Breaking News :

ವಿವಾದಿತ ಈದ್ಗಾ ಮೈದಾನದಲ್ಲಿ ಯಾವುದೇ ಸಂಘಟನೆಗಳಿಗೆ ಧ್ವಜಾರೋಹಣಕ್ಕೆ ಅವಕಾಶವಿಲ್ಲ; ಜಿಲ್ಲಾಡಳಿತ ಸ್ಪಷ್ಟನೆ

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ವಿವಾದಿತ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ದ್ವಜಾರೋಹಣಕ್ಕೆ ಸಿದ್ದತೆ ನಡೆಯುತ್ತಿದೆ, ಆದರೆ ಯಾವುದೇ ಸಂಘಟನೆಗಳಿಗೆ ಧ್ವಜಾರೋಹಣಕ್ಕೆ ಅವಕಾಶ ಇಲ್ಲ  ಎಂದು ಜಿಲ್ಲಾಡಳಿತ ತಿಳಿಸಿದೆ. ನಾಳೆ ಬೆಳಗ್ಗೆ 8 ಘಂಟೆಗೆ ನಡೆಯುವ ಧ್ವಜಾರೋಹಣಕ್ಕೆ ಜಿಲ್ಲಾಡಳಿತ ವತಿಯಿಂದ ಬೆಂ.ಉತ್ತರ ವಲಯ ಉಪವಿಭಾಗಾಧಿಕಾರಿ ಪ್ರಮೋದ್ ಪಾಟೀಲ್ ಧ್ವಜಾರೋಹಣ ನಡೆಸಲಿದ್ದಾರೆ. ಈ ಬಗ್ಗೆ ಮಾತನಾಡಿದ ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ ಕೆ.ಎ ಯಾವುದೇ ಸಂಘಟನೆಗಳಿಗೆ ಧ್ವಜಾರೋಹಣಕ್ಕೆ ಅವಕಾಶವಿಲ್ಲ. ಕೇವಲ ಸರ್ಕಾರ ನಿಗಧಿ ಪಡಿಸಿದ ಕಾರ್ಯಕ್ರಮದಲ್ಲಿ ಭಾಗಿಯಾಗಬಹುದು. ಧ್ವಜಾರೋಹಣಕ್ಕೆ ಸಂಘಟನೆಯವರು […]

ಮದುವೆಯಾಗಿ ಒಂದೇ ದಿನದಲ್ಲಿ ಚಿನ್ನ, ನಗದು ಎಗರಿಸಿ ಪರಾರಿಯಾಗುತ್ತಿದ್ದ ಖತರ್ನಾಕ್ ಮ್ಯಾರೇಜ್ ಗ್ಯಾಂಗ್ ಅರೆಸ್ಟ್

ಗ್ರಾಮೀಣ ಭಾಗದ ಯುವಕರನ್ನು ಟಾರ್ಗೆಟ್‌ ಮಾಡಿಕೊಂಡು ಮದುವೆ ಹೆಸರಿನಲ್ಲಿ ಮೋಸ ಮಾಡುತ್ತಿದ್ದ ಖತರ್ನಾಕ್‌ ಗ್ಯಾಂಗ್‌ಅನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಮದುಮಗಳು ಮೂರು ವರ್ಷದಲ್ಲಿ ನಾಲ್ಕು ಮದುವೆ ಆಗಿದ್ದಾಳೆ. ಮದುವೆಯಾಗಿದ್ದ ವಂಚಕ ಜಾಲವನ್ನು ಗುಬ್ಬಿ ಠಾಣೆ ಪೊಲೀಸರು ಜೈಲಿಗಟ್ಟಿದ್ದಾರೆ. ತಾಲ್ಲೂಕಿನ ಲಕ್ಷ್ಮೀ ಬಾಳಸಾಬ್‌ ಜನಕರ್‌ ಅಲಿಯಾಸ್‌‍ ಕೋಮಲ, ಸಿದ್ದಪ್ಪ , ಲಕ್ಷ್ಮೀಬಾಯಿ, ಬ್ರೋಕರ್‌ ಲಕ್ಷ್ಮಿ ಬಂಧಿತರು. ಅತ್ತಿಗಟ್ಟೆ ಪಾಲಾಕ್ಷ ಎಂಬುವವರು ತಮ್ಮ ಮಗನಿಗೆ ಮದುವೆ ಮಾಡಿಸಲು ಹೆಣ್ಣು ಹುಡುಕುತ್ತಿದ್ದರು. ಹತ್ತಾರು ಮದುವೆ ಬ್ರೋಕರ್‌ ಮೂಲಕ ಹೆಣ್ಣು ಹುಡುಕಿಸಿದ್ದರೂ ಮದುವೆ […]

