೋಗದಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಶುಕ್ರವಾರ ಶಾಲೆಗೆ ಹೋಗಿದ್ದ ಶಾಹಿದಾ ಅವರು, ಅನಾರೋಗ್ಯದ ಹಿನ್ನಲೆಯಲ್ಲಿ ಮರಳಿ ಮನೆಗೆ ದ್ವಿಚಕ್ರ ವಾಹನದಲ್ಲಿ ತೆರಳುವಾಗ ಕಾರೊಂದು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.  

ಮಾಜಿ ಕಾರ್ಪೊರೇಟರ್ ಮೇಲೆ‌ ತಂಡದಿಂದ ಹಲ್ಲೆ

ಮಾಜಿ ಕಾರ್ಪೊರೇಟರ್ ಓರ್ವರ ಮೇಲೆ ಗುರುವಾರ ರಾತ್ರಿ ಹಲ್ಲೆ ನಡೆದಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಮಾಜಿ ಕಾರ್ಪೊರೇಟರ್ ಸತ್ಯನಾರಾಯಣ ರಾಜು ಎಂಬವರ ಮೇಲೆ ಕುಸ್ಕೂರು ಬಳಿ ಜಮೀನು ವಿಚಾರವಾಗಿ ಈ ಹಲ್ಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಮೀನು ಖರೀದಿ ವಿಚಾರಕ್ಕೆ ಸತೀಶ್ ವ್ಯಾಜ್ಯ ಹೊಂದಿದ್ದರೆನ್ನಲಾಗಿದೆ. ಸತೀಶ್ ಗುರುವಾರ ದಿನ ರಾತ್ರಿ ತಮ್ಮ ಜಮೀನಿನ ಬಳಿ ತೆರಳಿದ್ದಾಗ, ಅವರ ಕಾರಿನ ಮೇಲೆ ದೊಣ್ಣೆಗಳಿಂದ ತಂಡವೊಂದು ದಾಳಿ ನಡೆಸಿದೆ. ಈ ವೇಳೆ ಸತೀಶ್ ಅಲ್ಲಿಂದ ತಪ್ಪಿಸಿಕೊಂಡು ತೆರಳಿದ್ದಾರೆ. […]

ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ರಾಹುಲ್ ಗಾಂಧಿಯ ಕಡೆಗಣನೆ?

ಕೆಂಪು ಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಮುಖ್ಯ ಸಮಾರಂಭದಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು  ಐದನೇ ಸಾಲಿನಲ್ಲಿ ಕೂರಿಸಲಾಗಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ. ಇದಕ್ಕೆ ಒಲಂಪಿಕ್ಸ್ ಆಟಗಾರರಿಗೆ ಸ್ಥಾನ ನೀಡಲು ಈ ರೀತಿ ಮಾಡಲಾಗಿದೆ ಎಂದು ರಕ್ಷಣಾ ಸಚಿವಾಲಯದ ಮೂಲಗಳು ತಿಳಿಸಿವೆ. ಇದರಿಂದಾಗಿ ಕೆಲವು ಕೇಂದ್ರ ಸಚಿವರನ್ನು ಹಿಂದಿನ ಸಾಲಿನಲ್ಲಿ ಕೂರಿಸಲಾಗಿದೆ ಎಂದು ಹೇಳಿದೆ. ರಾಹುಲ್ ಗಾಂಧಿ ಅವರು ನೀತಿ ಆಯೋಗದ ಉಪಾಧ್ಯಕ್ಷ ಸುಮನ್ ಬೆರ್ರಿ ಪಕ್ಕದಲ್ಲಿ ಕುಳಿತಿದ್ದರು. ಇದಕ್ಕೆ ಕಾಂಗ್ರೆಸ್ […]

ಫರಂಗಿಪೇಟೆಯಲ್ಲಿ ಬೆಂಗಳೂರಿನಿಂದ ಬರುತ್ತಿದ್ದ ಬಸ್ ಪಲ್ಟಿ; ಹಲವರಿಗೆ ಗಾಯ

ಬಂಟ್ವಾಳ: ಬೆಂಗಳೂರಿನಿಂದ ಮಂಗಳೂರಿನತ್ತ ಸಾಗುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 10ಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಹತ್ತನೇ ಮೈಲಿಕಲ್ಲು ಬಳಿ ನಡೆದಿದೆ. ಘಟನೆಯಿಂದ ಗಾಯಗೊಂಡವರ ಹೆಸರು ವಿಳಾಸದ ಮಾಹಿತಿ ಯಾವುದು ಕೂಡಾ ‌ಲಭ್ಯವಾಗಿಲ್ಲ. ಗಾಯಗೊಂಡ ಎಲ್ಲರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಯುವಕರು ಗಾಯಗೊಂಡವರನ್ನು ಬಸ್ಸಿನಿಂದ ಹೊರತೆಗೆದು ರಸ್ತೆಯಲ್ಲಿ ಸಾಗುತ್ತಿದ್ದ ವಾಹನಗಳಲ್ಲಿ ಆಸ್ಪತ್ರೆಗೆ ಸೇರಿಸಲಾಯಿತು. ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ವಿಟ್ಲ; ನಿಯಂತ್ರಣ ಕಳೆದುಕೊಂಡು ಅಂಗಡಿಗೆ ಢಿಕ್ಕಿ ಹೊಡೆದ ಕಾರು; ಓರ್ವನಿಗೆ ಗಾಯ

ವಿಟ್ಲ:  ಚಾಲಕನ ನಿಯಂತ್ರಣ ಕಳೆದುಕೊಂಡು ಕಾರೊಂದು ಅಂಗಡಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಗಾಯಗೊಂಡು ಅಂಗಡಿ ಸಂಪೂರ್ಣವಾಗಿ ಧ್ವಂಸಗೊಂಡ ಘಟನೆ ವಿಟ್ಲ-ಕಾಸರಗೋಡು ರಸ್ತೆಯ ಕಾಶಿಮಠ ಎಂಬಲ್ಲಿ ನಡೆದಿದೆ. ಉಕ್ಕುಡ ಕಡೆಯಿಂದ ಬಂದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಯೋಗೀಶ ಕಾಶಿಮಠ ಎಂಬವರಿಗೆ ಸೇರಿದ ಅಂಗಡಿಗೆ ಢಿಕ್ಕಿ ಹೊಡೆದಿದೆ. ಕಾರು ಚಾಲಕ ಮದ್ಯ ಸೇವಿಸಿ ಕಾರು ಚಲಾಯಿಸಿದ ಪರಿಣಾಮ ಕಾರು ರಸ್ತೆಯಿಂದ ಬದಿಗೆ ಸರಿದು ಅಂಗಡಿಗೆ ಢಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.