ವಯನಾಡು ಭೂಕುಸಿತದ ಸಂತ್ರಸ್ತರಿಗೆ ಪರಿಹಾರ ಘೋಷಿಸಿದ ಸಿಎಂ ಪಿಣರಾಯ್ ವಿಜಯನ್

ವಯನಾಡ್ ಭೂಕುಸಿತ ದುರಂತದಲ್ಲಿ ಮೃತರ ಕುಟುಂಬಕ್ಕೆ ತಲಾ ಆರು ಲಕ್ಷ ರೂಪಾಯಿ ಪರಿಹಾರವನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು  ಘೋಷಿಸಿದ್ದಾರೆ. ವಯನಾಡ್ ಭೂಕುಸಿತದಿಂದಾಗಿ ಕನಿಷ್ಠ 400ಕ್ಕೂ ಅಧಿಕ ಜನರು ಮೃತಪಟ್ಟಿದ್ದರು. 4 ಲಕ್ಷ ರೂ.ಗಳಲ್ಲಿ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಮತ್ತು ಉಳಿದ 2 ಲಕ್ಷ ರೂ.ಗಳನ್ನು ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಯಿಂದ ನೀಡಲಾಗುತ್ತದೆ ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ. ಭೂಕುಸಿತದಲ್ಲಿ ಕಣ್ಣು ಮತ್ತು ಕೈಕಾಲುಗಳನ್ನು ಕಳೆದುಕೊಂಡ ಅಥವಾ ಶೇ.60ರಷ್ಟು ಅಂಗವೈಕಲ್ಯಕ್ಕೆ ಒಳಗಾದವರಿಗೆ ಮುಖ್ಯಮಂತ್ರಿಗಳ ವಿಪತ್ತು […]

ಮಂಗಳೂರು; ಆಟೋ ಚಲಾಯಿಸುತ್ತಿದ್ದಾಗ ಹೃದಯಾಘಾತವಾಗಿ ರಿಕ್ಷದಿಂದ ಬಿದ್ದು ಮೃತಪಟ್ಟ ಚಾಲಕ

ಮಂಗಳೂರು; ರಿಕ್ಷಾ ಚಲಾಯಿಸುತ್ತಿದ್ದಾಗ ಚಾಲಕ  ಹೃದಯಾಘಾತದಿಂದ ರಸ್ತೆಗೆ ಬಿದ್ದಿದ್ದು, ಚಾಲಕ ಮೃತಪಟ್ಟು ಮಹಿಳೆಯೋರ್ವರು ಪವಾಡ ಸದೃಶ್ಯವಾಗಿ ಬದುಕುಳಿದ ಘಟನೆ ಕೋಟೆಕಾರಿನಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಉಳ್ಳಾಲ ಧರ್ಮನಗರದ ನಿವಾಸಿ ಅಬ್ದುಲ್ ಮಜೀದ್ (44)ಹೃದಯಾಘಾತದಿಂದ ಮೃತಪಟ್ಟ ರಿಕ್ಷಾ ಚಾಲಕ. ಮಜೀದ್ ಮಂಗಳವಾರ ಮಧ್ಯಾಹ್ನ 12 ಗಂಟೆಯ ವೇಳೆ ಧರ್ಮನಗರದಿಂದ ಸಂಬಂಧಿಕರಾದ ಮಹಿಳೆಯರಿಬ್ಬರನ್ನು ತನ್ನ ಆಟೋ ರಿಕ್ಷಾದಲ್ಲಿ ಕುಳ್ಳಿರಿಸಿ ಸೋಮೇಶ್ವರ ಮಾರ್ಗವಾಗಿ ಕೋಟೆಕಾರು ಬೀರಿಗೆ ತೆರಳುತ್ತಿದ್ದ ವೇಳೆ ಕೋಟೆಕಾರು ಹೆದ್ದಾರಿ ಬಳಿ ಹೃದಯಾಘಾತವಾಗಿ ರಸ್ತೆಗೆ ಬಿದ್ದಿದ್ದಾರೆ. ಚಾಲಕನಿಲ್ಲದೆ ಮುಂದೆ ಚಲಿಸಿದ […]

ಮಂಗಳೂರು; NSUIಗೆ ವಿದ್ಯಾರ್ಥಿಗಳ ಸೇರ್ಪಡೆ ಕಾರ್ಯಕ್ರಮ

NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಯೆನೆಪೋಯ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಸೇರ್ಪಡೆ ಕಾರ್ಯಕ್ರಮವು NSUI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಅವರ ನೇತೃತ್ವದಲ್ಲಿ ನಡೆಯಿತು. ವಿದ್ಯಾರ್ಥಿಗಳನ್ನುದ್ದೇಶಿಸಿ NSUI ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಝಾಕೀರ್ ಹುಸೇನ್ ಮಾತನಾಡಿದರು. ದ.ಕ ಜಿಲ್ಲಾ ಕಾಂಗ್ರೆಸ್ ವಕ್ತಾರ ಮೌಸೀರ್ ಸಾಮಣಿಗೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ದ.ಕ ಜಿಲ್ಲಾ ಕಾಂಗ್ರೆಸ್ NSUI ರಾಜ್ಯ ಪ್ರಧಾನ ಕಾರ್ಯದರ್ಶಿ ಬಾತೀಷ್ ಅಳಕೆಮಜಲು, NSUI ಮುಖಂಡರಾದ ತನುಷ್ […]

ದೇವಸ್ಥಾನಕ್ಕೆಂದು ಕರೆದೊಯ್ದು ಪತ್ನಿಯನ್ನು ಕೊಲೆಗೈದ ಪತಿ

ಡಿವೋರ್ಸ್ ಕೇಳಿದ ಹೆಂಡತಿಯನ್ನು ದೇವಸ್ಥಾನಕ್ಕೆಂದು ಕರೆದೊಯ್ದು ಹತ್ಯೆ ಮಾಡಿರುವ ದುರಂತ ಘಟನೆ ರಾಮನಗರದ ಹೂಜಗಲ್ಲು ಬೆಟ್ಟದಲ್ಲಿ ನಿನ್ನೆ ನಡೆದಿದೆ. ಕೊಲೆಯಾದ ಮಹಿಳೆಯನ್ನು ದಿವ್ಯಾ (32) ಎಂದು ಗುರುತಿಸಲಾಗಿದೆ. ಕೊಲೆಯನ್ನು ಆಕೆಯ ಪತಿ ಉಮೇಶ್ ಮಾಡಿದ್ದಾನೆ. ಮದುವೆಯಾಗಿ ಕೆಲವು ವರ್ಷಗಳು ಜೀವನ ನಡೆಸಿದ ಇಬ್ಬರ ನಡುವೆ ಇತ್ತೀಚೆಗೆ ಮನಸ್ತಾಪ ಉಂಟಾಗಿದೆ. ಇದರಿಂದ ನನಗೆ ಡಿವೋರ್ಸ್ ಕೊಟ್ಟುಬಿಡಿ ನಾನು ಬೇರೆ ಜೀವನ ಕಟ್ಟಿಕೊಳ್ಳುತ್ತೇನೆ ಎಂದು ದಿವ್ಯಾ ಕೇಳಿದ್ದಾಳೆ. ಆಗ ಉಮೇಶ್ ತನ್ನ ಹೆಂಡತಿಯನ್ನು ಸಮಾಧಾನಪಡಿಸಿ  ಬುದ್ಧಿಯನ್ನೂ ಹೇಳಿದ್ದಾನೆ. ಆದರೆ ಇದ್ಯಾವುದನ್ನೂ […]

ಕಲ್ಲಾಪು: ಸಮೀರ್ ಕೊಲೆ ಪ್ರಕರಣ; ನಾಲ್ವರು ಆರೋಪಿಗಳು ವಶಕ್ಕೆ

ಉಳ್ಳಾಲದಲ್ಲಿ ಕಡಪ್ಪರ ಸಮೀರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ನಾಲ್ವರು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿರುವ ಬಗ್ಗೆ ವರದಿಯಾಗಿದೆ. ಮೊಹಮ್ಮದ್‌ ನೌಷದ್‌ ಈ ಕೊಲೆಯ ಪ್ರಮುಖ ರೂವಾರಿಯಾಗಿದ್ದು, ಆತನ ತಂಡ ಈ ಕೃತ್ಯ ಎಸಗಿದೆ ಎನ್ನಲಾಗಿದೆ. ಈ ಕೊಲೆಯಲ್ಲಿ ನೌಷದ್‌ನೊಂದಿಗೆ ನಾಟೇಕಲ್‌ನ ನಿಯಾಝ್, ಬಜಾಲ್‌ನ ತನ್ವೀರ್‌, ಪಡುಬಿದ್ರೆಯ ಇಕ್ಬಾಲ್‌ ಸಹಕರಿಸಿರುವ ಬಗ್ಗೆ ಮಾಹಿತಿಯಿದ್ದು, ಅವರನ್ನು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ಪ್ರಾಥಮಿಕವಾಗಿ ಇಲ್ಯಾಸ್‌ ಕೊಲೆಗೆ ಪ್ರತಿಕಾರವಾಗಿ ಕೊಲೆ ನಡೆದಿರುವುದು ದೃಡಪಟ್ಟಿದೆ. ಈ ಕುರಿತು ಉಳ್ಳಾಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. […]

ಚಿಕ್ಕಮಗಳೂರು; ಬುರ್ಖಾ ಧರಿಸಿ ತಿರುಗಾಡುತ್ತಿದ್ದ ಯುವಕನ ಬಂಧನ

ಚಿಕ್ಕಮಗಳೂರು;  ಬುರ್ಖಾ ಧರಿಸಿ ಬಿಕ್ಷೆ ಬೇಡಲು ನಗರಕ್ಕೆ ಬಂದ ಯುವಕನಿಗೆ ಸ್ಥಳೀಯರು ಸಖತ್ ಗೂಸಾ ಕೊಟ್ಟಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಬೆರಳಿಗೆ ನೈಲ್ ಪಾಲಿಶ್ ಹಚ್ಚಿಕೊಂಡು ಶೃಂಗಾರ ಮಾಡಿಕೊಂಡು ಚಾಕು ಇಟ್ಟುಕೊಂಡು ತೆರಳುತ್ತಿದ್ದ ಹರೀಶ್ ಎಂಬಾತ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಬುರ್ಖಾ ತೊಟ್ಟು ನಗರದ ಮಲ್ಲಂದೂರು ರಸ್ತೆಯಲ್ಲಿ ಹರೀಶ್ ಓಡಾಟ ನಡೆಸುವಾಗ ಅನುಮಾನಗೊಂಡು ಜನರು ಹಿಡಿದಿದ್ದಾರೆ. ಬಾಳೆಹೊನ್ನೂರು ಮೂಲದ ಹರೀಶ್ ಎಂಬಾತನನ್ನು ಸ್ಥಳೀಯರು ಥಳಿಸಿದ್ದಾರೆ. ಭಿಕ್ಷೆ ಬೇಡಲು ಬುರ್ಖಾ ಧರಿಸಿ ಬಂದಿದ್ದಾಗಿ ಯುವಕ ಹೇಳಿಕೆ ನೀಡಿದ್ದಾನೆ. ಆದರೆ […]

ಮಂಗಳೂರಿನ ಯುವಕ‌ ಅಬುಧಾಬಿಯಲ್ಲಿ ಕಟ್ಟಡದಿಂದ ಬಿದ್ದು ಮೃತ್ಯು

ಕೊಣಾಜೆ ಗ್ರಾಮದ ನಡುಪದವಿನ ಯುವಕನೋರ್ವ ಅಬುಧಾಬಿಯಲ್ಲಿ  ಕಟ್ಟಡದಿಂದ ಬಿದ್ದು ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. ಮೃತಪಟ್ಟ ಯುವಕನನ್ನು ಉಮ್ಮರ್ ಎಂಬವರ ಪುತ್ರ ನೌಫಲ್(25) ಎಂದು ಗುರುತಿಸಲಾಗಿದೆ. ಅಬುಧಾಬಿಯಲ್ಲಿ ಎ.ಸಿ ಮೆಕ್ಯಾನಿಕ್ ಆಗಿ ಕೆಲಸಮಾಡುತ್ತಿದ್ದ ನೌಫಲ್ ಕಟ್ಟಡವೊಂದರಲ್ಲಿ ಕೆಲಸ ಮಾಡುವಾಗ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ‌ ನಿರೀಕ್ಷಿಸಲಾಗಿದೆ.

ಮೂಡಬಿದ್ರೆ; ಕಾಲೇಜಿಗೆ ನುಗ್ಗಿ ವಿದ್ಯಾರ್ಥಿನಿಗೆ ಕತ್ತರಿಯಲ್ಲಿ ಇರಿತ ಪ್ರಕರಣ; ಆರೋಪಿ ಅರೆಸ್ಟ್, ತನಿಖೆಯ ವೇಳೆ ಮಹತ್ವದ ಅಂಶಗಳು ಬಯಲು

ಪ್ರೇಮ ಪೈಫಲ್ಯದಿಂದ ವಿದ್ಯಾರ್ಥಿನಿಗೆ ಕತ್ತರಿಯಿಂದ ಯುವಕ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯಲ್ಲಿ ನಡೆದಿದೆ. ನಿನ್ನೆ  ಮುಂಜಾನೆ ಮೂಡಬಿದರೆಯ ಆಳ್ವಾಸ್ ಕಾಲೇಜಿನಲ್ಲಿ ಘಟನೆ ನಡೆದಿದ್ದು, ತುಮಕೂರು ಮೂಲದ ಮಂಜುನಾಥ್‌ನನ್ನು ಮೂಡಬಿದಿರೆ ಪೋಲೀಸರು ಬಂಧಿಸಿದ್ದಾರೆ. ಆಳ್ವಾಸ್‌ನಲ್ಲಿ ಪಿಯುಸಿ ಓದುತ್ತಿರುವ ತುಮಕೂರು ಮೂಲದ ವಿದ್ಯಾರ್ಥಿನಿಗೆ ಕತ್ತರಿಯಿಂದ ಮಂಜುನಾಥ್ ಇರಿದಿದ್ದಾನೆ. ಮಂಜುನಾಥ್ ಹಾಗು ಯುವತಿ ಪಿಯುಸಿ ತನಕ ಜೊತೆಯಲ್ಲೇ ವಿದ್ಯಾಭ್ಯಾಸ ನಡೆಸಿದ್ದರು. ವಿದ್ಯಾರ್ಥಿನಿ ಮೆಸೇಜ್‌ಗೆ ಉತ್ತರಿಸುತ್ತಿಲ್ಲ ಎಂದು ಕುಪಿತಗೊಂಡಿದ್ದ ಯುವಕ ಮಂಜುನಾಥ್, ತುಮಕೂರಿನಿಂದ ಮೂಡಬಿದರೆಗೆ ಬಂದಿದ್ದ. ಜೊತೆಗೆ ಯುವತಿಯ ಭೇಟಿಗೆ […]